ಹೊಸನಗರ: ಈ ಬಾರಿಯ ಚುನಾವಣೆಯು (Election) ಭಾಗ್ಯ, ಗ್ಯಾರಂಟಿಗಳ (Guarantee) ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ. ದೇಶದ ಹಾಗೂ ನಮ್ಮ ಮುಂದಿನ ಪೀಳಿಗೆಯ ಭವಿಷ್ಯದ ಹಿತದೃಷ್ಟಿಯಿಂದ ನಡೆಯುವ ಚುನಾವಣೆಯಾಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ (Hosanagara News) ಹೇಳಿದ್ದಾರೆ.
ಇಲ್ಲಿನ ಬಸ್ ನಿಲ್ದಾಣ ಸಮೀಪ ಸೋಮವಾರ ಪಕ್ಷದ ನೂತನ ಚುನಾವಣಾ ಕಾರ್ಯಾಲಯ ಉದ್ಘಾಟಿಸಿ ಅವರು ಮಾತನಾಡಿ, ಬಿಜೆಪಿ ಪಕ್ಷವು ದೇಶದ ಎಲ್ಲಾ ವರ್ಗದವರನ್ನೂ ಒಳಗೊಂಡಿದೆ. ಎಲ್ಲರಿಗೂ ಅವಕಾಶ ದೊರೆಯುವಂತೆ ಮಾಡಿದೆ. ಮಹಿಳೆಯರಿಗೆ ವಿಶೇಷ ಪ್ರಾತಿನಿಧ್ಯ ನೀಡಿದೆ. ಕೇಂದ್ರದ ಹಿಂದಿನ ಎರಡು ಅವಧಿಯ ಸಾಧನೆ ಹಾಗೂ ತಾವು ಇಲ್ಲಿಯ ತನಕ ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕೆಲಸವನ್ನು ಜನರಿಗೆ ಮನದಟ್ಟು ಮಾಡುವ ಕೆಲಸ ಪಕ್ಷದ ಕಾರ್ಯಕರ್ತರ ಮೇಲಿದೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷಿ ಯೋಜನೆಗಳಾದ ಜಲಜೀವನ್ ಮಿಷನ್, ಅನ್ನಭಾಗ್ಯದಂತಹ ಯೋಜನೆಗಳನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ತಮ್ಮ ಕೊಡುಗೆ ಎಂದು ಜನರಿಗೆ ತಪ್ಪು ಮಾಹಿತಿ ನೀಡುತ್ತಿದೆ ಎಂದು ಅವರು ಆರೋಪಿಸಿದರು.
ಇದನ್ನೂ ಓದಿ: Seetha Raama Serial: ಹಿಂದಿಗೆ ರಿಮೇಕ್ ಆಗ್ತಿದೆ ಕನ್ನಡದ ಈ ಜನಪ್ರಿಯ ಧಾರಾವಾಹಿ
ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವುದು ಇನ್ನಷ್ಟು ಬಲ ನೀಡಿದೆ. ಕಾರ್ಯಕರ್ತರು ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸಬೇಕು ಎಂದು ಕರೆ ನೀಡಿದರು.
ಶಾಸಕ ಆರಗ ಜ್ಞಾನೇಂದ್ರ, ಮಾಜಿ ಶಾಸಕ ಹರತಾಳು ಹಾಲಪ್ಪ ಮಾತನಾಡಿದರು. ಮಂಡಲದ ಅಧ್ಯಕ್ಷ ಮತ್ತಿಮನೆ ಸುಬ್ರಮಣ್ಯ ಅಧ್ಯಕ್ಷತೆ ವಹಿಸಿದ್ದರು.
ಇದನ್ನೂ ಓದಿ: Bridge Collapse: ನೌಕೆ ಡಿಕ್ಕಿಯಾಗಿ ಮಕ್ಕಳಾಟಿಕೆಯಂತೆ ಕುಸಿದ 2.5 ಕಿ.ಮೀ. ಉದ್ದದ ಸೇತುವೆ; 20ಕ್ಕೂ ಅಧಿಕ ಮಂದಿ ನಾಪತ್ತೆ
ಈ ಸಂದರ್ಭದಲ್ಲಿ ಮಾಜಿ ಶಾಸಕ ಬಿ.ಸ್ವಾಮಿರಾವ್, ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ತಾಲೂಕು ಅಧ್ಯಕ್ಷ ಸುಬ್ರಹ್ಮಣ್ಯ, ಜೆಡಿಎಸ್ ತಾಲೂಕು ಅಧ್ಯಕ್ಷ ವರ್ತೇಶ್, ಪ್ರಮುಖರಾದ ದೇವಾನಂದ್, ಗಾಯತ್ರಿ ಮಲ್ಲಪ್ಪ, ಮಂಗಳಾ, ಮಂಡಾನಿ ಮೋಹನ್, ಗುರುರಾಜ್, ಕೋಣೆಮನೆ ಶಿವಕುಮಾರ್, ಟೌನ್ ಘಟಕದ ಅಧ್ಯಕ್ಷ ಶ್ರೀಪತಿರಾವ್ ಹಾಗೂ ಮತ್ತಿತರರು ಇದ್ದರು.