Site icon Vistara News

Shivamogga News : ನೇಣಿನ ಕುಣಿಕೆಯಲ್ಲಿ ನೇತಾಡುತ್ತಿದ್ದಳು ಚೆಲುವೆ; ನವ ವಿವಾಹಿತೆಯದ್ದು ಆತ್ಮಹತ್ಯೆನಾ? ಕೊಲೆನಾ?

Woman commits suicide by hanging herself

ಶಿವಮೊಗ್ಗ : ಪತಿ ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆ ಮೃತದೇಹ (Dead Body Found) ಪತ್ತೆಯಾಗಿದೆ. ಶಿವಮೊಗ್ಗದ (Shivamogga News) ತೀರ್ಥಹಳ್ಳಿ ತಾಲೂಕಿನ ದಾಸನಕೊಡಿಗೆ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಶರ್ಮಿತಾ.ಬಿ.ಯು (24) ಮೃತ ದುರ್ದೈವಿ.

ಶರ್ಮಿತಾಳ ರೂಮಿನ ಬಾಗಿಲು ಮುಚ್ಚಿತ್ತು. ಎಷ್ಟೇ ಬಾಗಿಲು ತಟ್ಟಿದ್ದರೂ ತೆರೆಯದೆ ಇದ್ದಾಗ, ಮನೆಯ ಕೆಲಸದವರು ಕಿಟಕಿಯಿಂದ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಬಿಜ್ಜಳ ಗ್ರಾಮದ ಶರ್ಮಿತಾ 2023ರ ಮಾರ್ಚ್‌ನಲ್ಲಿ ದಾಸನಕೊಡಿಗೆಯ ವಿದ್ಯಾರ್ಥ್‌ ಎಂಬಾತನೊಂದಿಗೆ ವಿವಾಹವಾಗಿದ್ದರು.

ವಿದ್ಯಾರ್ಥ್‌ ಸೋಮೇಶ್ವರ ವನ್ಯಜೀವಿ ಅಭಯಾರಣ್ಯ ವಿಭಾಗದ ಅಮಾವಾಸ್ಯೆಬೈಲು ವಲಯ ಅರಣ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ರಾತ್ರಿ ಪಾಳಿ ಕೆಲಸಕ್ಕೆ ಪತಿ ವಿದ್ಯಾರ್ಥ್‌ ತೆರಳಿದ್ದರು ಎನ್ನಲಾಗಿದೆ. ಶರ್ಮಿತಾಳ ಈ ಸಾವು ಆತ್ಮಹತ್ಯೆಯೇ ಅಥವಾ ಕೊಲೆಯೇ ಎಂಬ ಅನುಮಾನ ಮೂಡಿದೆ.

ಸದ್ಯ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ದೂರು ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Road Accident : ಸ್ಕೂಟರ್‌ಗೆ ಬಸ್‌ ಡಿಕ್ಕಿ; ಪತ್ನಿ-ಮಗುವಿನ ಕಣ್ಣೇದುರಿಗೆ ನರಳಾಡಿ ಪ್ರಾಣಬಿಟ್ಟ ಪತಿ

ಕೆರೆಯಲ್ಲಿ ತೇಲಿ ಬಂದ ಮೃತದೇಹಗಳು; ಮಕ್ಕಳೊಟ್ಟಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ

ಚಿಕ್ಕಬಳ್ಳಾಪುರ: ಅನುಮಾನಾಸ್ಪದವಾಗಿ ತಾಯಿ- ಇಬ್ಬರು ಹೆಣ್ಣುಮಕ್ಕಳ ಮೃತ ದೇಹಗಳು ಕೆರೆಯಲ್ಲಿ ಪತ್ತೆಯಾಗಿವೆ. ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಿಟ್ಟೇಮರಿ ಕೆರೆಯಲ್ಲಿ (Dead Body Found) ಮೃತದೇಹಗಳು ಪತ್ತೆಯಾಗಿವೆ.

ಮಿಟ್ಟೇಮರಿ ಕೆರೆಯಲ್ಲಿ ಮೃತದೇಹಗಳು ತೇಲುತ್ತಿದ್ದವು. ಇದನ್ನೂ ಕಂಡೊಡನೆ ಸ್ಥಳೀಯರು ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಮಿಸಿದ ಪೊಲೀಸರು ಕೆರೆಯಲ್ಲಿದ್ದ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮೃತಳನ್ನು ಯಗವಕೋಟೆ ನಿವಾಸಿ ರಾಧ (32) ಎಂದು ಗುರುತಿಸಲಾಗಿದೆ.

ಕೌಟುಂಬಿಕ ಕಲಹಕ್ಕೆ ಬೇಸತ್ತು ರಾಧ, ಪೂರ್ವಿತಾ (4) ಹಾಗು ಒಂದೂವರೆ ವರ್ಷದ ಇಬ್ಬರು ಹೆಣ್ಣುಮಕ್ಕಳೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಬಾಗೇಪಲ್ಲಿ ಮೂಲದ ರಾಧಳನ್ನು ಚಿಂತಾಮಣಿ ತಾಲೂಕಿನ ಯಗವಕೋಟೆಯ ಮಲ್ಲಿಕಾರ್ಜುನ ಎಂಬುವವರಿಗೆ ಮದುವೆ ಮಾಡಿ ಕೊಡಲಾಗಿತ್ತು. ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ.

ಸದ್ಯ ಪೊಲೀಸರು ಮೂರು ಮೃತದೇಹಗಳನ್ನು ಮರಣೋತ್ತರ ಪರೀಕ್ಷಗಾಗಿ ಬಾಗೇಪಲ್ಲಿ ಆಸ್ಪತ್ರೆಗೆ ರವಾನಿಸಿದ್ದಾರೆ. ಬಾಗೇಪಲ್ಲಿ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version