Shivamogga News: ಮಕ್ಕಳ ಪ್ರತಿಭೆ ಹೊರತರಲು ಪ್ರತಿಭಾ ಕಾರಂಜಿ ಸಹಕಾರಿ: ಬಿಇಒ ಕೃಷ್ಣಮೂರ್ತಿ - Vistara News

ಶಿವಮೊಗ್ಗ

Shivamogga News: ಮಕ್ಕಳ ಪ್ರತಿಭೆ ಹೊರತರಲು ಪ್ರತಿಭಾ ಕಾರಂಜಿ ಸಹಕಾರಿ: ಬಿಇಒ ಕೃಷ್ಣಮೂರ್ತಿ

Shivamogga News: ರಿಪ್ಪನ್‌ಪೇಟೆ ಪಟ್ಟಣದ ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಸ.ಹಿ.ಪ್ರಾ.ಶಾಲೆಯಲ್ಲಿ ಶುಕ್ರವಾರ ಕೋಟೆತಾರಿಗ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಜರುಗಿತು.

VISTARANEWS.COM


on

Cluster Level Pratibha karanji Programme at Karigerasu Government School at ripponpet
ರಿಪ್ಪನ್‌ಪೇಟೆ ಪಟ್ಟಣದ ಕೋಡೂರು ಗ್ರಾಪಂ ವ್ಯಾಪ್ತಿಯ ಕರಿಗೆರಸು ಸ.ಹಿ.ಪ್ರಾ.ಶಾಲೆಯಲ್ಲಿ ನಡೆದ ಕೋಟೆತಾರಿಗ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ರಿಪ್ಪನ್‌ಪೇಟೆ: ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು (Talent) ಹೊರತರಲು ಪ್ರತಿಭಾ ಕಾರಂಜಿಯಂತಹ (Pratibha Karanji) ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್‌.ಆರ್ ಕೃಷ್ಣಮೂರ್ತಿ ಹೇಳಿದರು.

ಪಟ್ಟಣದ ಕೋಡೂರು ಗ್ರಾ.ಪಂ ವ್ಯಾಪ್ತಿಯ ಕರಿಗೆರಸು ಸ.ಹಿ.ಪ್ರಾ ಶಾಲೆಯಲ್ಲಿ ಶುಕ್ರವಾರ ಕೋಟೆತಾರಿಗ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ತಾಲೂಕಿನ ಒಟ್ಟು 19 ಕ್ಲಸ್ಟರ್‌ನಲ್ಲಿ ಎಲ್ಲೂ ಮಾಡದ ಅದ್ಧೂರಿ ಕಾರ್ಯಕ್ರಮ ಈ ಗ್ರಾಮದಲ್ಲಿ ನಡೆಯುತ್ತಿದೆ. ಶಾಲೆಯ ಸುತ್ತಮುತ್ತಲಿನ ವಾತಾವರಣ ಸುಂದರವಾಗಿದ್ದು ಸ್ಥಳೀಯರ ಸಹಕಾರದಿಂದ ತಳಿರು ತೋರಣಗಳಿಂದ ಶೃಂಗಾರ ಮಾಡಿರುವುದು ಇಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: SIIMA 2023: ದುಬೈನಲ್ಲಿ ಸೈಮಾ ಅವಾರ್ಡ್‌; ನಾಮಿನೇಟ್‌ ಆದ ಕನ್ನಡ ಸಿನಿಮಾಗಳ ಕಂಪ್ಲೀಟ್‌ ಲಿಸ್ಟ್‌!

ಸರ್ಕಾರದ ಜತೆಗೆ ಸ್ಥಳೀಯ ಗ್ರಾಪಂ ಮತ್ತು ಗ್ರಾಮಸ್ಥರ ಸಹಕಾರ ಇದ್ದರೆ ಶಾಲಾಭಿವೃದ್ದಿ ಹೊಂದಲು ಸಾಧ್ಯವೆಂದ ಅವರು, ಹೊಸನಗರ ಶೈಕ್ಷಣಿಕವಾಗಿ ಮುಂದುವರೆದ ತಾಲೂಕು‌. ಈ ಬಾರಿ ಶೇ. 92.05 ಫಲಿತಾಂಶ ಬಂದಿದೆ. 17 ಶಾಲೆಗಳು ಶೇ.100 ಫಲಿತಾಂಶ ಪಡೆದಿವೆ‌. 20 ಕ್ಕಿಂತ ಹೆಚ್ಚು ಶಾಲೆಗಳು 90% ಫಲಿತಾಂಶ ಪಡೆದಿವೆ ಎಂದರು.

ಕೋಡೂರು ಗ್ರಾಪಂ ಅಧ್ಯಕ್ಷ ಉಮೇಶ್ ಮತ್ತು ಚಿಕ್ಕಜೇನಿ ಗ್ರಾಪಂ ಅಧ್ಯಕ್ಷ ರಾಜು ಎನ್.ಪಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಬಳಿಕ ಕೋಡೂರು ಗ್ರಾ.ಪಂ ಮಾಜಿ ಅಧ್ಯಕ್ಷ ಜಯಂತ್ , ಕೋಡೂರು ಗ್ರಾಪಂ ಸದಸ್ಯರಾದ‌ ಶೇಖರಪ್ಪ, ಮಂಜಪ್ಪ, ಜಯಪ್ರಕಾಶ್ ಶೆಟ್ಟಿ ಹಾಗೂ ಚಿಕ್ಕಜೇನಿ ಗ್ರಾಪಂ ಸದಸ್ಯರಾದ ವೆಂಕಟಾಚಲ, ಶಾರದಮ್ಮ, ಇತರರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ವೀರಭದ್ರಪ್ಪ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ: Ganesh Chaturthi: ರಾಜ್ಯಾದ್ಯಂತ ಪಿಒಪಿ ಗಣೇಶ ಮೂರ್ತಿ ಉತ್ಪಾದನೆ, ಮಾರಾಟ ನಿಷೇಧಿಸಿ ಸರ್ಕಾರ ಆದೇಶ

ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ಚಂದ್ರಕಲಾ, ಗ್ರಾಪಂ ಮಾಜಿ ಸದಸ್ಯೆ ನಾಗವೇಣಿ ವಸಂತ್, ಶಿಕ್ಷಣ ಇಲಾಖೆಯ ಕರಿಬಸಪ್ಪ, ಜಗದೀಶ್ ಕಾಲಿನಲ್ಲಿ, ಬಸವಣ್ಯಪ್ಪ, ಮಾಲ್ತೇಶ್, ಶಿವಪ್ಪ ಎಚ್.ಸಿ, ಧರುಣೇಶ್, ಹಾಗೂ ಮತ್ತಿತರರು ಉಪಸ್ಥಿತರಿದ್ದರು‌‌.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

Karnataka Weather Forecast : ರಾಜ್ಯಾದ್ಯಂತ ಕಳೆದೊಂದು ವಾರದಿಂದ ಮಳೆಯು (Rain news) ಅಬ್ಬರಿಸುತ್ತಿದ್ದು, ಏಳು ಜಿಲ್ಲೆಗಳಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಬೆಂಗಳೂರಿನಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

VISTARANEWS.COM


on

By

karnataka Weather Forecast Rain
Koo

ಬೆಂಗಳೂರು: ಜು.5ರಂದು ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದ್ದು, ಮಲೆನಾಡು ಸುತ್ತಮುತ್ತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ (Rain News) ನಿರೀಕ್ಷೆಯಿದೆ. ಇನ್ನೂ ಉತ್ತರ ಒಳನಾಡಿನಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯೊಂದಿಗೆ ಮಧ್ಯಮ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಕೂಡಿದ ಮಧ್ಯಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast) ನೀಡಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ರಾಮನಗರ, ತುಮಕೂರು, ವಿಜಯನಗರದಲ್ಲಿ ಪ್ರತ್ಯೇಕವಾಗಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.

ಇತ್ತ ಉತ್ತರ ಒಳನಾಡಿನದಲ್ಲಿ ಸಾಕಷ್ಟು ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗಲಿದೆ. ಆದರೆ ಬೀದರ್, ಕಲಬುರಗಿ, ಬೆಳಗಾವಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇನ್ನೂ ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಜಿಲ್ಲೆಯಾದ್ಯಂತ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ರಾಜಧಾನಿ ಬೆಂಗಳೂರಿನಲ್ಲಿಂದು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವೊಮ್ಮೆ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಗುಡುಗು ಸಹಿತ ಗಾಳಿಯೊಂದಿಗೆ ಭಾರಿ ಮಳೆ ಎಚ್ಚರಿಕೆ

ಗುಡುಗು ಸಹಿತ ಭಾರಿ ಮಳೆಯೊಂದಿಗೆ ಗಾಳಿ ವೇಗವು 30-40 ಕಿ.ಮೀ ವ್ಯಾಪ್ತಿಯಲ್ಲಿ ಬೀಸಲಿದೆ. ಮುಖ್ಯವಾಗಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನೂ ಬೆಳಗಾವಿ, ಧಾರವಾಡ, ಕೊಡಗು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Drowned In Water: ಕಾಲು ಸಂಕ ದಾಟುವಾಗ ನೀರಲ್ಲಿ ಕೊಚ್ಚಿ ಹೋದ ಮಹಿಳೆ!

Drowned In Water: ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಹಿಳೆಯೋರ್ವಳು ಜಮೀನಿನ ಕಾಲು ಸಂಕ ದಾಟಲು ಹೋದಾಗ ಕೊಚ್ಚಿಕೊಂಡು ಹೋಗಿ ಮೃತಪಟ್ಟಿರುವ ಘಟನೆ ಹೊಸನಗರದಲ್ಲಿ ಗುರುವಾರ ಜರುಗಿದೆ. ಹೊಸನಗರ ತಾಲೂಕಿನ ಬೈಸೆ ಗ್ರಾಮದ ಚೀಕಳಿ ನಿವಾಸಿ ಶಶಿಕಲಾ (43) ಮೃತ ಮಹಿಳೆಯಾಗಿದ್ದಾಳೆ.

VISTARANEWS.COM


on

Drowned In Water A woman died while crossing the kalu sanka
Koo

ಹೊಸನಗರ: ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಮಹಿಳೆಯೋರ್ವಳು ಜಮೀನಿನ ಕಾಲು ಸಂಕ ದಾಟಲು ಹೋದಾಗ ಕೊಚ್ಚಿಕೊಂಡು (Drowned In Water) ಹೋಗಿ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.

ತಾಲೂಕಿನ ಬೈಸೆ ಗ್ರಾಮದ ಚೀಕಳಿ ನಿವಾಸಿ ಶಶಿಕಲಾ (43) ಮೃತ ಮಹಿಳೆಯಾಗಿದ್ದಾಳೆ.

ಇದನ್ನೂ ಓದಿ: Uttara Kannada News: ಉ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆ, ರಕ್ಷಣೆಗೆ ಎನ್.ಡಿ.ಆರ್.ಎಫ್ ತಂಡ

ಮೃತ ಮಹಿಳೆ ಶಶಿಕಲಾ ಬೆಳಗ್ಗೆ ಅಗೆ ಹಾಕಲು ನೋಡಿಕೊಂಡು ಬರಲು ಜಮೀನಿಗೆ ಹೋಗಿದ್ದು ವಾಪಾಸು ಬಂದಿರಲಿಲ್ಲ. ಕೆಲಹೊತ್ತು ಬಿಟ್ಟು ಮನೆಯವರು ಹುಡುಕಲು ಹೋದ ಸಂದರ್ಭದಲ್ಲಿ ಜಮೀನಿನ ಹತ್ತಿರದ ಸಂಕದಿಂದ ಒಂದು ಕಿಮೀ ದೂರದ ದುಮುಕದ ಗದ್ಧೆ ಕಾಲು ಸೇತುವೆ ಹತ್ತಿರ ಹಳ್ಳದಲ್ಲಿ ಮೃತದೇಹವೊಂದು ಮರಕ್ಕೆ ಸಿಕ್ಕಿ ಹಾಕಿರುವುದು ಕಂಡು ಬಂದಿದೆ. ಪರಿಶೀಲಿಸಿದಾಗ ಮೃತ ಶಶಿಕಲಾರ ಮೃತದೇಹ ಎಂದು ಗೊತ್ತಾಗಿದೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

ಉಡುಪಿ: ಕರಾವಳಿಯಲ್ಲಿ ಭಾರಿ ಮಳೆಗೆ (Karnataka Weather) ಮೊದಲ (Rain News) ಬಲಿಯಾಗಿದೆ. ಉಡುಪಿಯ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಗುಡ್ಡ ಕುಸಿದು ಮಹಿಳೆ ಮೃತಪಟ್ಟಿದ್ದಾರೆ. ಹಳ್ಳಿ ಬೇರು ನಿವಾಸಿ ಅಂಬಾ (45) ಮೃತಪಟ್ಟವರು.

ಇದನ್ನೂ ಓದಿ: Viral Video: ನೀರು ತುಂಬಿದ್ದ ರಸ್ತೆ ಗುಂಡಿಗೆ ಬಿದ್ದ ಬಾಲಕಿ; ಜೀವ ಉಳಿಸಿದ ಹುಡುಗ

ಏಕಾಏಕಿ ಗುಡ್ಡ ಕುಸಿದು ಬಿದ್ದ ಪರಿಣಾಮ ಅಂಬಾ ಮಣ್ಣಿನ ಅಡಿ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಸ್ಥಳೀಯರ ಸಹಾಯದಿಂದ ಮಣ್ಣು ಸರಿಸಿ ಮೃತ ದೇಹವನ್ನು ಮೇಲೆ ಎತ್ತಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Continue Reading

ಮಳೆ

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

Karnataka Weather Forecast: ಭಾರಿ ಮಳೆಗೆ (Rain News) ಗುಡ್ಡ ಕುಸಿದಿದೆ. ಪರಿಣಾಮ ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಈ ಮೂಲಕ ಕರಾವಳಿಯಲ್ಲಿ ಮಳೆಗೆ ಮೊದಲ ಬಲಿಯಾಗಿದೆ.

VISTARANEWS.COM


on

By

karnataka Weather Forecast
Koo

ಉಡುಪಿ: ಕರಾವಳಿಯಲ್ಲಿ ಭಾರಿ ಮಳೆಗೆ (Karnataka Weather) ಮೊದಲ (Rain News) ಬಲಿಯಾಗಿದೆ. ಉಡುಪಿಯ ಕೊಲ್ಲೂರು ಗ್ರಾಮದ ಸೊಸೈಟಿ ಗುಡ್ಡೆ ಎಂಬಲ್ಲಿ ಗುಡ್ಡ ಕುಸಿದು ಮಹಿಳೆ ಮೃತಪಟ್ಟಿದ್ದಾರೆ. ಹಳ್ಳಿ ಬೇರು ನಿವಾಸಿ ಅಂಬಾ (45) ಮೃತಪಟ್ಟವರು.

ಏಕಾಏಕಿ ಗುಡ್ಡ ಕುಸಿದು ಬಿದ್ದ ಪರಿಣಾಮ ಅಂಬಾ ಮಣ್ಣಿನ ಅಡಿ ಸಿಲುಕಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಸ್ಥಳೀಯರ ಸಹಾಯದಿಂದ ಮಣ್ಣು ಸರಿಸಿ ಮೃತ ದೇಹವನ್ನು ಮೇಲೆ ಎತ್ತಲಾಗಿದೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಆಗುಂಬೆಯಲ್ಲಿ 25 ಸೆಂ.ಮೀ ಮಳೆ ದಾಖಲು

ನೈರುತ್ಯ ಮಾನ್ಸೂನ್ ಕರಾವಳಿಯಲ್ಲಿ ಸಕ್ರಿಯವಾಗಿದ್ದರೆ, ಒಳಭಾಗದಲ್ಲಿ ಸಾಮಾನ್ಯವಾಗಿತ್ತು. ಆಗುಂಬೆ (ಶಿವಮೊಗ್ಗ ಜಿಲ್ಲೆ) 25, ಗೇರ್ಸೊಪ್ಪ (ಉತ್ತರ ಕನ್ನಡ ಜಿಲ್ಲೆ) 24, ಸಿದ್ದಾಪುರ (ಉಡುಪಿ ಜಿಲ್ಲೆ) 23, ಕಮ್ಮರಡಿ (ಚಿಕ್ಕಮಗಳೂರು) 20 ಸೆಂ.ಮೀ ಮಳೆಯಾಗಿತ್ತು. ಲಿಂಗನಮಕ್ಕಿ (ಶಿವಮೊಗ್ಗ ಜಿಲ್ಲೆ) 19, ಕದ್ರಾ (ಉತ್ತರ ಕನ್ನಡ ಜಿಲ್ಲೆ) 15, ಸಿದ್ದಾಪುರ (ಉತ್ತರ ಕನ್ನಡ ಜಿಲ್ಲೆ) 15, ಶೃಂಗೇರಿ (ಜಿಲ್ಲೆ ಚಿಕ್ಕಮಗಳೂರು) 15, ಕುಂದಾಪುರ (ಉಡುಪಿ ಜಿಲ್ಲೆ) 13, ಮಂಕಿ (ಉತ್ತರ ಕನ್ನಡ ಜಿಲ್ಲೆ) 12 ಸೆಂ.ಮೀ ಮಳೆಯಾಗಿತ್ತು.

ಇದನ್ನೂ ಓದಿ: Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

ಚಾರ್ಮಾಡಿ ಹೆದ್ದಾರಿ ತಡೆಗೋಡೆಗಳಲ್ಲಿ ಬಿರುಕು

ಚಿಕ್ಕಮಗಳೂರಿನಲ್ಲಿ ಮಳೆ ಮುಂದುವರಿದ್ದು, ಚಾರ್ಮಾಡಿ ಹೆದ್ದಾರಿಯ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದೆ. ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ರಸ್ತೆಯಲ್ಲಿ ಅಲ್ಲಲ್ಲಿ ತಡೆಗೋಡೆಗಳಲ್ಲಿ ಬಿರುಕು ಬಿಟ್ಟಿದ್ದು, ಅಪಾಯಕ್ಕೆ ಆಹ್ವಾನಿಸುತ್ತಿದೆ. ಹೊಸ ಕಾಮಗಾರಿ ನಡೆದ ಸ್ಥಳದಲ್ಲೇ ಬಿರುಕು ಕಾಣಿಸಿಕೊಂಡಿದೆ. ಮಳೆ ಹಾಗೂ ಮಂಜಿನ ನಡುವೆ ರಸ್ತೆ ಬಿರುಕು ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ. ರಸ್ತೆಗೆ ಕೋಟ್ಯಂತರ ರೂಪಾಯಿ ವ್ಯಯಿಸಿದರೂ ಪ್ರಯೋಜನವಾಗಿಲ್ಲ. ಕಳಪೆ ಗುಣಮಟ್ಟದ ಕಾಮಗಾರಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇತ್ತ ರಾತ್ರಿಯಿಡೀ ಸುರಿದ ಮಳೆಗೆ ಸೇತುವೆ ಮೇಲೆ ನೀರು ಉಕ್ಕಿ ಹರಿಯುತ್ತಿದೆ. ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಬಾಳೆ ಗದ್ದೆ ಬಿಳ್ಳೂರು ಗ್ರಾಮದಲ್ಲಿ ಬಿಳ್ಳೂರು- ಮುಲ್ಲರ ಹಳ್ಳಿ ಸೇರಿ ಹಲವು ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ. ಸೇತುವೆ ಮೇಲೆ ನೀರು ನದಿಯಂತೆ ಉಕ್ಕಿ ಹರಿಯುತ್ತಿದೆ. ಒಂದು ಕಡೆಯಿಂದ ಮತ್ತೊಂದು ಕಡೆ ಹೋಗಲು ಗ್ರಾಮಸ್ಥರು ಪರದಾಟ ಅನುಭವಿಸುತ್ತಿದ್ದು, ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಸ್ಥಗಿತಗೊಂಡಿದೆ.

ಶೃಂಗೇರಿಯ ಕೆರೆಕಟ್ಟೆ ಘಟ್ಟಪ್ರದೇಶದಲ್ಲಿ ಭಾರೀ ಮಳೆಯಿಂದಾಗಿ ಶೃಂಗೇರಿ ಶಾರದಾಂಭೆ ತಟದಲ್ಲಿ ತುಂಗಾ ನದಿ ದೊಡ್ಡ ಪ್ರಮಾಣದಲ್ಲಿ ಹರಿಯುತ್ತಿದೆ. ತುಂಗಾ ನದಿ ಇಕ್ಕೆಲಗಳ ತೋಟಗಳು ಜಲಾವೃತ‌ವಾಗುವ ಸಾಧ್ಯತೆ ಇದೆ. ಇತ್ತ ಅಪಾಯದ ಮಟ್ಟ ಮೀರಿದ ಭದ್ರಾ ನದಿಯಿಂದಾಗಿ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗುವ ಹಂತ ತಲುಪಿದೆ.

ಹೆಬ್ಬಾಳೆ ಸೇತುವೆಯ ಮೇಲ್ಪದರಕ್ಕೆ ಭದ್ರಾ ನೀರು ಅಪ್ಪಳಿಸುತ್ತಿದೆ. ಸೇತುವೆ ಮುಳುಗಡೆಯಾದರೆ ಹತ್ತಾರು ಹಳ್ಳಿಗಳ ಸಂಪರ್ಕ ಬಂದ್ ಆಗಲಿದೆ. ಕಳಸ-ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದ ಮಾರ್ಗವೂ ಬಂದ್ ಆಗಲಿದೆ. ಹೀಗಾಗಿ ಮುಂಜಾಗೃತ ಕ್ರಮವಾಗಿ ಪ್ರವಾಸಿಗರು ಹಾಗೂ ಸ್ಥಳೀಯರ ಓಡಾಟಕ್ಕೆ ತಡೆಹಿಡಿಯಲಾಗಿದೆ. ಯಾವುದೇ ಕ್ಷಣದಲ್ಲಾದರೂ ಸೇತುವೆ ಮೇಲೆ ನೀರು ಉಕ್ಕುವ ಸಾಧ್ಯತೆ ಇದೆ. ಹೀಗಾಗಿ ಸ್ಥಳದಲ್ಲಿಯೇ ಕಳಸ ಪೊಲೀಸರು ಮೊಕ್ಕಾಂ ಹೂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

Karnataka Weather Forecast : ಅಬ್ಬರಿಸುತ್ತಿರುವ ಮಳೆಯಿಂದಾಗಿ ನಾನಾ ಅವಾಂತರವೇ ಸೃಷ್ಟಿ ಆಗಿದೆ. ಮಳೆಗೆ (Rain News) ಲಾರಿಗಳ ನಡುವೆ ಮುಖಾಮುಖಿ (Road Accident) ಡಿಕ್ಕಿಯಾದರೆ, ಮತ್ತೊಂದು ಕಡೆ ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್‌ ಮರ ಬಿದ್ದು ಜಖಂಗೊಂಡಿದೆ. ಹಲವಾರು ಗ್ರಾಮಗಳು ನೀರಿನಿಂದ ಮುಳುಗಡೆಯಾಗಿದೆ.

VISTARANEWS.COM


on

By

karnataka Rain
Koo

ಬೆಳಗಾವಿ/ಶಿವಮೊಗ್ಗ/ಉಡುಪಿ: ಧಾರಾಕಾರವಾಗಿ ಸುರಿಯುತ್ತಿರುವ ಮಳೆಯು (Karnataka rain) ಅವಾಂತರವನ್ನೇ (Rain Effect) ಸೃಷ್ಟಿಸಿದೆ. ತೀವ್ರ ಮಳೆಯಿಂದಾಗಿ ಚಾಲಕರ ನಿಯಂತ್ರಣ ತಪ್ಪಿ ಲಾರಿಗಳ ಮಧ್ಯೆ ಮುಖಾಮುಖಿ (Road Accident) ಡಿಕ್ಕಿಯಾಗಿದೆ. ಬೆಳಗಾವಿ ತಾಲೂಕಿನ ಹಲಗಾ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಲಾರಿ ಚಾಲಕರಿಬ್ಬರಿಗೂ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಡಿಕ್ಕಿಯ ರಭಸಕ್ಕೆ ಲಾರಿಗಳು ಸಂಪೂರ್ಣವಾಗಿ ನುಜ್ಜು ಗುಜ್ಜಾಗಿವೆ. ಹಿರೇಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Karnataka Rain

ಮಳೆಗೆ ಕಾರಿನ ಮೇಲೆ ಬಿದ್ದ ಬೃಹತ್‌ ಮರ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಭಾಗದಲ್ಲಿ ಭಾರೀ ಗಾಳಿಯೊಂದಿಗೆ ಮಳೆಯಾಗತ್ತಿದೆ. ಪರಿಣಾಮ ಚಲಿಸುತ್ತಿದ್ದ ಓಮಿನಿ ಕಾರಿನ ಮೇಲೆ ಬೃಹತ್ ಮರ ಬಿದ್ದಿದೆ. ಆಗುಂಬೆ ಘಾಟಿಯ ನಾಲ್ಕನೇ ತಿರುವಿನಲ್ಲಿ ಘಟನೆ ನಡೆದಿದೆ. ಅದೃಷ್ಟವಶಾತ್ ಓಮಿನಿಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಓಮಿನಿ ಚಾಲಕನಿಗೆ ಸಣ್ಣಪುಟ್ಟ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಾರಿನ ಮೇಲೆ ಮರ ಬಿದ್ದ ಹಿನ್ನೆಲೆಯಲ್ಲಿ ಆಗುಂಬೆ ಘಾಟಿಯಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

karnataka Rain

ಉಡುಪಿಯಲ್ಲಿ ಮುಳುಗಡೆಯಾದ ಗ್ರಾಮಗಳು

ಪ್ರತಿ ವರ್ಷದಂತೆ ಈ ವರ್ಷವೂ ಉಡುಪಿಯ ಬೈಂದೂರು ತಾಲೂಕಿನಲ್ಲಿ ನೆರೆಹಾವಳಿ ಸೃಷ್ಟಿಯಾಗಿದೆ. ತಾಲೂಕಿನ ನಾವುಂದ, ಬಡಾಕೇರಿ, ಮರವಂತೆ, ಸಾಲ್ಬುಡ, ಅರೆಹೊಳೆ ಕೋಣ್ಕಿ ಹಾಗೂ ಕುದ್ರು ಚಿಕ್ಕಳ್ಳಿ ಪಡುಕೋಣೆ ಭಾಗದಲ್ಲಿ ನೆರೆಹಾವಳಿಗೆ ತುತ್ತಾಗಿವೆ.

ಸ್ಥಳೀಯ ಯುವಕರು ನೆರೆಹಾವಳಿ ಪೀಡಿತ ಪ್ರದೇಶಗಳಿಗೆ ತೆರಳಿ ಅಗತ್ಯ ನೆರವು ನೀಡುತ್ತಿದ್ದಾರೆ. ಮೂರು ದೋಣಿಗಳನ್ನು ಬಳಸಿ ರಕ್ಷಣಾ ಕಾರ್ಯದ ಜತೆಗೆ ಅಗತ್ಯ ವಸ್ತು ಪೂರೈಸುತ್ತಿದ್ದಾರೆ. ಹೆಚ್ಚುವರಿಯಾಗಿ ಬೈಂದೂರು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನೆರೆಪೀಡಿತ ಪ್ರದೇಶಕ್ಕೆ ಕುಂದಾಪುರ ಸಹಾಯಕ ಕಮೀಶನರ್ ರಶ್ಮಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

ಮನೆಗಳು ಜಲಾವೃತ

ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆಯಿಂದಾಗಿ ಅಂಕೋಲಾ ತಾಲೂಕಿನ ಬಿಳೆಹೊಂಯ್ಗಿ, ಮಂಜಗುಣಿ ಸೇರಿದಂತೆ 5ಕ್ಕೂ ಹೆಚ್ಚು ಗ್ರಾಮಗಳಿಗೆ ನೀರು ನುಗ್ಗಿದೆ. ಹೊನ್ನೆಬೈಲ್ ಗ್ರಾಮದಲ್ಲಿ 20 ಮನೆಗಳು ಜಲಾವೃತಗೊಂಡಿದೆ. ಅಂಕೋಲಾ ತಾಲೂಕಿನ 5 ಗ್ರಾಮಗಳಲ್ಲಿ ರಸ್ತೆ ನೀರಿನಿಂದ ಮುಳುಗಿದೆ. ಹೀಗಾಗಿ ಬಿಳೆಹೊಂಯ್ಗಿ, ಹೊನ್ನೆಬೈಲು, ಶಿಂಗನಮಕ್ಕಿ, ಮಂಜಗುಣಿ ಶಾಲೆಗಳಲ್ಲಿ ಕಾಳಜಿ ಕೇಂದ್ರವನ್ನು ಜಿಲ್ಲಾಡಳಿತ ತೆರೆದಿದೆ. ನೆರೆ ಪರಿಸ್ಥಿತಿ ಹಿನ್ನೆಲೆಯಲ್ಲಿ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

karnataka rain

50ಕ್ಕೂ ಅಧಿಕ ನಿವಾಸಿಗಳು ಕಾಳಜಿ ಕೇಂದ್ರಕ್ಕೆ ರವಾನೆಯಾಗಿದ್ದಾರೆ. ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ನದಿ, ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿದೆ. ವರುಣನ ಅಬ್ಬರಕ್ಕೆ ತಗ್ಗು ಪ್ರದೇಶದ ನಿವಾಸಿಗಳಲ್ಲಿ ಆತಂಕ ಹೆಚ್ಚಿದೆ. ಇತ್ತ ಭಟ್ಕಳದಲ್ಲೂ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನೀರು ನಿಂತು ಹೆದ್ದಾರಿಯಲ್ಲಿ ಸಂಚಾರ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಳೆ ಹಿನ್ನಲೆ ಭಟ್ಕಳ ರಂಗಿನಕಟ್ಟೆ ಪ್ರದೇಶ ಹೊಳೆಯಂತಾಗಿದೆ. ಭಟ್ಕಳ ತಹಸೀಲ್ದಾರ ನಾಗರಾಜ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪುರಸಭಾ ಸಿಬ್ಬಂದಿ ಚರಂಡಿಯಲ್ಲಿ ತುಂಬಿರುವ ಮಣ್ಣು, ಕಲ್ಲನ್ನು ತೆರವುಗೊಳಿಸುತ್ತಿದ್ದಾರೆ. ಪಟ್ಟಣದ ಜಾಮೀಯಾಬಾದ್‌ ನಲ್ಲಿಯೂ ಮನೆಗಳಿಗೆ ನೀರು ನುಗ್ಗಿದೆ. ಕೋಗ್ತಿ ರೋಡ್, ಡೊಂಗರಪಳ್ಳಿ, ಆಝಾದ್‌ನಗರ, ಕಾರಗದ್ದೆ ರಸ್ತೆ ಜಲಾವೃತಗೊಂಡಿದೆ.

ಉಡುಪಿಯಲ್ಲಿ ಉಕ್ಕಿಹರಿದ ಮಡಿಸಾಲು ಹೊಳೆ

ಬ್ರಹ್ಮಾವರ ತಾಲೂಕಿನ ಆಲೂರು ಬಳಿ ಮಡಿಸಾಲು ಹೊಳೆಯು ಉಕ್ಕಿಹರಿದಿದೆ. ಆರೂರು- ಬೆಳ್ಮಾರು ಗ್ರಾಮದ ಮಧ್ಯ ಹರಿಯಲಿದ್ದು, ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನೆರೆಹಾವಳಿ ಸೃಷ್ಟಿಯಾಗಿದೆ. ಕೃಷಿಕರಿಗೆ ಜೀವನದಿಯಾಗಿದ್ದ ಮಡಿಸಾಲು ಹೊಳೆ ಉಕ್ಕಿ ಹರಿಯುತ್ತಿದೆ. ಇದರಿಂದಾಗಿ ಹೊಳೆಯ ಪಕ್ಕದ ಎಕರೆಗಟ್ಟಲೆ ಕೃಷಿ ಭೂಮಿ ಜಲಾವೃತಗೊಂಡಿದೆ. ಕೆಲವು ದಿನಗಳ ಹಿಂದೆಯಷ್ಟೆ ಭತ್ತದ ನಾಟಿ ಮಾಡಿ ಮಾಡಿದ್ದ ಪ್ರದೇಶದಲ್ಲಿ ಈಗ ನೆರೆಹಾವಳಿ ಸೃಷ್ಟಿಯಾಗಿದೆ. ನೆರೆಯಿಂದಾಗಿ ಆರೂರು ಬೆಳ್ಮಾರು ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಮತ್ತೆ ಮಳೆ ಮುಂದುವರಿದರೆ ಕಿರು ಸೇತುವೆ ಮುಳುಗಡೆಯಾಗುವ ಭೀತಿ ಇದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Physical Abuse
ಬೆಂಗಳೂರು5 mins ago

Physical Abuse : ಇವಳೇನು ಶಿಕ್ಷಕಿಯೋ ಕಾಮುಕಿಯೋ; ಬಾಲಕಿಯ ಖಾಸಗಿ ಅಂಗಾಂಗ ಮುಟ್ಟಿ ವಿಕೃತಿ

Team India
ಕ್ರಿಕೆಟ್11 mins ago

Team India: ವಿಶ್ವಕಪ್ ಟ್ರೋಫಿ ಮೇಲೆ ಕಾಲಿಡುವುದು ನಮ್ಮ ಸಂಸ್ಕೃತಿಯಲ್ಲ ಎಂದು ತೋರಿಸಿಕೊಟ್ಟ ಟೀಮ್​ ಕ್ರಿಕೆಟಿಗರು

ಉದ್ಯೋಗ18 mins ago

Job Alert: ಪಂಜಾಬ್ ನ್ಯಾಷನಲ್ ಬ್ಯಾಂಕ್ ನಲ್ಲಿ 2,700 ಅಪ್ರೆಂಟಿಸ್ ಶಿಪ್ ಹುದ್ದೆ; ಆಯ್ಕೆಯಾಗಲು ಏನು ಮಾಡಬೇಕು? ವಿಸ್ತೃತ ಮಾಹಿತಿ

Actor Darshan SIM Secret Revealed investigation start
ಸ್ಯಾಂಡಲ್ ವುಡ್19 mins ago

Actor Darshan: ದರ್ಶನ್ ಬಳಸುತ್ತಿದ್ದ ಸಿಮ್ ಸೀಕ್ರೆಟ್‌ ರಿವೀಲ್; ಆಪ್ತರಿಗೆ ತಟ್ಟಿದೆ ವಿಚಾರಣೆ ಬಿಸಿ!

Brain-Eating Mmoeba
ಆರೋಗ್ಯ27 mins ago

Brain-Eating Amoeba: ಮೆದುಳು ತಿನ್ನುವ ಅಮೀಬಾಕ್ಕೆ ಮತ್ತೊಂದು ಬಲಿ; 2 ತಿಂಗಳ ಅಂತರದಲ್ಲಿ 3ನೇ ಪ್ರಕರಣ

Self Harming in bengaluru
ಬೆಂಗಳೂರು39 mins ago

Self Harming : ವರದಕ್ಷಿಣೆ ಟಾರ್ಚರ್‌; ಫ್ಯಾನಿಗೆ ನೇಣು ಬಿಗಿದುಕೊಂಡು ಟೆಕ್ಕಿ ಸೂಸೈಡ್‌

salary hike cm siddaramaiah
ಪ್ರಮುಖ ಸುದ್ದಿ41 mins ago

Salary Hike: ಸರ್ಕಾರಿ ನೌಕರರ ವೇತನ ಏರಿಕೆ ಸದ್ಯಕ್ಕಿಲ್ಲ: ನೌಕರರ ಸಂಬಳ ನುಂಗಿದ ʼಗ್ಯಾರಂಟಿʼ!

Chaithra J Achar Kittale Roopanthara Raj B Shetty out
ಸ್ಯಾಂಡಲ್ ವುಡ್1 hour ago

Chaithra J Achar: ʻರೂಪಾಂತರʼ ಸಿನಿಮಾದ ಹಾಡು ರಿಲೀಸ್‌; ಇಳಕಲ್‌ ಸೀರೆಯಲ್ಲಿ ಮಿಂಚಿದ ಚೈತ್ರಾ ಆಚಾರ್!

UK Election
ವಿದೇಶ1 hour ago

UK Election: ಯುಕೆ ಎಲೆಕ್ಷನ್‌ನಲ್ಲಿ ಹೀನಾಯ ಸೋಲು; ರಿಶಿ ಸುನಕ್‌ ಫಸ್ಟ್‌ ರಿಯಾಕ್ಷನ್‌

Team India
ಕ್ರೀಡೆ1 hour ago

Team India: ಟೀಮ್​ ಇಂಡಿಯಾ ಬಳಿ ಇರುವುದು ನಕಲಿ ವಿಶ್ವಕಪ್​ ಟ್ರೋಫಿ; ಅಸಲಿ ಟ್ರೋಫಿ ಎಲ್ಲಿದೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast Rain
ಮಳೆ5 hours ago

Karnataka Weather : ಕರಾವಳಿ, ಮಲೆನಾಡಿನಲ್ಲಿ ಮಳೆ ಅಬ್ಬರ; ಇಲ್ಲೆಲ್ಲ ಕಾದಿದೆ ಗಂಡಾಂತರ

karnataka Weather Forecast
ಮಳೆ17 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ19 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ20 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ21 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ22 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ23 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ1 day ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ3 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ4 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ಟ್ರೆಂಡಿಂಗ್‌