ರಿಪ್ಪನ್‌ಪೇಟೆ: ಸಾಲಬಾಧೆ ತಾಳಲಾರದೇ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ಪಟ್ಟಣ ಸಮೀಪದ ಬಾಳೂರು ಗ್ರಾಪಂ ವ್ಯಾಪ್ತಿಯ ಕೋಡ್ರಿಗೆ ಗ್ರಾಮದಲ್ಲಿ ಜರುಗಿದೆ.
ಹಾಲುಗುಡ್ಡೆ ಗ್ರಾಮದ ಕೋಡ್ರಿಗೆ ನಿವಾಸಿ ಕೃಷ್ಣಮೂರ್ತಿ ಮೃತಪಟ್ಟ ರೈತ. ಕೃಷಿ ಕೆಲಸಕ್ಕಾಗಿ ರಿಪ್ಪನ್‌ಪೇಟೆ ಕೆನರಾ ಬ್ಯಾಂಕ್‌ನಲ್ಲಿ ಸುಮಾರು ಎರಡೂವರೆ ಲಕ್ಷ ರೂಪಾಯಿ ಸಾಲ ಹಾಗೂ ಸ್ವ-ಸಹಾಯ ಸಂಘದಲ್ಲಿ 60 ಸಾವಿರ ರೂ. ಸಾಲ ಹಾಗೂ ಕೈಗಡವಾಗಿ ಸುಮಾರು ಎರಡು ಲಕ್ಷ ರೂಪಾಯಿಗಳನ್ನು ಸಾಲ ಮಾಡಿಕೊಂಡಿದ್ದರು.
ಭತ್ತ, ಕಬ್ಬು, ಮತ್ತು ಶುಂಠಿ ಹಾಗೂ ಅಡಿಕೆ ಬೆಳೆ ಬೆಳೆಯುತ್ತಿದ್ದು, ಈ ವರ್ಷ ಮಳೆ ಸರಿಯಾಗಿ ಬಾರದೇ ಬೆಳೆ ನಾಶವಾಗಿದೆ. ಕೃಷಿಗಾಗಿ ಮಾಡಿಕೊಂಡ ಸಾಲವನ್ನು ಈ ವರ್ಷ ಹೇಗೆ ತೀರಿಸುವುದು ಎಂದು ಚಿಂತಿತರಾಗಿದ್ದರು ಎನ್ನಲಾಗಿದೆ. ಇದರಿಂದ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬ ವರ್ಗದವರು ತಿಳಿಸಿದ್ದಾರೆ. ಈ ಬಗ್ಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Self Harming: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ
ಯಾದಗಿರಿ: ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ವಡಗೇರಾ ತಾಲೂಕಿನ ಕೊಂಗಂಡಿ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: Ganesha Chaturthi 2023 : ಗಣೇಶ ಚತುರ್ಥಿ ಸೆ.18ಕ್ಕೋ 19ಕ್ಕೋ?; ವಿದ್ವಾಂಸರು ಹೇಳೋದೇನು?
ಸೌಂದರ್ಯ (29) ಮಠಪತಿ ಮೃತೆ. ಕೊಂಗಂಡಿ ಗ್ರಾಮದಲ್ಲಿ ಗಂಡನೊಂದಿಗೆ ವಾಸವಾಗಿದ್ದ ಮಹಿಳೆ, ತನ್ನ 10 ತಿಂಗಳ ಹೆಣ್ಣು ಮಗುವನ್ನು ಕೊಂಕಲ್ ಗ್ರಾಮದ ತವರು ಮನೆಯಲ್ಲಿ ಬಿಟ್ಟಿದ್ದಳು. ಮಹಿಳೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ವಡಗೇರಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.