ಶಿವಮೊಗ್ಗ: ಗಣಪತಿ ವಿಸರ್ಜನೆ (Ganesh immersion) ಮೆರವಣಿಗೆ ವೇಳೆ ಮಸೀದಿ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಕೋಮು ಉದ್ವಿಗ್ನತೆ (Communal Tension) ಸೃಷ್ಟಿಯಾಗಿ ಪ್ರತಿಭಟನೆ ನಡೆಸಿದ ಘಟನೆ ಶಿವಮೊಗ್ಗ ಜಿಲ್ಲೆಯ (Shivamogga news) ಹೊಳೆಹೊನ್ನೂರಿನಲ್ಲಿ ನಿನ್ನೆ ರಾತ್ರಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನಲ್ಲಿ ಗಲಾಟೆ ಸೃಷ್ಟಿಯಾಯಿತು. ಹೊಳೆಹೊನ್ನೂರಿನ ಚನ್ನಗಿರಿ ರಸ್ತೆಯಲ್ಲಿರುವ ಮಸೀದಿ ಮುಂದೆ ಸಾಗುತ್ತಿದ್ದ ಗಣಪತಿ ಮೆರವಣಿಗೆಯ ವೇಳೆ ಕೆಲ ಯುವಕರು ಪಟಾಕಿ ಹಚ್ಚಿದರು. ಮಸೀದಿ ಎದುರು ಪಟಾಕಿ ಹಚ್ಚಿದ್ದಕ್ಕೆ ಇನ್ನೊಂದು ಕೋಮಿನ ಯುವಕರು ಆಕ್ರೋಶ ವ್ಯಕ್ತಪಡಿಸಿದರು.
ಈ ಘಟನೆ ಖಂಡಿಸಿ ಯುವಕರು ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಅಡಿಷನಲ್ ಎಸ್‌ಪಿ ಅನಿಲ್ ಭೂಮರೆಡ್ಡಿ, ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದ ಪೂರ್ಯನಾಯ್ಕ ಭೇಟಿ ನೀಡಿ, ಪ್ರತಿಭಟನಾಕಾರರ ಜೊತೆ ಮಾತುಕತೆ ನಡೆಸಿದರು. ಮಸೀದಿ ಎದುರು ಪಟಾಕಿ ಹಚ್ಚಿ ಅಶಾಂತಿಗೆ ಕಾರಣರಾದವರ ಬಂಧನಕ್ಕೆ ಮುಸ್ಲಿಂ ಮುಖಂಡರು ಆಗ್ರಹಿಸಿದರು. ನಂತರ ಶಾಸಕಿ, ಅಡಿಷನಲ್ ಎಸ್‌ಪಿ ಪ್ರತಿಭಟನಾಕಾರರ ಮನವೊಲಿಸಿದರು.
ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಡಿಜೆ ಸದ್ದಿಗೆ ಯುವಕ ಸಾವು
ವಿಜಯನಗರ: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಹೃದಯಾಘಾತದಿಂದ (Heart Attack) ಯುವಕ ಮೃತಪಟ್ಟಿರುವ ಘಟನೆ ಹಗರಿಬೊಮ್ಮನಹಳ್ಳಿ ಪಟ್ಟಣದ ಭೋವಿ ಕಾಲನಿಯಲ್ಲಿ ಶುಕ್ರವಾರ ನಡೆದಿದೆ. ಮೆರವಣಿಗೆ ವೇಳೆ ಡಿಜೆ ಸದ್ದಿಗೆ ನೂರಾರು ಯುವಕರು ಕುಣಿಯುತ್ತಿದ್ದರು. ಈ ವೇಳೆ ಯುವಕನಿಗೆ ಹೃದಯಾಘಾತವಾಗಿದೆ.
ಜಮೀರ್ ಪಿಂಜಾರ (22) ಮೃತ ಯುವಕ. ಮೆರವಣಿಗೆಯಲ್ಲಿ ಏಕಾಏಕಿ ಯುವಕ ಕುಸಿದು ಬಿದ್ದ ಹಿನ್ನೆಲೆಯಲ್ಲಿ ತಕ್ಷಣವೇ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಹೃದಯಾಘಾತದಿಂದ ಯುವಕ ಮಾರ್ಗ ಮಧ್ಯದಲ್ಲಿಯೇ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಅತಿಯಾಗಿ ಮದ್ಯ ಸೇವನೆ ಮಾಡಿದ್ದರಿಂದ ಯುವಕ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ಸಾವಿನ ಖಚಿತ ಮಾಹಿತಿ ಲಭ್ಯವಾಗಲಿದೆ. ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದು, ಇನ್ನೂ ಪ್ರಕರಣ ದಾಖಲಾಗಿಲ್ಲ.
ಇದನ್ನೂ ಓದಿ: Shivamogga News: ಶಿವಮೊಗ್ಗದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಗಲಾಟೆ