ರಿಪ್ಪನ್‌ಪೇಟೆ: ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು (Talent) ಹೊರತರಲು ಪ್ರತಿಭಾ ಕಾರಂಜಿಯಂತಹ (Pratibha Karanji) ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್ ಕೃಷ್ಣಮೂರ್ತಿ ಹೇಳಿದರು.
ಪಟ್ಟಣದ ಕೋಡೂರು ಗ್ರಾ.ಪಂ ವ್ಯಾಪ್ತಿಯ ಕರಿಗೆರಸು ಸ.ಹಿ.ಪ್ರಾ ಶಾಲೆಯಲ್ಲಿ ಶುಕ್ರವಾರ ಕೋಟೆತಾರಿಗ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ತಾಲೂಕಿನ ಒಟ್ಟು 19 ಕ್ಲಸ್ಟರ್‌ನಲ್ಲಿ ಎಲ್ಲೂ ಮಾಡದ ಅದ್ಧೂರಿ ಕಾರ್ಯಕ್ರಮ ಈ ಗ್ರಾಮದಲ್ಲಿ ನಡೆಯುತ್ತಿದೆ. ಶಾಲೆಯ ಸುತ್ತಮುತ್ತಲಿನ ವಾತಾವರಣ ಸುಂದರವಾಗಿದ್ದು ಸ್ಥಳೀಯರ ಸಹಕಾರದಿಂದ ತಳಿರು ತೋರಣಗಳಿಂದ ಶೃಂಗಾರ ಮಾಡಿರುವುದು ಇಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ ಎಂದು ತಿಳಿಸಿದರು.
ಇದನ್ನೂ ಓದಿ: SIIMA 2023: ದುಬೈನಲ್ಲಿ ಸೈಮಾ ಅವಾರ್ಡ್; ನಾಮಿನೇಟ್ ಆದ ಕನ್ನಡ ಸಿನಿಮಾಗಳ ಕಂಪ್ಲೀಟ್ ಲಿಸ್ಟ್!
ಸರ್ಕಾರದ ಜತೆಗೆ ಸ್ಥಳೀಯ ಗ್ರಾಪಂ ಮತ್ತು ಗ್ರಾಮಸ್ಥರ ಸಹಕಾರ ಇದ್ದರೆ ಶಾಲಾಭಿವೃದ್ದಿ ಹೊಂದಲು ಸಾಧ್ಯವೆಂದ ಅವರು, ಹೊಸನಗರ ಶೈಕ್ಷಣಿಕವಾಗಿ ಮುಂದುವರೆದ ತಾಲೂಕು. ಈ ಬಾರಿ ಶೇ. 92.05 ಫಲಿತಾಂಶ ಬಂದಿದೆ. 17 ಶಾಲೆಗಳು ಶೇ.100 ಫಲಿತಾಂಶ ಪಡೆದಿವೆ. 20 ಕ್ಕಿಂತ ಹೆಚ್ಚು ಶಾಲೆಗಳು 90% ಫಲಿತಾಂಶ ಪಡೆದಿವೆ ಎಂದರು.
ಕೋಡೂರು ಗ್ರಾಪಂ ಅಧ್ಯಕ್ಷ ಉಮೇಶ್ ಮತ್ತು ಚಿಕ್ಕಜೇನಿ ಗ್ರಾಪಂ ಅಧ್ಯಕ್ಷ ರಾಜು ಎನ್.ಪಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಬಳಿಕ ಕೋಡೂರು ಗ್ರಾ.ಪಂ ಮಾಜಿ ಅಧ್ಯಕ್ಷ ಜಯಂತ್ , ಕೋಡೂರು ಗ್ರಾಪಂ ಸದಸ್ಯರಾದ ಶೇಖರಪ್ಪ, ಮಂಜಪ್ಪ, ಜಯಪ್ರಕಾಶ್ ಶೆಟ್ಟಿ ಹಾಗೂ ಚಿಕ್ಕಜೇನಿ ಗ್ರಾಪಂ ಸದಸ್ಯರಾದ ವೆಂಕಟಾಚಲ, ಶಾರದಮ್ಮ, ಇತರರು ಮಾತನಾಡಿದರು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ವೀರಭದ್ರಪ್ಪ ಅಧ್ಯಕ್ಷತೆ ವಹಿಸಿದ್ದರು.
ಇದನ್ನೂ ಓದಿ: Ganesh Chaturthi: ರಾಜ್ಯಾದ್ಯಂತ ಪಿಒಪಿ ಗಣೇಶ ಮೂರ್ತಿ ಉತ್ಪಾದನೆ, ಮಾರಾಟ ನಿಷೇಧಿಸಿ ಸರ್ಕಾರ ಆದೇಶ
ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯರಾದ ಚಂದ್ರಕಲಾ, ಗ್ರಾಪಂ ಮಾಜಿ ಸದಸ್ಯೆ ನಾಗವೇಣಿ ವಸಂತ್, ಶಿಕ್ಷಣ ಇಲಾಖೆಯ ಕರಿಬಸಪ್ಪ, ಜಗದೀಶ್ ಕಾಲಿನಲ್ಲಿ, ಬಸವಣ್ಯಪ್ಪ, ಮಾಲ್ತೇಶ್, ಶಿವಪ್ಪ ಎಚ್.ಸಿ, ಧರುಣೇಶ್, ಹಾಗೂ ಮತ್ತಿತರರು ಉಪಸ್ಥಿತರಿದ್ದರು.