ಶಿವಮೊಗ್ಗ: ವಿಜಯನಗರ ಜಿಲ್ಲೆಯ ಹೂವಿನಹಡಗಲಿ ತಾಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಜ. 27ರಿಂದ ಫೆ.6ರವರೆಗೆ ಪ್ರತಿ ದಿನ 500 ಕ್ಯೂಸೆಕ್ನಂತೆ ಒಟ್ಟು 5500 ಕ್ಯೂಸೆಕ್ ನೀರನ್ನು ಹರಿಸಲಾಗುತ್ತದೆ.
ಈ ಅವಧಿಯಲ್ಲಿ ನದಿಯಲ್ಲಿ ಸಾರ್ವಜನಿಕರು ಮತ್ತು ರೈತರು ಓಡಾಡುವುದು, ದನ ಕರುಗಳನ್ನು ಮೇಯಿಸುವುದು ಮತ್ತು ತೋಟಗಾರಿಕೆಗೆ ಸಂಬಂಧಿಸಿದ ಕೆಲಸ ಮಾಡುವುದು ಸೇರಿದಂತೆ ಇನ್ನಿತರ ವಿಷಯಗಳನ್ನು ನಿಷೇಧಿಸಲಾಗಿದೆ ಎಂದು ಕರ್ನಾಟಕ ನೀರಾವರಿ ನಿಗಮದ ಅಧೀಕ್ಷಕ ಅಭಿಯಂತರರು ತಿಳಿಸಿದ್ದಾರೆ.
ಇದನ್ನೂ ಓದಿ | School affiliation : CBSE ಮಾನ್ಯತೆಯೇ ಇಲ್ಲದೆ ವಂಚನೆ; ನಾಗರಬಾವಿ ಸ್ಕೂಲ್ನ ಮೋಸದಾಟಕ್ಕೆ ಪೋಷಕರ ಆಕ್ರೋಶ
ಸಾರ್ವಜನಿಕರು ಮತ್ತು ರೈತರು ನದಿ ದಂಡೆಯಲ್ಲಿ ಪಂಪ್ಸೆಟ್ ಅಳವಡಿಸುವುದು ಮತ್ತು ಅನಧಿಕೃತವಾಗಿ ನೀರೆತ್ತುವುದನ್ನು ನಿಷೇಧಿಸಲಾಗಿದೆ. ಹೀಗಾಗಿ ಅವಧಿಯಲ್ಲಿ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.