Site icon Vistara News

ಬಸವರಾಜಪ್ಪನವರ ‘ಹಸಿರು ಹಾದಿಯ ಕಥನ’ ಪುಸ್ತಕ ಲೋಕಾರ್ಪಣೆ

ಶಿವಮೊಗ್ಗ: ಕಳೆದ 50 ವರ್ಷಗಳಿಂದ ರೈತ ಹೋರಾಟದಲ್ಲಿ ತೊಡಗಿಸಿಕೊಂಡಿರುವ, ಹಸಿರು ಕ್ರಾಂತಿಗೆ ಪ್ರೇರಣೆಯಾಗಿರುವ ರೈತನಾಯಕ ಎಚ್.ಆರ್. ಬಸವರಾಜಪ್ಪನವರ ‘ಹಸಿರು ಹಾದಿಯ ಕಥನ’ ಪುಸ್ತಕ ಬಿಡುಗಡೆಗೊಂಡಿತು. ಇದರ ಜತೆಗೆ ಸಾಕ್ಷ್ಯಚಿತ್ರ ಬಿಡುಗಡೆ ಕಾರ್ಯಕ್ರಮವೂ ಇಂದು ಕುವೆಂಪು ರಂಗಮಂದಿರದಲ್ಲಿ ಸಂಭ್ರಮದಿಂದ ನಡೆಯಿತು.

ಎಚ್.ಆರ್. ಬಸವರಾಜಪ್ಪ ಅವರ ಹೋರಾಟದ ಹಾದಿಯ ಆತ್ಮಕಥನ ‘ಹಸಿರು ಹಾದಿಯ ಕಥನ’ ಪುಸ್ತಕ. ಈ ಪುಸ್ತಕವನ್ನು ಸಿರಿಗೆರೆ ಬೃಹನ್ಮಠದ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಬಿಡುಗಡೆ ಮಾಡಿದರು.

ಇದನ್ನೂ ಓದಿ | ಪಠ್ಯಪುಸ್ತಕ ಪರಿಷ್ಕರಣೆ | ನಾಡಗೀತೆಯನ್ನು ಅಪಮಾನಿಸಿದರೆ ಸುಮ್ಮನಿರುವುದಿಲ್ಲ: HDK

ಇದೇ ವೇಳೆ ಸಾಕ್ಷ್ಯ ಚಿತ್ರವನ್ನು ರೈತ ಹೋರಾಟಗಾರ ಕೋಡಿಹಳ್ಳಿ ಚಂದ್ರಶೇಖರ್ ಬಿಡುಗಡೆ ಮಾಡಿದರು. ಚಿಂತಕ ನೆಂಪೆ ದೇವರಾಜ್ ಪುಸ್ತಕದ ಕುರಿತು ಮಾತನಾಡಿ, ʼಎಚ್.ಆರ್. ಬಸವರಾಜಪ್ಪ ಅವರು ಕಳೆದ 50 ವರ್ಷಗಳಿಂದ ರೈತ ಹೋರಾಟದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ರೈತಸಮುದಾಯವನ್ನು ಒಗ್ಗೂಡಿಸುವ ಶಕ್ತಿ ಬಸವರಾಜಪ್ಪನವರಿಗೆ ವರವಾಗಿ ಬಂದಿದೆ. ಚಳುವಳಿಗಾರರಿಗೆ ಅವರು ಮಾದರಿಯಾಗಿದ್ದಾರೆʼ ಎಂದರು.

ಕರ್ನಾಟಕ ಜನಶಕ್ತಿಯ ಕೆ.ಎಲ್. ಅಶೋಕ್, ರೈತಹೋರಾಟಗಾರ್ತಿ ಅನಸೂಯಮ್ಮ, ದಲಿತ ಸಂಘರ್ಷ ಸಮಿತಿಯ ಟಿ.ಹೆಚ್. ಹಾಲೇಶಪ್ಪ ಮತ್ತಿತರರಿದ್ದರು.

ಇದನ್ನೂ ಓದಿ | World Book Day: ಪುಸ್ತಕಗಳಿಗೆ ರೆಕ್ಕೆ ನೀಡಿದ ಊರಿನ ಕತೆ

Exit mobile version