Site icon Vistara News

Hosanagara News: ಹೊಸನಗರದಲ್ಲಿ ರಾಜ್ಯ ಸರ್ಕಾರಿ ನೌಕರರ ತಾಲೂಕು ಸಮ್ಮೇಳನ; ಶಾಸಕ ಬೇಳೂರು ಗೋಪಾಲಕೃಷ್ಣ ಚಾಲನೆ

Taluk Conference of State Government Employees at Hosanagara; MLA Belur Gopalakrishna drive

ಹೊಸನಗರ: ಸರ್ಕಾರಿ ಯೋಜನೆಗಳನ್ನು (Government Schemes) ಜಾರಿ ಮಾಡಿ ಯಶಸ್ವಿಗೊಳಿಸುವ ಹೊಣೆಗಾರಿಕೆ ಇಲಾಖಾ ನೌಕರರ ಮೇಲಿದೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.

ಇಲ್ಲಿನ ಈಡಿಗರ ಭವನದಲ್ಲಿ ಏರ್ಪಡಿಸಿದ್ದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತಾಲೂಕು ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ನನ್ನ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಸಮಸ್ಯೆಗಳಿಗೆ ಸ್ಪಂದಿಸಲು ನಾನು ಸಿದ್ದನಿದ್ದೇನೆ. ಅವರ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ನಡೆಸುತ್ತೇನೆ. ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಸದಾ ನನ್ನ ಬೆಂಬಲವಿದೆ ಎಂದರು.

ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, ಸಂಘಟನೆಯಿಂದ ಸಬಲತೆ ಸಾಧ್ಯವಿದೆ. ಆದರೆ ಸಂಘಟನೆಗೆ ಕೆಟ್ಟ ಹೆಸರು ತರುವಂತಹ ಕಾರ್ಯವನ್ನು ಯಾರೊಬ್ಬರೂ ಮಾಡಬಾರದು. ನೌಕರರ ಕಲ್ಯಾಣವು ಸರ್ಕಾರದ ಕರ್ತವ್ಯ ಎಂದು ತಿಳಿಸಿದರು.

ಇದನ್ನೂ ಓದಿ: ACB Raid: ಭ್ರಷ್ಟಾಚಾರ ನಿಗ್ರಹ ದಳದ ಭರ್ಜರಿ ಬೇಟೆ; 100 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ

ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ, ಹಿರಿಯರ ಶ್ರಮದಿಂದ ಸಂಘಟನೆ ಇಂದು ಬಲಿಷ್ಠವಾಗಿದೆ. ದೇಶದಲ್ಲಿಯೇ ಕರ್ನಾಟಕ ರಾಜ್ಯ ನೌಕರರು ಹೆಚ್ಚು ಕೌಶಲ್ಯಪೂರ್ಣರಾಗಿ ಕಾರ್ಯನಿರ್ವಹಿಸುತ್ತಿರುವುದು ಸಾಬೀತಾಗಿದೆ. ಹಲವು ಒತ್ತಡಗಳ ನಡುವೆ ನೌಕರರು ಕೆಲಸ ಮಾಡಬೇಕಾಗಿದೆ. ನೌಕರರ ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ಹೆಚ್ಚಿನ ಕಾಳಜಿ ವಹಿಸಬೇಕಿದೆ ಎಂದರು.

6ನೇ ಗ್ಯಾರಂಟಿ ಜಾರಿಯಾಗಲಿ

ರಾಜ್ಯ ಸರ್ಕಾರ 5 ಗ್ಯಾರಂಟಿ ಯೋಜನೆಗಳನ್ನು ಈಗಾಗಲೇ ಜಾರಿಗೊಳಿಸಿದೆ. ನೌಕರರ ಸಂಘದ ಹಲವು ಬೇಡಿಕೆಗಳನ್ನು ಸರ್ಕಾರ 6ನೇ ಗ್ಯಾರಂಟಿ ಎಂದು ಭಾವಿಸಿ ಅವುಗಳನ್ನು ಕೂಡಲೇ ಈಡೇರಿಸಬೇಕು ಎಂದು ಒತ್ತಾಯಿಸಿದರು.

ಸಂಘದ ಮಾಜಿ ಅಧ್ಯಕ್ಷರಾದ ಕೆ.ಬಿ.ಸಿ.ಕೃಷ್ಣ, ಎಸ್.ಸಿ.ಕೃಷ್ಣಮೂರ್ತಿ, ಎಚ್.ಎಲ್.ಗುರುಮೂರ್ತಿ, ರೇಣುಕಪ್ಪ, ಸಿ.ಕೃಷ್ಣಮೂರ್ತಿ ಅವರನ್ನು ಸಮ್ಮೇಳನದಲ್ಲಿ ಗೌರವಿಸಲಾಯಿತು.

ಸಾಂಸ್ಕೃತಿಕ ಹಾಗೂ ಕ್ರೀಡೆಗಳಲ್ಲಿ ಗಮನಾರ್ಹ ಸಾಧನೆ ಮಾಡಿದ ಸಂಘದ ಸದಸ್ಯರಿಗೆ ಅಭಿನಂದನೆ ಸಲ್ಲಿಸಲಾಯಿತು.

ಪ್ರವಚನಕಾರ ಜಿ.ಎಸ್.ನಟೇಶ್ ಅವರು ಪ್ರಜಾಸ್ನೇಹಿ ಆಡಳಿತ ಕುರಿತು ವಿಶೇಷ ಉಪನ್ಯಾಸ ನೀಡಿದರು. ತಾಲೂಕು ಅಧ್ಯಕ್ಷ ಎಂ.ಬಸವಣ್ಯಪ್ಪ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ: IND vs ENG: ಟೆಸ್ಟ್​ ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆದ ಜಡೇಜಾ-ಅಶ್ವಿನ್ ಜೋಡಿ

ಈ ಸಂದರ್ಭದಲ್ಲಿ ತಹಸೀಲ್ದಾರ್ ರಶ್ಮಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ನರೇಂದ್ರ ಕುಮಾರ್, ಬಿಇಒ ಕೃಷ್ಣಮೂರ್ತಿ, ಹಾಲಪ್ಪ ಸಂಕೂರು, ಎಚ್.ಆರ್.ಸುರೇಶ್, ಮಲ್ಲಿಕಾರ್ಜುನ ಸ್ವಾಮಿ, ರಂಗಸ್ವಾಮಿ, ರೇಣುಕೇಶ್ ಕೆ, ಸುಧೀಂದ್ರ ಕುಮಾರ್, ರಮೇಶ ಕುಮಾರ್, ಮಾಲತೇಶ್ ಮತ್ತಿತರರು ಇದ್ದರು. ಪ್ರದೀಪ್ ಮತ್ತು ರೇಖಾ ಪ್ರಭಾಕರ ಕಾರ್ಯಕ್ರಮ ನಿರ್ವಹಿಸಿದರು.

Exit mobile version