Cat Bite: ಸಾಕಿದ ಬೆಕ್ಕು ಕಚ್ಚಿ ಮಹಿಳೆ ಸಾವು; ಬೆಕ್ಕು ಪರಚಿದರೆ ಹುಷಾರ್ - Vistara News

ಶಿವಮೊಗ್ಗ

Cat Bite: ಸಾಕಿದ ಬೆಕ್ಕು ಕಚ್ಚಿ ಮಹಿಳೆ ಸಾವು; ಬೆಕ್ಕು ಪರಚಿದರೆ ಹುಷಾರ್

Cat Bite: ಮೊನ್ನೆಯಿಂದ ಬೆಕ್ಕು ಕಚ್ಚಿದ ಮಹಿಳೆಯ ಆರೋಗ್ಯದಲ್ಲಿ ಏರುಪೇರು ಶುರುವಾಗಿತ್ತು. ರೇಬೀಸ್‌ ಹಬ್ಬಿದ್ದು, ದೇಹದಲ್ಲಿ ನಂಜು ಏರುತ್ತಲೇ ಹೋಗಿತ್ತು. ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆಯಲ್ಲಿ ಮಹಿಳೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಹಿಳೆಯು ನಿನ್ನೆ ಮೃತಪಟ್ಟಿದ್ದಾರೆ.

VISTARANEWS.COM


on

cat bite shimogga news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

ಶಿವಮೊಗ್ಗ: ಪ್ರೀತಿಯಿಂದ ಸಾಕಿದ ಬೆಕ್ಕು ಕಚ್ಚಿ (Cat bite) ರೇಬೀಸ್‌ (Rabies) ಕಾಯಿಲೆ ಹರಡಿ ಮಹಿಳೆಯೊಬ್ಬರು ಸಾವಿಗೀಡಾದ (woman death) ದುರಂತ ಘಟನೆ ಶಿವಮೊಗ್ಗದಲ್ಲಿ (Shivamogga news) ನಡೆದಿದೆ. ಬೆಕ್ಕು ಕಚ್ಚಿದರೆ, ಪರಚಿದರೆ ನಿರ್ಲಕ್ಷ್ಯ ಮಾಡಬಾರದು ಎಂಬುದಕ್ಕೆ ಇದು ದೃಷ್ಟಾಂತದಂತಿದೆ.

ಹೌದು, ಸಾಕಿದ ಬೆಕ್ಕು ಮನೆಯೊಡತಿಯನ್ನೇ ಬಲಿ ಪಡೆದುಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ತರಲಘಟ್ಟದಲ್ಲಿ ನಡೆದಿದೆ. 50 ವರ್ಷ ವಯಸ್ಸಿನ ಗಂಗೀಬಾಯಿ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ತಾನೇ ಸಾಕಿದ ಬೆಕ್ಕು ಮಹಿಳೆ ಕಾಲಿಗೆ ಕಚ್ಚಿತ್ತು. ಈಕೆ ಐದು ಇಂಜೆಕ್ಷನ್ ತೆಗೆದುಕೊಳ್ಳಬೇಕಿತ್ತು. ಆದರೆ ಒಂದು ಇಂಜೆಕ್ಷನ್ ಪಡೆದು ಸುಮ್ಮನಾಗಿದ್ದರು. ನಂತರದ ಇಂಜೆಕ್ಷನ್‌ಗಳನ್ನು ಪಡೆಯಲು ವೈದ್ಯರಲ್ಲಿಗೆ ತೆರಳಿರಲಿಲ್ಲ.

ಹಲವು ದಿನಗಳ ಹಿಂದೆ ಬೆಕ್ಕು ಕಚ್ಚಿದ ಮಹಿಳೆಯ ಆರೋಗ್ಯದಲ್ಲಿ ಏರುಪೇರು ಶುರುವಾಗಿತ್ತು. ರೇಬೀಸ್‌ ಹಬ್ಬಿದ್ದು, ದೇಹದಲ್ಲಿ ನಂಜು ಏರುತ್ತಲೇ ಹೋಗಿತ್ತು. ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆಯಲ್ಲಿ ಮಹಿಳೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಹಿಳೆಯು ನಿನ್ನೆ ಮೃತಪಟ್ಟಿದ್ದಾರೆ.

ಇದೇ ಬೆಕ್ಕು ಮೊದಲು ತರಲಘಟ್ಟದ ಕ್ಯಾಂಪ್​ನಲ್ಲಿರುವ ಯುವಕನೋರ್ವನ ಮೇಲೆ ದಾಳಿ ಮಾಡಿತ್ತು. ಎರಡು ತಿಂಗಳ ಹಿಂದೆ ಮಹಿಳೆಯೊಬ್ಬರಿಗೆ ಕಚ್ಚಿತ್ತು. ಯಜಮಾನಿಯನ್ನು ಕಚ್ಚುವ ಮುನ್ನ ನಾಯಿಯ ಮರಿಯನ್ನೂ ಕಚ್ಚಿತ್ತು. ಯುವಕನ ಕಾಲಿಗೆ ಔಷಧ ಮಾಡಿ ನಂಜು ತೆಗೆಸಲಾಗಿತ್ತು. ಪರಿಣಾಮ ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಈ ಘಟನೆಯ ಬಗ್ಗೆ ಮೆಗ್ಗಾನ್ ಜಿಲ್ಲಾಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಟಿ.ಡಿ ತಿಮ್ಮಪ್ಪ ಪ್ರತಿಕ್ರಿಯಿಸಿದ್ದು, ನಾಯಿಯು ಬೆಕ್ಕಿಗೆ ಕಚ್ಚಿರಬೇಕು. ನಾಯಿಯ ರೇಬಿಸ್ ಮಹಿಳೆಗೆ ಕಚ್ಚಿದ ಬೆಕ್ಕಿಗೆ ಬಂದಿದೆ. ಅದೇ ಬೆಕ್ಕು ಮಹಿಳೆಗೆ ಕಚ್ಚಿದೆ. ಇದರಿಂದ ಮಹಿಳೆಯು ಮೃತಪಟ್ಟಿದ್ದಾಳೆ ಎಂದು ಸ್ಪಷ್ಟಪಡಿಸಿದ್ದಾರೆ. ನಾಯಿಯು ಈ ಬೆಕ್ಕಿಗೆ ಕಚ್ಚಿದ್ದರಿಂದ ರೇಬಿಸ್ ಹರಡಿದ್ದು, ಬಳಿಕ ಬೆಕ್ಕು ಮನೆ ಒಡತಿಗೆ ಕಚ್ಚಿದೆ. ಹೀಗಾಗಿ ಮಹಿಳೆ ರೇಬಿಸ್​ನಿಂದ ಮೃತಪಟ್ಟಿದ್ದಾಳೆಂದು ಶಂಕಿಸಲಾಗಿದೆ.

ಇಲ್ಲಿ ಮಹಿಳೆಯು ಒಂದೇ ಇಂಜೆಕ್ಷನ್ ಪಡೆದು ಬಳಿಕ ನಿರ್ಲಕ್ಷ್ಯ ಮಾಡಿದ್ದಾಳೆ. ಗುಣಮುಖ ಆಗಿದೆ ಎಂದು ಭಾವಿಸಿ ನಾಟಿ ಮಾಡಲು ಹೋಗಿದ್ದಾರೆ. ನೀರಿಗೆ ಇಳಿದು ಕೃಷಿ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಆದರೆ ರೇಬಿಸ್​ನಿಂದಾಗಿ ಅನಾರೋಗ್ಯ ಕಾಡಿದ ಪರಿಣಾಮ ಮತ್ತೆ ಗಂಗೀಬಾಯಿ ಆರೋಗ್ಯದಲ್ಲಿ ಏರುಪೇರು ಆಗಿದ್ದು, ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಸಾವಿಗೀಡಾಗಿದ್ದಾರೆ.

ಬೆಕ್ಕು, ನಾಯಿ ಸೇರಿದಂತೆ ಯಾವುದೇ ಪ್ರಾಣಿ ಕಚ್ಚಿದರೆ ರೇಬೀಸ್‌ ಇಂಜೆಕ್ಷನ್‌ ಪಡೆದುಕೊಳ್ಳಬೇಕು. ಬಾವಲಿ ಮುಂತಾದ ಪಕ್ಷಿಗಳ ಪರಚಿದರೆ, ಕಚ್ಚಿದರೆ ಕೂಡ ಎಚ್ಚರಿಕೆ ವಗಹಿಸಬೇಕು ಎಂದು ವೈದ್ಯರು ಸೂಚಿಸಿದ್ದಾರೆ.

ಉತ್ತರಪ್ರದೇಶದಲ್ಲೂ ಬೆಕ್ಕು ಕಚ್ಚಿ ತಂದೆ ಮಗ ಸಾವು

ಕಾನ್ಪುರ್: ಉತ್ತರ ಪ್ರದೇಶದ (Uttar Pradesh) ಕಾನ್ಪುರದಲ್ಲಿ (Kanpur City) ಸಾಕು ಬೆಕ್ಕು (Pet Cat) ಕಚ್ಚಿದ ಕಾರಣಕ್ಕೆ (Cat Bite) ತಂದೆ ಮತ್ತು ಮಗ ಇಬ್ಬರು ಪ್ರಾಣ ಕಳೆದುಕೊಂಡ ಘಟನೆ ನಡೆದಿದೆ(Father and Son). ಮೃತರಿಗೆ ಕಚ್ಚಿದ ಬೆಕ್ಕಿಗೆ, ಬೀದಿ ನಾಯಿಯೊಂದು ಕಚ್ಚಿತ್ತು. ಅದೇ ಬೆಕ್ಕು ತಂದೆ ಮತ್ತು ಮಗ ಇಬ್ಬರಿಗೂ ಕಚ್ಚಿದ್ದರಿಂದ ಅವರಿಗೆ ಮಾರಣಾಂತಿಕ ರೇಬೀಸ್ ಸೋಂಕು (rabies virus) ತಗುಲಿ, ಅಂತಿಮವಾಗಿ ಮೃತಪಟ್ಟರು. ಇವರಿಬ್ಬರೂ ಒಂದು ವಾರದ ಅಂತರದಲ್ಲಿ ಸಾವನ್ನಪ್ಪಿದ್ದಾರೆ.

ಕಾನ್ಪುರ ದೇಹತ್‌ನ ಅಕ್ಬರ್‌ಪುರ ನಗರದಲ್ಲಿ ಈ ಘಟನೆ ನಡೆದಿದ್ದು, ನಿವಾಸಿಯೊಬ್ಬರು ತಮ್ಮ ಮನೆಯಲ್ಲಿ ಬೆಕ್ಕನ್ನು ಸಾಕಿದ್ದರು. ಕುಟುಂಬದ ಸದಸ್ಯರೆಲ್ಲರೂ ಬೆಕ್ಕಿನೊಂದಿಗೆ ಆಟ ಆಡುತ್ತಿದ್ದರು. ಈ ಬೆಕ್ಕಿಗೆ ಬೀದಿನಾಯಿ ಕಚ್ಚಿತು ಮತ್ತು ಕೆಲವೇ ದಿನಗಳಲ್ಲಿ ರೇಬೀಸ್‌ನ ಲಕ್ಷಣಗಳು ಕಾಣಿಸಿಕೊಳ್ಳಲಾರಂಭಿಸಿದವು. ಬಳಿಕ ಆಟವಾಡುತ್ತಿದ್ದ ವೇಳೆ ಕುಟುಂಬದ ಮಗನಿಗೆ ಬೆಕ್ಕು ಗೀಚಿದೆ. ಕ್ರಮೇಣ ಅವನ ಸ್ಥಿತಿ ಹದಗೆಡಲಾರಂಭಿಸಿತು. ಬಳಿಕ ಆತನಲ್ಲಿ ಬೆಕ್ಕಿನ ಲಕ್ಷಣಗಳು ಕಾಣಿಸಿಕೊಳ್ಳಲಾರಂಭಿಸಿದವು. ಕೆಲವು ದಿನಗಳ ನಂತರ, ಆತ ಮೃತಪಟ್ಟ. ಬಳಿಕ, ಮೃತ ಯುವಕನ ತಂದೆಯಲ್ಲೂ ಅದೇ ಲಕ್ಷಣಗಳು ಕಾಣಿಸಕೊಳ್ಳಲಾರಂಭಿಸಿದವು. ಮಗ ಸತ್ತ ಒಂದು ವಾರದಲ್ಲೇ ರೇಬೀಸ್ ಕಾಯಿಲೆಗೆ ತಂದೆ ಕೂಡ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Snake Bite: ನಾಗರ ಪಂಚಮಿ ಹಬ್ಬದಂದೇ ಹಾವು ಕಚ್ಚಿ ಬಾಣಂತಿ ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ

ಮಳೆ

Karnataka Weather : ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ

Karnataka Weather : ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

karnataka Weather Forecast

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ಸಾಧ್ಯತೆಯಿದೆ. ಉಳಿದಂತೆ ಉತ್ತರ ಕರ್ನಾಟಕದಲ್ಲಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ. ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಮೈಸೂರು ಮತ್ತು ಚಾಮರಾಜನಗರ ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಚದುರಿದಂತೆ ವ್ಯಾಪಕವಾಗಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾದರೆ, ಉಳಿದೆಡೆ ಶುಷ್ಕ ಹವಾಮಾನ ಮೇಲುಗೈ ಸಾಧಿಸಲಿದೆ.

ಮಲೆನಾಡಿನ ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯಲ್ಲಿ ಸಾಧಾರಣ ಮಳೆಯ ಸಿಂಚನವಾಗಲಿದೆ. ಕರಾವಳಿಯ ದಕ್ಷಿಣ ಕನ್ನಡದಲ್ಲಿ ಮಳೆ ಸಾಧಾರಣವಾಗಿರಲಿದ್ದು, ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಹಗುರವಾದ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ‌ ಅಲ್ಲಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆ ಸುರಿಯಲಿದೆ.

Continue Reading

ಮಳೆ

Karnataka Rain : ಧಾರಾಕಾರ ಮಳೆಗೆ ಹೊಳೆಯಂತಾದ ಬೆಂಗಳೂರು; ಈ ರಸ್ತೆಯಲ್ಲಿ ಓಡಾಡುವ ಮುನ್ನ ಹುಷಾರ್‌!

Karnataka Rain : ಧಾರಾಕಾರ ಮಳೆಗೆ ರಾಜಧಾನಿ ಬೆಂಗಳೂರಿನ ಸುತ್ತಮುತ್ತಲ ಪ್ರದೇಶವು ಹೊಳೆಯಂತಾಗಿದೆ.

VISTARANEWS.COM


on

Karnataka Rain

ಬೆಂಗಳೂರು:ಸತತವಾಗಿ ಸುರಿಯುತ್ತಿರುವ ಮಳೆಗೆ ರಾಜಧಾನಿ ಬೆಂಗಳೂರು ಹೊಳೆಯಂತಾಗಿದೆ. ರಸ್ತೆಗಳೆಲ್ಲವೂ ಮಳೆ ನೀರಿನಿಂದ ಮುಳುಗಡೆಯಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಪರದಾಡುವಂತಾಗಿದೆ.

Karnataka Rain

ಧಾರಾಕಾರ ಮಳೆಗೆ ಸರ್ಜಾಪುರ- ದೊಮ್ಮಸಂದ್ರ ರಸ್ತೆ ಜಲಾವೃತಗೊಂಡಿದೆ. ಸಿಲ್ಕ್ ಬೋರ್ಡ್‌ನಿಂದ ಸರ್ಜಾಪುರಕ್ಕೆ ಸಂಪರ್ಕಿಸುವ ರಸ್ತೆಯು ಮುಳುಗಡೆಯಾಗಿದೆ. ದೊಮ್ಮಸಂದ್ರ ಸರ್ಕಲ್ ಬಳಿ ರಸ್ತೆಯು ಕೆರೆಯಂತಾಗಿದೆ. ಹಳ್ಳ-ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ ವಾಹನ ಸವಾರರು ಹೈರಾಣಾದರು.

karnataka Rain

ಬಿಟ್ಟು ಬಿಡದ ಮಳೆಗೆ ಬೆಂಗಳೂರಿನ ಕೆಆರ್‌ ಮಾರ್ಕೆಟ್‌ನಲ್ಲಿ ನಿಂತ ನೀರಿನಿಂದಾಗಿ ವ್ಯಾಪಾರಿಗಳ ಗೋಳು, ಇನ್ನೊಂದೆಡೆ ವಾಹನ ಸವಾರರ ಫಜೀತಿ ಹೇಳತಿರದು.

Karnataka Rain

ಬನ್ನೇರುಘಟ್ಟ ರಸ್ತೆಯ ವಿಜಯಶ್ರೀ ಲೇಔಟ್‌, ಹುಳಿಮಾವು ಮೆಟ್ರೋ ಸ್ಟೇಷನ್ ಬಳಿಯ ರಸ್ತೆಗಳು ಜಲಾವೃತಗೊಂಡಿದೆ.

Heavy rains lash Bengaluru

ಶೆಟ್ಟಿಹಳ್ಳಿ ವಾರ್ಡ್‌ನ ಚೌಡಪ್ಪ ಬಡಾವಣೆ, ಕಾವೇರಿ ಬಡಾವಣೆ, ಶ್ರೀದೇವಿ ಬಡಾವಣೆಯ ರಾಜಕಾಲುವೆ ನೀರು ತುಂಬಿದ್ದು, ರಸ್ತೆಗಳಿಗೆ ಹಾಗೂ ಮನೆಗಳಿಗೆ ನುಗ್ಗಿದೆ.

Karnataka rain

ಬೆಂಗಳೂರಿನ ಸಂಪಂಗಿರಾಮನಗರದ 3-4 ಕಿಲೋ ಮೀಟರ್ ಜಲಾವೃತಗೊಂಡಿದ್ದು, ಬಿಎಂಟಿಸಿ ಬಸ್‌ಗಳು ಅರ್ಧ ಮುಳುಗಡೆಯಾಗಿದ್ದವು.

Continue Reading

ಮಳೆ

Karnataka Rain :ಸತತ ಮಳೆಗೆ ಬೆಂಗಳೂರು ಥಂಡಾ; ಶಾಲೆಗಳಿಗೆ ಇಂದು ರಜೆ ಘೋಷಣೆ

Karnataka Rain : ಸತತ ಮಳೆ ಹಿನ್ನೆಲೆಯಲ್ಲಿ ಜನ-ಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರಿನ ಶಾಲೆಗಳಿಗೆ ಇಂದು ಸೋಮವಾರ ರಜೆ ಘೋಷಣೆ ಮಾಡಲಾಗಿದೆ.

VISTARANEWS.COM


on

Karnataka Rain

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ (Karnataka Rain) ನಿರಂತರವಾಗಿ ಮಳೆಯಾಗುತ್ತಿದ್ದು, ರಸ್ತೆಗಳು ಕೆರೆಯಂತಾಗಿ ಮಾರ್ಪಾಡಾಗಿದೆ. ಈ ನಿಟ್ಟಿನಲ್ಲಿ ಮುಂಜಾಗೃತ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರಿನ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ, ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಲಾಗಿದೆ. ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ ಜಿ ಮೌಖಿಕವಾಗಿ ಆದೇಶಿಸಿದ್ದಾರೆ. ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ. ತುರ್ತು ನಿರ್ಧಾರವಾದ ಕಾರಣ ಮೌಖಿಕವಾಗಿ ಆದೇಶಿಸಿದ್ದು, ಅಧಿಕೃತ ಆದೇಶವನ್ನು ಹೊರಡಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು. ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.

ಮುಂಜಾಗೃತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ. ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Continue Reading

ಮಳೆ

Karnataka Rain: ತೊಯ್ದು ತೊಪ್ಪೆಯಾದ ಚಿಕ್ಕಮಗಳೂರು, ಶಿವಮೊಗ್ಗ; ನಾಳೆಗೂ ಭಾರಿ ಮಳೆ ಎಚ್ಚರಿಕೆ

VISTARANEWS.COM


on

Karnataka Rain

ಚಿಕ್ಕಮಗಳೂರು: ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶದಲ್ಲೇ ಭಾರಿ (Karnataka Rain) ಮಳೆಯಾಗುತ್ತಿದೆ. ಹಿಂಗಾರು ಮಳೆಗೆ ಪಶ್ಚಿಮಘಟ್ಟಗಳ ತಪ್ಪಲು ಅಲ್ಲೋಲ-ಕಲ್ಲೋಲವಾಗಿದೆ. ಚಿಕ್ಕಮಗಳೂರಿನ ದತ್ತಪೀಠದ ರಸ್ತೆಯಲ್ಲಿ 3 ಅಡಿ ಎತ್ತರದಲ್ಲಿ ನೀರು ಹರಿದಿದೆ. ಎಷ್ಟೇ ಮಳೆ ಬಂದರೂ ಪಶ್ಚಿಮ ಘಟ್ಟಕ್ಕೆ ಲೆಕ್ಕವೇ ಅಲ್ಲ, ಸಾವಿರಾರು ಅಡಿ ಆಳ, ಮುಗಿಲೆತ್ತರದ ಬೆಟ್ಟಗುಡ್ಡಗಳ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಕೆರೆಯಂತೆ ನೀರು ಹರಿಯುತ್ತಿದೆ. ಮಳೆರಾಯನ ಅಬ್ಬರಕ್ಕೆ ಪ್ರವಾಸಿಗರು ತೊಯ್ದು ತೊಪ್ಪೆ ಆಗಿದ್ದಾರೆ. ಮಳೆ ಮಧ್ಯೆ ಸಿಲುಕಿ ಚಿಕ್ಕಮಗಳೂರು ತಾಲ್ಲೂಕಿನ ಮುಳ್ಳಯ್ಯನಗಿರಿ, ದತ್ತಪೀಠ ಸಹವಾಸವೇ ಬೇಡ ಎನ್ನುತ್ತಿದ್ದಾರೆ ಪ್ರವಾಸಿಗರು.

ತರೀಕೆರೆ ತಾಲೂಕಿನಾದ್ಯಂತ ಸುರಿದ ಧಾರಾಕಾರ ಮಳೆಗೆ ಹೊಲ-ಗದ್ದೆ, ತೋಟಗಳಿಗೆ ನೀರು ನುಗ್ಗಿದೆ. ಸಣ್ಣಬೋಕಿಕೆರೆ, ಗೊಲ್ಲರಹಳ್ಳಿ ಹೊಲಗಳು ಜಲಾವೃತಗೊಂಡಿದೆ. ಕೋರನಹಳ್ಳಿ, ಚಟ್ಟನಹಳ್ಳಿ, ಶಿವಪುರ ಭಾಗದಲ್ಲಿ ಹಳ್ಳಿ ಹರಿದು ಭಾರೀ ಅನಾಹುತವಾಗಿದೆ. ಗೊಲ್ಲರಹಳ್ಳಿಯಲ್ಲಿ ಹೂವಿನಹೊಲದಲ್ಲಿ ಮಳೆ ‌ನೀರು ನಿಂತಿದೆ.

ಕಾಫಿನಾಡ ಮಹಾಮಳೆಗೆ ಮಲೆನಾಡು ಭಾಗದ ಜನರು ಕಂಗಾಲಾಗಿದ್ದಾರೆ. ಭಾರೀ ಮಳೆಗೆ ಗ್ರಾಮೀಣ ಭಾಗದ ಸೇತುವೆಗಳು ಜಲಾವೃತಗೊಂಡಿದೆ. ಮುತ್ತೋಡಿ ವ್ಯಾಪ್ತಿಯ ಗ್ರಾಮದ ಜನ ಹಳ್ಳ ದಾಟಲು ಪರದಾಡಿದರು. ವೃದ್ಧೆಯನ್ನ ಹಳ್ಳಿಗರು ಅಂಗೈಲಿ ಹೊತ್ತು ಸಾಗಿದ ಘಟನೆ ಚಿಕ್ಕಮಗಳೂರು ತಾಲೂಕಿನ ಮಲಗಾರು ಗ್ರಾಮದಲ್ಲಿ ನಡೆದಿದೆ. ಮಲಗಾರು ಗ್ರಾಮ ಮುತ್ತೋಡಿ ಅರಣ್ಯ ವ್ಯಾಪ್ತಿಯ ಕುಗ್ರಾಮ ಇದಾಗಿದೆ. ನಿನ್ನೆ ಸಂಜೆ ಸುರಿದ ಭಾರೀ ಮಳೆಯಿಂದ ಅಪಾರ ಪ್ರಮಾಣದಲ್ಲಿ ನೀರು ಹರಿದು, ಕಿರು ಸೇತುವೆ ತುಂಬಿ ಹೋಗಿದೆ.

ಇತ್ತ ಕಳೆದ ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ತಗ್ಗು ಪ್ರದೇಶದ ಮನೆಗಳಿಗೆ‌ ನೀರು ನುಗ್ಗಿದೆ. ಶಿವಮೊಗ್ಗ ನಗರದಲ್ಲಿ ರಾತ್ರಿಯಿಂದ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ. ಪರಿಣಾಮ ನಗರದ ದೇವರಾಜು ಅರಸು ಬಡಾವಣೆಯ ಮನೆಗಳು ಜಲಾವೃತಗೊಂಡಿದೆ. ರಸ್ತೆ ಮೇಲೆ ನೀರು ಉಕ್ಕಿ ಹರಿಯುತ್ತಿದ್ದು, ಜನರ ಓಡಾಟಕ್ಕೂ ಸಂಕಷ್ಟ ಎದುರಾಗಿದೆ.

5 ದಶಕಗಳ ನಂತರ ಕೋಡಿ ಬಿದ್ದ ಹುಲಿಕೆರೆ ಗ್ರಾಮದ ಕೆರೆ

ಕಳೆದ ಮೂರ್ನಾಲ್ಕು ದಿನದಿಂದ ಸುರಿಯುತ್ತಿರುವ ಮಳೆಗೆ ಐದು ದಶಕಗಳ ನಂತರ ಹುಲಿಕೆರೆ ಗ್ರಾಮದ ಕೆರೆ ಕೋಡಿ ಬಿದ್ದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿರುವ ಹುಲಿಕೆರೆ ನೋಡಲು ಜನಸಾಗರವೇ ಹರಿದುಬಂದಿತ್ತು. ಕಲ್ಯಾಣ ಚಾಲುಕ್ಯರ ಕಾಲಘಟ್ಟದಲ್ಲಿ ಕಟ್ಟಿಸಿದ ಕೆರೆಯು ಹುಲಿಕೆರೆ ಗ್ರಾಮ ಸೇರಿ ಸುತ್ತಮುತ್ತಲಿನ ಹತ್ತಾರು ಹಳ್ಳಿಯ ಜೀವನಾಡಿಯಾಗಿದೆ. ಕೆರೆ ಭರ್ತಿಯಾಗಿ ಕೋಡಿ ಬಿದ್ದಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಕೆರೆಗಳು ಭರ್ತಿ

ಬರದ ನಾಡು ಎಂದೇ ಕರೆಯುತ್ತಿದ್ದ ದಾವಣಗೆರೆ ಜಿಲ್ಲೆಯ ಜಗಳೂರಿನಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಗೆ ತಾಲೂಕಿನ ಬಹುತೇಕ ಕೆರೆಗಳು ಭರ್ತಿಯಾಗಿದೆ. ಬತ್ತಿ ಹೋಗಿದ್ದ ಬೋರ್ ವೆಲ್‌ನಲ್ಲಿ ನೀರು ಉಕ್ಕಿ ಬರುತ್ತಿದೆ. ಜಗಳೂರು ತಾಲ್ಲೂಕಿನ ಕಾನನಕಟ್ಟೆ, ಅಣಬೂರು ಗ್ರಾಮದಲ್ಲಿ ನೀರು ಉಕ್ಕಿ ಬರುತ್ತಿದೆ. ಅಂತರ್ಜಲ ಹೆಚ್ಚಾಗಿ ಬೋರ್ ವೆಲ್ ಗಳಲ್ಲಿ ನೀರು ಉಕ್ಕಿ ಬರುತ್ತಿದ್ದು, ರೈತರು ಸಂತಸ ವ್ಯಕ್ತಪಡಿಸಿದ್ದಾರೆ.

ಮಲೆನಾಡಿನಂತಾದ ಹೊಸಪೇಟೆ ಪಟ್ಟಣ

ವಿಜಯನಗರದ ಹೊಸಪೇಟೆ ಪಟ್ಟಣ ಮಿನಿ ಮಲೆನಾಡಿನಂತಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಇಡೀ ಹೊಸಪೇಟೆ ತಾಲೂಕು ಮಂಜಿನಿಂದ ಆವರಿಸಿದೆ. ಐತಿಹಾಸಿಕ ಜೋಳದ ರಾಶಿ ಗುಡ್ಡ ಸೇರಿದಂತೆ ನಾನಾ ಕಡೆ ಮಂಜಿನ ವಾತಾವರಣ ಕ್ಕೆ ಜನರು ಫುಲ್ ಫಿದಾ ಆಗಿದ್ದಾರೆ. ಮಂಜಿನಲ್ಲೇ ಕುಳಿತು ಪ್ರಕೃತಿ ಸೌಂದರ್ಯ ಸವಿಯುತ್ತಿದ್ದಾರೆ.

Continue Reading
Advertisement
Latest5 hours ago

ಜನಪ್ರಿಯತೆಯಲ್ಲಿ ಪ್ರಧಾನಿ ಮೋದಿ ಈಗಲೂ ನಂ.1

Latest6 hours ago

ಕುರ್ಚಿ ಕದನಕ್ಕೆ ಹೊಸ ಟ್ವಿಸ್ಟ್ : ದಲಿತ ಸಿಎಂ ಕೂಗು ಜೋರು

Latest6 hours ago

ಟಿವಿಕೆ-ಎನ್‌ಡಿಎ ಮೈತ್ರಿ?, ತಮಿಳುನಾಡಿನಲ್ಲಿ ಸಂಚಲನ, ಸ್ಟಾಲಿನ್‌ ಸಭೆ

Latest8 hours ago

ಎಕ್ಸಿಟ್‌ ಪೋಲ್‌: ಅಸ್ಸಾಂ, ಪುದುಚೇರಿ ಪ.ಬಂಗಾಳದಲ್ಲಿ ಬಿಜೆಪಿ, ತ.ನಾಡಲ್ಲಿ ಡಿಎಂಕೆ, ಕೇರಳಂನಲ್ಲಿ ಯುಡಿಎಫ್‌

Latest8 hours ago

ತಮಿಳುನಾಡಿನಲ್ಲಿ ದಳಪತಿಯೇ ಅಧಿಪತಿ? ಎಂಜಿಆರ್‌ ಆಗ್ತಾರಾ ವಿಜಯ್‌?

Latest10 hours ago

ಪಂಚರಾಜ್ಯ ಚುನಾವಣಾ ಫಲಿತಾಂಶ: “ಎಕ್ಸಿಟ್ ಪೋಲ್‌ಗಿಂತ ಉತ್ತಮ ಪ್ರದರ್ಶನ ನಿರೀಕ್ಷೆ” – ಖರ್ಗೆ

Latest11 hours ago

ರಾಜ್ಯದಲ್ಲಿ ನಾಯಕತ್ವ ಗೊಂದಲ: “ಸದ್ಯಕ್ಕೆ ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ” – ಖರ್ಗೆ ಸ್ಪಷ್ಟನೆ

Latest12 hours ago

ಬೆಂಗಳೂರು ಸೇರಿದಂತೆ 18 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್: ಇಂದು ಮತ್ತು ನಾಳೆ ಆಲಿಕಲ್ಲು ಮಳೆ ಸಾಧ್ಯತೆ

Latest1 day ago

ಬೌರಿಂಗ್‌ ಆಸ್ಪತ್ರೆ ಕಾಂಪೌಂಡ್‌ ಕುಸಿದು 7 ಮಂದಿ ಬಲಿ

Latest1 day ago

ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌