Site icon Vistara News

Elephant attack : ನಿಲ್ಲದ ಕಾಡು ಪ್ರಾಣಿಗಳ ಹಾವಳಿ; ಶಿವಮೊಗ್ಗದಲ್ಲಿ ಆನೆ ದಾಳಿಗೆ ವ್ಯಕ್ತಿ ಬಲಿ

Elephant attack in Shivamogga

ಶಿವಮೊಗ್ಗ: ಶಿವಮೊಗ್ಗದಲ್ಲಿ ಕಾಡು ಪ್ರಾಣಿಗಳ ಹಾವಳಿಗೆ ಜನರು ತತ್ತರಿಸಿ ಹೋಗಿದ್ದಾರೆ. ಮನೆಯಿಂದ ಹೊರಗೆ ಕಾಲಿಟ್ಟರೆ ವಾಪಸ್‌ ಬದುಕಿ ಬರುವ ಗ್ಯಾರಂಟಿ ಇಲ್ಲದಂತಾಗಿದೆ. ಇದಕ್ಕೆ ಸಾಕ್ಷಿ ಎಂಬಂತೆ ಮನೆ ಸಮೀಪದ ಕಾಡಿಗೆ ತೆರಳುತ್ತಿದ್ದ ವ್ಯಕ್ತಿ ಮಸಣ ಸೇರಿದ್ದಾನೆ. ಕಾಡಾನೆ ದಾಳಿಗೆ ವ್ಯಕ್ತಿ (Elephant attack) ಬಲಿಯಾಗಿದ್ದಾರೆ.

ಶಿವಮೊಗ್ಗದ ಹೊಸನಗರ ತಾಲೂಕಿನ ಬಸವಾಪುರ ಗ್ರಾಮದಲ್ಲಿ ಘಟನೆ ನಡೆದಿದೆ. ತಿಮ್ಮಪ್ಪ (58) ಕಾಡಾನೆ ದಾಳಿಯಿಂದ ಸ್ಥಳದಲ್ಲೆ ಮೃತಪಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಜನರ ಮೇಲೆ ದಾಳಿ ಮಾಡುತ್ತಿರುವ ಕಾಡಾನೆಯನ್ನು ಸೆರೆಹಿಡಿಯುವಂತೆ ಒತ್ತಾಯ ಕೇಳಿ ಬಂದಿದೆ. ಕಾಡು ಪ್ರಾಣಿಗಳ ಹಾವಳಿಯಿಂದ ಮನೆಯಿಂದ ಹೊರ ಹೋಗಲು ಎದುರುವಂತಾಗಿದೆ ಎಂದು ಗ್ರಾಮಸ್ಥರು ಕಿಡಿಕಾರಿದರು.

ಜಮೀನಿಗೆ ತೆರಳಿದ್ದ ರೈತನ ಅಟ್ಟಾಡಿಸಿ ಕೊಂದ ಒಂಟಿ ಸಲಗ

ಆನೇಕಲ್: ಕಾಡಾನೆ ದಾಳಿಗೆ (Elephant attack) ರೈತ ಬಲಿಯಾಗಿದ್ದಾರೆ. ರಾಜ್ಯ ಗಡಿಭಾಗ ತಮಿಳುನಾಡಿನ ಡೆಂಕಣಿಕೋಟೆ ಸಮೀಪದ ಮೆದುಮುತ್ತುಕೊಟ್ಟೈ ಗ್ರಾಮದಲ್ಲಿ ಘಟನೆ ನಡೆದಿದೆ. ಅಪ್ಪಯ್ಯ (54) ಕಾಡಾನೆ ದಾಳಿಗೆ ಮೃತಪಟ್ಟವರು.

ಬೆಳಗ್ಗೆ ಜಮೀನಿಗೆ ತೆರಳುತ್ತಿದ್ದಾಗ ಒಂಟಿ ಸಲಗ ದಾಳಿ ಮಾಡಿದೆ. ಗಂಭೀರವಾಗಿ ಗಾಯಗೊಂಡಿದ್ದ ರೈತ ಅಪ್ಪಯ್ಯ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಕೂಡಲೇ ಗ್ರಾಮಸ್ಥರು ಜವಳಗೆರೆ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮೃತದೇಹವನ್ನು ಡೆಂಕಣಿಕೋಟೆ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಕಾಡಾನೆ ದಾಳಿಗೆ ಗ್ರಾಮಸ್ಥರು ಕಂಗೆಟ್ಟು ಹೋಗಿದ್ದಾರೆ. ಕಳೆದ ಕೆಲ ತಿಂಗಳಿನಿಂದ ಒಂಟಿ ಸಲಗ ಉಪಟಳ ನೀಡುತ್ತಿದ್ದು, ಈ ಹಿಂದೆ ಇಬ್ಬರನ್ನು ಬಲಿ ಪಡೆದಿತ್ತು. ಇದೀಗ ಮತ್ತೊಬ್ಬ ರೈತ ಕಾಡಾನೆ ದಾಳಿಗೆ ಮೃತಪಟ್ಟಿದ್ದಾರೆ. ಕಾಡಾನೆಯ ಉಪಟಳಕ್ಕೆ ಬ್ರೇಕ್ ಹಾಕುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version