Site icon Vistara News

Shivamogga Airport: ತಮ್ಮ ಹೆಸರು ಬೇಡ ಎಂದು ಬಿ.ಎಸ್.‌ ಯಡಿಯೂರಪ್ಪ ಪುನರುಚ್ಛಾರ: ರಾಷ್ಟ್ರಕವಿ ಕುವೆಂಪು ಹೆಸರನ್ನು ಸೂಚಿಸಿದ ಮಾಜಿ ಸಿಎಂ

BS Yediyurappa proposes to name shivamogga-airport after kuvempu

ಶಿವಮೊಗ್ಗ: ಇದೇ ತಿಂಗಳು ಪ್ರಧಾನಿ ನರೇಂದ್ರ ಮೋದಿ ಉದ್ಘಾಟನೆ ಮಾಡಲಿರುವ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ(Shivamogga Airport) ತಮ್ಮ ಹೆಸರನ್ನು ನಾಮಕರಣ ಮಾಡುವುದು ಬೇಡ ಎಂದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಪುನರುಚ್ಛರಿಸಿದ್ದು, ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ.

ಅನೇಕ ದಿನಗಳಿಂದ ಈ ಕುರಿತು ಕೇಳಿಬರುತ್ತಿರುವ ಊಹಾಪೋಹಗಳಿಗೆ ತೆರೆ ಎಳೆಯುವ ಕುರಿತು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡಿದರು. ರಾಜ್ಯ ಸರ್ಕಾರವು ಬಿ.ಎಸ್‌. ಯಡಿಯೂರಪ್ಪ ಹೆಸರನ್ನು ಇಡಲು ನಿರ್ಧಾರ ಮಾಡಿ ಅದನ್ನು ಸಚಿವ ಸಂಪುಟ ಸಭೆಯಲ್ಲೂ ಒಪ್ಪಿಗೆ ಪಡೆದುಕೊಂಡಿತ್ತು. ಆದರೆ ತಮ್ಮ ಹೆಸರಿಡದಂತೆ ಯಡಿಯೂರಪ್ಪ ಅಭಿಮಾನಿಗಳಲ್ಲಿ ಮನವಿ ಮಾಡಿದ್ದರು ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೂ ಪತ್ರ ಬರೆದಿದ್ದರು.

ಇದನ್ನೂ ಓದಿ : Shivamogga Airport : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡ: ಬಿಎಸ್‌ವೈ ಪುನರುಚ್ಚಾರ

ಫೆಬ್ರವರಿ 27 ರಂದು ಪ್ರಧಾನಿ ಮೋದಿ ಏರ್ಪೋರ್ಟ್ ಉದ್ಘಾಟನೆ ಮಾಡಲಿದ್ದು, ಕನ್ನಡದ ಮೊದಲ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ರಾಷ್ಟ್ರಕವಿ ಕುವೆಂಪು ಹೆಸರು ಪ್ರಸ್ತಾಪಿಸುತ್ತಿದ್ದೇನೆ. ಸೋಮವಾರ ನಡೆಯುವ ಅಧಿವೇಶನದಲ್ಲೂ ಈ ಕುರಿತು ನಿರ್ಧಾರ ಕೈಗೊಂಡು ಕೇಂದ್ರ ಸರ್ಕಾರಕ್ಕೆ ನೀಡಲಾಗುತ್ತದೆ. ಮೋದಿಯವರಿಂದಲೇ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಲಾಗುವುದು ಎಂದರು.

Exit mobile version