Site icon Vistara News

Shivamogga News: ಹೆಬ್ಬಿಗೆ ಸರ್ಕಾರಿ ಶಾಲೆಯಲ್ಲಿ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ

Sports and Cultural Competition at Hebbige Govt School at hosanagara

ಹೊಸನಗರ: ತಾಲೂಕಿನ ಹೆಬ್ಬಿಗೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳು ಮತ್ತು ಗ್ರಾಮಸ್ಥರಿಗೆ ಕ್ರೀಡಾ (Sports) ಮತ್ತು ಸಾಂಸ್ಕೃತಿಕ (Cultural) ಸ್ಪರ್ಧಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

1953ರಲ್ಲಿ ಆರಂಭಗೊಂಡ ಈ ಶಾಲೆಯು 70 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಶಾಲಾ ಮಕ್ಕಳು ಮತ್ತು ಗ್ರಾಮಸ್ಥರಿಗೆ ಏರ್ಪಡಿಸಿದ್ದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಸದಸ್ಯ ಪುರುಷೋತ್ತಮ್ ಶ್ಯಾನುಭೋಗ್ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಜನ ಸಮುದಾಯವನ್ನು ಶಾಲೆಯತ್ತ ಆಕರ್ಷಿಸಲು ಇಂತಹ ಸ್ಪರ್ಧಾ ಕಾರ್ಯಕ್ರಮಗಳು ಮಾದರಿಯಾಗಿವೆ. ಕೆಲಸದ ಒತ್ತಡದ ಸನ್ನಿವೇಶಗಳಲ್ಲಿ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದರಿಂದ ಜನರಿಗೆ ಮನರಂಜನೆಯ ಜತೆಗೆ ಮಾನಸಿಕ ಸ್ಥೈರ್ಯ ಹೆಚ್ಚಿಸುತ್ತವೆ ಎಂದು ತಿಳಿಸಿದರು.

ಇದನ್ನೂ ಓದಿ: ಸಿಬಿಎಸ್‌ಇ 10, 12 ತರಗತಿ ಪರೀಕ್ಷೆಗೆ ಡಿವಿಷನ್, ಡಿಸ್ಟಿಂಕ್ಷನ್ ಘೋಷಣೆ ಇಲ್ಲ!

ತುಮರಿ ಗ್ರಾಮ ಪಂಚಾಯಿತಿ ಸದಸ್ಯ ಶೇಖರಪ್ಪ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ರಾಮಮೂರ್ತಿ ಸಂಪ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ವಿವಿಧ ಕ್ರೀಡಾ ಸ್ಪರ್ಧೆಗಳು ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಮಕ್ಕಳು ಹಾಗೂ ಗ್ರಾಮಸ್ಥರು ಅತ್ಯುತ್ಸಾಹದಿಂದ ಭಾಗವಹಿಸಿದ್ದರು. ಸ್ಪರ್ಧೆಗಳಿಗೆ ತೀರ್ಪುಗಾರರಾಗಿ ಶಿಕ್ಷಕರಾದ ಕುಂಬಳೆ ಶಾಲೆಯ ಶ್ರವಣ್ ಕುಮಾರ್, ಮೂಕಾರ್ತಿ ಶಾಲೆಯ ಗುರುಮೂರ್ತಿ ಹಾಗೂ ಬಾಣಾವರ ಶಾಲೆಯ ರಾಜೇಶ್ ಪಾಲ್ಗೊಂಡಿದ್ದರು.

ಈ ಸಂದರ್ಭದಲ್ಲಿ ಶಿಕ್ಷಕರಾದ ಸಾವಿತ್ರಮ್ಮ, ಅನಿತಾ, ರವಿಜಾ ಹಾಗೂ ಅಡುಗೆ ಸಿಬ್ಬಂದಿಗಳು ಮತ್ತು ಎಸ್.ಡಿ.ಎಂ.ಸಿ.ಯ ಪದಾಧಿಕಾರಿಗಳು, ಪೋಷಕರು ಹಾಗೂ ಹಳೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: Karnataka Weather : ನಾಳೆಯಿಂದ ಡಿ. 9ರ ವರೆಗೆ ಸಾಧಾರಣದಿಂದ ಭಾರಿ ಮಳೆ ಸಾಧ್ಯತೆ

ಶಾಲಾ ಮಕ್ಕಳು ಪ್ರಾರ್ಥಿಸಿದರು. ಮುಖ್ಯಶಿಕ್ಷಕ ಸುನೀಲ್ ಕುಮಾರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಶಿಕ್ಷಕಿ ಶಾಲಿನಿ ವಂದಿಸಿದರು.

Exit mobile version