ಶಿವಮೊಗ್ಗ: ಇಲ್ಲಿನ ಪ್ರಿಯಾಂಕಾ ಲೇಔಟ್ನ ಮೂರನೇ ಕ್ರಾಸ್ ಬಳಿಯ ಮನೆಯೊಂದರಲ್ಲಿ ಮಂಜುಳಾ (೩೦) ಎಂಬ ಗೃಹಿಣಿಯ ಶವ (Crime News) ಪತ್ತೆಯಾಗಿದೆ.
ಮತ್ತೊಂದು ಕಡೆ ಮಂಜುಳಾ ಪತಿ ದಿನೇಶ್ ಕೈ ಕೊಯ್ದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ತುಂಗಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಮಂಜುಳಾ ಮೃತದೇಹವನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಕುಟುಂಬ ಕಲಹದ ಗುಮಾನಿ!
ಈ ಘಟನೆಗೆ ಕುಟುಂಬ ಕಲಹ ಕಾರಣವೆಂದು ಮೇಲ್ನೋಟಕ್ಕೆ ತಿಳಿದು ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಪತಿ – ಪತ್ನಿ ನಡುವೆ ಮಂಗಳವಾರ ರಾತ್ರಿ ಜಗಳ ನಡೆದಿತ್ತು ಎನ್ನಲಾಗಿದೆ. ಇದೇ ವಿಚಾರ ಈ ದುರ್ಘಟನೆಗೆ ಕಾರಣ ಎನ್ನಲಾಗಿದೆ.
ಗೃಹಿಣಿ ಮಂಜುಳಾ ಅವರ ಮೃತದೇಹ ಅಡುಗೆ ಕೋಣೆಯಲ್ಲಿ ಪತ್ತೆಯಾಗಿದ್ದು, ಅವರು ತಾವೇ ಚಾಕುವಿನಿಂದ ಕತ್ತು ಕೊಯ್ದುಕೊಂಡರಾ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: ಬಾಲಕ ಸಾವು, ಮೂವರು ಪ್ರಾಣಾಪಾಯದಿಂದ ಪಾರು