Site icon Vistara News

Child Death: ಶಿವಮೊಗ್ಗದಲ್ಲಿ ಜ್ಯೂಸ್‌ ಬಾಟೆಲ್‌ನ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಉಸಿರುಗಟ್ಟಿ ಸಾವು

One and a half year old boy dies of suffocation after swallowing bottle cap in Shivamogga

ಶಿವಮೊಗ್ಗ : ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಮೃತಪಟ್ಟಿರುವ (Child Death) ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮನೆಯಲ್ಲಿ ಆಟವಾಡುವ ವೇಳೆ ಮಗುವಿಗೆ ಜ್ಯೂಸ್ ಬಾಟಲ್ ಸಿಕ್ಕಿದೆ. ಅದ್ಹೇಗೋ ಬಾಟಲ್‌ ಮುಚ್ಚಳ ಬಿಚ್ಚಿ ಬಾಯಿಗೆ ಹಾಕಿಕೊಂಡಿದೆ. ಜ್ಯೂಸ್ ಬಾಟಲ್‌ನ ಮುಚ್ಚಳ ನುಂಗಿದೆ. ಈ ವೇಳೆ ಉಸಿರಾಟದ ತೊಂದರೆಯಿಂದ ಮಗು ಮೃತಪಟ್ಟಿದೆ.

ಶಿವಮೊಗ್ಗದ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರಗುವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಶಿಕಾರಿಪುರ ತಾಲೂಕಿನ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರಗುವಳ್ಳಿ ಗ್ರಾಮದ ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬುವರ ಒಂದೂವರೆ ವರ್ಷದ ಮಗು ಸಾವನ್ನಪ್ಪಿದೆ.

ನಿನ್ನೆ ಬುಧವಾರ ಜ್ಯೂಸ್ ಬಾಟಲಿ ಹಿಡಿದುಕೊಂಡು ಮಗು ಆಟವಾಡುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಬಾಟೆಲ್‌ ಮುಚ್ಚಳ ನುಂಗಿದ ಕೂಡಲೇ ಮಗು ಉಸಿರಾಡಲು ಆಗದೆ ಒದ್ದಾಡಿದೆ, ಜೋರಾಗಿ ಅಳುವ ಸದ್ದು ಕೇಳಿ ಪೋಷಕರು ಬಂದಿದ್ದಾರೆ. ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಆದಾಗಲೇ ಮಗು ಜೀವ ಬಿಟ್ಟಿತ್ತು. ಮಗು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Karnataka Weather : ಗೌರಿ-ಗಣೇಶ ಹಬ್ಬಕ್ಕೆ ಮಳೆ ಅಡ್ಡಿ!ನಿರಂತರ ಗಾಳಿ ಜತೆಗೆ ಭಾರಿ‌ ವರ್ಷಧಾರೆ ಎಚ್ಚರಿಕೆ

ಆಟಿಕೆ ಎಂದು ತಿಳಿದು ಹಾವನ್ನೇ ಕಚ್ಚಿದ ಮಗು! ಕಚ್ಚಿಸಿಕೊಂಡ ಹಾವು ಸಾವು!

ಅಂಬೆಗಾಲಿಡುವ ಮಗುವೊಂದು ಹಾವನ್ನು ಕಚ್ಚಿ (Boy Bites Snake) ಕೊಂದಿರುವ ಘಟನೆ ಬಿಹಾರದ ಗಯಾ (Gaya district) ಜಿಲ್ಲೆಯ ಜಮುಹರ್ ಗ್ರಾಮದಲ್ಲಿ ನಡೆದಿದ್ದು, ಮಗು ಅಪಾಯದಿಂದ ಪಾರಾಗಿದೆ. ಈ ಕುರಿತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral Video) ಆಗಿದ್ದು, ಬಳಿಕ ಸಾಕಷ್ಟು ಮಂದಿ ಮಗುವನ್ನು ಕಾಣಲು ಬರುತ್ತಿದ್ದಾರೆ ಎನ್ನಲಾಗಿದೆ.

ಮಗು ಟೆರೇಸ್‌ನಲ್ಲಿ ಆಟವಾಡುತ್ತಿದ್ದಾಗ ಹಾವನ್ನು ಕಂಡು ಆಟವಾಡುವ ಸಾಮಗ್ರಿ ಎಂದು ತಿಳಿದು ಕಚ್ಚಿದೆ. ಹಾವು ಸಾವನ್ನಪ್ಪಿದ್ದು, ಬಾಲಕ ಅಪಾಯದಿಂದ ಪಾರಾಗಿರುವುದು ಆತನ ಕುಟುಂಬ ಹಾಗೂ ವೈದ್ಯರಿಗೆ ಅಚ್ಚರಿ ಮೂಡಿಸಿದೆ.

ಮಗು ಹಾವನ್ನು ಜಗಿಯುತ್ತಿರುವುದನ್ನು ಕಂಡ ಕೂಡಲೇ ತಾಯಿ ಅದನ್ನು ಮಗುವಿನ ಬಾಯಿಯಿಂದ ತೆಗೆದು ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾಳೆ. ಆರೋಗ್ಯ ಕೇಂದ್ರದ ವೈದ್ಯಕೀಯ ಸಿಬ್ಬಂದಿ ಮಗುವನ್ನು ಪರೀಕ್ಷಿಸಿ ದೈಹಿಕವಾಗಿ ಯಾವುದೇ ಹಾನಿಯಿಲ್ಲ ಎಂದು ದೃಢಪಡಿಸಿ, ಮಗು ಆರೋಗ್ಯವಾಗಿರುವುದಾಗಿ ಘೋಷಿಸಿದರು.

ಈ ಹಾವು ವಿಷಕಾರಿಯಲ್ಲ. ಮಳೆಗಾಲದಲ್ಲಿ ಈ ಪ್ರದೇಶದಲ್ಲಿ ಸಾಮಾನ್ಯವಾಗಿ ಕಂಡುಬರುತ್ತದೆ ಎಂದು ಅವರು ಹೇಳಿದರು.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ನೋಡಿ ಸಾಕಷ್ಟು ಮಂದಿ ಕಾಮೆಂಟ್ ಮಾಡಿದ್ದಾರೆ. ವ್ಯಕ್ತಿಯೊಬ್ಬ ಮಗುವಿನ ಬಾಯಿಯನ್ನು ತೆರೆಯುವಂತೆ ಪ್ರಯತ್ನಿಸಿದನು. ಸತ್ತ ಹಾವಿನ ಚಿತ್ರವನ್ನೂ ವಿಡಿಯೋದಲ್ಲಿ ತೋರಿಸಲಾಗಿದೆ.


ಇನ್ನೊಂದು ಘಟನೆಯಲ್ಲಿ ಕಳೆದ ತಿಂಗಳು ಬಿಹಾರದ ರಜೌಲಿಯಲ್ಲಿ ಹಾವೊಂದು ವ್ಯಕ್ತಿಯೊಬ್ಬನಿಗೆ ಕಚ್ಚಿದ್ದು, ಬಳಿಕ ಹಾವು ಸಾವನ್ನಪ್ಪಿತ್ತು. ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಸರಿಯಾದ ವೈದ್ಯಕೀಯ ಚಿಕಿತ್ಸೆಯಿಂದ ವ್ಯಕ್ತಿ ಬದುಕಿ ಉಳಿದನು.

ಉತ್ತರ ಪ್ರದೇಶದ ಸೌರಾ ಗ್ರಾಮದಲ್ಲೂ 24 ವರ್ಷದ ವಿಕಾಸ್ ದುಬೆ ಎಂಬವರಿಗೆ ಹಾವು ಪದೇ ಪದೇ ಕಚ್ಚಿದ ವಿಲಕ್ಷಣ ಪ್ರಕರಣ ನಡೆದಿತ್ತು. ಸುಮಾರು 40 ದಿನಗಳಲ್ಲಿ ವಿಕಾಸ್‌ಗೆ ಏಳು ಬಾರಿ ಹಾವು ಕಚ್ಚಿತ್ತು.

ಜೂನ್ 2 ರಂದು ದುಬೆ ತನ್ನ ನಿವಾಸದಲ್ಲಿ ಹಾಸಿಗೆಯಿಂದ ಎದ್ದ ತಕ್ಷಣ ಹಾವು ಕಚ್ಚಿದ್ದು, ಅವರನ್ನು ಪಕ್ಕದ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಚಿಕಿತ್ಸೆ ನೀಡಲಾಯಿತು. ಜೂನ್ 2 ರಿಂದ ಜುಲೈ 6 ರ ನಡುವೆ ದುಬೆ ಅವರು ಆರು ಬಾರಿ ಹಾವು ಕಡಿತಕ್ಕೆ ಒಳಗಾಗಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version