Site icon Vistara News

Hosanagara News: ವಿಜೃಂಭಣೆಯಿಂದ ಕೆಂಚನಾಲ ಮಾರಿಕಾಂಬಾ ಜಾತ್ರೆ

Kenchanala Marikamba jatra mahotsava

ಹೊಸನಗರ: ತಾಲೂಕಿನ ಇತಿಹಾಸ ಪ್ರಸಿದ್ಧ ಕೆಂಚನಾಲ ಮಾರಿಕಾಂಬ ದೇವಿಯ ಬೇಸಿಗೆ ಜಾತ್ರಾ ಮಹೋತ್ಸವವು ಬುಧವಾರ ಭಕ್ತ ಸಾಗರದ ನಡುವೆ ವಿಜೃಂಭಣೆಯಿಂದ (Hosanagara News) ಜರುಗಿತು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಸಹಸ್ರಾರು ಭಕ್ತರು ಆಗಮಿಸಿ, ದೇವಿಯ ದರ್ಶನ ಪಡೆದರು. ಬೆಳಿಗ್ಗೆಯಿಂದಲೇ ಸರತಿ ಸಾಲಿನಲ್ಲಿ ನಿಂತು ಭಕ್ತಾದಿಗಳು ದೇವಿಯ ದರ್ಶನ ಪಡೆದರು.

ಇದನ್ನೂ ಓದಿ: Tata Nexon EV : ಟಾಟಾದ ಈ ಇವಿ ಕಾರಿಗೆ ಬರೋಬ್ಬರಿ 2.80 ಲಕ್ಷ ರೂಪಾಯಿ ಡಿಸ್ಕೌಂಟ್!

ಕೆಂಚನಾಲ ಗ್ರಾಮದಲ್ಲಿ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಇತಿಹಾಸ-ಪುರಾಣ ಪ್ರಸಿದ್ಧ ಜಾತ್ರೆ ಆಗಿದ್ದು, ಪ್ರತಿ ವರ್ಷ ಎರಡು ಬಾರಿ ನಡೆಯುವುದು ವಿಶೇಷವಾಗಿದೆ.

ಇದನ್ನೂ ಓದಿ: GST Fraud: ಜಿಎಸ್‌ಟಿ ತೆರಿಗೆ ವಂಚನೆ ಪತ್ತೆ ಹಚ್ಚಲು ಎಐ, ಅನಾಲಿಟಿಕ್ಸ್ ಟೂಲ್ಸ್ ಬಳಕೆ

ಈ ಸಂದರ್ಭದಲ್ಲಿ ಹೊಸನಗರ ತಾಲೂಕು ತಹಸೀಲ್ದಾರ್ ರಶ್ಮಿ ಎಚ್.ಜೆ., ಉಪತಹಸೀಲ್ದಾರ್‌ ಹುಚ್ಚರಾಯಪ್ಪ, ಕಂದಾಯ ಇಲಾಖೆ ಅಧಿಕಾರಿ ರಾಕೇಶ್ ಫ್ರಾನ್ಸಿಸ್ ಬ್ರಿಟ್ಟೋಬ್, ಮಂಜುನಾಥ್ ಹುಂಚದಕಟ್ಟೆ ಮತ್ತು ದೇವಸ್ಥಾನ ಆಡಳಿತ ಸಮಿತಿ, ಮುಜರಾಯಿ ಇಲಾಖೆಯ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Exit mobile version