Site icon Vistara News

Accident | ರಿಪ್ಪನ್‌ಪೇಟೆಯಲ್ಲಿ ವಿದ್ಯುತ್ ಕಂಬಕ್ಕೆ ಗೂಡ್ಸ್ ಆಟೋ ಡಿಕ್ಕಿ; ಚಾಲಕ ಸಾವು

Accident

ರಿಪ್ಪನ್ ಪೇಟೆ: ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದ ಸಾಗರ ರಸ್ತೆಯ ಅಂಚೆ ಕಚೇರಿ ಎದುರು ನಿಯಂತ್ರಣ ತಪ್ಪಿ ಗೂಡ್ಸ್ ಆಟೋ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಚಾಲಕ ಮೃತಪಟ್ಟಿದ್ದಾನೆ.

ಪಟ್ಟಣದ ತೀರ್ಥಹಳ್ಳಿ ರಸ್ತೆಯ ಶಬರೀಶನಗರದ ನಿವಾಸಿ ಶ್ರೀನಿವಾಸ್(36) ಮೃತ. ಸಾಗರ ರಸ್ತೆಯಿಂದ ರಿಪ್ಪನ್ ಪೇಟೆಯ ಕಡೆಗೆ ವಾಹನ ಬರುತ್ತಿತ್ತು. ಈ ವೇಳೆ ಚಾಲಕನು ಅಂಚೆ ಕಚೇರಿ ಮುಂಭಾಗದಲ್ಲಿ ಇರುವ ದೊಡ್ಡ ಗುಂಡಿಯನ್ನು ತಪ್ಪಿಸಲು ಹೋದ ಕಾರಣ ನಿಯಂತ್ರಣ ತಪ್ಪಿದೆ. ಆಗ ಅಲ್ಲಿಯೇ ನಿಂತಿದ್ದ ಬೈಕ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದಾಗ ವಾಹನವು ಕಂಬಕ್ಕೆ ಡಿಕ್ಕಿಯಾಗಿದೆ. ಇದರ ತೀವ್ರತೆಗೆ ಚಾಲಕ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ರಿಪ್ಪನ್‌ಪೇಟೆ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಶಾಸಕರೂ ಆದ ಎಂಎಸ್‌ಎಲ್‌ಐ ಅಧ್ಯಕ್ಷ ಹರತಾಳು ಹಾಲಪ್ಪ ಅವರು ಘಟನೆಯ ಸುದ್ದಿ ತಿಳಿದ ತಕ್ಷಣ ಆಸ್ಪತ್ರೆಗೆ ಭೇಟಿ ನೀಡಿ ಕುಟುಂಸ್ಥರಿಗೆ ಸಾಂತ್ವನ ಹೇಳಿದ್ದಾರೆ. ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ | Chandan Kumar | ಲಕ್ಷ್ಮೀ ಬಾರಮ್ಮ ಖ್ಯಾತಿಯ ಚಂದನ್‌ ಹೋಟೆಲ್‌ನಲ್ಲಿ ಕಳ್ಳತನ: ಸಿಸಿಟಿವಿ ದೃಶ್ಯ ವೈರಲ್‌

Exit mobile version