ಶಿವಮೊಗ್ಗ: ಚಿಕ್ಕಮಗಳೂರಿನ ಯುವ ಸ್ಫೂರ್ತಿ ಅಕಾಡೆಮಿ, ವಿಸ್ತಾರ ನ್ಯೂಸ್ ಹಾಗೂ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜು ಗಾಜನೂರು ಇವರ ಸಹಯೋಗದಲ್ಲಿ ಜೂ.22ರಂದು ಶನಿವಾರ ಬೆಳಗ್ಗೆ 10 ಗಂಟೆಗೆ ಯುವ ಸ್ಫೂರ್ತಿ ಸಂವಾದ ಕಾರ್ಯಕ್ರಮ (Shivamogga News) ಏರ್ಪಡಿಸಲಾಗಿದೆ.
ಇದನ್ನೂ ಓದಿ: Working Hours: ಅತಿ ಹೆಚ್ಚು ಕೆಲಸದ ಸಮಯ ಹೊಂದಿರುವ ದೇಶಗಳಲ್ಲಿ ಭಾರತಕ್ಕೆ ಎಷ್ಟನೇ ಸ್ಥಾನ?
ಜಿಲ್ಲೆಯ ಗಾಜನೂರಿನ ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಉದ್ಘಾಟಿಸುವರು. ಶಿವಮೊಗ್ಗದ ಶ್ರೀ ದೊಡ್ಡಮ್ಮ ದೇವಿ ಉಪಾಸಕರಾದ ಶ್ರೀ ಸಿದ್ದಪ್ಪಾಜಿ ದಿವ್ಯ ಸಾನ್ನಿಧ್ಯ ವಹಿಸುವರು. ಮೊರಾರ್ಜಿ ದೇಸಾಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಲೋಕಪ್ಪ ವಿ. ದಳವಾಯಿ ಅಧ್ಯಕ್ಷತೆ ವಹಿಸುವರು. ಚಿಕ್ಕಮಗಳೂರಿನ ಯುವ ಸ್ಫೂರ್ತಿ ಅಕಾಡೆಮಿಯ ಮುಖ್ಯಸ್ಥ ಸುಂದರೇಶ್ ಸಿ.ಬಿ. ಪ್ರಾಸ್ತಾವಿಕವಾಗಿ ಮಾತನಾಡುವರು.
ಇದನ್ನೂ ಓದಿ: CM Siddaramaiah: ಸರ್ಕಾರಿ ನೌಕರರಿಗೆ ಬಂಪರ್ ಸುದ್ದಿ: 27% ವೇತನ ಹೆಚ್ಚಳಕ್ಕೆ ಮುಂದಾದ ಸಿಎಂ
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ಚಿಕ್ಕಮಗಳೂರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಗೋಪಾಲಕೃಷ್ಣ ಬಿ., ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸ್ನೇಹಲ್ ಸುಧಾಕರ್ ಲೋಖಂಡೆ, ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿ.ಕೆ., ಹೈಕೋರ್ಟ್ ಹಾಗೂ ಸುಪ್ರೀ ಕೋರ್ಟ್‌ನ ನ್ಯಾಯವಾದಿ ವಿಕ್ರಂ ಪಡ್ಕೆ ಪಾಲ್ಗೊಳ್ಳುವರು.