Site icon Vistara News

VISL Factory : ಭದ್ರಾವತಿಯ ವಿಐಎಸ್‍ಎಲ್ ಕಾರ್ಖಾನೆ ಪುನಶ್ಚೇತನಗೊಳಿಸಿ, ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಲು ಒತ್ತಾಯ

VISL Factory Bhadravathi Protest

#image_title

ಶಿವಮೊಗ್ಗ: ಸರ್.ಎಂ. ವಿಶ್ವೇಶ್ವರಯ್ಯನವರ ದೂರದೃಷ್ಟಿಯಿಂದ ಸ್ಥಾಪನೆಯಾಗಿದ್ದ ಭದ್ರಾವತಿಯ ವಿಐಎಸ್ಎಲ್ ಕಾರ್ಖಾನೆಯನ್ನು (VISL Factory) ಕೇಂದ್ರ ಸರ್ಕಾರ ಮುಚ್ಚಲು ಹುನ್ನಾರ ನಡೆಸಿರುವುದನ್ನು ಖಂಡಿಸಿ ಜಿಲ್ಲಾ ಎನ್ಎಸ್‌ಯುಇ ಸೋಮವಾರ (ಫೆ.೬) ನಗರದಲ್ಲಿ ಪ್ರತಿಭಟನೆ ನಡೆಸಿತು.

ವಿ.ಐ.ಎಸ್.ಎಲ್. ಕಾರ್ಖಾನೆಯು ಏಷ್ಯಾದಲ್ಲಿಯೇ ಉತ್ಕೃಷ್ಟ ಕಬ್ಬಿಣ ಮತ್ತು ಉಕ್ಕು ತಯಾರಿಕೆಗೆ ಪ್ರಸಿದ್ಧಿ ಪಡೆದಿದ್ದು, ಕಾರ್ಖಾನೆಯ ಉತ್ಪನ್ನಗಳಿಗೆ ಬೇಡಿಕೆ ಮತ್ತು ಮಾರುಕಟ್ಟೆ ಇತ್ತು. ರಾಜ್ಯ ಸರ್ಕಾರದ ಸ್ವಾಮ್ಯದಲ್ಲಿದ್ದ ವಿಐಎಸ್ಎಲ್ ಅನ್ನು ಇನ್ನಷ್ಟು ಅಭಿವೃದ್ಧಿಪಡಿಸುವ ಉದ್ದೇಶಕ್ಕೆ ಯಾವುದೇ ಷರತ್ತು ಇಲ್ಲದೇ ಕೇಂದ್ರ ಸರ್ಕಾರದ ಸೈಲ್‍ಗೆ ವಹಿಸಿಕೊಡಲಾಗಿತ್ತು. ಸೈಲ್ ಕಾರ್ಖಾನೆ ಅಭಿವೃದ್ಧಿಪಡಿಸುವ ಬದಲಿಗೆ ಕಾರ್ಖಾನೆಗೆ ಬೇಕಾದ ಅವಶ್ಯಕತೆಗಳನ್ನು ಪೂರೈಸದೇ ಇರುವುದರಿಂದ ಇಂದು ವಿ.ಐ.ಎಸ್.ಎಲ್. ಕಾರ್ಖಾನೆಯನ್ನು ಮುಚ್ಚಲು ಮುಂದಾಗಿದೆ ಎಂದು ಎನ್ಎಸ್‌ಯುಐ ಹೇಳಿದೆ.

#image_title

ಇದನ್ನೂ ಓದಿ: Job cuts : ಬೋಯಿಂಗ್‌ನಿಂದ 2,000 ಉದ್ಯೋಗ ಕಡಿತ, ಟಿಸಿಎಸ್‌ಗೆ ಹೊರಗುತ್ತಿಗೆ

ವಿ.ಐ.ಎಸ್.ಎಲ್. ಕಾರ್ಖಾನೆ ಸಾವಿರಾರು ಕಾರ್ಮಿಕರಿಗೆ ಉದ್ಯೋಗ ನೀಡುವ ಮೂಲಕ ಈ ಭಾಗದ ಆರ್ಥಿಕ ಚಟುವಟಿಕೆಗಳನ್ನು ಉತ್ತೇಜಿಸುತ್ತಲೇ ಬಂದಿದೆ. ಆದರೆ, ಕೇಂದ್ರ ಸರ್ಕಾರ ಸರ್ಕಾರಿ ಸ್ವಾಮ್ಯದ ಕಾರ್ಖಾನೆಗೆ ಗಣಿ ಒದಗಿಸುವಲ್ಲಿ, ಅಗತ್ಯ ಯಂತ್ರೋಪಕರಣಗಳನ್ನು ಒದಗಿಸುವಲ್ಲಿ ವಿಫಲವಾಗಿದ್ದು, ಕಾರ್ಖಾನೆ ನಷ್ಟದ ಹಾದಿ ಹಿಡಿಯಲು ಕಾರಣವಾಗಿದೆ. ಇದೀಗ ಕಾರ್ಖಾನೆಯನ್ನು ಮುಚ್ಚುವ ಪ್ರಯತ್ನ ನಡೆಸುತ್ತಿದ್ದು, ಇದರಿಂದ ಸಾವಿರಾರು ಕಾರ್ಮಿಕರು ಬೀದಿಗೆ ಬೀಳುತ್ತಿದ್ದಾರೆ. ಜಿಲ್ಲೆಯ ಆರ್ಥಿಕ ಚಟುವಟಿಕೆಯೂ ಕುಸಿಯುತ್ತಿದೆ. ಇದಕ್ಕೆಲ್ಲ ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವೇ ನೇರ ಹೊಣೆಯಾಗಿದೆ. ಇದರೊಂದಿಗೆ ಜಿಲ್ಲೆಯ ಮತ್ತೊಂದು ಕೈಗಾರಿಕೆ ಎಂಪಿಎಂ ಸಹ ಬಿಜೆಪಿ ಸರ್ಕಾರದ ಹೊಣೆಗೇಡಿತನದಿಂದಾಗಿ ಮುಚ್ಚಲಾಗಿದೆ. ಉದ್ಯೋಗ ಸೃಷ್ಟಿಸುತ್ತೇವೆ ಎಂದು ಹೇಳಿಕೊಳ್ಳುತ್ತಲೇ ಅಧಿಕಾರಕ್ಕೆ ಬಂದ ಬಿಜೆಪಿ ಉದ್ಯೋಗ ಸೃಜಿಸುವ ಬದಲು, ಸರ್ಕಾರಿ ಸ್ವಾಮ್ಯದ ಒಂದೊಂದೇ ಉದ್ಯಮಗಳನ್ನು ಮುಚ್ಚುತ್ತಾ ಮತ್ತಷ್ಟು ನಿರುದ್ಯೋಗ ಸೃಷ್ಟಿಗೆ ಕಾರಣವಾಗಿದೆ ಎಂದು ಎನ್.ಎಸ್.ಯು.ಐ. ಆರೋಪಿಸಿದೆ.

#image_title

ಇದನ್ನೂ ಓದಿ: Kantara Movie: 2024ರಲ್ಲಿ ತೆರೆ ಕಾಣಲಿದೆ ಕಾಂತಾರ-1: ಪ್ರಿಕ್ವೆಲ್ ಬಗ್ಗೆ ಬಾಯ್ಬಿಟ್ಟ ರಿಷಬ್‌ ಶೆಟ್ಟಿ

ರಾಷ್ಟ್ರಪತಿಗಳು ಕೂಡಲೇ ಮಧ್ಯೆ ಪ್ರವೇಶಿಸಿ ಭದ್ರಾವತಿಯ ವಿ.ಐ.ಎಸ್.ಎಲ್. ಕಾರ್ಖಾನೆಯನ್ನು ಪುನಶ್ಚೇತನಗೊಳಿಸಿ, ಸರ್ಕಾರಿ ಸ್ವಾಮ್ಯದಲ್ಲೇ ಮುಂದುವರಿಸುವಂತೆ ಸರ್ಕಾರಕ್ಕೆ ಆದೇಶ ನೀಡಬೇಕು. ಹಾಗೆಯೇ ಎಂಪಿಎಂ ಕಾರ್ಖಾನೆ ಪುನಶ್ಚೇತನಕ್ಕೂ ನಿರ್ದೇಶನ ನೀಡಬೇಕು ಎಂದು ಎನ್.ಎಸ್.ಯು.ಐ. ಒತ್ತಾಯಿಸಿದೆ.

#image_title

ಇದನ್ನೂ ಓದಿ: BBC ISWOTY Award: ಬಿಬಿಸಿ ಪ್ರಶಸ್ತಿಗೆ ವಿನೇಶ್​ ಪೋಗಟ್​, ಸಾಕ್ಷಿ ಮಲಿಕ್​ ನಾಮನಿರ್ದೇಶನ

ಎನ್.ಎಸ್.ಯು.ಐ. ಅಧ್ಯಕ್ಷ ವಿಜಯಕುಮಾರ್ ಮಾತನಾಡಿ, ವಿ.ಐ.ಎಸ್.ಎಲ್. ಉಳಿವಿಗೆ ಹೋರಾಡುತ್ತಿರುವ ಕಾರ್ಮಿಕರ ಜೊತೆ ಎನ್.ಎಸ್.ಯು.ಐ. ಸದಾ ಇರಲಿದೆ. ಕೂಡಲೇ ಸರ್ಕಾರ ವಿ.ಐ.ಎಸ್.ಎಲ್. ಕಾರ್ಖಾನೆ ಉಳಿವಿಗೆ ಕ್ರಮ ಕೈಗೊಳ್ಳದಿದ್ದಲ್ಲಿ, ಎನ್.ಎಸ್.ಯು.ಐ. ವತಿಯಿಂದ ಬೀದಿಗಿಳಿದು ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್ಎಸ್ ಸುಂದರೇಶ್, ಮಾಜಿ ಶಾಸಕ ಕೆ ಬಿ ಪ್ರಸನ್ನ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಎಸ್ ಪಿ ದಿನೇಶ್, ರಾಜ್ಯ ವಕ್ತಾರರಾದ ರಮೇಶ ಹೆಗಡೆ, ರವಿಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ದೀಪಕ್ ಸಿಂಗ್, ಕಲೀಮ್ ಪಾಷಾ, ಎನ್ ಎಸ್ ಯು ಐ ನ ರವಿ ಕಾಟಿಕೆರೆ, ಚರಣ್, ಹರ್ಷಿತ್ , ವಿಕ್ರಂ, ರವಿ, ಚಂದ್ರು ಜಿ ರಾವ್ , ತೌಫಿಕ್, ಹೇಮಂತ್, ಚರಣ್, ದೀಕ್ಷಿತ್ ಪ್ರದೀಪ್ , ವರುಣ್ ವಿ ಪಂಡಿತ್, ನಾಗೇಂದ್ರ, ಸಾಗರ್, ಹಾಗೂ ಯುವ ಕಾಂಗ್ರೆಸ್ ನ ಬಸವರಾಜ್, ಮಲಗಪ್ಪ ಶಿವು, ಅಬ್ದುಲ್, ಗಿರೀಶ್, ಆಕಾಶ್, ಗೌತಮ್ ಮತ್ತಿತರರು ಉಪಸ್ಥಿತರಿದ್ದರು

#image_title

ಇದನ್ನೂ ಓದಿ: Google Bard: ಜಾಟ್‌ಜಿಪಿಟಿಗೆ ಪ್ರತಿಯಾಗಿ ಗೂಗಲ್‌ನಿಂದ ಬಾರ್ಡ್, ಮೈಕ್ರೋಸಾಫ್ಟ್‌ಗೆ ಠಕ್ಕರ್

Exit mobile version