Hosanagara News: ನೀರು, ಮೇವು ಅಭಾವವಾಗದಂತೆ ನೋಡಿಕೊಳ್ಳಿ; ಪಿಡಿಒಗಳಿಗೆ ಮಧು ಬಂಗಾರಪ್ಪ ಸೂಚನೆ - Vistara News

ಶಿವಮೊಗ್ಗ

Hosanagara News: ನೀರು, ಮೇವು ಅಭಾವವಾಗದಂತೆ ನೋಡಿಕೊಳ್ಳಿ; ಪಿಡಿಒಗಳಿಗೆ ಮಧು ಬಂಗಾರಪ್ಪ ಸೂಚನೆ

Hosanagara News: ಹೊಸನಗರ ತಾ.ಪಂ. ಸಭಾಂಗಣದಲ್ಲಿ ಶುಕ್ರವಾರ ಬರ ನಿರ್ವಹಣೆ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳ ಮಟ್ಟದ ಸಭೆಯು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಜರುಗಿತು.

VISTARANEWS.COM


on

Minister Madhu Bangarappa spoke at a drought management meeting in Hosanagara
ಹೊಸನಗರ ತಾ.ಪಂ. ಸಭಾಂಗಣದಲ್ಲಿ ನಡೆದ ಬರ ನಿರ್ವಹಣೆ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳ ಮಟ್ಟದ ಸಭೆಯಲ್ಲಿ ಸಚಿವ ಮಧು ಬಂಗಾರಪ್ಪ ಮಾತನಾಡಿದರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸನಗರ: ಕುಡಿಯುವ ನೀರು (Drinking Water) ಒದಗಿಸುವುದು ಸರ್ಕಾರದ ಪ್ರಥಮ ಗುರಿ. ಎಂತಹ ಸಂದರ್ಭದಲ್ಲಿಯೂ ಅದರಲ್ಲಿ ವಿಫಲರಾಗಬಾರದು. ಸಮಸ್ಯಾತ್ಮಕ ಪ್ರದೇಶಗಳಿಗೆ ನೀರು ಒದಗಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಕುರಿತು ಪೂರ್ವ ತಯಾರಿ ಕೈಗೊಳ್ಳಿ. ಗ್ರಾಮೀಣ ಪ್ರದೇಶದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಹೇಳಿದರು.

ಇಲ್ಲಿನ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಬರ ನಿರ್ವಹಣೆ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಳೆ ಕೊರತೆಯಿಂದ ತಲೆದೋರಿರುವ ಬರ ಪರಿಸ್ಥಿತಿಯನ್ನು ನಿರ್ವಹಿಸಲು ವಿವಿಧ ಇಲಾಖೆಗಳ ಸಮನ್ವಯತೆ ಅಗತ್ಯ. ಈ ದಿಸೆಯಲ್ಲಿ ಅಧಿಕಾರಿಗಳು ಕಾರ್ಯೋನ್ಮುಖವಾಗಬೇಕು ಎಂದರು.

ಇದನ್ನೂ ಓದಿ: Ballari News: ಡಿ.2ರಂದು ವಿಸ್ತಾರ ನ್ಯೂಸ್‌ ಬೆಸ್ಟ್‌ ಟೀಚರ್‌ ಅವಾರ್ಡ್‌-2023 ಕಾರ್ಯಕ್ರಮ

ತಾಲೂಕಿನಲ್ಲಿ ಶೇ.37 ರಷ್ಟು ಮಳೆ ಕೊರತೆಯಾಗಿದೆ. ಶೇ.10 ರಷ್ಟು ವಾಡಿಕೆಗಿಂತ ಕಡಿಮೆ ಪ್ರದೇಶದಲ್ಲಿ ಈ ಬಾರಿ ಬಿತ್ತನೆ ಕಾರ್ಯ ನಡೆದಿತ್ತು. ನೀರಿನ ಕೊರತೆಯಿಂದಾಗಿ 5763 ಹೆಕ್ಟೇರ್ ಭೂಮಿಯಲ್ಲಿ ಬೆಳೆದ ಕೃಷಿ ಬೆಳೆಗಳಿಗೆ ಹಾನಿಯಾಗಿದೆ. ಒಟ್ಟಾರೆ 5.50 ಕೋಟಿ ರೂ. ಹಾನಿ ಎಂದು ಅಂದಾಜಿಸಲಾಗಿದೆ ಎಂದು ಉಪವಿಭಾಗಾಧಿಕಾರಿ ಪಲ್ಲವಿ ಸಾತೇನಹಳ್ಳಿ ಸಭೆಗೆ ಮಾಹಿತಿ ನೀಡಿದರು.

ತೆರೆದ ಬಾವಿ, ಕಾಲುಸಂಕ ಹಾಗೂ ಗೋಕಟ್ಟೆ ನಿರ್ಮಾಣಕ್ಕೆ ನರೇಗಾ ಯೋಜನೆಯಡಿ ಅವಕಾಶ ಕಲ್ಪಿಸಬೇಕು. ಈಗಾಗಲೇ ಕೊರೆಯಲಾಗಿರುವ ಕೊಳವೆ ಬಾವಿಗಳಿಗೆ ಬಿಲ್ ಹಣ ಗುತ್ತಿಗೆದಾರರಿಗೆ ಸಂದಾಯವಾಗಿಲ್ಲ. ಈ ಕಾರಣಕ್ಕೆ ಹೊಸ ಕೊಳವೆ ಬಾವಿ ಕೊರೆಸಲು ಸಾಧ್ಯವಾಗಿಲ್ಲ. ಇದಕ್ಕೆ ಅವಕಾಶ ಕಲ್ಪಿಸಬೇಕು ಎಂದು ಪಿಡಿಓಗಳು ಮನವಿ ಮಾಡಿದರು.

ಇದನ್ನೂ ಓದಿ: Shivamogga News: ಹೆಬ್ಬಿಗೆ ಸರ್ಕಾರಿ ಶಾಲೆಯಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ

ಸಭೆಯಲ್ಲಿ ತಹಸೀಲ್ದಾರ್ ರಶ್ಮಿ, ತಾಪಂ ಇಒ ನರೇಂದ್ರ ಕುಮಾರ್ ಹಾಗೂ ಮತ್ತಿತರರು ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Naxalite Srimathi: ನಕ್ಸಲ್ ಹೋರಾಟಗಾರ್ತಿ ಶ್ರೀಮತಿ ಪೊಲೀಸ್‌ ಕಸ್ಟಡಿಗೆ

Naxalite Srimathi: ತೀರ್ಥಹಳ್ಳಿ ಜೆಎಂಎಫ್‌ಸಿ ಕೋರ್ಟ್‌ಗೆ ನಕ್ಸಲ್‌ ಹೋರಾಟಗಾರ್ತಿ ಶ್ರೀಮತಿಯನ್ನು ಹಾಜರುಪಡಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.

VISTARANEWS.COM


on

Srimathi
Koo

ಶಿವಮೊಗ್ಗ: ನಕ್ಸಲ್ ಹೋರಾಟ ಪ್ರಕರಣಗಳ ತನಿಖೆ ಮತ್ತಷ್ಟು ಚುರುಕು ಪಡೆದಿದ್ದು, ಇದೀಗ ನಕ್ಸಲ್ ಹೋರಾಟಗಾರ್ತಿ ಶ್ರೀಮತಿಯನ್ನು (Naxalite Srimathi) ತೀರ್ಥಹಳ್ಳಿ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ತೀರ್ಥಹಳ್ಳಿ ಜೆಎಂಎಫ್‌ಸಿ ಕೋರ್ಟ್‌ಗೆ ಶ್ರೀಮತಿಯನ್ನು ಹಾಜರುಪಡಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್‌ ಕಸ್ಟಡಿಗೆ ನೀಡಲಾಗಿದೆ.

ಶಿವಮೊಗ್ಗದಲ್ಲಿ ನಕ್ಸಲ್ ಹೋರಾಟದ ಪ್ರಕರಣಗಳ ತನಿಖೆ ಮತ್ತಷ್ಟು ಚುರುಕು ಪಡೆದಿದೆ. ನಕ್ಸಲರ ನಾಯಕ ಬಿ.ಜಿ‌. ಕೃಷ್ಣಮೂರ್ತಿ ಅವರನ್ನು ಕಳೆದ ತಿಂಗಳು ಶಿವಮೊಗ್ಗ ಕೋರ್ಟ್‌ಗೆ ಪೊಲೀಸರು ಹಾಜರು ಪಡಿಸಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೊಬ್ಬ ನಕ್ಸಲ್ ಹೋರಾಟಗಾರ್ತಿಯನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿದೆ.

ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಸಮೀಪದ ತಾರಳ್ಳಿಕೊಡಿಗೆ ಗ್ರಾಮದ ಶ್ರೀಮತಿ, ನಕ್ಸಲ್ ಹೋರಾಟಗಾರ ಬಿ.ಜಿ. ಕೃಷ್ಣಮೂರ್ತಿ ಜತೆ ಗುರುತಿಸಿಕೊಂಡಿದ್ದರು. 2023ರ ನವೆಂಬರ್ 7 ರಂದು ಶ್ರೀಮತಿಯನ್ನು ಕೇರಳ ಪೊಲೀಸರು ಅರೆಸ್ಟ್ ಮಾಡಿದ್ದರು. 3/12 ಆಗುಂಬೆ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ ವಿಚಾರಣೆ ನಡೆಸಲು ಶ್ರೀಮತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಿಗಿ ಭದ್ರತೆಯೊಂದಿಗೆ ಕೇರಳದ ತ್ರಿಶೂರ್‌ ಜಿಲ್ಲೆಯ ವಿಯೂರ್ ಜೈಲಿನಿಂದ ಶಿವಮೊಗ್ಗಕ್ಕೆ ಶ್ರೀಮತಿಯನ್ನು ಕರೆತರಲಾಗಿದೆ.

ಇದನ್ನೂ ಓದಿ | Blast in Bengaluru : ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇಟ್ಟಿದ್ದು ಬಿಜೆಪಿ ಎಂದ ಸಚಿವ ಮಂಕಾಳು ವೈದ್ಯ!

‘ಪಾಕಿಸ್ತಾನ ಜಿಂದಾಬಾದ್’ ಕೇಸ್‌; FSL ವರದಿ ಬಹಿರಂಗಕ್ಕೆ ಬಿಜೆಪಿ ನಿಯೋಗ ಮನವಿ

Pakistan Zindabad case BJP delegation demands disclosure of FSL report

ಬೆಂಗಳೂರು: ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಕುರಿತ ಎಫ್‍ಎಸ್‍ಎಲ್ ವರದಿಯನ್ನು (FSL Report) ಕೂಡಲೇ ಬಹಿರಂಗ ಮಾಡುವಂತೆ ಬಿಜೆಪಿ (BJP Karnataka) ನಿಯೋಗವು ಐಜಿಪಿಗೆ ಮನವಿ ಸಲ್ಲಿಸಿದೆ.

ಶಾಸಕ ಎಲ್.ಎ. ರವಿಸುಬ್ರಹ್ಮಣ್ಯ, ಸಿ.ಕೆ. ರಾಮಮೂರ್ತಿ, ಉದಯ ಬಿ. ಗರುಡಾಚಾರ್ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ ಅವರನ್ನೊಳಗೊಂಡ ನಿಯೋಗವು ಸೋಮವಾರ ನೃಪತುಂಗ ರಸ್ತೆಯಲ್ಲಿರುವ ಇನ್‍ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್ (ಐಜಿಪಿ) ಕಚೇರಿಗೆ ಭೇಟಿ ನೀಡಿ ಮನವಿ ಸಲ್ಲಿಸಿತು.

ಇದೇ ಫೆಬ್ರವರಿ 27ರಂದು ವಿಧಾನಸೌಧದ ಕಾರಿಡಾರ್‌ನಲ್ಲಿ ರಾಜ್ಯಸಭಾ ಸಂಸದ ಸೈಯದ್ ನಾಸಿರ್ ಹುಸೇನ್ ಬೆಂಬಲಿಗರು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದರು. ನಂತರ ಗೃಹ ಸಚಿವ ಡಾ. ಪರಮೇಶ್ವರ್ ಅವರು ಎಫ್‍ಎಸ್‍ಎಲ್ ವರದಿಯನ್ನು ಶೀಘ್ರವೇ ಬಹಿರಂಗ ಮಾಡುವ ಭರವಸೆ ನೀಡಿದ್ದರು. ಘಟನೆ ನಡೆದು ಒಂದು ವಾರ ಕಳೆದರೂ ಎಫ್‍ಎಸ್‍ಎಲ್ ವರದಿಯ ಮಾಹಿತಿ ಇಲ್ಲ ಎಂದು ರಾಜ್ಯ ಸರ್ಕಾರ ಹೇಳುತ್ತಿದೆ. ಇದು ಖಂಡನೀಯ ಎಂದು ಬಿಜೆಪಿ ಹೇಳಿದೆ.

ವಿಳಂಬ ಮಾಡಿದರೆ ಸಮಾಜಘಾತಕರಿಗೆ ಬಲ ನೀಡಿದಂತೆ

ಸತ್ಯ ತಿಳಿಸಲು ವಿಳಂಬವೇಕೆ? ವಾಸ್ತವ ಸಂಗತಿ ಮರೆಮಾಚಲು ಮತ್ತು ತನಿಖೆಯ ದಿಕ್ಕನ್ನು ಹಳಿ ತಪ್ಪಿಸಲು ನಿಮ್ಮ ಮೇಲೆ ಯಾವುದಾದರೂ ಒತ್ತಡವಿದೆಯೇ ಎಂದು ಪ್ರಶ್ನಿಸಲಾಗಿದೆ. ಇಂತಹ ವಿಳಂಬದಿಂದ ಮುಂದಿನ ದಿನಗಳಲ್ಲಿ ಈ ರೀತಿ ದೇಶವಿರೋಧಿ ಮತ್ತು ಸಮಾಜಘಾತುಕ ಕೆಲಸ ಮಾಡುವ ಜನರಿಗೆ ಮತ್ತಷ್ಟು ಬಲ ಬಂದಂತಾಗುತ್ತದೆ ಎಂದು ಮನವಿಯಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ.

ಇದನ್ನೂ ಓದಿ | Kyasanur Forest Disease: ಕರ್ನಾಟಕದಲ್ಲಿ ಕೆಎಫ್‌ಡಿಗೆ 6 ಬಲಿ! ಕಾಯಿಲೆ ಲಕ್ಷಣಗಳೇನು? ಪಾರಾಗುವುದು ಹೇಗೆ?

ಎಫ್‍ಎಸ್‍ಎಲ್ ವರದಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅನೇಕ ಪೋಸ್ಟ್‌ಗಳಿವೆ. ಆದ್ದರಿಂದ ಈ ತನಿಖೆಯ ವಾಸ್ತವಾಂಶವನ್ನು ತಿಳಿಯಲು ಬಯಸುತ್ತೇವೆ. ರಾಜ್ಯದ ಜವಾಬ್ದಾರಿಯುತ ವಿಪಕ್ಷವಾಗಿ, ನಾವು ಈ ಪತ್ರಕ್ಕೆ ನಿಮ್ಮಿಂದ ಪ್ರಾಮಾಣಿಕ ಮತ್ತು ತ್ವರಿತ ಪ್ರತ್ಯುತ್ತರದ ನಿರೀಕ್ಷೆಯಲ್ಲಿದ್ದೇವೆ ಎಂದು ಮನವಿ ಪತ್ರದಲ್ಲಿ ಬಿಜೆಪಿ ಹೇಳಿದೆ.

Continue Reading

ಮಳೆ

Karnataka Weather : ಛತ್ರಿ ಇಲ್ಲದೇ ಹೊರಗೆ No Entry; ಇದು ಸೂರ್ಯನ ಟಾರ್ಚರ್‌

Dry Weather: ಉತ್ತರ ಒಳನಾಡಿನಿಂದ ದಕ್ಷಿಣ ಒಳನಾಡವರೆಗೂ, ಕರಾವಳಿಯಿಂದ ಮಲೆನಾಡವರೆಗೆ ಗರಿಷ್ಠ ತಾಪಮಾನ ಏರಿಕೆ ಆಗಲಿದೆ ಎಂದು ಹವಾಮಾನ ತಜ್ಞರು (Karnataka Weather Forecast) ಸೂಚಿಸಿದ್ದಾರೆ.

VISTARANEWS.COM


on

By

Dry weather likely to prevail over the State
Koo

ಬೆಂಗಳೂರು: ಸೂರ್ಯ ನೆತ್ತಿಗೆ ಬರುವ ಮುನ್ನವೇ ಜನರು ಹೊರಗಿನ ಕೆಲಸವನ್ನೆಲ್ಲ ಮುಗಿಸಿಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೊರಗೆ ಕಾಲಿಟ್ಟರೆ ಸುಡುವ ಸೂರ್ಯನನ್ನು ಹೆದರಿಸಲು ಕೈಯಲ್ಲಿ ಛತ್ರಿ ಹಿಡಿದೆ ಹೊರಬರಬೇಕು ಎಂಬಂತಾಗಿದೆ. ಗರಿಷ್ಠ ತಾಪಮಾನ ಏರಿಕೆಗೆ ಎಲ್ಲ ವಯೋಮಾನದವರು ತತ್ತರಿಸಿ ಹೋಗಿದ್ದಾರೆ. ಮುಂದಿನ ಒಂದು ವಾರಗಳ ಕಾಲ ಸಾಮಾನ್ಯಕ್ಕಿಂತ ತಾಪಮಾನ ದುಪ್ಪಟ್ಟು ಆಗಲಿದೆ. ರಾಜ್ಯಾದ್ಯಂತ ಶುಷ್ಕ ವಾತಾವರಣವೇ (Dry Weather) ಮೇಲುಗೈ ಸಾಧಿಸಲಿದೆ ಎಂದು ಹವಾಮಾನ ಇಲಾಖೆ (Karnataka Weather Forecast) ಮುನ್ಸೂಚನೆಯನ್ನು ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ,ಉತ್ತರ ಕನ್ನಡ, ಉಡುಪಿಯಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಪಟ್ಟು ಹೆಚ್ಚಾಗಲಿದೆ. ಇನ್ನೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ. ಪ್ರಮುಖವಾಗಿ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ ಹಾಗೂ ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಬಿಸಿಲಿನ ಧಗೆ ಹೆಚ್ಚಾಗಿ ಇರಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ಸೇರಿದಂತೆ ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಲಿದೆ.

ರಾಜಧಾನಿಯಲ್ಲೂ ಬಿಸಿಲ ಧಗೆ

ಮುಂದಿನ 24 ಗಂಟೆಯಲ್ಲಿ ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಆದರೆ ಮಧ್ಯಾಹ್ನ ಸಮಯ ಬಿಸಿಲ ಧಗೆ ಹೆಚ್ಚಿರಲಿದೆ. ಗರಿಷ್ಠ ಉಷ್ಣಾಂಶ 33 ಮತ್ತು ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಇದನ್ನೂ ಓದಿ: Drowned in Pond : ಕೃಷಿ ಹೊಂಡಕ್ಕೆ ಬಿದ್ದು ಮೂವರು ಸಾವು; ದೇವರ ಊಟ ಮಾಡಿ ಕೈ ತೊಳೆಯುವಾಗ ದುರಂತ

ಪ್ರಮುಖ ನಗರಗಳಲ್ಲಿನ ಇಂದಿನ ತಾಪಮಾನ ಹೀಗಿದೆ.

ನಗರದ ಹೆಸರು- ಗರಿಷ್ಠ ಉಷ್ಣಾಂಶ- ಕನಿಷ್ಠ ಉಷ್ಣಾಂಶ (ಡಿಗ್ರಿ ಸೆಲ್ಸಿಯಸ್‌)
ಬೆಂಗಳೂರು ನಗರ: 32 ಡಿ.ಸೆ – 20 ಡಿ.ಸೆ
ಮಂಗಳೂರು: 35 ಡಿ.ಸೆ – 25 ಡಿ.ಸೆ
ಚಿತ್ರದುರ್ಗ: 34 ಡಿ.ಸೆ – 20 ಡಿ.ಸೆ
ಗದಗ: 35 ಡಿ.ಸೆ – 21 ಡಿ.ಸೆ
ಹೊನ್ನಾವರ: 35 ಡಿ.ಸೆ- 22 ಡಿ.ಸೆ
ಕಲಬುರಗಿ: 36 ಡಿ.ಸೆ – 23 ಡಿ.ಸೆ
ಬೆಳಗಾವಿ: 34 ಡಿ.ಸೆ – 16 ಡಿ.ಸೆ
ಕಾರವಾರ: 35 ಡಿ.ಸೆ – 23 ಡಿ.ಸೆ

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿವಮೊಗ್ಗ

Hosanagara News: ಪಂಚ ಆಲಯಗಳಿಂದ ಗ್ರಾಮಾಭಿವೃದ್ಧಿ ಸಾಧ್ಯ: ಡಾ.ಕೆ.ವಿ.ಪತಂಜಲಿ

Hosanagara News: ಹೊಸನಗರ ತಾಲೂಕಿನ ಪುರಪ್ಪೆಮನೆಯ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿಗಳ ಒಕ್ಕೂಟವು 14 ಲಕ್ಷ ರೂ. ಕೊಡುಗೆಯಲ್ಲಿ ನಿರ್ಮಿಸಿದ ನೂತನ ಅನ್ನಪೂರ್ಣ ಭೋಜನಾಲಯ ಕಟ್ಟಡದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

VISTARANEWS.COM


on

Inauguration programme of new Annapurna Bhojanalaya building
Koo

ಹೊಸನಗರ: ಪಂಚ ಆಲಯಗಳಿಂದ ಗ್ರಾಮಾಭಿವೃದ್ಧಿ ಸಾಧ್ಯ ಎಂದು ಆಯುರ್ವೇದ ವೈದ್ಯ ಡಾ. ಕೆ.ವಿ.ಪತಂಜಲಿ (Hosanagara News) ಹೇಳಿದರು.

ತಾಲೂಕಿನ ಪುರಪ್ಪೆಮನೆಯ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿಗಳ ಒಕ್ಕೂಟ 14 ಲಕ್ಷ ರೂ. ಕೊಡುಗೆಯಲ್ಲಿ ನಿರ್ಮಿಸಿದ ನೂತನ ಅನ್ನಪೂರ್ಣ ಭೋಜನಾಲಯ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿ ಗ್ರಾಮಕ್ಕೂ ವಾಚನಾಲಯ, ಚಿಕಿತ್ಸಾಲಯ, ಭೋಜನಾಲಯ, ಶೌಚಾಲಯ ಹಾಗೂ ವಿದ್ಯಾಲಯಗಳು ಇದ್ದಲ್ಲಿ, ಗ್ರಾಮದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದರು.

ಇತ್ತೀಚೆಗೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಕೊರತೆ ಇದೆ. ಮಕ್ಕಳು ಸ್ಪರ್ಧಾತ್ಮಕ ಮನೋಭಾವ ರೂಢಿಸಿಕೊಳ್ಳುವುದರಿಂದ ಶೈಕ್ಷಣಿಕ ಪ್ರಗತಿ ಕಂಡುಕೊಳ್ಳಲು ಸಾಧ್ಯವಿದೆ. ಭೌತಿಕ ಬೆಳವಣಿಗೆಯ ಜತೆಗೆ ಬೌದ್ಧಿಕ ಬೆಳವಣಿಗೆ ಅಗತ್ಯ ಎಂದರು.

ಇದನ್ನೂ ಓದಿ: T20 World Cup : ಟಿ20 ವಿಶ್ವ ಕಪ್​ನಲ್ಲಿ ಭಾರತಕ್ಕೆ ಎಷ್ಟು ಪಂದ್ಯಗಳಿವೆ?

ಪುರಪ್ಪೆಮನೆಯ ಸರ್ಕಾರಿ ಶಾಲೆ ಹಲವು ವರ್ಷಗಳಿಂದ ನಿರಂತರವಾಗಿ ಮಕ್ಕಳ ಪ್ರತಿಭೆಯನ್ನು ಅನಾವರಣಗೊಳ್ಳಲು ಪೂರಕ ವಾತಾವರಣ ಕಲ್ಪಿಸಿದೆ. ಇದರ ಫಲವಾಗಿ ಶೈಕ್ಷಣಿಕ ಸಾಧನೆಯ ಪಟ್ಟಿಯಲ್ಲಿ ಇಂದು ಜಿಲ್ಲೆಯಲ್ಲಿಯೇ ಎರಡನೇ ಸ್ಥಾನ ಪಡೆದಿರುವು ಶ್ಲಾಘನೀಯ ಎಂದು ಹೇಳಿದರು.

ಹಳೆ ವಿದ್ಯಾರ್ಥಿಗಳ ಒಕ್ಕೂಟದ ಕಾರ್ಯದರ್ಶಿ ಮೃತ್ಯುಂಜಯ ಮಾತನಾಡಿ, ಪ್ರತಿ ಸರ್ಕಾರಿ ಶಾಲೆಗಳಲ್ಲಿ ಇಂತಹ ಕಾರ್ಯಕ್ರಮಗಳು ಆಗಬೇಕು. ಶಿಕ್ಷಣಕ್ಕೆ ಪೂರಕ ವ್ಯವಸ್ಥೆ ಕೈಗೊಳ್ಳುವಲ್ಲಿ ಸರ್ಕಾರ ಹೆಚ್ಚಿನ ಅನುದಾನ ನೀಡಬೇಕು. ಪೋಷಕರೇ ಇಲ್ಲಿ ಭೋಜನಾಲಯ ನಿರ್ಮಿಸಿರುವುದು ಗಮನಾರ್ಹವಾಗಿದೆ ಎಂದರು.

ಬಿಇಒ ಎಚ್.ಆರ್.ಕೃಷ್ಣಮೂರ್ತಿ ಮಾತನಾಡಿ, ಮೌಲ್ಯಯುತ ಶಿಕ್ಷಣ ಇಂದಿನ ಅಗತ್ಯವಾಗಿದೆ. ಪೋಷಕರು ತಮ್ಮ ಮಕ್ಕಳಿಗೆ ಮೊದಲು ಮಾದರಿಯಾಗಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Jet Suit Race: ವಿಶ್ವದ ಮೊದಲ ಜೆಟ್‌ ಸೂಟ್‌ ರೇಸ್‌ಗೆ ದುಬೈ ಸಾಕ್ಷಿ; ಏನಿದು ಅದ್ಭುತ ರೇಸ್?‌

ಶಾಲಾ ಸಮಿತಿ ಅಧ್ಯಕ್ಷ ಎಂ. ಅಶೋಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತಾ ದಿನೇಶ್, ಉಪಾಧ್ಯಕ್ಷ ರಾಘವೇಂದ್ರ, ಸದಸ್ಯರಾದ ಅನ್ನಪೂರ್ಣಮ್ಮ, ರಾಘವೇಂದ್ರ, ಮಹಾಲಕ್ಷ್ಮಿ, ಸಂತೋಷ, ಜಯಲಕ್ಷ್ಮಿ, ಜಯಪ್ರಕಾಶ ಶೆಟ್ಟಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಬಿ.ಜಿ.ಚಂದ್ರಮೌಳಿ, ಭೂದಾನಿ ಶಂಕರನಾರಾಯಣ ಹೆಗಡೆ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನಾಗರಾಜ ಎಸ್.ಪಿ, ಶಿಕ್ಷಕರ ಸಂಘದ ಅಧ್ಯಕ್ಷ ಕುಬೆಂದ್ರಪ್ಪ, ಉಪಾಧ್ಯಕ್ಷ ಮಹಮದ್ ಅಲ್ತಾಫ್, ಸಿಆರ್‌ಪಿ ಅರವಿಂದ ಹಾಗೂ ಇತರರು ಉಪಸ್ಥಿತರಿದ್ದರು. ಪ್ರಸನ್ನಕುಮಾರ್ ನಿರೂಪಿಸಿದರು.

Continue Reading

ಶಿವಮೊಗ್ಗ

Shivamogga News: ಹೊಟ್ಟಕೇರಿ ಕೆರೆಯಲ್ಲಿ ನೂರಾರು ಮೀನುಗಳ ಸಾವು

Shivamogga News: ಸೊರಬ ತಾಲೂಕಿನ ಗೆಂಡ್ಲ‌ ಗ್ರಾಮದ ಹೊಟ್ಟಕೇರಿ ಕೆರೆಯಲ್ಲಿ ನೂರಾರು ಮೀನುಗಳು ಸಾವನ್ನಪ್ಪಿದ ಘಟನೆ ನಡೆದಿದೆ.

VISTARANEWS.COM


on

Fishes die in Hottakeri lake
Koo

ಸೊರಬ: ಕೆರೆಯಲ್ಲಿ ನೂರಾರು ಮೀನುಗಳು (Fishes) ಸಾವನ್ನಪ್ಪಿದ ಘಟನೆ ತಾಲೂಕಿನ ಗೆಂಡ್ಲ ಗ್ರಾಮದಲ್ಲಿ (Shivamogga News) ಜರುಗಿದೆ.

ಗೆಂಡ್ಲ‌ ಗ್ರಾಮದ ಹೊಟ್ಟಕೇರಿ ಕೆರೆಯಲ್ಲಿ ಈ ಘಟನೆ ನಡೆದಿದೆ, ಮೀನುಗಳು ಕೆರೆಯಲ್ಲಿ ತೇಲುತ್ತಿದ್ದು, ಇದನ್ನು ಗಮನಿಸಿದ ಗ್ರಾಮಸ್ಥರು ಕೆರೆಯಲ್ಲಿ‌ ಮೀನುಗಳು ಏಕಾಏಕಿ ಸಾವನ್ನಪ್ಪಿರುವುದು ಗ್ರಾಮಸ್ಥರಲ್ಲಿ ಗೊಂದಲವನ್ನುಂಟು ಮಾಡಿದೆ. ಕೆರೆಗೆ ಕಳೆದ ಮಳೆಗಾಲದಲ್ಲಿ 50 ಸಾವಿರ ಮೀನಿನ‌ ಮರಿಗಳನ್ನು ಬಿಡಲಾಗಿತ್ತು.‌ ಇನ್ನು ಶನಿವಾರ ಕೆರೆಬೇಟೆ ನಡೆಸಲು ಮುಂದಾಗಿದ್ದ ಗ್ರಾಮಸ್ಥರಿಗೆ ಏಕಾಏಕಿ ಕೆರೆಯಲ್ಲಿದ್ದ ಮೀನುಗಳ‌ ಸಾವು ಕಂಗಾಲಾಗಿಸಿದೆ.

ಇದನ್ನೂ ಓದಿ: Arecanut Price: ಅಡಿಕೆ ಧಾರಣೆಯಲ್ಲಿ ದಿಢೀರ್‌ ಕುಸಿತ; ಬೆಲೆ ಇಳಿಕೆಗೆ ಅಕ್ರಮ ಸಾಗಣೆ ಕಾರಣವೇ?

ಇನ್ನು ಕೆರೆಯಲ್ಲಿ ಮೀನುಗಳ ಸಾವನ್ನು ಗಮನಿಸಿದ ಗ್ರಾಮಸ್ಥರು ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಮೇಲ್ನೋಟಕ್ಕೆ ಆಮ್ಲಜನಕ ಕೊರತೆಯಿಂದ ಮೀನುಗಳ ಮರಣವಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಸಂಪೂರ್ಣ ಮಾಹಿತಿ ಸಿಗುವವರೆಗೆ ಕೆರೆಯಲ್ಲಿ ಮೀನು ಹಿಡಿಯದಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಈ ಕುರಿತು ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯದ ಪ್ರಯೋಗಾಲಯಕ್ಕೆ ಕೆರೆಯ ನೀರನ್ನು ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ.

Continue Reading
Advertisement
exam writing
ಪ್ರಮುಖ ಸುದ್ದಿ19 mins ago

Kar TET 2024: ಜೂನ್‌ನಲ್ಲಿ ಟಿಇಟಿ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಿದ ಶಿಕ್ಷಣ ಇಲಾಖೆ

Mohamed Muizzu And Xi Jinping
ದೇಶ20 mins ago

Maldives: ಚೀನಾ ಜತೆ ಒಪ್ಪಂದದ ಬೆನ್ನಲ್ಲೇ ಮಾಲ್ಡೀವ್ಸ್‌ ಉದ್ಧಟತನ;‌ ಭಾರತ ಸೇನೆಗೆ ಡೆಡ್‌ಲೈನ್

Cricket Coach Tushar Arothe
ಕ್ರೀಡೆ25 mins ago

Tushar Arothe: ಭಾರತ ತಂಡದ ಮಾಜಿ ಕೋಚ್ ಮನೆಯಲ್ಲಿ ಕೋಟಿ ರೂ. ಪತ್ತೆ; ವಶಕ್ಕೆ ಪಡೆದ ಪೊಲೀಸರು

Bescom website
ಕರ್ನಾಟಕ26 mins ago

Escom Online Services: ಮಾ.10 ರಿಂದ ಹತ್ತು ದಿನ ಎಸ್ಕಾಂಗಳ ಆನ್‌ಲೈನ್ ಸೇವೆಗಳಲ್ಲಿ ವ್ಯತ್ಯಯ

Shahjahan Sheikh
ದೇಶ33 mins ago

ಲೈಂಗಿಕ ದೌರ್ಜನ್ಯ; ಟಿಎಂಸಿಯ ಶಹಜಹಾನ್‌ನನ್ನು ಸಿಬಿಐಗೆ ವಹಿಸಿ ಎಂದು ಕೋರ್ಟ್‌ ಆದೇಶ

Wife And children leave home to be fear by pigs
ಹಾವೇರಿ60 mins ago

Boar Attack : ಹಂದಿಗಳ ಕಾಟಕ್ಕೆ ಮನೆ ಬಿಟ್ಟು ಹೋದ್ರು ಹೆಂಡ್ತಿ-ಮಕ್ಕಳು!

Rohit Sharma
ಕ್ರೀಡೆ1 hour ago

Rohit Sharma: ಕೆಜಿಎಫ್ ಶೈಲಿಯಂತೆ ಹೆಲಿಕಾಪ್ಟರ್​ನಲ್ಲಿ ಧರ್ಮಶಾಲಾಕ್ಕೆ ಬಂದಿಳಿದ ರೋಹಿತ್​; ವಿಡಿಯೊ ವೈರಲ್​

abhijith
ದೇಶ1 hour ago

Abhijit Gangopadhyay: ರಾಜೀನಾಮೆ ನೀಡಿದ ಕೋಲ್ಕತ್ತಾ ಹೈಕೋರ್ಟ್‌ ಜಡ್ಜ್‌ ಅಭಿಜಿತ್‌ ಗಂಗೋಪಾಧ್ಯಾಯ; ರಾಜಕೀಯ ಪ್ರವೇಶ ಸಾಧ್ಯತೆ

JP Nadda BJP
ಚಿಕ್ಕೋಡಿ1 hour ago

JP Nadda : ಪಾಕ್‌ ಬೆಂಬಲಿಗರನ್ನು ಭಾರತ ಮಾತೆ ಕ್ಷಮಿಸಲ್ಲ; ಕಾಂಗ್ರೆಸ್‌ಗೆ ನಡ್ಡಾ ಎಚ್ಚರಿಕೆ

ಕ್ರೀಡೆ1 hour ago

T20 World Cup 2024: ಈ ಮೊಬೈಲ್‌ ಆ್ಯಪ್​ನಲ್ಲಿ ಉಚಿತವಾಗಿ ಪ್ರಸಾರಗೊಳ್ಳಲಿದೆ ಟಿ20 ವಿಶ್ವಕಪ್​

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

BJP JDS alliance to finalise seats for Lok Sabha polls this week HD DeveGowda
ರಾಜಕೀಯ23 hours ago

HD Devegowda: ಈ ವಾರದಲ್ಲಿ ಲೋಕಸಭೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಸೀಟು ಅಂತಿಮ: ಎಚ್‌.ಡಿ. ದೇವೇಗೌಡ

Elephant attacks in Sakaleshpur workers escaped
ಹಾಸನ1 day ago

Elephant Attack : ಆನೆ ಅಟ್ಯಾಕ್‌ಗೆ ಬಾಯಿಗೆ ಬಂತು ಜೀವ; ಜಸ್ಟ್‌ ಎಸ್ಕೇಪ್‌ ಆಗಿದ್ದು ಹೀಗೆ..

dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ಇಂದು ಗಾಬರಿಯಲ್ಲೇ ದಿನ ಕಳೆಯುವಿರಿ

read your daily horoscope predictions for march 3rd 2024
ಭವಿಷ್ಯ2 days ago

Dina Bhavishya : ಈ ರಾಶಿಯವರು ಆತುರದಲ್ಲಿ ಇಂದು ಈ ನಿರ್ಧಾರವನ್ನು ತೆಗೆದುಕೊಳ್ಳಬೇಡಿ!

Rameswaram cafe bomb blast case Accused caught on CCTV
ಬೆಂಗಳೂರು3 days ago

Blast In Bengaluru: ಸನ್ನೆ ಮಾಡಿ ಪೊಲೀಸರಿಗೆ ಶಂಕಿತನ ಚಾಲೆಂಜ್! ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಏನು

Rameswaram Cafe Blast Suspected travels in BMTC Volvo bus
ಬೆಂಗಳೂರು3 days ago

Blast In Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ವೋಲ್ವೋ ಬಸ್‌ನಲ್ಲಿ ಬಾಂಬರ್ ಸಂಚಾರ, ಸಿಸಿಟಿವಿಯಲ್ಲಿ ಸೆರೆ

Blast in Bengaluru Time bomb planted in rameshwaram cafe Important evidence found
ಬೆಂಗಳೂರು4 days ago

Blast in Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಹೋಟೆಲ್‌ನಲ್ಲಿಟ್ಟಿದ್ದು ಟೈಂ ಬಾಂಬ್‌? ಸಿಕ್ಕಿದೆ ಮಹತ್ವದ ಸಾಕ್ಷ್ಯ

rameshwaram cafe bengaluru incident
ಬೆಂಗಳೂರು4 days ago

Blast in Bengaluru : ರಾಮೇಶ್ವರಂ ಕೆಫೆ ಸ್ಫೋಟದ ಸ್ಥಳದಲ್ಲಿ ಬ್ಯಾಟರಿ ಪತ್ತೆ!

Elephants spotted in many places
ಹಾಸನ4 days ago

Elephant Attack: ಹಾಸನ, ರಾಮನಗರ, ಮೈಸೂರಲ್ಲಿ ಆನೆ ಬೇನೆ; ಬೆಳಗಾವಿಯಲ್ಲಿ ಬಿಂದಾಸ್‌ ಓಡಾಟ

read your daily horoscope predictions for march 1st 2024
ಭವಿಷ್ಯ4 days ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

ಟ್ರೆಂಡಿಂಗ್‌