Site icon Vistara News

Yuva Nidhi Scheme: ಯುವನಿಧಿಗೆ ಅದ್ಧೂರಿ ಚಾಲನೆ; ನಿರುದ್ಯೋಗಿ ಯುವಜನತೆ ಖಾತೆ 3000 ರೂ. ಜಮೆ

Yuva Nidhi Scheme launch at shivamogga by CM Siddaramaiah

ಶಿವಮೊಗ್ಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ 5ನೇ ಗ್ಯಾರಂಟಿ (Congress Guarantee Scheme) ಘೋಷಣೆಯಾಗಿರುವ ʼಯುವನಿಧಿʼ (Yuva Nidhi Scheme) ಯೋಜನೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಚಾಲನೆ ನೀಡಿದರು. ಈ ಮೂಲಕ ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಮಾಡಲಾಯಿತು.

ಶಿವಮೊಗ್ಗದ ಫ್ರೀಡಂ ಪಾರ್ಕ್‌ನಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮಕ್ಕೆ ತೆಂಗಿನ ಹಿಂಗಾರನ್ನು ಅರಳಿಸುವ ಮೂಲಕ ಚಾಲನೆ ನೀಡಲಾಗಿದ್ದು, ನಿರುದ್ಯೋಗಿ ಪದವೀಧರ ಹಾಗೂ ಡಿಪ್ಲೊಮಾ ಪದವೀಧರರಿಗೆ ಪ್ರತಿ ತಿಂಗಳು ಯುವನಿಧಿ ಯೋಜನೆ ಅಡಿ ಭತ್ಯೆ ಸಂದಾಯವಾಗಿದೆ. ಈಗ ನೋಂದಣಿ ಮಾಡಿಕೊಂಡ ಪದವೀಧರರಿಗೆ ಪ್ರತಿ ತಿಂಗಳು 3000 ರೂಪಾಯಿ ನೀಡಿದರೆ, ಡಿಪ್ಲೊಮಾ ಪದವೀಧರರಿಗೆ 1500 ರೂಪಾಯಿಯನ್ನು ಜಮೆ ಮಾಡಲಾಯಿತು.

ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಉಡುಪಿ ಹಾಗೂ ಹಾವೇರಿ ಜಿಲ್ಲೆಗಳಿಂದ ಸುಮಾರು 1 ಲಕ್ಷಕ್ಕೂ ಹೆಚ್ಚಿನ ಫಲಾನುಭವಿಗಳು ಹಾಗೂ ಅಷ್ಟೇ ಸಂಖ್ಯೆಯ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು

ಯುವ ನಿಧಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಯುವಕ – ಯುವತಿಯರು ಸಂಗೀತ ಕಾರ್ಯಕ್ರಮದಲ್ಲಿ ಸಖತ್ ಸ್ಟೆಪ್ ಹಾಕಿದರು. ಕಾರ್ಯಕ್ರಮಕ್ಕೂ ಮುನ್ನ ಏರ್ಪಡಿಸಲಾಗಿದ್ದ ಸಂಗೀತ ಕಾರ್ಯಕ್ರಮದಲ್ಲಿ ಹಾಡು, ವಯೋಲಿನ್‌ ವಾದನವು ಯುವಕರನ್ನು ಆಕರ್ಷಿಸಿದೆ. ಈ ವೇಳೆ ವೇದಿಕೆ ಮುಂಭಾಗದಲ್ಲಿ ವಿದ್ಯಾರ್ಥಿಗಳು ಕುಣಿದು ಕುಪ್ಪಳಿಸಿದ್ದಾರೆ.

ಏನಿದು ಯುವನಿಧಿ ಯೋಜನೆ?

ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಯುವನಿಧಿ ಯೋಜನೆಯೂ ಒಂದಾಗಿದೆ. ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು ಸರ್ಕಾರ ಜಾರಿಗೊಳಿಸಿದೆ. ಇದೀಗ ಐದನೇ ಗ್ಯಾರಂಟಿ ಯುವನಿಧಿ ಜಾರಿಗೊಳಿಸಲಿದೆ. ಈ ಯೋಜನೆಯ ಪ್ರಕಾರ ನಿರುದ್ಯೋಗಿ ಪದವೀಧರ ಹಾಗೂ ಡಿಪ್ಲೊಮಾ ಪದವೀಧರರಿಗೆ ಪ್ರತಿ ತಿಂಗಳು ಭತ್ಯೆ ಸಿಗಲಿದೆ. ಪದವೀಧರರಿಗೆ ಪ್ರತಿ ತಿಂಗಳು 3000 ರೂಪಾಯಿ ನೀಡಿದರೆ, ಡಿಪ್ಲೊಮಾ ಪದವೀಧರರಿಗೆ 1500 ರೂಪಾಯಿ ನೀಡಲಾಗುತ್ತದೆ. ಪದವೀಧರರಿಗೆ ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷದವರೆಗೆ ನೀಡಲಾಗುತ್ತದೆ.

ಷರತ್ತುಗಳು ಏನು?

ಅರ್ಜಿ ಸಲ್ಲಿಸಲು ಯಾವ ದಾಖಲೆ ಬೇಕು?

ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ಬುಕ್, ಎಸ್‍ಎಸ್‍ಎಲ್ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಪದವಿ ಪ್ರಮಾಣಪತ್ರಗಳು ಹಾಗೂ ರೇಷನ್ ಕಾರ್ಡ್ ದಾಖಲೆಗಳು ಬೇಕು.

ಎಲ್ಲಿ ಅರ್ಜಿ ಸಲ್ಲಿಸಬಹುದು?

ಕರ್ನಾಟಕ ಒನ್, ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ, ಸೇವಾಸಿಂಧು ಪೋರ್ಟಲ್‌ಗಳಲ್ಲಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಯಾರು ಅರ್ಹರಲ್ಲ?

Exit mobile version