Site icon Vistara News

Shivamogga News: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಾಲಯದಲ್ಲಿ ವಿಶೇಷ ಪೂಜೆ

Shivamogga News

ಸೊರಬ: ತಾಲೂಕಿನ ಚಂದ್ರಗುತ್ತಿಯ ಐತಿಹಾಸಿಕ ಹಾಗೂ ಪುರಾಣ ಪ್ರಸಿದ್ಧ ಶ್ರೀ ರೇಣುಕಾಂಬ ದೇವಾಲಯದಲ್ಲಿ (Chandragutti Renukamba Temple) ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಶುಕ್ರವಾರ ಶ್ರೀ ದೇವಿಗೆ ವಿಶೇಷ ಪೂಜೆ ಕೈಂಕರ್ಯಗಳು (Shivamogga News) ಜರುಗಿದವು.

ಶ್ರಾವಣ ಮಾಸದ ವರಮಹಾಲಕ್ಷ್ಮಿ ಹಬ್ಬದ ನಿಮಿತ್ತ ಶ್ರೀ ರೇಣುಕಾಂಬ ದೇವಿ ದರ್ಶನಕ್ಕೆ ತಾಲೂಕು ಸೇರಿದಂತೆ ಹಿರೇಕೆರೂರು, ಬ್ಯಾಡಗಿ, ರಾಣೇಬೆನ್ನೂರು, ಶಿಕಾರಿಪುರ, ಹರಿಹರ, ಹಾನಗಲ್, ವಿಜಯಪುರ, ಶಿವಮೊಗ್ಗ, ರಾಯಚೂರು, ಚಿಕ್ಕಮಂಗಳೂರು, ದಾವಣಗೆರೆ, ಚಿತ್ರದುರ್ಗ ಹಾಗೂ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಭಕ್ತಿ ಸಮರ್ಪಿಸಿದರು.

ಇದನ್ನೂ ಓದಿ: Kannada New Movie: ತೆರೆಯ‌ ಮೇಲೆ‌ ಚಿತ್ರವಾಗಿ ಬರಲಿದೆ ಡಿ.ವಿ.ಜಿ ಅವರ ʼಮಂಕುತಿಮ್ಮನ ಕಗ್ಗʼ; ಮೊದಲ ಹಾಡು ರಿಲೀಸ್‌

ದೇವಸ್ಥಾನದ ಪರಿವಾರ ದೇವರುಗಳಾದ ಕಾಲಭೈರವ, ನಾಗದೇವತೆ, ಮಾತಂಗಿ, ಪರಶುರಾಮ, ತ್ರಿಶೂಲದ ಭೈರಪ್ಪ, ದೇವರುಗಳಿಗೆ ವಿಶೇಷ ಪೂಜೆ ಪುನಸ್ಕಾರಗಳು ನೆರವೇರಿದವು.

ಇದನ್ನೂ ಓದಿ: Indian Economy : 2027ರ ವೇಳೆಗೆ ಭಾರತ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: ಐಎಂಎಫ್​ನ ಗೀತಾ ಗೋಪಿನಾಥ್

ಶ್ರೀ ರೇಣುಕಾಂಬ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಪ್ರಮೀಳಾ ಕುಮಾರಿ ಮಾತನಾಡಿ, ಧಾರ್ಮಿಕ ದತ್ತಿ ಇಲಾಖೆ ಆದೇಶದಂತೆ ದೇಗುಲಕ್ಕೆ ಆಗಮಿಸಿದ ಮಹಿಳೆಯರಿಗೆ ವರಮಹಾಲಕ್ಷ್ಮಿ ವ್ರತಾಚರಣೆ ಅಂಗವಾಗಿ ಪ್ರಸಾದ ರೂಪದಲ್ಲಿ ಅರಿಷಿಣ, ಕುಂಕುಮ, ಹಸಿರು ಬಳೆ ನೀಡಿ ಉಡಿ ತುಂಬಲಾಯಿತು. ಭಕ್ತರಿಗೆ ಪ್ರಸಾದ ವಿತರಿಸಲಾಯಿತು. ಈ ಧಾರ್ಮಿಕ ಕಾರ್ಯಕ್ಕೆ ಮಹಿಳೆಯರು ಹಾಗೂ ಭಕ್ತಾದಿಗಳು ಹಾಗೂ ಗ್ರಾಮಸ್ಥರು ಸಹಕರಿಸಿದರು ಎಂದು ತಿಳಿಸಿದರು.

Exit mobile version