ಹೊಸನಗರ: ತಾಲೂಕಿನ ಪುರಪ್ಪೇಮನೆ ನದಿ ತೀರದಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ 150 ಟನ್ ಮರಳನ್ನು (Sand) ಪೊಲೀಸ್ ಇಲಾಖೆ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿರುವ (Seized) ಘಟನೆ ನಡೆದಿದೆ.
ಪುರಪ್ಪೆಮನೆಯ ನದಿ ತೀರದಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಮಾಡಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಅಕ್ರಮ ಮರಳನ್ನು ವಶಕ್ಕೆ ಪಡೆದಿದ್ದಾರೆ.
ಹೊಸನಗರ ಠಾಣೆಯ ಸಿಪಿಐ ಗುರಣ್ಣ ಎಸ್, ಹೆಬ್ಬಾಳ್, ಪಿಎಸ್ಐ ಶಿವಾನಂದ ವೈ.ಕೆ., ಶಿವಮೊಗ್ಗ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿ ಪ್ರಿಯಾ ಅವರ ನೇತೃತ್ವದಲ್ಲಿ ಜಂಟಿ ಕಾರ್ಯಾಚರಣೆ ನಡೆಸಿ 150 ಟನ್ ಅಕ್ರಮ ಮರಳನ್ನು ವಶಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ: Brain Tumor: ಬೆರಳಿನ ಪರೀಕ್ಷೆಯಿಂದ ಮೆದುಳಿನ ಟ್ಯೂಮರ್ ಪತ್ತೆ! ವಿಜ್ಞಾನಿಗಳಿಂದ ಹೊಸ ಆವಿಷ್ಕಾರ
ಈ ಕುರಿತು ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.