ಹೊಸನಗರ: ತಾಲೂಕಿನ ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಗುರುವಾರ ಶಾಸಕ ಬೇಳೂರು ಗೋಪಾಲಕೃಷ್ಣ ಭೇಟಿ ನೀಡಿ, ನೊಂದ ಕುಟುಂಬಗಳಿಗೆ ವೈಯಕ್ತಿಕ ಪರಿಹಾರ ಧನ (Hosanagara News) ವಿತರಿಸಿದರು.
ಇದನ್ನೂ ಓದಿ: Karnataka Rain : ಕೃಷ್ಣಾ ನದಿ ಪ್ರವಾಹದಲ್ಲಿ ಪಲ್ಟಿ ಹೊಡೆದ ಬೋಟ್; ಎತ್ತುಗಳ ಮೇಲೆ ಕುಸಿದು ಬಿದ್ದ ಗೋಡೆ
ನೆರೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ, ಹೊಸನಗರ ತಾಲೂಕಿನಲ್ಲಿ ಅತಿವೃಷ್ಟಿಯಿಂದ 13.75 ಕೋಟಿ ರೂಪಾಯಿಗಳ ಅಧಿಕ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದ್ದು, 165 ಕಿಲೋ ಮೀಟರ್ ರಸ್ತೆ ಹಾಗೂ ಹೊಸನಗರ ತಾಲೂಕಿನಲ್ಲಿ ಅಂಗನವಾಡಿ, ಶಾಲಾ ಕಟ್ಟಡಗಳು ಹಾಗೂ ಇತರೆ ಸರ್ಕಾರಿ, ಖಾಸಗಿ ಸ್ವತ್ತುಗಳಿಗೆ ಸೇರಿ 147 ಆಸ್ತಿಗಳಿಗೆ ಹಾನಿ ಉಂಟಾಗಿದೆ. ಈ ಬಗ್ಗೆ ಸರ್ಕಾರಕ್ಕೆ ವರದಿ ಸಲ್ಲಿಸಿರುವುದಾಗಿ ತಿಳಿಸಿದರು.
ಇದನ್ನೂ ಓದಿ: Job Alert: ಎಲೆಕ್ಟ್ರಾನಿಕ್ಸ್ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಐಟಿಐ ಪಾಸಾದವರು ಅಪ್ಲೈ ಮಾಡಿ
ಈ ಸಂದರ್ಭದಲ್ಲಿ ತಹಸೀಲ್ದಾರ್ ರಶ್ಮಿ, ಹಾಲೇಶ್, ತಾಲೂಕು ಕಾರ್ಯ ನಿರ್ವಹಣಾಧಿಕಾರಿ ನರೇಂದ್ರ, ಬಾಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಶ್ರೀನಿವಾಸ್ ಆಚಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಮೂರ್ತಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅನಿತಾ ಕುಮಾರಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಂಡಿ ರಾಮಚಂದ್ರ, ಎಪಿಎಂಸಿ ಮಾಜಿ ಅಧ್ಯಕ್ಷ ಈಶ್ವರಪ್ಪ ಗೌಡ, ಮೆಸ್ಕಾಂ ಇಲಾಖೆಯ ಕಾರ್ಯಪಾಲಕ ಅಭಿಯಂತರ ಚಂದ್ರಶೇಖರ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಚೇತನ್ ಹೆಗಡೆ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಪುಟ್ಟ ನಾಯಕ್, ಕಾಂಗ್ರೆಸ್ ಘಟಕ ಅಧ್ಯಕ್ಷ ಗಣಪತಿ, ಸಣ್ಣಕ್ಕಿ ಮಂಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.