Electric shock : ನಿದ್ದೆಗಣ್ಣಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದ ಯುವಕ ಸ್ಥಳದಲ್ಲೇ ಸಾವು - Vistara News

ಶಿವಮೊಗ್ಗ

Electric shock : ನಿದ್ದೆಗಣ್ಣಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದ ಯುವಕ ಸ್ಥಳದಲ್ಲೇ ಸಾವು

Electric shock : ಮನೆ ಮುಂದಿದ್ದ ಬೇಲಿ ಬಳಿ ಮೂತ್ರ ವಿಸರ್ಜನೆ ಮಾಡಲು ಹೋದ ಯುವಕನಿಗೆ ಕರೆಂಟ್‌ ಶಾಕ್‌ ಹೊಡೆದಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾನೆ.

VISTARANEWS.COM


on

electric Shock Youth dies on the spot after being hit by a broken electric wire
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ವಿದ್ಯುತ್ ತಗುಲಿ (Electric shock) ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಗವಟೂರಿನ ಹಳೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕಾರ್ತಿಕ್‌ .ಎಸ್ (19) ಮೃತ ದುರ್ದೈವಿ.

ಶುಕ್ರವಾರ ಬೆಳಗಿನ ಜಾವ ಮನೆ ಮುಂಭಾಗದ IBEX ಬೇಲಿ ಬಳಿ ಮೂತ್ರ ವಿಸರ್ಜನೆ ಮಾಡುವಾಗ ಕರೆಂಟ್ ಶಾಕ್ ಹೊಡೆದಿದೆ. ಏಕಾಏಕಿ ವಿದ್ಯುತ್ ಪ್ರವಹಿಸಿದ್ದು ಕಾರ್ತಿಕ್‌ ಬೇಲಿಯ ಮೇಲೆ ಬಿದ್ದಿದ್ದಾನೆ. ತಕ್ಷಣ ಆತನ ಕೂಗಾಟ ಕೇಳಿ ಕುಟುಂಬಸ್ಥರು ಸ್ಥಳೀಯ ಆಸ್ಪತ್ರೆಗೆ ಸಾಗಿಸಿದ್ದಾರೆ, ಆದರೆ ಕಾರ್ತಿಕ್‌ ಬದುಕುಳಿಯಲಿಲ್ಲ.

ಮನೆ ಮುಂಭಾಗದ ಬೇಲಿ ಮೇಲೆ ವಿದ್ಯುತ್ ವೈರ್ ತುಂಡಾಗಿ ಬಿದ್ದಿದ್ದೆ ಈ ಅವಘಡಕ್ಕೆ ಕಾರಣ ಎನ್ನಲಾಗಿದೆ. ಕಾರ್ತಿಕ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿಬಿಎ ವ್ಯಾಸಾಂಗ ಮಾಡುತ್ತಿದ್ದ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Tumkur News : ಸಾಲ ತೀರಿಸಲಾಗದೆ ಅಕ್ಕನ ಮಗಳನ್ನೇ ಮಾರಾಟ ಮಾಡಿದ್ದಳು ಚಿಕ್ಕಮ್ಮ!

“ಅರ್ಧ ಕಿಲೋ ಮೀಟರ್​ ಓಡಿದರೂ ಪತ್ನಿ ದೇಹ ಸಿಗಲೇ ಇಲ್ಲ”- ಮುಂಬೈ ಹಿಟ್‌ ಆ್ಯಂಡ್‌ ರನ್‌ ಬಗ್ಗೆ ಸಂತ್ರಸ್ತ ಹೇಳಿದಿಷ್ಟು

ಮುಂಬೈ: ಶಿವಸೇನೆ ಮುಖಂಡನ ಪುತ್ರನ BMW ಕಾರು ಡಿಕ್ಕಿ(Mumbai Hit And Run) ಹೊಡೆದು ಪತ್ನಿಯನ್ನು ಕಳೆದುಕೊಂಡಿರುವ ಮೀನು ಮಾರಾಟಗಾರ ಪ್ರದೀಪ್‌ ನಖ್ವಾ ಘಟನೆ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಭಾನುವಾರ ಬೆಳಗ್ಗೆ ಪ್ರದೀಪ್‌ ಪತ್ನಿ ಜೊತೆಗೆ ಕೋಳಿವಾಡಕ್ಕೆ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಹಿಂದಿನಿಂದ ಬಂದ BMW ಕಾರು ಡಿಕ್ಕಿ ಹೊಡೆದಿದೆ. ಪ್ರದೀಪ್‌ ರಸ್ತೆಗೆ ಬಿದ್ದಿದ್ದು, ಅವರ ಪತ್ನಿ ಕಾವೇರಿ ನಖ್ವಾರನ್ನು ಬಹುದೂರ ಎಳೆದೊಯ್ದಿತ್ತು. ಅರ್ಧ ಕಿಲೋಮೀಟರ್‌ ದೂರ ಪ್ರದೀಪ್‌ ಕಾರಿ ಹಿಂದೆ ಓಡಿದರಾದರೂ ತಮಗೆ ಪತ್ನಿಯ ದೇಹ ಕಾಣಲೇ ಇಲ್ಲ ಎಂದು ಪ್ರದೀಪ್‌ ಹೇಳಿದ್ದಾರೆ.

ನಾನು ಕಾರಿನ ಹಿಂದೆಯೇ ಅರ್ಧ ಕಿಲೋ ಮೀಟರ್‌ ಓಡಿದ್ದೇನೆ. ನಾನು ಅಳುತ್ತಿದ್ದೆ. ಕಿರುಚುತ್ತಿದ್ದೆ. ಅವರು ಕಾರನ್ನು ಒಂದು ಕ್ಷಣ ನಿಲ್ಲಿಸಿದ್ದರೂ ಇಂತಹ ದುರ್ಘಟನೆ ನಡೆಯುತ್ತಿರಲಿಲ್ಲ. ನನ್ನ ಮಗಳು ತಾಯಿ ಎಲ್ಲಿ ತಾಯಿ ಎಲ್ಲಿ ಎಂದು ಕೇಳುತ್ತಿದ್ದಾಳೆ. ನಾನು ಅವಳನ್ನು ಎಲ್ಲಿಂದ ಕರೆ ತರಲಿ ಎಂದು ಪ್ರದೀಪ್‌ ಬಹಳ ಬೇಸರದಿಂದ ಹೇಳುತ್ತಾರೆ.

ಮುಂಬೈನ ವೊರ್ಲಿಯಲ್ಲಿ ರಾಜೇಶ್‌ ಶಾ (Rajesh Shah) ಅವರ ಪುತ್ರ ಮಿಹಿರ್‌ ಶಾ (Mihir Shah) ಕುಡಿದು ವಾಹನ ಚಲಾಸುವಾಗ, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಸಿದ್ದು, ಮಹಿಳೆ ಮೃತಪಟ್ಟಿದ್ದಾರೆ. ಆಕೆಯ ಪತಿಯು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ಬಳಿಕ 24 ವರ್ಷದ ಮಿಹಿರ್‌ ಶಾ ಪರಾರಿಯಾಗಿದ್ದ, ಬಳಿಕ ಪೊಲೀಸರು ಅವನ ತಂದೆಯನ್ನು ವಶಪಡಿಸಿಕೊಂಡಿದ್ದಾರೆ.

ಕಾವೇರಿ ನಖ್ವಾ ಮತ್ತು ಪ್ರದೀಕ್‌ ನಖ್ವಾ ಎಂಬ ದಂಪತಿ ಹೋಗುತ್ತಿದ್ದ ಬೈಕ್‌ಗೆ BMW ಕಾರು ಡಿಕ್ಕಿ ಹೊಡೆದಿದ್ದು, ಕೂಡಲೇ ಮಿಹಿರ್‌ ಶಾ ಎಸ್ಕೇಪ್‌ ಆಗಿದ್ದಾನೆ. ಬೆಳಗ್ಗೆ 5:30ರ ಸಮಯದಲ್ಲಿ ದಂಪತಿ ಸಾಸಾನ್‌ ಡಾಕ್‌ ಮಾರುಕಟ್ಟೆಯಿಂದ ಮೀನು ಖರೀದಿಸಿ ವಾಪಾಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಇನ್ನು ದಂಪತಿ ಪ್ರದೀಕ್‌ ನಖ್ವಾ ಮಾರುಕಟ್ಟೆಯಲ್ಲಿ ಮೀನಿನ ವ್ಯಾಪಾರಿಯಾಗಿದ್ದಾರೆ. ಕಾರು ಡಿಕ್ಕಿಯಾಗುತ್ತಿದ್ದಂತೆ ರಸ್ತೆಗೆ ಬಿದ್ದಿದ್ದ ದಂಪತಿ ಗಂಭೀರವಾಗಿ ಗಾಯಗೊಂಡಿದ್ದರು. ಕಾವೇರಿ ಮತ್ತು ಪ್ರದೀಪ್‌ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕಾವೇರಿ ಕೊನೆಯುಸಿರೆಳೆದಿದ್ದಾರೆ.

ಘಟನೆ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಮಿಹಿರ್‌ ಶಾ ನಾಪತ್ತೆಯಾಗಿದ್ದ. ಮಿಹಿರ್‌ ಶಾ ತನ್ನ ಫೋನನ್ನೂ ಸ್ವಿಚ್‌ ಆಫ್‌ ಮಾಡಿಕೊಂಡಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ಶುರು ಮಾಡಿದ್ದರು. ಮಿಹಿರ್‌ ಪೊಲೀಸರಿಗೆ ಹೆದರಿ ತನ್ನ ಪ್ರೇಯಸಿ ಮನೆಯಲ್ಲಿ ಅವಿತಿದ್ದ. ಪೊಲೀಸರು ಆತನನ್ನು ಅರೆಸ್ಟ್‌ ಮಾಡಿದ್ದಾರೆ. ಪೊಲೀಸರ ಪ್ರಕಾರ ಮಿಹಿರ್‌ ಕಳೆದ ರಾತ್ರಿ ಜೂಹೂ ಪ್ರದೇಶದಲ್ಲಿರುವ ಬಾರ್‌ನಲ್ಲಿ ಕಂಠಪೂರ್ತಿ ಕುಡಿದಿದ್ದು. ತನ್ನ ಮನೆಗೆ ಹಿಂದಿರುಗುವ ವೇಳೆ ಲಾಂಗ್‌ ಡ್ರೈವ್‌ ಕರೆದುಕೊಂಡು ಹೋಗುವಂತೆ ಡ್ರೈವರ್‌ಗೆ ಹೇಳಿದ್ದಾನೆ. ವರ್ಲಿಗೆ ತಲುಪುತ್ತಿದ್ದಂತೆ ತಾನು ಕಾರು ಚಲಾಯಿಸುವುದಕ್ಕೆ ಮುಂದಾಗಿದ್ದಾನೆ. ಆಗ ಅತ್ಯಂತ ವೇಗವಾಗಿ ಕಾರು ಚಲಾಯಿಸಿದ ಮಿಹಿರ್, ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದಾನೆ.

ಇನ್ನು ಘಟನೆಗೂ ಮುನ್ನ ಆರೋಪಿ ಮಿಹಿರ್‌ ಶಾಮತ್ತು ಆತನ ಸ್ನೇಹಿತರು ಬಾರ್‌ಗೆ ತೆರಳಿದ್ದು, ಬರೋಬ್ಬರಿ 18 ಸಾವಿರಕ್ಕೂ ಅಧಿಕ ಬಿಲ್‌ ಆಗಿತ್ತು ಎಂಬ ವಿಚಾರ ಪೊಲೀಸ್‌ ತನಿಖೆಯಲ್ಲಿ ಬಯಲಾಗಿದೆ. ಮಿಹಿರ್‌ ಹಾಗೂ ಆತನ ಸೇಹಿತರು ಜೂಹೂನಲ್ಲಿರುವ ಗ್ಲೋಬಲ್‌ ತಾಪಸ್‌ ಬಾರ್‌ಗೆ ತೆರಳಿದ್ದರು ಎನ್ನಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಹೊನ್ನಾವರದ ಹಲವೆಡೆ ನೆರೆ ಪರಿಸ್ಥಿತಿ; ಭಾನುವಾರವೂ ಮಳೆ ಎಚ್ಚರಿಕೆ

Karnataka Weather Forecast : ಮಳೆಗೆ (Rain News) ಹೊನ್ನಾವರದಲ್ಲಿ ನೆರೆ ಪರಿಸ್ಥಿತಿ ಸೃಷ್ಟಿಯಾಗಿದ್ದು, ಚೌಡಯ್ಯನ ಐಕ್ಯ ಮಂಟಪ ಮುಳುಗಡೆಯಾಗಿದೆ. ಉಕ್ಕಿ ಹರಿಯುವ ನದಿಯಲ್ಲಿ ಮೀನುಗಳನ್ನು ಹಿಡಿಯುವ ದುಸ್ಸಾಹಸಕ್ಕೆ ಮುಂದಾದ ಘಟನೆಯೂ ನಡೆದಿದೆ. ಭಾನುವಾರವೂ ಭಾರಿ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.

VISTARANEWS.COM


on

By

karnataka weather forecast
ಹೊನ್ನಾವರದ ಹಲವೆಡೆ ನೆರೆ ಪರಿಸ್ಥಿತಿ
Koo

ಉತ್ತರಕನ್ನಡ: ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪ ಜಲಾಶಯದಿಂದ ನೀರು ಬಿಡುಗಡೆ ಮಾಡಲಾಗಿದೆ. ಭಾರಿ ಮಳೆಗೆ (Karnataka weather Forecast) ಶರಾವತಿ ನದಿ ಉಕ್ಕಿ ಹರಿದು ಹೊನ್ನಾವರ ಹಲವೆಡೆ ನೆರೆ ಪರಿಸ್ಥಿತಿ ಸೃಷ್ಟಿಯಾಗಿದೆ. ತಾಲೂಕಿನ ಸರಳಗಿ, ಮಾವಿನಹೊಳೆ, ಅಳ್ಳಂಕಿ ಸೇರಿ ಹಲವು ಗ್ರಾಮಗಳ ಮನೆಗಳಿಗೆ ನೀರು ನುಗ್ಗಿದೆ. ನೆರೆ ಆತಂಕದ ಸುಮಾರು 169ಕ್ಕೂ ಅಧಿಕ‌ ಮಂದಿ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಗೊಂಡಿದೆ. ಜಲಾಶಯದಿಂದ ಮತ್ತೆ ನೀರು ಬಿಡುಗಡೆ ಸಾಧ್ಯತೆ ಇದ್ದು, ನದಿ ಪಾತ್ರದ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳುವಂತೆ ಸೂಚನೆ ನೀಡಲಾಗಿದೆ.

ಚೌಡಯ್ಯನ ಐಕ್ಯ ಮಂಟಪ ಮುಳುಗಡೆ

ತುಂಗಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳಗೊಂಡಿದ್ದು ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಚೌಡಯ್ಯಧಾನಪುರದ ನಿಜಶರಣ ಅಂಬಿಗರ ಚೌಡಯ್ಯನ ಐಕ್ಯ ಮಂಟಪ ಮುಳುಗಡೆಯಾಗಿದೆ. ಇತ್ತ ಮಲೆನಾಡಿನ ಶಿವಮೊಗ್ಗದಲ್ಲೂ ಮಳೆ ಅಬ್ಬರ ಮುಂದುವರಿದಿದೆ. ಮಳೆಯ ಅಬ್ಬರಕ್ಕೆ ಲಿಂಗನಮಕ್ಕಿ ಜಲಾಶಯ ಭರ್ತಿಯಾಗಿದೆ. ಲಿಂಗನಮಕ್ಕಿ ಜಲಾಶಯದಿಂದ 11 ಕ್ರಸ್ಟ್ ಗೇಟ್ ಮೂಲಕ 42,705 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.

ಉಕ್ಕಿ ಹರಿಯುವ ನದಿಯಲ್ಲಿ ಮೀನುಗಳನ್ನು ಹಿಡಿಯುವ ದುಸ್ಸಾಹಸ

ಗದಗ ಜಿಲ್ಲೆಯಲ್ಲಿ ತುಂಗಭದ್ರಾ ನದಿಯು ಉಕ್ಕಿ ಹರಿಯುತ್ತಿದೆ. ಮುಂಡರಗಿ ತಾಲೂಕಿನ ಸಿಂಗಟಾಲೂರು ಬ್ಯಾರೇಜ್ ಭರ್ತಿಯಾಗಿದ್ದು, ಕೆಲವರು ಜೀವ ಭಯವಿಲ್ಲದೆ ಮೀನು ಹಿಡಿಯುವ ದುಸ್ಸಾಹಸಕ್ಕೆ ಇಳಿದಿದ್ದರು. ನದಿ ತಟಗಳಿಗೆ ಗದಗ ಜಿಲ್ಲಾಡಳಿತ ಹೋಗದಂತೆ ಸೂಚನೆ ನೀಡಿದೆ. ಸ್ವಲ್ಪ ಹೆಚ್ಚು ಕಡಿಮೆಯಾದರೂ ಮೀನುಗಾರರು ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇದೆ.

ಇದನ್ನೂ ಓದಿ: Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ನಾಳೆ ಕರಾವಳಿಗೆ ಭಾರಿ ಮಳೆ ಎಚ್ಚರ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ನಿರಂತರ ಗಾಳಿಯ ವೇಗವು 30-40 ಕಿಮೀ ತಲುಪುವ ಸಾಧ್ಯತೆಯಿದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗಾಳಿಯ ವೇಗವು (30-40 ಕಿಮೀ) ತಲುಪುವ ಸಾಧ್ಯತೆಯಿದೆ ಹಾಗೂ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಮೀನುಗಾರರಿಗೆ ಎಚ್ಚರಿಕೆ

ತೀವ್ರ ಬಿರುಗಾಳಿಯಿಂದ ಕೂಡಿದ ಹವಾಮಾನವು ಗಂಟೆಗೆ 35 ಕಿಮೀ ನಿಂದ 45 ಕಿಮೀ ವೇಗದಲ್ಲಿ 55 ಕಿಮೀ ವೇಗದಲ್ಲಿ ಬೀಸುವ ಗಾಳಿಯು ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಉತ್ತರ ಒಳನಾಡಿನಲ್ಲಿ ನೈರುತ್ಯ ದುರ್ಬಲ

ನೈರುತ್ಯ ಮಾನ್ಸೂನ್ ಕರಾವಳಿಯ ಸಕ್ರಿಯವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಾಮಾನ್ಯವಾಗಿತ್ತು. ಉತ್ತರ ಒಳನಾಡಿನಲ್ಲಿ ದುರ್ಬಲವಾಗಿದೆ. ಕರಾವಳಿಯ ಬಹುತೇಕ ಸ್ಥಳಗಳಲ್ಲಿ, ದಕ್ಷಿಣ ಒಳನಾಡಿನ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಮಳೆಯಾಗಿದೆ. ಆಗುಂಬೆಯಲ್ಲಿ 18, ಕ್ಯಾಸಲ್ ರಾಕ್ 12 ಸೆಂ.ಮೀ ಮಳೆಯಾಗಿದೆ.

ಸಿದ್ದಾಪುರ 11, ಲೋಂಡಾ 10, ಕಾರ್ಕಳ, ಕೋಟ, ಕಾರವಾರದಲ್ಲಿ 9 ಸೆಂ.ಮೀ ಮಳೆಯಾಗಿದೆ. ಗೇರ್ಸೊಪ್ಪ, ಹೊನ್ನಾವರ, ಉತ್ತರ ಕನ್ನಡ, ಕೊಲ್ಲೂರು, ಗೋಕರ್ಣ, ಶೃಂಗೇರಿ ಎಚ್‌ಎಂಎಸ್ 8 ಸೆಂ.ಮೀ ಮಳೆಯಾಗಿದೆ. ಮೂಲ್ಕಿ , ಶಿರಾಲಿ ಪಿಟಿಒ , ಸಿದ್ದಾಪುರ, ಮಂಕಿ, ಕುಂದಾಪುರ , ಕದ್ರಾ, ಲಿಂಗನಮಕ್ಕಿ ಎಚ್‌ಎಂಎಸ್ , ಕಮ್ಮರಡಿ,ಚಿಕ್ಕಮಗಳೂರು, ಭಾಗಮಂಡಲ, ಜಯಪುರದಲ್ಲಿ 7 ಸೆಂ.ಮೀ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ದಾವಣಗೆರೆ

Wild Animals : ರಸ್ತೆಗೆ ಅಡ್ಡಲಾಗಿ ಮಲಗಿಕೊಂಡ ಚಿರತೆ; ಕಾಡಿನಿಂದ ಹಸು ಜತೆಗೆ ಓಡೋಡಿ ಬಂದ ಜಿಂಕೆ

Wild Animals : ಆಹಾರ ಅರಸಿ ಕಾಡು ಪ್ರಾಣಿಗಳು ನಾಡಿಗೆ ಬರುತ್ತಿವೆ. ಸದ್ಯ ದಾವಣಗೆರೆಯಲ್ಲಿ ಚಿರತೆಯೊಂದು ರಸ್ತೆಗೆ ಅಡ್ಡಲಾಗಿ ಕುಳಿತು ಆತಂಕ ಮೂಡಿಸಿದರೆ, ಶಿವಮೊಗ್ಗದಲ್ಲಿ ಜಿಂಕೆಯೊಂದು ಕಾಡಿನಿಂದ ಓಡಿ ಬಂದಿದೆ.

VISTARANEWS.COM


on

By

Wild Animals
Koo

ದಾವಣಗೆರೆಯ ಕೊಂಡಜ್ಜಿ ಸಮೀಪ ಚಿರತೆಯೊಂದು ಪ್ರತ್ಯಕ್ಷಗೊಂಡು ಆತಂಕವನ್ನು (Wild Animals) ಸೃಷ್ಟಿಸಿತ್ತು. ಶಂಕ್ರನಹಳ್ಳಿ ರಸ್ತೆ ಮಧ್ಯೆ ಕಾಣಿಸಿಕೊಂಡ ಚಿರತೆಯು ಬಳಿಕ ರಸ್ತೆಗೆ ಅಡ್ಡಲಾಗಿ ಮಲಗಿಕೊಂಡಿತ್ತು. ರಸ್ತೆಯಲ್ಲಿ ಓಡಾಡಲು ಜನರು, ವಾಹನ ಸವಾರರು ಪರದಾಡಬೇಕಾಯಿತು. ಕಾರಿನೊಳಗೆ ಕುಳಿತು ಚಿರತೆ ಓಡಾಟವನ್ನು ಯುವಕರು ಸೆರೆ ಹಿಡಿದಿದ್ದಾರೆ. ಗ್ರಾಮಸ್ಥರು ಚಿರತೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.

ಕಾಡಿನಿಂದ ಓಡಿ ಬಂದ ಜಿಂಕೆ

ಕಾಡಿನಿಂದ ಗೋವಿನ ಜತೆಗೆ ಜಿಂಕೆಯೊಂದು ನಾಡಿಗೆ ಬಂದಿದೆ. ಶಿವಮೊಗ್ಗದ ಹೊಸನಗರ ಪಟ್ಟಣಕ್ಕೆ ಮಳೆಗಾಲದ ವಿಶೇಷ ಅತಿಥಿಯಾಗಿ ಜಿಂಕೆ ಆಗಮಿಸಿದಂತೆ ಭಾಸವಾಗಿತ್ತು. ಹೊಸನಗರ ಪಟ್ಟಣದ ಶಿವಪ್ಪನಾಯಕ ರಸ್ತೆಯಲ್ಲಿ ಗೋವಿನ ಜತೆಗೆ ಓಡೋಡಿ ಬಂದಿದೆ. ಜಿಂಕೆ ಓಡಾಟವನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಇನ್ನೂ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹರಿಬಿಟ್ಟಿದ್ದನ್ನು ಗಮನಿಸಿದ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Assault Case : ಹೆಲ್ಮೆಟ್‌ ಇಲ್ಲದೇ ಚಲಿಸುತ್ತಿದ್ದ ಬೈಕ್ ಸವಾರನ ಕಾಲರ್ ಪಟ್ಟಿ ಹಿಡಿದು ಎಳೆದ ಟ್ರಾಫಿಕ್‌ ಪೊಲೀಸ್‌!

ಬಾಲಕನ ಮೇಲೆ ದಾಳಿ ಮಾಡಿದ ಬೀದಿ ನಾಯಿಗಳು

ಬೀದಿ ನಾಯಿಗಳು ದಾಳಿ ಮಾಡಿದ್ದು, ಬಾಲಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ವೆಂಕಟೇಶ್ವರಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಬಾಲಾಜಿ ನಾಯ್ಕ್ ನಾಯಿ ದಾಳಿಗೆ ಒಳಗಾದ ಬಾಲಕ.

ಶಾಲೆಗೆ ಹೋಗಲು ರೆಡಿಯಾಗಿ ಮನೆಯಿಂದ ಹೊರ ಬಂದಿದ್ದ ಬಾಲಾಜಿ ನಾಯ್ಕ್ ಮೇಲೆ ಏಕಾಏಕಿ ನಾಲ್ಕಕ್ಕೂ ಹೆಚ್ಚು ನಾಯಿಗಳು ದಾಳಿ ಮಾಡಿದೆ. ಬಾಲಾಜಿ ಕಿರುಚಾಡುವುದನ್ನು ನೋಡಿ ಜನರು ಓಡಿ ಬಂದಿದ್ದಾರೆ. ಬಳಿಕ ನಾಯಿಗಳನ್ನು ಓಡಿಸಿದ್ದಾರೆ. ಬಾಲಾಜಿ ನಾಯ್ಕ್ ಬೆನ್ನು ಹಾಗೂ ಕಾಲಿಗೆ ನಾಯಿಗಳು ಕಚ್ಚಿ ಗಂಭೀರ ಗಾಯಗೊಳಿಸಿದೆ.

ಗಾಯಾಳನ್ನು ಕೂಡಲೇ ತಾಲೂಕಾಸ್ಪತ್ರೆಗೆ ಚಿಕಿತ್ಸೆಗಾಗಿ ರವಾನೆ ಮಾಡಿದ್ದಾರೆ. ಬೀದಿನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ಕೂಡಲೇ ನಿಯಂತ್ರಣ ‌ಮಾಡುವಂತೆ ಗ್ರಾಮಪಂಚಾಯತಿ ಅಧಿಕಾರಿಗೆ ಈ ಹಿಂದೆಯೇ ಗ್ರಾಮಸ್ಥರು ಮನವಿ ಮಾಡಿದ್ದರು. ಗ್ರಾಮ‌ಪಂಚಾಯತಿ ಅಧಿಕಾರಿಗಳ‌ ನಿರ್ಲಕ್ಷ್ಯದಿಂದ ಈ ರೀತಿ ಘಟನೆ ನಡೆದಿದೆ ಎಂದು ಕಿಡಿಕಾರಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

Karnataka Rain : ಕಾರವಾರದಲ್ಲಿ ಬಿಣಗಾ ಕಾರವಾರ ಟನೆಲ್‌ ಬಳಿ ಕಲ್ಲು ಕುಸಿದಿದ್ದು, ರಸ್ತೆ ಬಂದ್‌ ಮಾಡಿದ್ದಾರೆ. ಬೆಳಗಾವಿಯಲ್ಲಿ ದೇವಸ್ಥಾನದ ಗೋಪುರ ಕುಸಿದು ಬಿದ್ದಿದೆ. ವಿಜಯನಗರದಲ್ಲಿ ರಾಮ-ಲಕ್ಷ್ಮಣ ದೇಗುಲಕ್ಕೆ ಜಲದಿಗ್ಭಂದನ ಹಾಕಲಾಗಿದೆ.

VISTARANEWS.COM


on

By

karnataka rain
Koo

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ (Karnataka Rain) ಮುಂದುವರಿದಿದೆ. ರಾಷ್ಟ್ರೀಯ ಹೆದ್ದಾರಿ 66ರ ಕಾರವಾರದ ಸುರಂಗ ಮಾರ್ಗದಲ್ಲಿ ಕಲ್ಲು ಕುಸಿದಿದೆ. ಬಿಣಗಾದಿಂದ ಕಾರವಾರಕ್ಕೆ ಆಗಮಿಸುವ ಸುರಂಗದ ಎದುರು ಕಲ್ಲು, ಮಣ್ಣು ಜಾರಿ ಬಿದ್ದಿದೆ. ಅದೃಷ್ಟವಶಾತ್ ವಾಹನ ಸವಾರರು ಪಾರಾಗಿದ್ದಾರೆ.

ಸ್ಥಳಕ್ಕೆ ಕಾರವಾರ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು, ಐಆರ್‌ಬಿ ಕಾರ್ಮಿಕರಿಂದ ಹೆದ್ದಾರಿಯಲ್ಲಿ ಬಿದ್ದ ಕಲ್ಲು ಮಣ್ಣು ತೆರವು ಮಾಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಬಿಣಗಾ ಕಾರವಾರ ಟನೆಲ್ ಬಂದ್ ಮಾಡಿದ್ದಾರೆ. ಬಿಣಗಾದಿಂದ ಬೈತಕೋಲ್ ಮಾರ್ಗದಲ್ಲಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

karnataka rain
karnataka rain

ಕುಸಿದು ಬಿದ್ದ ದೇವಸ್ಥಾನದ ಗೋಪುರ

ಬೆಳಗಾವಿ: ನಿರಂತರ ಮಳೆಗೆ ಬೆಳಗಾವಿಯ ಕಿತ್ತೂರಿನ ಕೊಂಡವಾಡ ಚೌಕಿನಲ್ಲಿರುವ ಕರೆಮ್ಮ ದೇವಿ ದೇವಸ್ಥಾನದ ಗೋಪುರ ಕುಸಿದು ಬಿದ್ದಿದೆ. ಕಳೆದ ಮೂರು ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಗೋಪುರ ಸಂಪೂರ್ಣವಾಗಿ ಕುಸಿದು, ಪಕ್ಕದ ಮಳಿಗೆಯ ಮೇಲೆ ಗೋಪುರ ಬಿದ್ದಿದೆ. ಘಟನೆಯಲ್ಲಿ ಅದೃಷ್ಟವಷಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ. ನಿನ್ನೆ ಶುಕ್ರವಾರವಷ್ಟೇ ಕಿತ್ತೂರು ಕೋಟೆಯ ಆವರಣದಲ್ಲಿದ್ದ ಐತಿಹಾಸಿಕ ವಾಚ್ ಟವರ್ ಕುಸಿದು ಬಿದ್ದಿತ್ತು.

ರಾಮ-ಲಕ್ಷ್ಮಣ ದೇಗುಲಕ್ಕೆ ಜಲದಿಗ್ಭಂದನ

ಜಲಾಶಯದಿಂದ 1.80 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ನದಿಗೆ ಹರಿಬಿಟ್ಟ ಹಿನ್ನೆಲೆಯಲ್ಲಿ ವಿಜಯನಗರದ ವಿಶ್ವ ವಿಖ್ಯಾತ ಹಂಪಿಯಲ್ಲಿ ತುಂಗಭದ್ರಾ ಉಕ್ಕಿ ಹರಿಯುತ್ತಿದೆ. ನದಿಯ ರೌದ್ರ ನರ್ತನ ಹೆಚ್ಚಾಗಿದ್ದರಿಂದ ಹಂಪಿಯ ಹಲವು ಸ್ಮಾರಕಗಳು ಮುಳುಗಿವೆ. ಅದರಲ್ಲೂ ಐತಿಹಾಸಿಕ ರಾಮ – ಲಕ್ಷ್ಮಣ ದೇಗುಲಕ್ಕೆ ಜಲ ದಿಗ್ಭಂದನ ಹಾಕಲಾಗಿದೆ. ಪ್ರವಾಸಿಗರು ಉಳಿದುಕೊಳುತ್ತಿದ್ದ ಮೂರು ಕಲ್ಲಿನ ಮಂಟಪಗಳು ಮುಕ್ಕಾಲು ಭಾಗ ಮುಳುಗಡೆಯಾಗಿದೆ.

ತುಂಗಭದ್ರಾ ನದಿ ನೀರು ನುಗ್ಗಿದ್ದರಿಂದ ದೇಗುಲಕ್ಕೆ ಭಕ್ತರ ಸಂಖ್ಯೆಯಲ್ಲಿ ಭಾರೀ ವಿರಳವಾಗಿದೆ. ರಾಮ – ಲಕ್ಷ್ಮಣ, ಸೀತೆ ದೇಗುಲ 2011, 2017ರಲ್ಲಿ ಎರಡು ಬಾರಿ ಸಂಪೂರ್ಣ ಮುಳುಗಡೆ ಆಗಿತ್ತು. ವಾಲಿ ಎನ್ನುವ ರಾಜನನ್ನು ಸಂಹರಿಸಿ ಸುಗ್ರೀವ ಅನ್ನೋ ರಾಜನಿಗೆ ಪಟ್ಟಾಭಿಷೇಕ ಮಾಡಿದ ಜಾಗವೇ ರಾಮ-ಲಕ್ಷ್ಮಣ ದೇಗುಲವಾಗಿದೆ. ರಾಮ-ಲಕ್ಷ್ಮಣ, ಸೀತಾಮಾತೆ, ಆಂಜನೇಯ ಹಾಗೂ ಸುಗ್ರೀವ ರಾಜ ಸೇರಿ ಐದು ಜನರ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಗಿದೆ.

ವಿಧಿ, ವಿಧಾನ ಮಂಟಪ, ಸ್ನಾನ ಘಟ್ಟ, ಪುರಂದರ ದಾಸರ ಮಂಟಪ ಸೇರಿ ಹತ್ತಾರು ಸ್ಮಾರಕಗಳು ಈಗಾಗಲೇ ಮುಳುಗಡೆಯಾಗಿದೆ. ಸ್ಮಾರಕಗಳು ಎಲ್ಲಿವೆ ಎಂಬುದು ಗೊತ್ತಾಗದ ರೀತಿ ತುಂಗಭದ್ರಾ ಉಕ್ಕಿ ಹರಿಯುತ್ತಿದೆ.

ಇದನ್ನೂ ಓದಿ: Murder case : ಮಲೆನಾಡಲ್ಲಿ ಒಂಟಿ ಮಹಿಳೆ ಕೊಲೆ; ಕತ್ತು ಹಿಸುಕಿ ಕೊಂದವರು ಯಾರು?

ಮುಳುಗಿದ ಸಂಗಮೇಶ್ವರ ದೇವಾಲಯ

ಮಲೆನಾಡಿನ ಶಿವಮೊಗ್ಗದಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಮಳೆ ಅಬ್ಬರಕ್ಕೆ ಮಲೆನಾಡಿನ ನದಿಗಳು ಮೈದುಂಬಿ ಹರಿಯುತ್ತಿದೆ. ಅಪಾಯದ ಮಟ್ಟ ಮೀರಿ ತುಂಗಾ, ಭದ್ರಾ ಹರಿಯುತ್ತಿದೆ‌. ತುಂಗಾ, ಭದ್ರಾ ನದಿ ಸಂಗಮ ಕ್ಷೇತ್ರ ನೋಡಲು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಕೂಡ್ಲಿ ತುಂಗಾ ಹಾಗೂ ಭದ್ರಾ ನದಿ ಬಂದು ಸಂಗಮ ಆಗುವ ಪುಣ್ಯಕ್ಷೇತ್ರವಾಗಿದ್ದು, ಸಂಗಮೇಶ್ವರ ದೇವಾಲಯ ಮುಳುಗಿದೆ.

ಏತ ನೀರಾವರಿ ಬ್ಯಾರೇಜ್‌ಗೆ ಪ್ರವಾಸಿಗರ ದಂಡು

ತುಂಗಭದ್ರಾ ನದಿ ಉಕ್ಕಿ ಹರಿಯುತ್ತಿದ್ದು, ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಸಿಂಗಟಾಲೂರು ಏತ ನೀರಾವರಿ ಬ್ಯಾರೇಜ್‌ನಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಮುಂಡರಗಿ ತಾಲೂಕಿನ ಹಮ್ಮಿಗಿ, ಗುಮ್ಮಗೋಳ, ವಿಠಲಾಪುರ ಸೇರಿದಂತೆ ಅನೇಕ ಗ್ರಾಮದ ರೈತರು ತತ್ತರಿಸಿದ್ದಾರೆ.

ಬ್ಯಾರೇಜ್‌ನ 26 ಗೇಟ್‌ಗಳಲ್ಲಿ 19 ಗೇಟ್‌ಗಳು ತೆರದು 2,90,000 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಬ್ಯಾರೇಜ್‌ನಿಂದ ರಭಸವಾಗಿ ಹರಿಯುತ್ತಿರುವ ನೀರು ನೋಡಲು ಕಿರು ಆಣೆಕಟ್ಟು ವೀಕ್ಷಿಸಲು ಪ್ರವಾಸಿಗರು ದೌಡಯಿಸಿದ್ದಾರೆ. ಬ್ಯಾರೇಜ್ ಎದುರು ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂತಸಗೊಂಡಿದ್ದಾರೆ.

ಜೋಗ ಜಲಪಾತಕ್ಕೆ ಪ್ರವಾಸಿಗರು ಫಿದಾ

ಲಿಂಗನಮಕ್ಕಿ ಜಲಾಶಯದಿಂದ 40 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ವಿಶ್ವವಿಖ್ಯಾತ ಜೋಗ ಜಲಪಾತ ಕಣ್ಮನ ಸೆಳೆಯುತ್ತಿದೆ. ಹಾಲ್ನೊರೆಯಂತೆ ಧುಮ್ಮಿಕ್ಕಿ ಹರಿಯುತ್ತಿದೆ. ಜೋಗ ಜಲಪಾತದ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ ಆಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿವಮೊಗ್ಗ

Murder case : ಮಲೆನಾಡಲ್ಲಿ ಒಂಟಿ ಮಹಿಳೆ ಕೊಲೆ; ಕತ್ತು ಹಿಸುಕಿ ಕೊಂದವರು ಯಾರು?

Murder case : ಶಿವಮೊಗ್ಗದಲ್ಲಿ (Shivamogga News) ಮಹಿಳೆಯೊಬ್ಬರ ಕೊಲೆಯಾಗಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಹಂತಕರ ಬೆನ್ನಿಗೆ ಬಿದ್ದಿರುವ ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

VISTARANEWS.COM


on

By

murder case
ಸಾಂದರ್ಭಿಕ ಚಿತ್ರ
Koo

ಶಿವಮೊಗ್ಗ: ಮಲೆನಾಡು ಶಿವಮೊಗ್ಗದಲ್ಲಿ ಒಂಟಿ ಮಹಿಳೆಯ (Murder Case) ಕೊಲೆಯಾಗಿದೆ. ಕತ್ತು ಬಿಗಿದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ಶುಕ್ರವಾರ ತಡರಾತ್ರಿ ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಮಂಜರಿಕೊಪ್ಪದಲ್ಲಿ ಮಹಿಳೆಯ ಕೊಲೆಯಾಗಿದೆ. ಸಾವಿತ್ರಮ್ಮ (65) ಕೊಲೆಯಾದವರು. ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ನಡೆದಿದ್ದು, ಕೊಲೆಗೆ ಏನು ಕಾರಣ ಎಂಬುದು ತಿಳಿದು ಬಂದಿಲ್ಲ.

ಸದ್ಯ ಪೊಲೀಸರು ಈ ಕುರಿತು ತನಿಖೆಯನ್ನು ನಡೆಸುತ್ತಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಹಂತಕರ ಹುಡುಕಾಟವನ್ನು ನಡೆಸುತ್ತಿದ್ದಾರೆ.

ಇದನ್ನೂ ಓದಿ: Road Accident : ಡಿವೈಡರ್‌ಗೆ ಕಾರು ಡಿಕ್ಕಿಯಾಗಿ‌ ವಿದ್ಯಾರ್ಥಿನಿ ಸ್ಪಾಟ್‌ ಡೆತ್‌; ಲಾರಿ ಹರಿದು ಪಾದಚಾರಿ ಸಾವು

ಒಂಟಿ ಕೈ ರೌಡಿಯಿಂದ ಇನ್ನೊಬ್ಬ ರೌಡಿಯ ಕೊಚ್ಚಿ ಕೊಲೆ

ಬೆಂಗಳೂರು: ಬೆಂಗಳೂರಿನಲ್ಲಿ (Bangalore crime) ರೌಡಿ ಗ್ಯಾಂಗ್‌ಗಳ ಬೀದಿಜಗಳ, ಹಲ್ಲೆಗಳು ತಾರಕಕ್ಕೇರಿದ್ದು, ಹೆಣಗಳು ಬೀಳುತ್ತಿವೆ. ಒಂಟಿ ಕೈಯ ರೌಡಿಶೀಟರ್ (Rowdy Sheeter) ಒಬ್ಬನ ಗ್ಯಾಂಗ್ ಇನ್ನೊಬ್ಬ ರೌಡಿಶೀಟರ್‌ನನ್ನು ಬರ್ಬರವಾಗಿ ಕೊಚ್ಚಿ ಕೊಲೆ (Murder Case) ಮಾಡಿದೆ.

ಸಿದ್ಧಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಐಸಾಕ್ (30) ಮೃತಪಟ್ಟ ರೌಡಿಶೀಟರ್. ವೆಂಕಟೇಶ ಅಲಿಯಾಸ್ ಒಂಟಿ ಕೈ ವೆಂಕಟೇಶ ಎಂಬಾತನ ಗ್ಯಾಂಗ್‌, ಐಸಾಕ್‌ನನ್ನು ಸುತ್ತುಗಟ್ಟಿ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಂದುಹಾಕಿದೆ.

ಡ್ರಗ್ಸ್ ಹಾವಳಿ ಹಾಗೂ ವಹಿವಾಟಿನ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ಮೂಡಿದೆ. ಮೃತ ಐಸಾಕ್ ಹಲವು ಕಡೆ ಡ್ರಗ್ಸ್, ಗಾಂಜಾ ಮಾರಾಟ ಮಾಡುತ್ತಿದ್ದ. ಇದನ್ನು ಒಂಟಿ ಕೈ ವೆಂಕಟೇಶ ವಿರೋಧಿಸಿದ್ದ. ವೆಂಕಟೇಶನ ಸ್ನೇಹಿತರಿಗೂ ಕೂಡ ಐಸಾಕ್ ಗಾಂಜಾ ನೀಡಿ ಅಡಿಕ್ಟ್ ಆಗುವಂತೆ ಮಾಡಿದ್ದ. ಒಂದೇ ಏರಿಯಾ ಆದ ಕಾರಣ ಹುಡುಗರು ಗಾಂಜಾ ಚಟಕ್ಕೆ ಬಿದ್ದಿದ್ದರು.

ಈ ಹಿನ್ನೆಲೆಯಲ್ಲಿ ಐಸಾಕ್‌ಗೆ ಒಂಟಿ ಕೈ ವೆಂಕಟೇಶ್ ವಾರ್ನ್ ಮಾಡಿದ್ದ. ಆದರೂ ಐಸಾಕ್ ಗಾಂಜಾ ಮಾರಾಟ ನಿಲ್ಲಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಬೆಳಗಿನ ಜಾವ 3-30ರ ಸಂದರ್ಭದಲ್ಲಿ ಐಸಾಕ್‌ನನ್ನು ಕೊಲೆ ಮಾಡಲಾಗಿದೆ. ಸದ್ಯ ನಿಖರ ಕಾರಣ ಹಾಗು ಆರೋಪಿಗಳಿಗಾಗಿ ಸಿದ್ದಾಪುರ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಒಂಟಿ ಕೈ ವೆಂಕಟೇಶ್ ಈ ಹಿಂದೆ ನಾಲ್ಕು ಕೊಲೆ ಕೇಸುಗಳಲ್ಲಿ ಭಾಗಿಯಾಗಿದ್ದಾನೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Wayanad Landslide
ಕರ್ನಾಟಕ2 mins ago

Wayanad Landslide: ವಯನಾಡು ಸಂತ್ರಸ್ತರಿಗೆ ಮಿಡಿದ ಕರುನಾಡು; ಸರ್ಕಾರದ ಜತೆಗೆ ಜನರಿಂದಲೂ ನೆರವು!

Kavya Maran
ಕ್ರಿಕೆಟ್35 mins ago

Kavya Maran : ಐಪಿಎಲ್​ ಆಟಗಾರರ ಹರಾಜಿನ ನಿಯಮಗಳ ಬಗ್ಗೆ ಕಾವ್ಯಾ ಮಾರನ್ ಇಟ್ಟಿರುವ ಬೇಡಿಕೆಗಳು ಇವು…

Champions Trophy 2025
ಪ್ರಮುಖ ಸುದ್ದಿ1 hour ago

Champions Trophy 2025 : ಚಾಂಪಿಯನ್ಸ್​ ಟ್ರೋಫಿಗಾಗಿ 544 ಕೋಟಿ ರೂಪಾಯಿ ಬಿಡುಗಡೆ ಮಾಡಿದ ಐಸಿಸಿ

Viral Video
ವೈರಲ್ ನ್ಯೂಸ್1 hour ago

Viral Video: ಪ್ರವಾಹದಲ್ಲಿ ಸಿಲುಕಿದ ನಾಯಿಗಳಿಗೆ ಡ್ರೋನ್‌ ಮೂಲಕ ಬಿರಿಯಾನಿ ರವಾನೆ; ಮಾನವೀಯತೆ ಅಂದ್ರೆ ಇದು!

Best Teacher Award
ಕರ್ನಾಟಕ1 hour ago

Best Teacher Award: ‘ರಾಜ್ಯ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಅರ್ಜಿ ಆಹ್ವಾನ; ಅರ್ಜಿ ಸಲ್ಲಿಕೆ ಹೇಗೆ? ಇಲ್ಲಿದೆ ಮಾಹಿತಿ

Union Minister Pralhad Joshi latest statement at Mysore Chalo Padayatra
ಕರ್ನಾಟಕ1 hour ago

BJP-JDS Padayatra: ವಾಲ್ಮೀಕಿ ನಿಗಮ, ಮುಡಾ ಹಗರಣದಲ್ಲಿ ಕಾಂಗ್ರೆಸ್ ಹೈಕಮಾಂಡ್ ಶೇರ್ ಹೋಲ್ಡರ್: ಪ್ರಲ್ಹಾದ್‌ ಜೋಶಿ ಆರೋಪ

Farmer dies after falling under power tiller wheel in Moralli village
ಉತ್ತರ ಕನ್ನಡ1 hour ago

Farmer Death: ಪವರ್ ಟಿಲ್ಲರ್ ಚಕ್ರಕ್ಕೆ ಸಿಲುಕಿ ರೈತ ದಾರುಣ ಸಾವು

KHIR City project Launch on August 23 at bengaluru says Minister MB Patil
ಕರ್ನಾಟಕ1 hour ago

KHIR City: ಬೆಂಗಳೂರಿನಲ್ಲಿ ದೇಶದಲ್ಲೇ ಮೊದಲ ‘ನಾಲೆಡ್ಜ್, ಹೆಲ್ತ್, ಇನ್ನೋವೇಶನ್ ಆಂಡ್ ರೀಸರ್ಚ್ ಸಿಟಿ’; ಆ.23ರಂದು ಉದ್ಘಾಟನೆ

IND vs SL ODI
ಪ್ರಮುಖ ಸುದ್ದಿ2 hours ago

IND vs SL ODI : ಶ್ರೀಲಂಕಾ ವಿರುದ್ಧ ಭಾನುವಾರ ಎರಡನೇ ಪಂದ್ಯ; ಮತ್ತೊಂದು ಥ್ರಿಲ್ಲರ್ ನಿರೀಕ್ಷೆ

Indian Organ Donation Day program inauguration by Minister Dinesh Gundurao at Belagavi
ಕರ್ನಾಟಕ2 hours ago

Belagavi News: ಸ್ವಾತಂತ್ರ್ಯ ದಿ‌ನಾಚರಣೆಯಂದು ಅಂಗಾಂಗ ದಾನಿಗಳ ಕುಟುಂಬಗಳಿಗೆ ಗೌರವ; ದಿ‌ನೇಶ್ ಗುಂಡೂರಾವ್

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ10 hours ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ4 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ5 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌