ಶಿವಮೊಗ್ಗ: ಇತ್ತೀಚೆಗೆ ಪೊಲೀಸರ ಮೇಲೆ ಹಲ್ಲೆ ಪ್ರಕರಣಗಳು (Assault Case) ಹೆಚ್ಚಾಗುತ್ತಿದೆ. ಜನಸಾಮಾನ್ಯರನ್ನು ರಕ್ಷಣೆ ಮಾಡು ರಕ್ಷಕರಿಗೆ ರಕ್ಷಣೆ ಇಲ್ಲದಂತಾಗಿದೆ. ಸದ್ಯ ಪೊಲೀಸರ ಮೇಲೆ ಕೆಲ ಪುಂಡರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರದ ಗೌತಂಪುರ ಮಾರಿಕಾಂಬಾ ಜಾತ್ರೆಯಲ್ಲಿ ಘಟನೆ ನಡೆದಿದೆ.
ಅಂಗಡಿ ಮುಂಗಟ್ಟು ಬಳಿ ಗಲಾಟೆ ಮಾಡುತ್ತಿರುವುದನ್ನು ತಡೆಯಲು ಹೋದ ಪೊಲೀಸ್ ಮೇಲೆ ಹಲ್ಲೆ ನಡೆಸಿದ್ದಾರೆ. ಆನಂದಪುರ ಪೊಲೀಸ್ ಠಾಣೆ ಸಿಬ್ಬಂದಿ ಕಿರಣ್ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ. ಸಿಬ್ಬಂದಿಯ ಖಾಕಿ ಹಿಡಿದು ಎಳೆದಾಡಿದ್ದಲ್ಲದೇ ಕಪಾಳಕ್ಕೆ ಹೊಡೆದಿದ್ದಾರೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಎಲ್ಲ ಪುಂಡರನ್ನು ಬಂಧಿಸಿ, ತನಿಖೆಯನ್ನು ನಡೆಸಲಾಗುತ್ತಿದೆ.
ಇದನ್ನೂ ಓದಿ: Wild Animals Attack : ಕರುಗಳ ಹೊಟ್ಟೆ ಬಗೆದು ಕೊಂದ ಚಿರತೆ; ರೈತರ ಅಟ್ಟಾಡಿಸಿದ ಕರಡಿಗಳು
Assault Case: ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಮೇಲೆ ಡಿ.ಕೆ.ಸುರೇಶ್ ಆಪ್ತನ ಗೂಂಡಾಗಿರಿ; ನಡುರಸ್ತೆಯಲ್ಲೇ ಹಲ್ಲೆ
ಆನೇಕಲ್: ನಡುರಸ್ತೆಯಲ್ಲಿ ಹೆಡ್ ಕಾನ್‌ಸ್ಟೇಬಲ್ ಮೇಲೆ ಸಂಸದ ಡಿ.ಕೆ. ಸುರೇಶ್ ಹಾಗೂ ಶಾಸಕ ಬಿ.ಶಿವಣ್ಣ ಆಪ್ತ ಹಲ್ಲೆ ನಡೆಸಿ ಗೂಂಡಾಗಿರಿ ಮಾಡಿರುವ ಘಟನೆ ಪಟ್ಟಣದ ರಾಮದೇವರ ಸರ್ಕಲ್‌ನಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಮೇಲೆ ಹಲ್ಲೆ (Assault Case) ಮಾಡಿರುವ ಆರೋಪ ಕೇಳಿಬಂದಿದೆ.
ಅಶೋಕ್ ಹಲ್ಲೆಗೊಳಗಾದ ಪೊಲೀಸ್ ಸಿಬ್ಬಂದಿ. ಬೆಸ್ತಮಾನಹಳ್ಳಿ ಯಲ್ಲಪ್ಪ ಹಲ್ಲೆ ಆರೋಪಿ. ಕಾರು ಪಾರ್ಕ್ ಮಾಡಿ ಕಾನ್‌ಸ್ಟೇಬಲ್ ಅಶೋಕ್ ತೆರಳುತ್ತಿದ್ದಾಗ, ಏನೋ ಗುರಾಯಿಸುತ್ತಿಯಾ ಎಂದು ಯಲ್ಲಪ್ಪ ಕೇಳಿದ್ದಾನೆ. ನಾನು ನಿನ್ನನ್ನು ಗುರಾಯಿಸಿಲ್ಲ ಎಂದು ಅಶೋಕ್ ಮುಂದೆ ಸಾಗಿದ್ದಾರೆ. ಈ ವೇಳೆ ಯಲ್ಲಪ್ಪ ಹಿಂಬದಿಯಿಂದ ಹೋಗಿ ಪೊಲೀಸ್ ತಲೆಗೆ ಹಾಲಿನ ಟ್ರೇಯಿಂದ ಹೊಡೆದಿದ್ದಾನೆ.
ತಲೆಗೆ ಗಂಭೀರ ಗಾಯವಾಗಿದ್ದರಿಂದ ಅಶೋಕ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಹಲ್ಲೆ ಮಾಡಿದ ಯಲ್ಲಪ್ಪನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಆನೇಕಲ್ ತಾಲೂಕಿನಲ್ಲಿ ಚುನಾವಣೆ ಹೊಸ್ತಿಲಿನಲ್ಲಿ ಪುಡಿ ರೌಡಿಗಳ ಗೂಂಡಾಗಿರಿ ಮಿತಿಮೀರಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಆನೇಕಲ್ ಪೊಲೀಸರು ವಿಫಲರಾಗಿದ್ದಾರೆ ಎಂದು ಸಾರ್ವಜನಿಕರು ಅಸಮಾಧಾನ ಹೊರಹಾಕಿದ್ದಾರೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ