Site icon Vistara News

Shivamogga News: ಸಂಸತ್ ಸದಸ್ಯತ್ವ ಸ್ಥಾನದಿಂದ ರಾಹುಲ್ ಗಾಂಧಿ ಅನರ್ಹ; NSUI ಪ್ರತಿಭಟನೆ

NSUI protest

#image_title

ಶಿವಮೊಗ್ಗ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಿದ್ದನ್ನು ವಿರೋಧಿಸಿ, ಮಂಗಳವಾರ (ಮಾ.28) ಎನ್ಎಎಸ್‌ಯುಐ (NSUI) ಕಾರ್ಯಕರ್ತರು ಮತ್ತು ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಶಿವಮೊಗ್ಗ ರೈಲ್ವೆ ನಿಲ್ದಾಣದ ಮುಂಭಾಗ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು, ಬಂಧಿಸಿ ಬಳಿಕ ಬಿಡುಗಡೆಗೊಳಿಸಿದರು.

ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ತೀರ್ಪು ಹೊರಬಿದ್ದ ತಕ್ಷಣವೇ ಮತ್ತು ಆದೇಶದ ಪ್ರತಿ ಕೈಗೆ ಸಿಗುವ ಮೊದಲೇ ಕಾಂಗ್ರೆಸ್‌ನ ಹಿರಿಯ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ. ತೀರ್ಪಿನಲ್ಲಿ ಮೇಲ್ಮನವಿಗೆ ಅವಕಾಶವಿದ್ದರೂ ಈ ಕ್ರಮ ಕೈಗೊಳ್ಳಲಾಗಿರುವುದು ಖಂಡನೀಯ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ಸಂವಿಧಾನ ವಿರೋಧಿ ನೀತಿ ಅನುಸರಿಸುತ್ತ ದ್ವೇಷದ ರಾಜಕಾರಣ ಮಾಡುತ್ತಿದೆ. ಆ ಮೂಲಕ ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಆತಂಕವನ್ನು ತಂದೊಡ್ಡುತ್ತಿದೆ ಎಂದು ದೂರಿದರು.

ಇದನ್ನೂ ಓದಿ: Amritpal Singh: ಅಮೃತ್​ಪಾಲ್ ಸಿಂಗ್​​ನ ಆಪ್ತನಿಗೆ, ಪಾಕಿಸ್ತಾನ ಮಾಜಿ ಸೇನಾ ಮುಖ್ಯಸ್ಥನ ಪುತ್ರನ ಜತೆ ನಂಟು!

“ರಾಹುಲ್ ಗಾಂಧಿಯವರು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ಮುಂದಿನ ಪ್ರಧಾನಿ ಅಭ್ಯರ್ಥಿ. ಅವರನ್ನು ರಾಜಕೀಯವಾಗಿ ಮುಗಿಸುವ ಸಂಚಿನಿಂದಾಗಿ ಬಿಜೆಪಿ ಅವರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿದ್ದಾಗಲೂ ತರಾತುರಿಯಲ್ಲಿ ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದೆ. ಇದು ಖಂಡನೀಯವಾಗಿದ್ದು, ದೇಶದ ಹಣ ಲೂಟಿ ಮಾಡಿದವರನ್ನು ವಿದೇಶಕ್ಕೆ ಕಳಿಸುತ್ತಾರೆ. ಗಾಂಧಿ ಕುಟುಂಬದವರನ್ನು ಅವಮಾನ ಮಾಡುತ್ತಾರೆಂದು ದೂರಿದ್ದಾರೆ. ಈ ಕೂಡಲೇ ಅನರ್ಹಗೊಳಿಸಿರುವುದನ್ನು ವಾಪಸ್‌ ಪಡೆಯಬೇಕು. ರಾಷ್ಟ್ರಪತಿಗಳು ಮಧ್ಯೆ ಪ್ರವೇಶಿಸಿ ರಾಹುಲ್ ಗಾಂಧಿ ಅವರ ಅನರ್ಹತೆ ತಡೆಹಿಡಿಯಬೇಕು” ಎಂದು ಒತ್ತಾಯಿಸಿದ್ದಾರೆ.

Exit mobile version