Site icon Vistara News

Hosanagara News: ಪಂಚ ಆಲಯಗಳಿಂದ ಗ್ರಾಮಾಭಿವೃದ್ಧಿ ಸಾಧ್ಯ: ಡಾ.ಕೆ.ವಿ.ಪತಂಜಲಿ

Inauguration programme of new Annapurna Bhojanalaya building

ಹೊಸನಗರ: ಪಂಚ ಆಲಯಗಳಿಂದ ಗ್ರಾಮಾಭಿವೃದ್ಧಿ ಸಾಧ್ಯ ಎಂದು ಆಯುರ್ವೇದ ವೈದ್ಯ ಡಾ. ಕೆ.ವಿ.ಪತಂಜಲಿ (Hosanagara News) ಹೇಳಿದರು.

ತಾಲೂಕಿನ ಪುರಪ್ಪೆಮನೆಯ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿಗಳ ಒಕ್ಕೂಟ 14 ಲಕ್ಷ ರೂ. ಕೊಡುಗೆಯಲ್ಲಿ ನಿರ್ಮಿಸಿದ ನೂತನ ಅನ್ನಪೂರ್ಣ ಭೋಜನಾಲಯ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿ ಗ್ರಾಮಕ್ಕೂ ವಾಚನಾಲಯ, ಚಿಕಿತ್ಸಾಲಯ, ಭೋಜನಾಲಯ, ಶೌಚಾಲಯ ಹಾಗೂ ವಿದ್ಯಾಲಯಗಳು ಇದ್ದಲ್ಲಿ, ಗ್ರಾಮದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದರು.

ಇತ್ತೀಚೆಗೆ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಕೊರತೆ ಇದೆ. ಮಕ್ಕಳು ಸ್ಪರ್ಧಾತ್ಮಕ ಮನೋಭಾವ ರೂಢಿಸಿಕೊಳ್ಳುವುದರಿಂದ ಶೈಕ್ಷಣಿಕ ಪ್ರಗತಿ ಕಂಡುಕೊಳ್ಳಲು ಸಾಧ್ಯವಿದೆ. ಭೌತಿಕ ಬೆಳವಣಿಗೆಯ ಜತೆಗೆ ಬೌದ್ಧಿಕ ಬೆಳವಣಿಗೆ ಅಗತ್ಯ ಎಂದರು.

ಇದನ್ನೂ ಓದಿ: T20 World Cup : ಟಿ20 ವಿಶ್ವ ಕಪ್​ನಲ್ಲಿ ಭಾರತಕ್ಕೆ ಎಷ್ಟು ಪಂದ್ಯಗಳಿವೆ?

ಪುರಪ್ಪೆಮನೆಯ ಸರ್ಕಾರಿ ಶಾಲೆ ಹಲವು ವರ್ಷಗಳಿಂದ ನಿರಂತರವಾಗಿ ಮಕ್ಕಳ ಪ್ರತಿಭೆಯನ್ನು ಅನಾವರಣಗೊಳ್ಳಲು ಪೂರಕ ವಾತಾವರಣ ಕಲ್ಪಿಸಿದೆ. ಇದರ ಫಲವಾಗಿ ಶೈಕ್ಷಣಿಕ ಸಾಧನೆಯ ಪಟ್ಟಿಯಲ್ಲಿ ಇಂದು ಜಿಲ್ಲೆಯಲ್ಲಿಯೇ ಎರಡನೇ ಸ್ಥಾನ ಪಡೆದಿರುವು ಶ್ಲಾಘನೀಯ ಎಂದು ಹೇಳಿದರು.

ಹಳೆ ವಿದ್ಯಾರ್ಥಿಗಳ ಒಕ್ಕೂಟದ ಕಾರ್ಯದರ್ಶಿ ಮೃತ್ಯುಂಜಯ ಮಾತನಾಡಿ, ಪ್ರತಿ ಸರ್ಕಾರಿ ಶಾಲೆಗಳಲ್ಲಿ ಇಂತಹ ಕಾರ್ಯಕ್ರಮಗಳು ಆಗಬೇಕು. ಶಿಕ್ಷಣಕ್ಕೆ ಪೂರಕ ವ್ಯವಸ್ಥೆ ಕೈಗೊಳ್ಳುವಲ್ಲಿ ಸರ್ಕಾರ ಹೆಚ್ಚಿನ ಅನುದಾನ ನೀಡಬೇಕು. ಪೋಷಕರೇ ಇಲ್ಲಿ ಭೋಜನಾಲಯ ನಿರ್ಮಿಸಿರುವುದು ಗಮನಾರ್ಹವಾಗಿದೆ ಎಂದರು.

ಬಿಇಒ ಎಚ್.ಆರ್.ಕೃಷ್ಣಮೂರ್ತಿ ಮಾತನಾಡಿ, ಮೌಲ್ಯಯುತ ಶಿಕ್ಷಣ ಇಂದಿನ ಅಗತ್ಯವಾಗಿದೆ. ಪೋಷಕರು ತಮ್ಮ ಮಕ್ಕಳಿಗೆ ಮೊದಲು ಮಾದರಿಯಾಗಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Jet Suit Race: ವಿಶ್ವದ ಮೊದಲ ಜೆಟ್‌ ಸೂಟ್‌ ರೇಸ್‌ಗೆ ದುಬೈ ಸಾಕ್ಷಿ; ಏನಿದು ಅದ್ಭುತ ರೇಸ್?‌

ಶಾಲಾ ಸಮಿತಿ ಅಧ್ಯಕ್ಷ ಎಂ. ಅಶೋಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ವೇಳೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಜಾತಾ ದಿನೇಶ್, ಉಪಾಧ್ಯಕ್ಷ ರಾಘವೇಂದ್ರ, ಸದಸ್ಯರಾದ ಅನ್ನಪೂರ್ಣಮ್ಮ, ರಾಘವೇಂದ್ರ, ಮಹಾಲಕ್ಷ್ಮಿ, ಸಂತೋಷ, ಜಯಲಕ್ಷ್ಮಿ, ಜಯಪ್ರಕಾಶ ಶೆಟ್ಟಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಬಿ.ಜಿ.ಚಂದ್ರಮೌಳಿ, ಭೂದಾನಿ ಶಂಕರನಾರಾಯಣ ಹೆಗಡೆ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ನಾಗರಾಜ ಎಸ್.ಪಿ, ಶಿಕ್ಷಕರ ಸಂಘದ ಅಧ್ಯಕ್ಷ ಕುಬೆಂದ್ರಪ್ಪ, ಉಪಾಧ್ಯಕ್ಷ ಮಹಮದ್ ಅಲ್ತಾಫ್, ಸಿಆರ್‌ಪಿ ಅರವಿಂದ ಹಾಗೂ ಇತರರು ಉಪಸ್ಥಿತರಿದ್ದರು. ಪ್ರಸನ್ನಕುಮಾರ್ ನಿರೂಪಿಸಿದರು.

Exit mobile version