ಹೊಸನಗರ: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ (Guarantee Schemes) ಮೂಲಕ ಜನರ ಹಿತ ಕಾಯುತ್ತಿದೆ, ಆರೋಗ್ಯ, ಶಿಕ್ಷಣ ಸೇರಿದಂತೆ ಮೂಲಭೂತ ಸೌಕರ್ಯಗಳಿಗೂ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ (Hosanagara News) ಹೇಳಿದರು.
ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ವತಿಯಿಂದ ಇಲ್ಲಿನ ಬಸ್ ನಿಲ್ದಾಣದ ಆವರಣದಲ್ಲಿ ಶುಕ್ರವಾರ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ, ಬಳಿಕ ಅವರು ಮಾತನಾಡಿದರು.
ಇದನ್ನೂ ಓದಿ: Money Guide: ಆನ್‌ಲೈನ್ ಮೂಲಕ ಪರ್ಸನಲ್ ಲೋನ್‌ಗೆ ಅರ್ಜಿ ಸಲ್ಲಿಸುತ್ತಿದ್ದೀರಾ? ಈ ಅಂಶ ನಿಮ್ಮ ಗಮನದಲ್ಲಿರಲಿ
ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳ ಮೂಲಕ ಜನರ ಹಿತಕಾಯುತ್ತಿದೆ. ನೂತನವಾಗಿ 5300 ಸರ್ಕಾರಿ ಬಸ್‌ಗಳನ್ನು ಬಿಡಲಾಗುವುದು. ಮುಂದಿನ ಶೈಕ್ಷಣಿಕ ವರ್ಷದಲ್ಲಿ ಸುಮಾರು 500 ಶಾಲೆಗಳನ್ನು ಮೇಲ್ದರ್ಜೆಗೇರಿಸಿ ಕೆಪಿಎಸ್ ಶಾಲೆಗಳನ್ನಾಗಿಸಲಾಗುವುದು ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ಬೇಳೂರು ಗೋಪಾಲಕೃಷ್ಣ ಮಾತನಾಡಿ, ಮಲೆನಾಡು ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಈ ಮಹತ್ವಾಕಾಂಕ್ಷಿ ಯೋಜನೆ ಜಾರಿಗೊಂಡಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ, ಶಾಸಕ ಆರಗ ಜ್ಞಾನೇಂದ್ರ ಮಾತನಾಡಿದರು.
ಇದನ್ನೂ ಓದಿ: Job Alert: ಗುಡ್‌ನ್ಯೂಸ್; 247 ಪಿಡಿಒ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ; ಇಲ್ಲಿದೆ ವಿವರ
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ, ತಹಸೀಲ್ದಾರ್ ರಶ್ಮಿ ಹಾಲೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ, ತಾಪಂ ಕಾರ್ಯನಿರ್ವಹಣಾಧಿಕಾರಿ ನರೇಂದ್ರ ಕುಮಾರ್, ಕುಡಿಯುವ ನೀರು ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ರಾಜೇಂದ್ರ ಪ್ರಸಾದ್, ಪಟ್ಟಣ ಪಂಚಾಯಿತಿ ಸದಸ್ಯರಾದ ಗುರುರಾಜ್, ಅಶ್ವಿನಿಕುಮಾರ್, ಶಾಹೀನಾ, ಹಾಲಗದ್ದೆ ಉಮೇಶ್, ಕೃಷ್ಣವೇಣಿ, ಮುಖಂಡರಾದ ಅಮೀರ್ ಹಂಜಾ, ಸಣ್ಣಕ್ಕಿ ಮಂಜು, ಬಸವರಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.