Site icon Vistara News

Shivamogga News: ಅಮ್ಮನಘಟ್ಟವನ್ನು ಪ್ರೇಕ್ಷಣೀಯ ಮಾದರಿ ಯಾತ್ರಾ ಸ್ಥಳವನ್ನಾಗಿಸುವ ಸಂಕಲ್ಪ: ಹರತಾಳು ಹಾಲಪ್ಪ

Former minister Harathalu Halappa special pooja at Jenukalamma Devi temple in Ammanaghatta

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಹೊಸನಗರ ತಾಲೂಕಿನ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ (Ammanaghatta Jenukalamma Devi) ದೇವಸ್ಥಾನವನ್ನು ರಾಜ್ಯದಲ್ಲಿ ಆತ್ಯುತ್ತಮ ಮಾದರಿ ಪ್ರೇಕ್ಷಣಿಯ ಯಾತ್ರಾ ಸ್ಥಳವನ್ನಾಗಿಸುವ ಸಂಕಲ್ಪ ನನ್ನದಾಗಿತ್ತು ಎಂದು ಮಾಜಿ ಸಚಿವ ಹರತಾಳು ಹಾಲಪ್ಪ ತಿಳಿಸಿದರು.

ಕೋಡೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ಜಾತ್ರಾಮಹೋತ್ಸವದ ಅಂಗವಾಗಿ ಶುಕ್ರವಾರ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ನಂತರ ಮಾದ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿದರು.

ಇದನ್ನೂ ಓದಿ: Mysore Dasara : ದಸರಾ ಹಬ್ಬಕ್ಕಾಗಿ ವಿಶೇಷ ರೈಲುಗಳ ಸಂಚಾರ

ಅಮ್ಮನಘಟ್ಟ ಜೇನುಕಲ್ಲಮ್ಮ ದೇವಸ್ಥಾನಕ್ಕೆ ನೂರಾರು ವರ್ಷಗಳ ಇತಿಹಾಸವಿದೆ, ಲಕ್ಷಾಂತರ ಜನ ಭಕ್ತಾದಿಗಳು ಈ ದೇವಸ್ಥಾನಕ್ಕೆ ಬಂದು ದೇವಿಯ ದರ್ಶನವನ್ನು ಪಡೆದುಕೊಂಡು ಹೋಗುತ್ತಾರೆ, ಈ ಬಾರಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದಿದ್ದರೆ, ಈ ಕ್ಷೇತ್ರದ ಅಭಿವೃದ್ದಿಗೆ ಸರ್ಕಾರದಿಂದ ಐದು ವರ್ಷದ ಅವಧಿಯಲ್ಲಿ 10 ಕೋಟಿ ಅನುದಾನವನ್ನು ತರುವುದರೊಂದಿಗೆ ಈ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿಯೊಂದಿಗೆ ರಾಜ್ಯದಲ್ಲಿ ಅತ್ಯುತ್ತಮ ಮಾದರಿ ಯಾತ್ರಾ ಸ್ಥಳವನ್ನಾಗಿಸುವ ಸಂಕಲ್ಪ ನನ್ನದಾಗಿತ್ತು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ಅವರನ್ನು ದೇವಸ್ಥಾನದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಇದನ್ನೂ ಓದಿ: Midday Sleep: ಹಗಲಿನಲ್ಲಿ ನಿದ್ದೆ ಮಾಡಿದರೆ ಏನಾಗುತ್ತದೆ?

ಈ ವೇಳೆ ಧರ್ಮದರ್ಶಿ ಸಮಿತಿ ಅಧ್ಯಕ್ಷ ಮಾಜಿ ಶಾಸಕ ಬಿ.ಸ್ವಾಮಿರಾವ್, ಎಪಿಎಂಸಿ ಮಾಜಿ ನಿರ್ದೇಶಕ ಕಲ್ಯಾಣಪ್ಪಗೌಡ, ಪ್ರಧಾನ ಕಾರ್ಯದರ್ಶಿ ಸುದೀರ್‌ಭಟ್, ತಾ.ಪಂ.ಮಾ.ಅಧ್ಯಕ್ಷ ವೀರೇಶ್ ಅಲವಳ್ಳಿ, ಕೋಡೂರು ವಿಜೇಂದ್ರಭಟ್, ಹರೀಶ್‌ಗೌಡ, ಡಾಕಪ್ಪ ಬೆಳ್ಳೂರು, ರತ್ನಮ್ಮ, ತಿಮ್ಮಪ್ಪ,ಕೋಡೂರು ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸದಸ್ಯ ಜಯಪ್ರಕಾಶಶೆಟ್ಟಿ, ಇನ್ನಿತರ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Exit mobile version