ಶಿವಮೊಗ್ಗ: ವಿಶ್ವಾದ್ಯಂತ ಇನ್ನಿಲ್ಲದಂತೆ ಕಾಡಿದ ಮಹಾಮಾರಿ ಕೊರೋನದಿಂದಾಗಿ ತಮ್ಮ ಪೋಷಕರನ್ನೆ ಕಳೆದುಕೊಂಡು ಅನಾಥರಾಗಿರುವ ಅಪ್ರಾಪ್ತ ಮಕ್ಕಳ ಶಿಕ್ಷಣ ಮತ್ತು ಸುರಕ್ಷತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಗತ್ಯ ಕ್ರಮ ಕೈಗೊಂಡಿವೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
ಪಿ.ಎಂ. ಕೇರ‍್ಸ್ ಫಾರ್ ಚಿಲ್ಡ್ರನ್ಸ್ ಯೋಜನೆ ಅನುಷ್ಠಾನದ ಕುರಿತು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜತೆಗೆ ದೇಶದ ಎಲ್ಲಾ ಜಿಲ್ಲೆಗಳಲ್ಲಿನ ಸಂತ್ರಸ್ಥ ಕುಟುಂಬಗಳ ಮಕ್ಕಳಿಗೆ ಸಾಂತ್ವನ ಹೇಳುವ ವಿಡಿಯೋ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸಂತ್ರಸ್ಥ ಮಕ್ಕಳಿಗೆ ಸೌಲಭ್ಯಗಳ ಕಿಟ್ ವಿತರಿಸಿ ಮಾತನಾಡಿದರು.
ಇದನ್ನೂ ಓದಿ | ಮಳೆಹಾನಿ ಸಮಸ್ಯೆ ನಿವಾರಣೆಗೆ ಶೀಘ್ರ ಸಭೆ : ಬಿ.ವೈ.ರಾಘವೇಂದ್ರ
ಕೊರೊನಾದಿಂದಾಗಿ ರಾಜ್ಯದಲ್ಲಿ ಸುಮಾರು 216 ಮಕ್ಕಳು ತಮ್ಮ ಪೋಷಕರನ್ನು ಕಳೆದುಕೊಂಡು ಪೋಷಕರ ಪ್ರೀತಿ ವಾತ್ಸಲ್ಯದಿಂದ ವಂಚಿತರಾಗಿರುವುದು ಅತ್ಯಂತ ನೋವಿನ ಸಂಗತಿ. ಇಂತಹ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರವನ್ನು ಒದಗಿಸಲು ಸರ್ಕಾರಗಳು ಅಗತ್ಯ ಕ್ರಮ ಕೈಗೊಂಡಿರುವುದು ಸಮಾಧಾನಕರ ವಿಷಯ ಎಂದರು.
ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಶಾಸಕ ಕೆ.ಬಿ.ಅಶೋಕನಾಯ್ಕ್, ಮೇಯರ್ ಸುನಿತಾ ಅಣ್ಣಪ್ಪ, ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ, ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಎಫ್.ಹೊನ್ನಳ್ಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಜಿ.ಜಿ.ಸುರೇಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಸುರಗೀಹಳ್ಳಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಕುಮಾರ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿದೇಶಕ ನಾಗರಾಜ ಕಾಗಲ್ಕರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ಆರ್.ಪರಮೇಶ್ವರಪ್ಪ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂತ್ರಸ್ಥ ಮಕ್ಕಳ ಪೋಷಕರು ಉಪಸ್ಥಿತರಿದ್ದರು.
ಇದನ್ನೂ ಓದಿ | ಸಂಸದರನ್ನ ಭೇಟಿ ಮಾಡಲು ಅವಕಾಶ ನೀಡದ ಶಾಸಕರಿಗೆ ಶಾಪ ಹಾಕಿದ ಗ್ರಾಮಸ್ಥರು