ಶಿವಮೊಗ್ಗ: ಹೋರಿ ಬೆದರಿಸುವ ಹಬ್ಬ (Bullock frightening Race) ದೊಡ್ಡ ಸಂಭ್ರಮವೇ ಆದರೂ ಆಗಾಗ ಅಪಾಯಕಾರಿಯಾಗಿ ಬದಲಾಗುವುದೂ ಇದೆ. ಶಿವಮೊಗ್ಗ ಜಿಲ್ಲೆಯ (Shivamogga News) ಶಿಕಾರಿಪುರ ತಾಲೂಕಿನ ಕಲ್ಮನೆ ಗ್ರಾಮದಲ್ಲಿ ನಡೆದ ಹೋರಿ ಬೆದರಿಸುವ ಸ್ಪರ್ಧೆಯಲ್ಲಿ (Bullock attack) ಸಂಭವಿಸಿದ ಯುವಕನ ಸಾವು (young Man death) ಇದಕ್ಕೆ ಒಂದು ನಿದರ್ಶನವಾಗಿದೆ.
ಕಲ್ಮನೆ ಗ್ರಾಮದಲ್ಲಿ ಭಾನುವಾರ ಆಯೋಜನೆಯಾಗಿದ್ದಾಗ ಹೋರಿ ಬೆದರಿಸುವ ಸ್ಪರ್ಧೆಯನ್ನು ನೋಡಲು ಹೋಗಿದ್ದ ಯುವಕನಿಗೆ ಹೋರಿ ತಿವಿದು ಗಾಯಗೊಳಿಸಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಪುನೀತ್ ಆಚಾರ್ (19) ಚಿಕಿತ್ಸೆ ಫಲಿಸದೆ ಶಿವಮೊಗ್ಗ ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಸಾವು ಕಂಡಿದ್ದಾನೆ.
ಪುನೀತ್ ಆಚಾರ್ ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಹೊಸಮಳಲಿ ಗ್ರಾಮದ ನಿವಾಸಿಯಾಗಿದ್ದು, ಗೆಳೆಯರೊಂದಿಗೆ ಉತ್ಸಾಹದಿಂದ ಸ್ಪರ್ಧೆ ನೋಡಲು ಬಂದಿದ್ದ. ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.’i’
ಇದನ್ನೂ ಓದಿ : Self Harming : ಗದಗದ ಜನಪ್ರಿಯ ವೈದ್ಯ ಆತ್ಮಹತ್ಯೆ; ಡೆತ್ ನೋಟ್‌ನಲ್ಲಿ ಕಾಂಗ್ರೆಸ್ ನಾಯಕನ ಹೆಸರು
ನೀರು ಅರಸಿ ಬಂದ ಜಿಂಕೆ ಬೀದಿ ನಾಯಿಗಳ ದಾಳಿಗೆ ಬಲಿ
ಕೋಲಾರ: ನೀರಿಗಾಗಿ ಅರಸಿ ಬಂದ ಜಿಂಕೆಯೊಂದು ಬೀದಿ ನಾಯಿಗಳ ದಾಳಿಗೆ ಬಲಿಯಾಗಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಹುಳದೇನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
ಕಾಡಿನಿಂದ ಗ್ರಾಮಕ್ಕೆ ಬಂದ ಜಿಂಕೆಯನ್ನು ಬೀದಿ ನಾಯಿಗಳು ಬೆನ್ನಟ್ಟಿದ್ದವು. ನಾಯಿಗಳ ದಾಳಿಗೆ ತೀವ್ರ ಗಾಯಗೊಂಡಿದ್ದ ಎರಡು ವರ್ಷದ ಗಂಡು ಜಿಂಕೆ ಬಳಿಕ ಪ್ರಾಣ ಕಳೆದುಕೊಂಡಿದೆ.
ಗಾಯಗೊಂಡಿದ್ದ ಜಿಂಕೆಯನ್ನು ಗ್ರಾಮಸ್ಥರು ಸೇರಿ ಸಾಕಷ್ಟು ಆರೈಕೆ ಮಾಡಿದ್ದರೂ ಚಿಕಿತ್ಸೆ ಫಲಕಾರಿಯಾಗಲಿಲ್ಲ. ನಡೆದಿರುವ ಘಟನೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ತಿಳಿಸಿದ್ದಾರೆ. ಗ್ರಾಮಕ್ಕೆ ಅರಣ್ಯ ಅಧಿಕಾರಿಗಳ ಭೇಟಿ ನೀಡಲಿದ್ದಾರೆ ಎಂದು ತಿಳಿದುಬಂದಿದೆ.
ಕುರುಬಾಳ ಹುಂಡಿಯಲ್ಲಿ ಬೋನಿಗೆ ಬಿದ್ದ ಅವಳಿ ಚಿರತೆ
ಮೈಸೂರು: ಜಿಲ್ಲೆಯ ನಾನಾ ಭಾಗಗಳಲ್ಲಿ ಚಿರತೆಗಳ ಹಾವಳಿ ಜೋರಾಗಿದೆ. ಈ ನಡುವೆ ಅರಣ್ಯ ಇಲಾಖೆ ಅಧಿಕಾರಿಗಳು ಅಲ್ಲಲ್ಲಿ ಬೋನುಗಳನ್ನು ಇಟ್ಟು ನಾಡಿಗೆ ಬರುವ ಈ ಪ್ರಾಣಿಗಳನ್ನು ಹಿಡಿಯುವ ಪ್ರಯತ್ನ ನಡೆಸುತ್ತಿದೆ. ಈಗ ತಿ. ನರಸೀಪುರ ತಾಲೂಕಿನಲ್ಲಿ ಮತ್ತು ನಂಜನಗೂಡಿನಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಎರಡು ಚಿರತೆಗಳು ಬಿದ್ದಿವೆ.
ತಿ.ನರಸೀಪುರ ತಾಲ್ಲೂಕಿನ ಕುರುಬಾಳಹುಂಡಿ ಗ್ರಾಮದಲ್ಲಿ 4 ವರ್ಷದ ಗಂಡು ಚಿರತೆ ಸೆರೆಯಾಗಿದ್ದರೆ, ನಂಜನಗೂಡು ತಾಲೂಕಿನ ರಾಂಪುರ ಗ್ರಾಮದಲ್ಲಿ 5 ವರ್ಷದ ಗಂಡು ಚಿರತೆ ಬೋನಿಗೆ ಬಿದ್ದಿದೆ. ಒಂದೇ ದಿನ ಎರಡು ಕಡೆ ಬೋನಿಗೆ ಬಿದ್ದ ಚಿರತೆಗಳಿಂದಾಗಿ ಜನ ಸ್ವಲ್ಪ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ಈ ಭಾಗದಲ್ಲಿ ಕಳೆದ ಹಲವು ತಿಂಗಳಿನಿಂದ ಚಿರತೆ ಹಾವಳಿ ಜೋರಾಗಿದೆ. ಸಾಕು ಪ್ರಾಣಿಗಳ ಮೇಲೆ ದಾಳಿ ಚಿರತೆಗಳು ಆಗಾಗ ದಾಳಿ ಮಾಡುತ್ತಿದ್ದವು. ರೈತರು ತಮ್ಮ ಜಮೀನಿಗೆ ಹೋಗಲು ಹೆದರುವ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಗೆ ದೂರು ನೀಡಲಾಗಿತ್ತು. ಅರಣ್ಯ ಸಿಬ್ಬಂದಿಗಳು ಚಿರತೆಗಳ ಓಡಾಟ ಗಮನಿಸಿ ಬೋನು ಇಟ್ಟಿದ್ದರು. ಇದೀಗ ಎರಡು ಚಿರತೆಗಳು ಬೋನಿಗೆ ಬಿದ್ದ ಮಾಹಿತಿ ಪಡೆದ ಅರಣ್ಯಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಚಿರತೆಗಳನ್ನು ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಿದ್ದಾರೆ.