ಬಸ್‌ ಡಿಕ್ಕಿ, ಪತ್ರಿಕಾ ವಿತರಕ ಸ್ಥಳದಲ್ಲೇ ಸಾವು - Vistara News

ಶಿವಮೊಗ್ಗ

ಬಸ್‌ ಡಿಕ್ಕಿ, ಪತ್ರಿಕಾ ವಿತರಕ ಸ್ಥಳದಲ್ಲೇ ಸಾವು

ಪೇಪರ್‌ ಹಾಕಲು ಹೋದ ವ್ಯಕ್ತಿ ಬಸ್‌ ಡಿಕ್ಕಿಯಾಗಿ ಮೃತಪಟ್ಟ ಘಟನೆ ಶನಿವಾರ ಮುಂಜಾನೆ ಸಾಗರದ ಪ್ರವಾಸಿ ಮಂದಿರದ ಬಳಿ ನಡೆದಿದೆ.

VISTARANEWS.COM


on

ಬಸ್‌ ಡಿಕ್ಕಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ಶನಿವಾರ ಮುಂಜಾನೆ ಶಿವಮೊಗ್ಗ ಜಿಲ್ಲೆಯ ಸಾಗರದ ಪ್ರವಾಸಿ ಮಂದಿರದ ಬಳಿ ಬಸ್‌ ಡಿಕ್ಕಿಯಾಗಿ ಪತ್ರಿಕಾ ವಿತರಕರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬಸ್‌ ಡಿಕ್ಕಿ

ಬೆಂಗಳೂರಿನಿಂದ ಸಾಗರ ಮಾರ್ಗವಾಗಿ ಯಲ್ಲಾಪುರಕ್ಕೆ ಹೋಗುತ್ತಿದ್ದ KSRTC ಬಸ್ ಪತ್ರಿಕಾ ವಿತರಕರ ಸೈಕಲ್‌ಗೆ ಡಿಕ್ಕಿ ಹೊಡೆದಿದೆ. ಪತ್ರಿಕಾ ವಿತರಕ, ಸಾಗರದ ಬೆಳಲಮಕ್ಕಿಯ ನಿವಾಸಿ 25 ವರ್ಷದ ಗಣೇಶ್ ಮೃತಪಟ್ಟಿದ್ದಾರೆ. ಇವರು ಕಳೆದ 6-7 ವರ್ಷಗಳಿಂದ ಪತ್ರಿಕಾ ವಿತರಕರಾಗಿ ಕೆಲಸ ಮಾಡುತ್ತಿದ್ದರು.

ಶನಿವಾರ ಬೆಳಗ್ಗೆ ಎಂದಿನಂತೆ ಪೇಪರ್‌ ಹಾಕಲು ಹೋದವರು ಬಾರದ ಲೋಕ ಸೇರಿದ್ದಾರೆ. ಇವರೊಂದಿಗೆ ಹಿಂಬದಿಯಲ್ಲಿ ಕುಳಿತಿದ್ದ ರಾಹುಲ್‌ಗೆ ಸಣ್ಣಪುಟ್ಟ ಗಾಯವಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.

ಬೆಳಲಮಕ್ಕಿ ಸುರೇಶ್ ಮತ್ತು ಉಮಾ ದಂಪತಿಗೆ ಗಣೇಶ್ ಒಬ್ಬನೇ ಮಗನಾಗಿದ್ದರು. ತಂದೆ ಅನಾರೋಗ್ಯ ಪೀಡಿತರಾಗಿದ್ದು, ಇಬ್ಬರು ವಿವಾಹಿತ ಸಹೋದರಿಯರು ಇದ್ದಾರೆ. ಗಣೇಶ ಉತ್ತಮ ಕೃಷಿ ಕೂಲಿಕಾರ ಸಹ ಆಗಿದ್ದರು.

ಇದನ್ನೂ ಓದಿ: ಧಾರವಾಡ: ಕಾರು-ಬೈಕ್‌ ಮುಖಾಮುಖಿ ಡಿಕ್ಕಿ; ಮೂವರ ದಾರುಣ ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Haveri Accident: ಹಾವೇರಿ ಅಪಘಾತ ಪ್ರಕರಣ; ಭಾರತ ಅಂಧರ ಪುಟ್‌ಬಾಲ್ ತಂಡದ ಕ್ಯಾಪ್ಟನ್ ಕೂಡ ಸಾವು

Haveri Accident: ಅಂಧತ್ವಕ್ಕೆ ಸೆಡ್ಡು ಹೊಡೆದು ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದ ಮಾನಸ, ಭಾರತ ತಂಡದ ಅಂಧರ ಪುಟ್ ಬಾಲ್ ತಂಡ ಕ್ಯಾಪ್ಟನ್ ಆಗಿದ್ದರು. ಅವರು ಬ್ಯಾಡಗಿ ಬಳಿ ನಡೆದ ಭೀಕರ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

VISTARANEWS.COM


on

Haveri Accident
Koo

ಶಿವಮೊಗ್ಗ: ಹಾವೇರಿ ಜಿಲ್ಲೆಯ ಬ್ಯಾಡಗಿ ಬಳಿ ನಡೆದ ಭೀಕರ ಅಪಘಾತದಲ್ಲಿ (Haveri Accident) ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮಿಹಟ್ಟಿ ಗ್ರಾಮದ 13 ಮೃತಪಟ್ಟಿದ್ದು, ಇದರಿಂದ ಗ್ರಾಮದಲ್ಲಿ ಕುಟುಂಬಸ್ಥರು, ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ. ಮೃತರ ಪೈಕಿ 24 ವರ್ಷದ ಯುವತಿ ಮಾನಸ ಕೂಡ ಇದ್ದು, ಇವರು ಭಾರತ ಅಂಧರ ಪುಟ್ ಬಾಲ್ ತಂಡ ಕ್ಯಾಪ್ಟನ್ ಆಗಿದ್ದರು.

ಅಂಧತ್ವಕ್ಕೆ ಸೆಡ್ಡು ಹೊಡೆದು ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದ ಮಾನಸ, ಭಾರತ ತಂಡದ ಅಂಧರ ಪುಟ್ ಬಾಲ್ ತಂಡ ಕ್ಯಾಪ್ಟನ್ ಆಗಿದ್ದರು. ಐಎಎಸ್ ಕನಸು ಕಂಡಿದ್ದ ಮಾನಸ ಬೆಂಗಳೂರಿನಲ್ಲಿ ಓದುತ್ತಿದ್ದರು. ದೇವಸ್ಥಾನ ತೆರಳಲು ಭಾನುವಾರ ಗ್ರಾಮಕ್ಕೆ ಆಗಮಿಸಿದ್ದಳು. ಕುಟುಂಬಸ್ಥರೊಂದಿಗೆ ಮಹಾರಾಷ್ಟ್ರ ತಿವಾರಿ ಲಕ್ಷ್ಮೀ ದೇವಸ್ಥಾನಕ್ಕೆ ಹೋಗಿ ವಾಪಸ್‌ ಬರುತ್ತಿದ್ದಾಗ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೆನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ರಸ್ತೆ ಬದಿ ನಿಲ್ಲಿಸಿದ್ದ ಲಾರಿಯನ್ನು ಕಾಣದೆ ಟಿಟಿ ಡಿಕ್ಕಿಯಾಗಿದ್ದರಿಂದ ಮಾನಸ ಸೇರಿ 13 ಮಂದಿ ಮೃತಪಟ್ಟಿದ್ದರು. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆ ಹೊನ್ನೂರು ಬಳಿಯ ಎಮ್ಮಿಹಟ್ಟಿ ಗ್ರಾಮದ 17 ಜನ ಪ್ರಯಾಣ ಟಿಟಿ ವಾಹನದಲ್ಲಿ ಮಾಡುತ್ತಿದ್ದರು. ಈ ಪೈಕಿ 13 ಜನರ ಸಾವಿಗೀಡಾಗಿದ್ದು, 4 ಜನ ಗಂಭೀರ ಗಾಯಗೊಂಡಿದ್ದಾರೆ. ಮೃತಪಟ್ಟವರನ್ನು ಪರಶುರಾಮ್ (45), ಭಾಗ್ಯ (40), ನಾಗೇಶ್ (50), ವಿಶಾಲಾಕ್ಷಿ (50), ಸುಭದ್ರಾ ಭಾಯಿ (65), ಪುಣ್ಯ (50), ಮಂಜುಳಾಬಾಯಿ (57), ಆದರ್ಶ್ (23), ಮಾನಸಾ (24), ರೂಪಾ (40), ಮಂಜುಳಾ (50) ಎಂದು ಗುರುತಿಸಲಾಗಿದೆ. 4 ವರ್ಷದ ಹಾಗೂ 6 ವರ್ಷದ ಇಬ್ಬರು ಮಕ್ಕಳು ಸಹ ಮೃತಪಟ್ಟಿದ್ದಾರೆ. ಗಾಯಾಳುಗಳಾದ ಅರ್ಪಿತಾ, ಅರುಣಾ, ಅನ್ನಪೂರ್ಣ ಆಸ್ಪತ್ರೆಯಲ್ಲಿದ್ದಾರೆ.

ಇದನ್ನೂ ಓದಿ | Viral Video: ನಡುರಸ್ತೆಯಲ್ಲಿ ಶಿಕ್ಷಕಿಯ ಹಣೆಗೆ ಸಿಂಧೂರ ಹಚ್ಚಿ ಬಲವಂತವಾಗಿ ಮದುವೆಯಾದ ಯುವಕ!

ಹಾವೇರಿ ಅಪಘಾತ ಪ್ರಕರಣ; 13 ಮೃತರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು: ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Haveri Accident) ಮೃತಪಟ್ಟವರಿಗೆ ಸಿಎಂ ಸಿದ್ದರಾಮಯ್ಯ ಅವರು ಸಂತಾಪ ಸೂಚಿಸಿದ್ದು, 13 ಮೃತರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಹಾವೇರಿ ಜಿಲ್ಲಾಸ್ಪತ್ರೆಗೆ 13 ಮೃತದೇಹಗಳನ್ನು ರವಾನಿಸಿದ್ದು, ಈ ವೇಳೆ ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು, ಇಲ್ಲದಿದ್ದರೆ ಶವಗಳನ್ನು ತೆಗೆದುಕೊಂಡು ಹೋಗುವುದಿಲ್ಲ ಎಂದು ಸಂಬಂಧಿಕರು, ಗ್ರಾಮಸ್ಥರು ಆಗ್ರಹಿಸಿದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಪರಿಹಾರ ಘೋಷಣೆ ಮಾಡಿದೆ.

ಶುಕ್ರವಾರ ಮುಂಜಾನೆ ಭೀಕರ ಅಪಘಾತ ನಡೆದು 13 ಮಂದಿ ಸಾವನ್ನಪ್ಪಿದ್ದರೂ ಜಿಲ್ಲಾಸ್ಪತ್ರೆಗೆ ಯಾರೂ ಜನಪ್ರತಿನಿಧಿಗಳು ಬಾರದ ಹಿನ್ನೆಲೆಯಲ್ಲಿ ಸಂಬಂಧಿಕರು, ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದರು. ಅಲ್ಲದೇ ಸರ್ಕಾರದಿಂದ ಮೃತರ ಕುಟುಂಬಗಳಿಗೆ ಪರಿಹಾರ ನೀಡಬೇಕು, ಪರಿಹಾರ ನೀಡದಿದ್ದರೆ ಶವಾಗಾರದಿಂದ ಶವ ತೆಗೆದುಕೊಂಡು ಹೋಗಲ್ಲ ಎಂದು ಕಿಡಿಕಾರಿ, ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದ್ದರು. ಮೊದಲಿಗೆ ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ಸಂತಾಪವನ್ನಷ್ಟೇ ತಿಳಿಸಿದ್ದರು. ಬಳಿಕ ಪರಿಹಾರ ಘೋಷಣೆ ಮಾಡಿದ್ದಾರೆ.

ಸಿಎಂ ಸಂತಾಪ

ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.

Continue Reading

ಕ್ರೈಂ

Valmiki Corporation Scam: ವಾಲ್ಮೀಕಿ ನಿಗಮ ಹಗರಣ; ಸಿಬಿಐನಿಂದ ಬಂಧನ ಆತಂಕದಲ್ಲಿ ಮಾಜಿ ಸಚಿವ ನಾಗೇಂದ್ರ

Valmiki Corporation Scam: ಮಾಜಿ ಸಚಿವ ನಾಗೇಂದ್ರ ಮತ್ತು ಟೀಮ್, ಪ್ರಕರಣದಲ್ಲಿ ತಮ್ಮ ಹೆಸರು ಹೇಳದಂತೆ ಆರೋಪಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ಬಗ್ಗೆ ನ್ಯಾಯಾಧೀಶರ ಮುಂದೆಯೇ ಆರೋಪಿಯೊಬ್ಬ ಹೇಳಿಕೆ ಕೊಟ್ಟಿದ್ದಾನೆ. ಹೀಗಾಗಿ ಸಾಕ್ಷಿ ನಾಶ ಹಾಗೂ ಆರೋಪಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ನಾಗೇಂದ್ರಗೆ ಸಂಕಷ್ಟ ಎದುರಾಗಿದೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ಕರ್ನಾಟಕ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಕ್ರಮದ (Valmiki Corporation Scam) ಪ್ರಕರಣದಲ್ಲಿ ರಾಜೀನಾಮೆ (Resignation) ನೀಡಿರುವ ಮಾಜಿ ಸಚಿವ ನಾಗೇಂದ್ರ (Ex Minister Nagendra) ಸಿಬಿಐ (CBI) ತನಿಖಾ ಸಂಸ್ಥೆಯಿಂದ ಬಂಧನದ ಭೀತಿ ಎದುರಿಸುತ್ತಿದ್ದಾರೆ. ಇದೇ ಕಾರಣವಾಗಿ ನಾಗೇಂದ್ರ ಬಹುದಿನಗಳಿಂದ ಎಲ್ಲೂ ಕಾಣಿಸಿಕೊಂಡಿಲ್ಲ.

ಶಿವಮೊಗ್ಗದಲ್ಲಿ ವಾಲ್ಮೀಕಿ ನಿಗಮದ ಅಧೀಕ್ಷಕ ಚಂದ್ರಶೇಖರ್‌ ಆತ್ಮಹತ್ಯೆಯ ಬಳಿಕ ನಿಗಮದ ಹಗರಣ ಬೆಳಕಿಗೆ ಬಂದಿತ್ತು. ನಿಗಮದ 186 ಕೋಟಿ ರೂ. ಹಣವನ್ನು ಅಕ್ರಮವಾಗಿ ಅನ್ಯ ರಾಜ್ಯದ ಖಾತೆಗಳಿಗೆ ವರ್ಗಾವಣೆ ಮಾಡಿಸಿದ್ದನ್ನು ಚಂದ್ರಶೇಖರ್‌ ಡೆತ್‌ನೋಟ್‌ ಬೆಳಕಿಗೆ ಬಂದಿತ್ತು. ನಂತರ ಈ ವಿಚಾರದಲ್ಲಿ ಬಿಜೆಪಿ ರಾಜ್ಯವ್ಯಾಪಿ ತೀವ್ರ ಪ್ರತಿಭಟನೆಗೆ ಇಳಿದಿತ್ತು. ಇದರಿಂದ ವಾಲ್ಮೀಕಿ ನಿಗಮದಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದ ಅಧಿಕಾರಿಗಳ ಮೇಲೆ ಸರಕಾರ ಕ್ರಮ ಕೈಗೊಂಡು ತನಿಖೆಗೆ ಎಸ್‌ಐಟಿ ರಚಿಸಿತ್ತು. ಒತ್ತಡ ಹೆಚ್ಚಿದ ಪರಿಣಾಮ ಸಚಿವ ನಾಗೇಂದ್ರ ತಲೆದಂಡವೂ ಆಗಿತ್ತು.

ಈ ನಡುವೆ, ಮಾಜಿ ಸಚಿವ ನಾಗೇಂದ್ರ ಮತ್ತು ಟೀಮ್, ಪ್ರಕರಣದಲ್ಲಿ ತಮ್ಮ ಹೆಸರು ಹೇಳದಂತೆ ಆರೋಪಿಗಳಿಗೆ ಬೆದರಿಕೆ ಹಾಕಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ಈ ಬಗ್ಗೆ ನ್ಯಾಯಾಧೀಶರ ಮುಂದೆಯೇ ಆರೋಪಿಯೊಬ್ಬ ಹೇಳಿಕೆ ಕೊಟ್ಟಿದ್ದಾನೆ. ಹೀಗಾಗಿ ಸಾಕ್ಷಿ ನಾಶ ಹಾಗೂ ಆರೋಪಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ನಾಗೇಂದ್ರಗೆ ಸಂಕಷ್ಟ ಎದುರಾಗಿದೆ.

ಈ ಪ್ರಕರಣದಲ್ಲಿ ಈಗಾಗಲೇ ಎಸ್ಐಟಿ ತನಿಖೆ ನಡೆಸುತ್ತಿದೆ. ಆದರೆ ಹಗರಣದಲ್ಲಿ ಸಿಬಿಐ ಸಹ ಎಂಟ್ರಿ ಆಗಿದೆ. ನೂರು ಕೋಟಿಗೂ ಮಿಕ್ಕಿದ ಹಣದ ಅವ್ಯವಹಾರ ಆಗಿರುವುದರಿಂದ ಸಿಬಿಐ ತನ್ನದೇ ರೀತಿಯಲ್ಲಿ ತನಿಖೆ ಆರಂಭಿಸಿದೆ. ಹೀಗಾಗಿ ನಾಗೇಂದ್ರಗೆ ಬಂಧನದ ಭೀತಿ ಶುರುವಾಗಿದೆ. ರಾಜೀನಾಮೆ ಕೊಟ್ಟ ಬಳಿಕ ನಾಗೇಂದ್ರ ಎಲ್ಲೂ ಕಾಣಿಸಿಕೊಂಡಿಲ್ಲ. ಅತ್ತ ಪಕ್ಷದ ಕೆಲಸದಲ್ಲೂ ಕಾಣಿಸಿಕೊಳ್ಳುತ್ತಿಲ್ಲ; ಇತ್ತ ಕ್ಷೇತ್ರದಲ್ಲೂ ಯಾವುದೇ ಕಾರ್ಯಕ್ರಮದಲ್ಲಿ ಭಾಗಿಯಾಗಿಲ್ಲ. ಹೀಗಾಗಿ, ಬಂಧನದ ಭೀತಿಯಿಂದ ಹಿನ್ನೆಲೆಯಲ್ಲಿ ಉಳಿದಿರಬಹುದು ಎಂದು ಭಾವಿಸಲಾಗಿದೆ.

ತನಿಖೆಗೆ ಇಡಿ ಎಂಟ್ರಿ

ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದ ತನಿಖೆಗೆ ಜಾರಿ ನಿರ್ದೇಶನಾಲಯ ಕೂಡ ಎಂಟ್ರಿ ನೀಡಿದೆ. ಅಕ್ರಮ ಹಣ ವರ್ಗಾವಣೆ ಆರೋಪದ ಹಿನ್ನೆಲೆಯಲ್ಲಿ ಪ್ರತ್ಯೇಕವಾಗಿ ತನಿಖೆ ಪ್ರಾರಂಭಿಸಿದ ಇಡಿ, ಜೈಲಿನಲ್ಲಿ ಇರುವ ಆರೋಪಿಗಳ ವಿಚಾರಣೆ ನಡೆಸಿದೆ. ಪದ್ಮನಾಭ್ ಮತ್ತು ಪರುಶರಾಮ್ ಹೇಳಿಕೆ ದಾಖಲಿಸಿದೆ. ಈಗಾಗಲೇ ಸಿಬಿಐ ಕೂಡ ಇವರ ಹೇಳಿಕೆ ದಾಖಲಿಸಿದೆ.

ಮತ್ತೊಬ್ಬನ ಬಂಧನ

ಪ್ರಕರಣಕ್ಕೆ ಸಂಬಂಧಿಸಿ ಮತ್ತೊಬ್ಬನನ್ನು ಎಸ್‌ಐಟಿ ಈ ವಾರ ವಶಕ್ಕೆ ಪಡೆದಿದೆ. ಅಧೀಕ್ಷಕ ಚಂದ್ರಶೇಖರ ಡೆತ್ ನೋಟ್‌ನಲ್ಲಿ ಹೆಸರು ಬರೆದಿದ್ದ ಸಾಯಿತೇಜ ಎಂಬ ಆರೋಪಿಯನ್ನು ಎಸ್ಐಟಿ ಅಧಿಕಾರಿಗಳು ಚೆನ್ನಗಿರಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಸಾಯಿತೇಜ ಸೇರಿ ಇಬ್ಬರ ಬಂಧನ ಮಾಡಲಾಗಿದ್ದು, ಸದ್ಯ ಸಿಐಡಿ ಕಚೇರಿಯಲ್ಲಿ ವಶಕ್ಕೆ ಪಡೆದಿರುವ ಆರೋಪಿ ಪಾತ್ರದ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ.

ಇದನ್ನೂ ಓದಿ: R Ashok: ವಾಲ್ಮೀಕಿ ನಿಗಮ ಹಗರಣದಲ್ಲಿ ಸಿದ್ದರಾಮಯ್ಯ ಮೊದಲ ಆರೋಪಿ ಎಂದ ಆರ್‌.ಅಶೋಕ್‌

Continue Reading

ಮಳೆ

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast : ಉಡುಪಿಯಲ್ಲಿ ಭಾರಿ ಮಳೆಗೆ (Heavy Rain) ಮನೆ ಮುಂದಿದ್ದ ಬಾವಿಯೊಂದು ಕುಸಿದರೆ ಇತ್ತ ಮಂಗಳೂರಿನಲ್ಲಿ ಕಡಲ ಅಬ್ಬರಕ್ಕೆ ಮನೆಯೊಂದು (Karnataka rain) ಸಮುದ್ರಪಾಲಾಗಿದೆ. ಕೊಡಗಿನಲ್ಲಿ ಗುಡ್ಡ ಕುಸಿದು ಶಾಲಾ ಕಟ್ಟಡಕ್ಕೆ (Rain Effected) ಹಾನಿಯಾಗಿದೆ.

VISTARANEWS.COM


on

By

karnataka Rain
Koo

ಉಡುಪಿ: ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು (Rain News), ನೋಡ ನೋಡುತ್ತಿದ್ದಂತೆ ಮನೆ ಮುಂದಿದ್ದ ಬಾವಿಯೊಂದು ಪಾತಾಳ (well collapsed) ಸೇರಿದೆ. ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಭೂಕುಸಿತಕ್ಕೆ ಮನೆಯ ಬಾವಿ ಧಾರಾಶಾಹಿಯಾಗಿದೆ.

ಬಾವಿಯೊಂದು ಕುಸಿಯುತ್ತಿರುವ ವಿಡಿಯೋ ವೈರಲ್ ಆಗಿದೆ. ಉಡುಪಿಯ ಕಾರ್ಕಳ ತಾಲೂಕಿನ ನೆಲ್ಲಿಕಟ್ಟೆಯ ಸರ್ವಿಸ್ ಸ್ಟೇಶನ್ ಸಮೀಪ ಘಟನೆ ನಡೆದಿದೆ. ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಭೂಮಿ ಒಳಗೆ ಬಾವಿ ಜಾರಿದೆ. ಬಾವಿ ಪಕ್ಕದಲ್ಲೆ ಮನೆ ಇದ್ದು, ಭೂಕುಸಿತದಿಂದಾಗಿ ಆತಂಕ ಹೆಚ್ಚಾಗಿದೆ.

ಮಂಗಳೂರಿನಲ್ಲಿ ಹೆಚ್ಚಾದ ಕಡಲ ಅಬ್ಬರ

ಮಂಗಳೂರಿನಲ್ಲಿ ಕಡಲ ಅಬ್ಬರ ಹೆಚ್ಚಾಗುತ್ತಿದ್ದು, ನೋಡ ನೋಡುತ್ತಿದ್ದಂತೆ ಮನೆಯೊಂದು ಸಮುದ್ರಕ್ಕುರುಳಿದೆ. ಉಳ್ಳಾಲದ ಬಟ್ಟಪಾಡಿ ಕಡಲ ತೀರದಲ್ಲಿದ್ದ ಮನೆಯು ಅಲೆಗಳ ಹೊಡೆತಕ್ಕೆ ಸಿಲುಕಿ ಬಿದ್ದು ಹೋಗಿದೆ. ಮನೆಯಲ್ಲಿ ಯಾರು ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ. ಕಡಲ ಅಬ್ಬರ ಹೆಚ್ಚಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮನೆಯವರನ್ನು ಸ್ಥಳಾಂತರ ಮಾಡಿತ್ತು. ಮನೆ ಬೀಳುವ ದೃಶ್ಯ ಮೊಬೈಲ್‌ನಲ್ಲಿ‌ ಸೆರೆಯಾಗಿದೆ.

karnataka rain

ಇದನ್ನೂ ಓದಿ: Rain News: ಅಬ್ಬರಿಸುತ್ತಿರುವ ಮುಂಗಾರು: 3 ಜಿಲ್ಲೆಗೆ ರೆಡ್‌ ಅಲರ್ಟ್‌, ಇನ್ನೂ ನಾಲ್ಕು ದಿನ ಜೋರು ಮಳೆ

ಗುಡ್ಡ ಕುಸಿದು ಶಾಲಾ ಕಟ್ಟಡಕ್ಕೆ ಹಾನಿ

ಕೊಡಗು ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದು ಅನಾಹುತವನ್ನೇ ಸೃಷ್ಟಿಸಿದೆ. ಭಾರೀ ಮಳೆಗೆ ಶಾಲಾ ಕಟ್ಟಡದ ಮೇಲೆ ಗುಡ್ಡ ಕುಸಿದಿದೆ. ಕೊಡಗಿನ ಮಡಿಕೇರಿ ತಾಲೂಕಿನ ಕೊಯನಾಡಿನಲ್ಲಿ ಘಟನೆ ನಡೆದಿದೆ. ಕೊಯನಾಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾತ್ರಿ ವೇಳೆ ಗುಡ್ಡ ಕುಸಿದು ಶಾಲಾ ಕಟ್ಟಡಕ್ಕೆ ಹಾನಿ ಯಾಗಿದೆ.

ಗುಡ್ಡದ ಮಣ್ಣು ಬಿದ್ದ ರಭಸಕ್ಕೆ ಶಾಲೆಯ ಗೋಡೆ ಧ್ವಂಸವಾಗಿದೆ. ಸುಮಾರು 80ಕ್ಕೂ ಅಧಿಕ ಮಕ್ಕಳು ಓದುತ್ತಿರುವ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ನಡೆಯುತ್ತಿದ್ದ ತರಗತಿಗೂ ಹಾನಿಯಾಗಿದೆ. ಮಳೆ ಹೆಚ್ಚಾದರೆ ಮಣ್ಣು ಮತ್ತಷ್ಟು ಕುಸಿಯುವ ಸಾಧ್ಯತೆ ಇದ್ದು, ಶಾಲೆ ಬಳಿಯ ಗುಡ್ಡದ ಮಣ್ಣು ತೆರವಿಗೆ ಪೋಷಕರು ಆಗ್ರಹಿಸಿದ್ದಾರೆ.

ಚಿಕ್ಕಮಗಳೂರಿನಲ್ಲಿ ಭಾರಿ ಗಾಳಿ-ಮಳೆಗೆ ರಸ್ತೆಗೆ ಬಿದ್ದ ಬೃಹತ್ ಮರ

ಮಲೆನಾಡು ಭಾಗದಲ್ಲಿ ಗಾಳಿ ಮಳೆ ಅಬ್ಬರ ಮುಂದುವರಿದಿದೆ. ಮೂಡಿಗೆರೆ ತಾಲೂಕಿನ ಸಂಪಿಗೆಖಾನ್ ಬಳಿ ಬೃಹತ್‌ ಮರವೊಂದು ಬುಡ ಸಮೇತ ಕಿತ್ತುಬಂದಿದೆ. ರಾಜ್ಯ ಹೆದ್ದಾರಿಗೆ ಬೃಹತ್ ಮರ ಉರುಳಿದೆ. ಮೂಡಿಗೆರೆಯಿಂದ ಹೊರನಾಡಿಗೆ ಸಂಪರ್ಕ ಕಲ್ಪಿಸುವ ಮಾರ್ಗ ಇದಾಗಿದ್ದು, ಮರ ತೆರವು ಮಾಡಿ ಸುಗಮ ಸಂಚಾರಕ್ಕೆ ಸ್ಥಳೀಯರು ಅವಕಾಶ ಮಾಡಿಕೊಟ್ಟಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Rain News: ಅಬ್ಬರಿಸುತ್ತಿರುವ ಮುಂಗಾರು: 3 ಜಿಲ್ಲೆಗೆ ರೆಡ್‌ ಅಲರ್ಟ್‌, ಇನ್ನೂ ನಾಲ್ಕು ದಿನ ಜೋರು ಮಳೆ

Rain News: ರಾಜ್ಯದಲ್ಲಿ ಇನ್ನೂ 4 ದಿನ ಮಳೆ ಮುಂದುವರೆಯಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್‌ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ
ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

VISTARANEWS.COM


on

rain news bhagamandala
ಭಾಗಮಂಡಲದಲ್ಲಿ ರಸ್ತೆ ಮುಳುಗಡೆ, ಕೊಯ್ನಾಡಿನಲ್ಲಿ ಶಾಲೆ ಮೇಲೆ ಕುಸಿದ ಗುಡ್ಡ
Koo

ಬೆಂಗಳೂರು: ರಾಜ್ಯದಲ್ಲಿ ಮುಂಗಾರು (Monsoon) ಅಬ್ಬರಿಸುತ್ತಿದೆ. ಕರಾವಳಿ (Coast), ಮಲೆನಾಡಿನಲ್ಲಿ (Wester Gaht) ಮಳೆಯ ಆರ್ಭಟ (Rain News) ಜೋರಾಗಿದೆ. ಒಳನಾಡು, ಬಯಲುಸೀಮೆ ಹಾಗೂ ರಾಜಧಾನಿಯಲ್ಲಿ ಚದುರಿದಂತೆ ಮಳೆಯಾಗುತ್ತಿದೆ. ಕರಾವಳಿ, ಮಲೆನಾಡಿನಲ್ಲಿ ನದಿಗಳು ತುಂಬಿ ಹರಿಯುತ್ತಿದೆ; ಜಲಪಾತಗಳು ಧುಮ್ಮಿಕ್ಕುತ್ತಿವೆ. ಹಲವೆಡೆ ಧರೆ ಕುಸಿದು ಮನೆಗಳು ನೆಲಕಚ್ಚಿವೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಿಂದ ಆಗಿರುವ ಅನಾಹುತಗಳಿಂದ ಎರಡೇ ದಿನಗಳಲ್ಲಿ 7 ಮಂದಿ ಮೃತಪಟ್ಟಿದ್ದಾರೆ. ಉಳ್ಳಾಲ ತಾಲೂಕಿನ ಕುತ್ತಾರುವಿನ ಮದನಿನಗರದಲ್ಲಿ ಮನೆ ಕುಸಿದು ನಾಲ್ವರು ಮೃತಪಟ್ಟಿದ್ದರೆ, ಮಂಗಳೂರು ನಗರದ ರೋಸಾರಿಯೊ ಶಾಲೆ ಹಿಂಭಾಗದಲ್ಲಿ ಮಳೆಯಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಇಬ್ಬರು ಆಟೋ ಚಾಲಕರು ಸಾವನ್ನಪ್ಪಿದ್ದಾರೆ. ಗುರುವಾರ ಸಂಜೆ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ ಮಳೆ ನೀರಿನಲ್ಲಿ ವಿದ್ಯುತ್ ಪ್ರವಹಿಸಿ 20 ವರ್ಷದ ಯುವತಿ ಪ್ರತೀಕ್ಷಾ ಶೆಟ್ಟಿ ಅಸುನೀಗಿದ್ದಾರೆ.

ದಕ್ಷಿಣ ಕನ್ನಡ, ಚಿಕ್ಕಮಗಳೂರಿನಲ್ಲಿ ಶಾಲೆಗಳಿಗೆ ರಜೆ

ಭಾರಿ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಚಿಕ್ಕಮಗಳೂರಿನ ಶಾಲೆಗಳಿಗೆ ಇಂದೂ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಶುಕ್ರವಾರ ಕೂಡಾ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶಿಸಿದೆ. ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೂಡಿಗೆರೆ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ನೀಡಿ ತಹಶೀಲ್ದಾರ್ ಪರಮಾನಂದ ಆದೇಶ ಹೊರಡಿಸಿದ್ದಾರೆ. ಪಿಯುಸಿ ಹಾಗೂ ಪದವಿ ಕಾಲೇಜುಗಳು ಎಂದಿನಂತೆ ನಡೆಯಲಿವೆ.

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹಿರ್ಗಾನದಲ್ಲಿ ಭಾರಿ ಮಳೆಗೆ ಮಣ್ಣು ಶಕ್ತಿ ಕಳೆದುಕೊಂಡಿದ್ದು, ಮನೆಯ ಆವರಣದಲ್ಲಿದ್ದ ಬಾವಿ ಕಣ್ಣೆದುರಿಗೇ ಕುಸಿದುಹೋಗಿದೆ. ಬಾವಿ ಕುಸಿಯುವ ದೃಶ್ಯ ಮೊಬೈಲ್ ಫೋನ್‌ನಲ್ಲಿ ಸೆರೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ ಬಳಿ ಭದ್ರಾ ನದಿ ಮೈತುಂಬಿದೆ. ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗಡೆಗೆ 4-5 ಅಡಿಯಷ್ಟೇ ಬಾಕಿ ಇದೆ. ಕಾಸರಗೋಡಿನ ಇತಿಹಾಸ ಪ್ರಸಿದ್ಧ ಮಧೂರು ದೇಗುಲ ಜಲಾವೃತಗೊಂಡಿದೆ

ಮೈದುಂಬಿದ ಜೋಗ ಜಲಪಾತ

ಶಿವಮೊಗ್ಗ ಸುತ್ತಮುತ್ತಲೂ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ವಿಶ್ವವಿಖ್ಯಾತ ಜೋಗ ಜಲಪಾತ ಭೋರ್ಗರೆದು ಧುಮ್ಮಿಕ್ಕುತ್ತಿದೆ. ತೀರ್ಥಹಳ್ಳಿ ಭಾಗದಲ್ಲಿ ವರ್ಷಧಾರೆಯಿಂದಾಗಿ ಆಗುಂಬೆ ಘಾಟ್‌ನಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಆಗುಂಬೆಯಲ್ಲಿ ಭೂಕುಸಿತ ಭೀತಿ ಇರುವುದರಿಂದ ಸೆಪ್ಟೆಂಬರ್ 15ರವರೆಗೆ ವಾಹನ ಸಂಚಾರ ಬಂದ್‌ ಮಾಡಲಾಗಿದೆ.

ಘಟ್ಟ ಪ್ರದೇಶದಲ್ಲಿನ ಮಳೆಗೆ ಕುಮಾಧಾರಾ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ಕುಕ್ಕೆ ಸುಬ್ರಹ್ಮಣ್ಯ ಬಳಿ ಸ್ನಾನಘಟ್ಟ, ಕಿಂಡಿ ಅಣೆಕಟ್ಟು ಸಂಪೂರ್ಣ ಮುಳುಗಡೆ ಆಗಿದೆ. ನೇತ್ರಾವತಿ ನದಿ ಕೂಡಾ ಮೈದುಂಬಿ ಹರಿಯುತ್ತಿದೆ. ಕಾವೇರಿ ನದಿ ಉಕ್ಕಿ ಹರಿಯುತ್ತಿದೆ. ಭಾಗಮಂಡಲದ ತ್ರಿವೇಣಿ ಸಂಗಮ ಜಲಾವೃತವಾಗಿದೆ. ಪವಿತ್ರ ಸ್ನಾನಘಟ್ಟ ಮುಳುಗಿ, ಮುಖ್ಯ ದ್ವಾರದವೆರಗೂ ನೀರು ತಲುಪಿದೆ. ಭಕ್ತರು ಪುಣ್ಯ ಸ್ನಾನ ಹಾಗೂ ಪಿಂಡ ಪ್ರದಾನ ಮಾಡಲು ಸಾಧ್ಯವಾಗುತ್ತಿಲ್ಲ. ಕೊಡಗಿನ ಕೊಯ್ನಾಡಿನಲ್ಲಿ ಶಾಲಾ ಕಟ್ಟಡ ಮೇಲೆ ಗುಡ್ಡ ಕುಸಿದು ಶಾಲಾ ಕೊಠಡಿಯ ಗೋಡೆ, ಕಿಟಕಿ ಜಖಂ ಆಗಿವೆ. ಶಾಲೆಗೆ ರಜೆ ಇದ್ದುದ್ದರಿಂದ ಅನಾಹುತ ತಪ್ಪಿದೆ. ಕಳೆದ ಮಳೆಗಾಲದಲ್ಲೂ ಶಾಲೆಯ ಮೇಲೆ ಗುಡ್ಡ ಕುಸಿದು ಹಾನಿಯಾಗಿತ್ತು.

ಅರಬ್ಬಿ ಸಮುದ್ರದಲ್ಲಿ ಭಾರಿ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಕಡಲ ಕೊರೆತ ಆರಂಭವಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯವುದನ್ನು ನಿಲ್ಲಿಸಿದ್ದಾರೆ. ಕಾರವಾರದ ದೇವಬಾಗ್ ಕಡಲತೀರದಲ್ಲಿ ಕಡಲಕೊರೆತ ಹೆಚ್ಚಾಗಿದ್ದು, ರೆಸಾರ್ಟ್‌ಗೆ ಹಾನಿಯಾಗಿದೆ. ರಾಜ್ಯದಲ್ಲಿ ಇನ್ನೂ 4 ದಿನ ಮಳೆ ಮುಂದುವರೆಯಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್‌ ಘೋಷಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ
ಜಿಲ್ಲೆಗಳಿಗೆ ಆರೆಂಜ್ ಅಲರ್ಟ್‌ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Agumbe Ghat: ಭಾರಿ ಮಳೆ; ಸೆ.15ರವರೆಗೆ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ!

Continue Reading
Advertisement
Bigg Boss OTT 3 Armaan Malik both Kritika Malik and Payal Malik in bigg bos house
ಬಾಲಿವುಡ್19 seconds ago

Bigg Boss OTT 3: ಬಿಗ್‌ ಬಾಸ್‌ ಒಟಿಟಿಯಲ್ಲಿ ಇಬ್ಬರ ಹೆಂಡಿರ ಮುದ್ದಿನ ಗಂಡ; ಗೋಳೋ ಎಂದು ಅತ್ತ ಮೊದಲ ಪತ್ನಿ!

CM Siddaramaiah
ಕರ್ನಾಟಕ7 mins ago

CM Siddaramaiah: ಭಾರತ ಹಿಂದು ರಾಷ್ಟ್ರವಲ್ಲ; ಅಮರ್ತ್ಯ ಸೇನ್ ಹೇಳಿಕೆ ಸಮರ್ಥಿಸಿದ ಸಿದ್ದರಾಮಯ್ಯ

petrol Price
ಪ್ರಮುಖ ಸುದ್ದಿ17 mins ago

Petrol Price : ಮುಂಬೈನಲ್ಲಿ ಪೆಟ್ರೋಲ್​ ಬೆಲೆ ಇಳಿಸಿದ ಮಹಾರಾಷ್ಟ್ರ ಸರ್ಕಾರ

Rahul Gandhi
ದೇಶ23 mins ago

Rahul Gandhi: ಸಂಸತ್ತಲ್ಲಿ ನೀಟ್‌ ಕುರಿತು ರಾಹುಲ್‌ ಗಾಂಧಿ ಮಾತಾಡುವಾಗ ಮೈಕ್‌ ಆಫ್;‌ ಸ್ಪೀಕರ್‌ ಮಾಡಿದ್ರಾ?

POCSO Case
ಕರ್ನಾಟಕ43 mins ago

POCSO Case: ಪೋಕ್ಸೊ ಪ್ರಕರಣ; ಯಡಿಯೂರಪ್ಪ ಸೇರಿ ನಾಲ್ವರ ವಿರುದ್ಧ ಚಾರ್ಜ್‌ಶೀಟ್‌; ಮುಂದೇನು?

SHAFALI VERMA
ಕ್ರಿಕೆಟ್51 mins ago

SHAFALI VERMA: 40 ವರ್ಷದ ಟೆಸ್ಟ್​ ದಾಖಲೆ ಮುರಿದ ಭಾರತದ ಶಫಾಲಿ ವರ್ಮ

Rich Wedding
ಪ್ರಮುಖ ಸುದ್ದಿ58 mins ago

ಮದುವೆಗೆ ಹೋದವರಿಗೆ 66 ಸಾವಿರ ರೂ. ನಗದು, ಭರ್ಜರಿ ಗಿಫ್ಟ್‌ ಕೊಟ್ಟ ದಂಪತಿ; ಎಲ್ಲಿ ಅಂತೀರಾ…?‌

Actor Darshan A young woman came to Parappa Agrahara to see Darshan
ಕ್ರೈಂ1 hour ago

Actor Darshan: ಪರಪ್ಪನ ಅಗ್ರಹಾರಕ್ಕೆ ದರ್ಶನ್‌ ನೋಡಲು ಆಗಮಿಸಿದ ಯುವತಿ; ಯಾರಾಕೆ?

Valmiki Corporation Scam Zameer Ahmed appointed as Ballari district in-charge minister
ಬಳ್ಳಾರಿ1 hour ago

Valmiki Corporation Scam: ಬಿ ನಾಗೇಂದ್ರ ರಾಜೀನಾಮೆ ಬೆನ್ನಲ್ಲೇ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್‌ ಅಹ್ಮದ್ ನೇಮಕ

T20 World Cup Final
ಕ್ರೀಡೆ1 hour ago

T20 World Cup Final: ಚೋಕರ್ಸ್ ಹಣೆಪಟ್ಟಿ ಕಳಚಿಕೊಳ್ಳುವುದೇ ದಕ್ಷಿಣ ಆಫ್ರಿಕಾ?; ನಾಳೆ ಫೈನಲ್​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ5 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ21 hours ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ23 hours ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು1 day ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ1 day ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ7 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು2 weeks ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

ಟ್ರೆಂಡಿಂಗ್‌