ಶಿವಮೊಗ್ಗ: ನಗರದ ಸುಬ್ಬಯ್ಯ ಆಸ್ಪತ್ರೆಯಲ್ಲಿ ಹೆರಿಗೆಯಾದ ಕೆಲವೇ ಗಂಟೆಯಲ್ಲಿ ನವಜಾತ ಶಿಶು ಮೃತಪಟ್ಟಿದ್ದು, ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಸಾವಿಗೀಡಾಗಿದೆ ಎಂದು ಕುಟುಂಬಸ್ಥರು ಆಕ್ರೋಶ (Shivamogga Protest) ವ್ಯಕ್ತಪಡಿಸಿದ್ದಾರೆ.
ನಗರದ ಜೈಲ್ ರಸ್ತೆಯಲ್ಲಿರುವ ಸುಬ್ಬಯ್ಯ ಆಸ್ಪತ್ರೆಯಲ್ಲಿ ಬಾಪೂಜಿನಗರದ ನಾಗರಾಜ್ ಮತ್ತು ಭಾಗ್ಯ ದಂಪತಿಯ ಮಗು ಮೃತಪಟ್ಟಿದೆ. ವೈದ್ಯರ ನಿರ್ಲಕ್ಷ್ಯದಿಂದಲೇ ಮಗು ಮೃತಪಟ್ಟಿದೆ. ಹೆರಿಗೆ ಮಾಡಿಸಿದ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಹಾಗೂ ಸಂಬಂಧಿಕರು ಒತ್ತಾಯಿಸಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ, ಹೀಗಾಗಿ ಸ್ಥಳಕ್ಕೆ ಪೊಲೀಸರು ಧಾವಿಸಿ ವಿಚಾರಣೆ ನಡೆಸಿದರು.
ಆಸ್ಪತ್ರೆಯಲ್ಲಿ ಕುಟುಂಬಸ್ಥರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ನೂಕುನುಗ್ಗಲು ಮಾಡಿದ್ದರಿಂದ ಐಸಿಯು ಡೋರ್ ಗ್ಲಾಸ್ ಚೂರು ಚೂರಾಗಿದೆ.
ಹೆದ್ದಾರಿ ಗುಂಡಿಗೆ ಬಿದ್ದು ಯುವಕ ಸಾವು; ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ
ಶಿವಮೊಗ್ಗ: ನಿರ್ಮಾಣ ಹಂತದ ಶಿವಮೊಗ್ಗ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಂಡಿಗೆ ಬಿದ್ದು ಯುವಕ ಮೃತಪಟ್ಟಿದ್ದು, ದುರಂತಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯವೇ ಕಾರಣ ಎಂದು ಭದ್ರಾವತಿ ತಾಲೂಕಿನ ಕಾರೆಹಳ್ಳಿ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.
ಅಂತೋನಿ (30) ಎಂಬ ಯುವಕ ಮೃತಪಟ್ಟಿದ್ದಾರೆ. ಕಾಮಗಾರಿ ಸ್ಥಳದಲ್ಲಿ ಬ್ಯಾರಿಕೇಡ್ ಹಾಕದ ಹಿನ್ನೆಲೆಯಲ್ಲಿ ಗುಂಡಿಗೆ ಬಿದ್ದು ಯುವಕ ಮೃತಪಟ್ಟಿದ್ದಾನೆ. ಅವಘಡಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಕಾರೆಹಳ್ಳಿ ಗ್ರಾಮಸ್ಥರು, ಹೆದ್ದಾರಿಯಲ್ಲಿ ಟಯರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದರು.
ರಸ್ತೆ ತಡೆ ನಡೆಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ ಹೆದ್ದಾರಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ಇದರಿಂದ ಕಿಲೋ ಮೀಟರ್‌ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿದ್ದು ಕಂಡುಬಂತು.
ಇದನ್ನೂ ಓದಿ | Car burnt | ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು, ಚಲಿಸುತ್ತಿರುವಾಗಲೇ ಕಾಣಿಸಿಕೊಂಡ ಬೆಂಕಿ