Hosanagara News: ಮಂಗಗಳ ಹಾವಳಿ ತಡೆಗೆ ಗ್ರಾಮಸ್ಥರ ಆಗ್ರಹ - Vistara News

ಶಿವಮೊಗ್ಗ

Hosanagara News: ಮಂಗಗಳ ಹಾವಳಿ ತಡೆಗೆ ಗ್ರಾಮಸ್ಥರ ಆಗ್ರಹ

Hosanagara News: ಹೊಸನಗರ ತಾಲೂಕಿನ ಪುರಪ್ಪೆಮನೆ ಗ್ರಾ.ಪಂ. ವ್ಯಾಪ್ತಿಯ ಉಮಾಮಹೇಶ್ವರಿ ಮಹಿಳಾ ಸಂಘದಿಂದ ಗ್ರಾಮದಲ್ಲಿ ಮಂಗಗಳ ಹಾವಳಿ ತಡೆಗೆ ಸೂಕ್ತ ಕ್ರಮಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದ ಹಿನ್ನಲೆಯಲ್ಲಿ ಶುಕ್ರವಾರ ಪುರಪ್ಪೆಮನೆ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ಜರುಗಿತು.

VISTARANEWS.COM


on

Villagers demand to take appropriate action to avoid monkey menace in Purappemane village
ಪುರಪ್ಪೆಮನೆ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಗ್ರಾಮದಲ್ಲಿ ಮಂಗಗಳ ಹಾವಳಿ ತಡೆ ಕುರಿತು ಪೂರ್ವಭಾವಿ ಸಭೆ ಜರುಗಿತು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೊಸನಗರ: ಮಲೆನಾಡಿನ ಪಾರಂಪರಿಕ ಬೆಳೆಗಳಾದ ಅಡಿಕೆ, ತೆಂಗು, ಕಾಳುಮೆಣಸು, ಏಲಕ್ಕಿ ಸೇರಿದಂತೆ ವಿವಿಧ ಕೃಷಿ ತೋಟಗಳಲ್ಲಿ ಮಂಗಗಳ (Monkeys) ಹಾವಳಿ ಹೆಚ್ಚಾಗಿದ್ದು, ಇದು ರೈತಾಪಿವರ್ಗಕ್ಕೆ ತಲೆನೋವಾಗಿ ಪರಿಣಮಿಸಿದೆ. ಈ ಹಿನ್ನಲೆಯಲ್ಲಿ ತಾಲೂಕಿನ ಪುರಪ್ಪೆಮನೆ ಗ್ರಾ.ಪಂ. ವ್ಯಾಪ್ತಿಯ ಉಮಾಮಹೇಶ್ವರಿ ಮಹಿಳಾ ಸಂಘದಿಂದ ಮಂಗನ ಹಾವಳಿ ತಡೆಗೆ ಸೂಕ್ತ ಕ್ರಮಕೈಗೊಳ್ಳುವಂತೆ ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದ ಹಿನ್ನಲೆಯಲ್ಲಿ ಶುಕ್ರವಾರ ಪುರಪ್ಪೆಮನೆ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಪೂರ್ವಭಾವಿ ಸಭೆ ಹಮ್ಮಿಕೊಳ್ಳಲಾಗಿತ್ತು.

ಬೆಳೆ ನಾಶದಿಂದಾಗಿ ಕೃಷಿಕರು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ದಿನ ಕಳೆದಂತೆ ಮಂಗನ ಹಾವಳಿ ವ್ಯಾಪಕವಾಗಿ ಹೆಚ್ಚಾಗುತ್ತಿದೆ. ಕೂಡಲೇ ಅರಣ್ಯ ಇಲಾಖೆ ಸಿಬ್ಬಂದಿಗಳು ಮುತುವರ್ಜಿವಹಿಸಿ ಮಂಗಗಳ ಸೆರೆ ಹಿಡಿಯುವ ಕಾರ್ಯಕ್ಕೆ ಮುಂದಾಗಬೇಕು. ಅಲ್ಲದೆ ಸ್ಥಳಾಂತರ ಮಾಡುವ ಮೂಲಕ ಈ ಭಾಗದ ಕೃಷಿಕರು ನೆಮ್ಮದಿಯ ಜೀವನ ಸಾಗಿಸಲು ಸಹಕರಿಸಬೇಕು ಎಂದು ಸಭೆಯಲ್ಲಿ ಆಗ್ರಹಿಸಿದರು.

ಇದನ್ನೂ ಓದಿ: Benefits Of Chikoo: ಚಿಕ್ಕೂ ಎಂಬ ಚಿಕ್ಕ ಹಣ್ಣಿನ ಸದ್ಗುಣಗಳು ಗೊತ್ತೇ?

ಸಾಗರ ವಿಭಾಗದ ಡಿಎಫ್‌ಓ ಸಂತೋಷ್ ಕುಮಾರ್ ಕೆಂಚಪ್ಪನವರ್ ಮಾತನಾಡಿ, ಪ್ರಾಣಿ ಸಂರಕ್ಷಣೆ ಕಾಯ್ದೆ ಅಡಿಯಲ್ಲಿ ಮಂಗಗಳ ಸೆರೆ ಕಷ್ಟಸಾಧ್ಯ ಕೆಲಸ. ಗರ್ಭಧರಿಸಿರುವ ಮಂಗಗಳಿಗೆ ಗಾಯ, ನೋವಾಗದಂತೆ ಸೆರೆ ಹಿಡಿಯಬೇಕಿದೆ. ಅವುಗಳ ಸಂತಾನ ಹರಣ ಶಸ್ತ್ರಚಿಕಿತ್ಸೆ ಕಾರ್ಯ ಸದ್ಯಕ್ಕೆ ಅಸಾಧ್ಯ ಮಾತಾಗಿದ್ದು, ಸೆರೆ ಹಿಡಿಯುವ ಕಾರ್ಯದ ಖರ್ಚು-ವೆಚ್ಚವನ್ನು ಸ್ಥಳೀಯ ಸಂಘ-ಸಂಸ್ಥೆಗಳೇ ಭರಿಸಬೇಕಿದೆ. ಅಲ್ಲದೆ, ಸ್ಥಳೀಯ ಗ್ರಾಮ ಪಂಚಾಯತಿ ಆಡಳಿತದ ಮೇಲುಸ್ತುವಾರಿಯಲ್ಲಿ ಈ ಕಾರ್ಯ ನಡೆಯಲಿ ಎಂಬ ಸಲಹೆ ನೀಡಿದರು.

ಈ ವೇಳೆ ಗ್ರಾಮಸ್ಥರು ಹಾಗೂ ಅಧಿಕಾರಿಗಳು ಪರಸ್ಪರ ಒಪ್ಪಿ ಸಭಾ ನಡಾವಳಿ ದಾಖಲಿಸಲಾಯಿತು.

ಇದನ್ನೂ ಓದಿ: Reliance Q3 results: ರಿಲಯನ್ಸ್ ಇಂಡಸ್ಟ್ರೀಸ್ ನಿವ್ವಳ ಲಾಭ 17,265 ಕೋಟಿ ರೂ.ಗೆ ಏರಿಕೆ

ಸಭೆಯಲ್ಲಿ ತಾಲೂಕು ಪಂಚಾಯತಿ ಕಾರ್ಯನಿರ್ಹಹಣಾಧಿಕಾರಿ ನರೇಂದ್ರ ಕುಮಾರ್, ಪುರಪ್ಪೆಮನೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಸುಜಾತ ದಿನೇಶ್, ವಲಯ ಅರಣ್ಯಾಧಿಕಾರಿ ರಾಘವೇಂದ್ರ, ಪಿಡಿಓ ಜಗದೀಶ್ ಕೆ ಮಗವಾಡ, ಡಿಆರ್‌ಎಫ್‌ಓ ದೊಡ್ಮನಿ, ಪ್ರಮುಖರಾದ ಕಿರಣ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಉತ್ತರ ಕನ್ನಡ ಜಿಲ್ಲೆಗೆ ಭಾರಿ ಮಳೆ ಎಚ್ಚರಿಕೆ; ಬೆಂಗಳೂರಿನಲ್ಲಿ ಹೇಗೆ?

Karnataka Weather Forecast: ನೈರುತ್ಯ ಮುಂಗಾರು ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಸಕ್ರಿಯವಾಗಿದ್ದರೆ, ದಕ್ಷಿಣ ಒಳನಾಡು ಮತ್ತು ಮಲೆನಾಡಿನಲ್ಲಿ ದುರ್ಬಲವಾಗಿ ಇರಲಿದೆ. ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (Rain news) ಸಾಧ್ಯತೆ ಇದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ರಾಜ್ಯಾದ್ಯಂತ ಮಳೆ ಅಬ್ಬರ ಕಡಿಮೆ (Rain news) ಆಗಿದೆ. ಆದರೂ ಕರಾವಳಿಯ ಉತ್ತರ ಕನ್ನಡ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು (Karnataka Weather Forecast ) ನೀಡಿದೆ.

ಕರಾವಳಿಯ ಉಳಿದ ಉಡುಪಿ, ದಕ್ಷಿಣ ಕನ್ನಡ ಸುತ್ತಮುತ್ತಲ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಸುತ್ತಮುತ್ತ ಚದುರಿದಂತೆ ಮಳೆ ಸುರಿಯಬಹುದು.

ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಒಳನಾಡಿನ ಬೆಳಗಾವಿ, ಹಾವೇರಿ, ರಾಯಚೂರು, ಯಾದಗಿರಿ, ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಧಾರವಾಡ, ಬಾಗಲಕೋಟೆ, ಗದಗ, ಕೊಪ್ಪಳ, ವಿಜಯಪುರದಲ್ಲಿ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆಯಿದೆ.

ಇದನ್ನೂ ಓದಿ: Actor Darshan : ನಟ ದರ್ಶನ್‌-ಪವಿತ್ರಾ ಐಫೋನ್‌ಗಳಲ್ಲಿ ಇದ್ಯಾ ಕೊಲೆ ರಹಸ್ಯ! ಹೈದರಾಬಾದ್‌ನಿಂದ ರಿಟರ್ನ್‌ ಆದ ಫೋನ್‌ಗಳು

ದಕ್ಷಿಣ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ‌ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಹಗುರದಿಂದ ಕೂಡಿದ ಮಳೆ ಮತ್ತು ನಿರಂತರ ಗಾಳಿಯ ವೇಗ 30-40ಕಿ.ಮೀ ತಲುಪುವ ಸಾಧ್ಯತೆಯಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯಾಗಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 30 ° C ಮತ್ತು 21 ° C ಇರಲಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿವಮೊಗ್ಗ

Child Death: ಶಿವಮೊಗ್ಗದಲ್ಲಿ ಜ್ಯೂಸ್‌ ಬಾಟೆಲ್‌ನ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಉಸಿರುಗಟ್ಟಿ ಸಾವು

Child Death: ಮಕ್ಕಳಿಗೆ ಆಟವಾಡಲು ವಸ್ತುಗಳನ್ನು ಕೊಡುವಾಗ ಪೋಷಕರು ಎಷ್ಟೇ ಜಾಗೃತೆ ವಹಿಸಿದರೂ ಕಡಿಮೆಯೇ. ಸದ್ಯ ಒಂದೂವರೆ ವರ್ಷದ ಮಗುವೊಂದು ಬಾಟೆಲ್‌ ಮುಚ್ಚಳ ನುಂಗಿ ಉಸಿರುಗಟ್ಟಿ ಮೃತಪಟ್ಟಿದೆ.

VISTARANEWS.COM


on

By

One and a half year old boy dies of suffocation after swallowing bottle cap in Shivamogga
Koo

ಶಿವಮೊಗ್ಗ : ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗು ಮೃತಪಟ್ಟಿರುವ (Child Death) ದಾರುಣ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮನೆಯಲ್ಲಿ ಆಟವಾಡುವ ವೇಳೆ ಮಗುವಿಗೆ ಜ್ಯೂಸ್ ಬಾಟಲ್ ಸಿಕ್ಕಿದೆ. ಅದ್ಹೇಗೋ ಬಾಟಲ್‌ ಮುಚ್ಚಳ ಬಿಚ್ಚಿ ಬಾಯಿಗೆ ಹಾಕಿಕೊಂಡಿದೆ. ಜ್ಯೂಸ್ ಬಾಟಲ್‌ನ ಮುಚ್ಚಳ ನುಂಗಿದೆ. ಈ ವೇಳೆ ಉಸಿರಾಟದ ತೊಂದರೆಯಿಂದ ಮಗು ಮೃತಪಟ್ಟಿದೆ.

ಶಿವಮೊಗ್ಗದ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರಗುವಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಶಿಕಾರಿಪುರ ತಾಲೂಕಿನ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹರಗುವಳ್ಳಿ ಗ್ರಾಮದ ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬುವರ ಒಂದೂವರೆ ವರ್ಷದ ಮಗು ಸಾವನ್ನಪ್ಪಿದೆ.

ನಿನ್ನೆ ಬುಧವಾರ ಜ್ಯೂಸ್ ಬಾಟಲಿ ಹಿಡಿದುಕೊಂಡು ಮಗು ಆಟವಾಡುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಬಾಟೆಲ್‌ ಮುಚ್ಚಳ ನುಂಗಿದ ಕೂಡಲೇ ಮಗು ಉಸಿರಾಡಲು ಆಗದೆ ಒದ್ದಾಡಿದೆ, ಜೋರಾಗಿ ಅಳುವ ಸದ್ದು ಕೇಳಿ ಪೋಷಕರು ಬಂದಿದ್ದಾರೆ. ಕೂಡಲೇ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ. ಆದಾಗಲೇ ಮಗು ಜೀವ ಬಿಟ್ಟಿತ್ತು. ಮಗು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದನ್ನೂ ಓದಿ: Karnataka Weather : ಗೌರಿ-ಗಣೇಶ ಹಬ್ಬಕ್ಕೆ ಮಳೆ ಅಡ್ಡಿ!ನಿರಂತರ ಗಾಳಿ ಜತೆಗೆ ಭಾರಿ‌ ವರ್ಷಧಾರೆ ಎಚ್ಚರಿಕೆ

ಆಟಿಕೆ ಎಂದು ತಿಳಿದು ಹಾವನ್ನೇ ಕಚ್ಚಿದ ಮಗು! ಕಚ್ಚಿಸಿಕೊಂಡ ಹಾವು ಸಾವು!

ಅಂಬೆಗಾಲಿಡುವ ಮಗುವೊಂದು ಹಾವನ್ನು ಕಚ್ಚಿ (Boy Bites Snake) ಕೊಂದಿರುವ ಘಟನೆ ಬಿಹಾರದ ಗಯಾ (Gaya district) ಜಿಲ್ಲೆಯ ಜಮುಹರ್ ಗ್ರಾಮದಲ್ಲಿ ನಡೆದಿದ್ದು, ಮಗು ಅಪಾಯದಿಂದ ಪಾರಾಗಿದೆ. ಈ ಕುರಿತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (social media) ವೈರಲ್ (Viral Video) ಆಗಿದ್ದು, ಬಳಿಕ ಸಾಕಷ್ಟು ಮಂದಿ ಮಗುವನ್ನು ಕಾಣಲು ಬರುತ್ತಿದ್ದಾರೆ ಎನ್ನಲಾಗಿದೆ.

ಮಗು ಟೆರೇಸ್‌ನಲ್ಲಿ ಆಟವಾಡುತ್ತಿದ್ದಾಗ ಹಾವನ್ನು ಕಂಡು ಆಟವಾಡುವ ಸಾಮಗ್ರಿ ಎಂದು ತಿಳಿದು ಕಚ್ಚಿದೆ. ಹಾವು ಸಾವನ್ನಪ್ಪಿದ್ದು, ಬಾಲಕ ಅಪಾಯದಿಂದ ಪಾರಾಗಿರುವುದು ಆತನ ಕುಟುಂಬ ಹಾಗೂ ವೈದ್ಯರಿಗೆ ಅಚ್ಚರಿ ಮೂಡಿಸಿದೆ.

ಮಗು ಹಾವನ್ನು ಜಗಿಯುತ್ತಿರುವುದನ್ನು ಕಂಡ ಕೂಡಲೇ ತಾಯಿ ಅದನ್ನು ಮಗುವಿನ ಬಾಯಿಯಿಂದ ತೆಗೆದು ಮಗುವನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾಳೆ. ಆರೋಗ್ಯ ಕೇಂದ್ರದ ವೈದ್ಯಕೀಯ ಸಿಬ್ಬಂದಿ ಮಗುವನ್ನು ಪರೀಕ್ಷಿಸಿ ದೈಹಿಕವಾಗಿ ಯಾವುದೇ ಹಾನಿಯಿಲ್ಲ ಎಂದು ದೃಢಪಡಿಸಿ, ಮಗು ಆರೋಗ್ಯವಾಗಿರುವುದಾಗಿ ಘೋಷಿಸಿದರು.

ಈ ಹಾವು ವಿಷಕಾರಿಯಲ್ಲ. ಮಳೆಗಾಲದಲ್ಲಿ ಈ ಪ್ರದೇಶದಲ್ಲಿ ಸಾಮಾನ್ಯವಾಗಿ ಕಂಡುಬರುತ್ತದೆ ಎಂದು ಅವರು ಹೇಳಿದರು.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ನೋಡಿ ಸಾಕಷ್ಟು ಮಂದಿ ಕಾಮೆಂಟ್ ಮಾಡಿದ್ದಾರೆ. ವ್ಯಕ್ತಿಯೊಬ್ಬ ಮಗುವಿನ ಬಾಯಿಯನ್ನು ತೆರೆಯುವಂತೆ ಪ್ರಯತ್ನಿಸಿದನು. ಸತ್ತ ಹಾವಿನ ಚಿತ್ರವನ್ನೂ ವಿಡಿಯೋದಲ್ಲಿ ತೋರಿಸಲಾಗಿದೆ.


ಇನ್ನೊಂದು ಘಟನೆಯಲ್ಲಿ ಕಳೆದ ತಿಂಗಳು ಬಿಹಾರದ ರಜೌಲಿಯಲ್ಲಿ ಹಾವೊಂದು ವ್ಯಕ್ತಿಯೊಬ್ಬನಿಗೆ ಕಚ್ಚಿದ್ದು, ಬಳಿಕ ಹಾವು ಸಾವನ್ನಪ್ಪಿತ್ತು. ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಸರಿಯಾದ ವೈದ್ಯಕೀಯ ಚಿಕಿತ್ಸೆಯಿಂದ ವ್ಯಕ್ತಿ ಬದುಕಿ ಉಳಿದನು.

ಉತ್ತರ ಪ್ರದೇಶದ ಸೌರಾ ಗ್ರಾಮದಲ್ಲೂ 24 ವರ್ಷದ ವಿಕಾಸ್ ದುಬೆ ಎಂಬವರಿಗೆ ಹಾವು ಪದೇ ಪದೇ ಕಚ್ಚಿದ ವಿಲಕ್ಷಣ ಪ್ರಕರಣ ನಡೆದಿತ್ತು. ಸುಮಾರು 40 ದಿನಗಳಲ್ಲಿ ವಿಕಾಸ್‌ಗೆ ಏಳು ಬಾರಿ ಹಾವು ಕಚ್ಚಿತ್ತು.

ಜೂನ್ 2 ರಂದು ದುಬೆ ತನ್ನ ನಿವಾಸದಲ್ಲಿ ಹಾಸಿಗೆಯಿಂದ ಎದ್ದ ತಕ್ಷಣ ಹಾವು ಕಚ್ಚಿದ್ದು, ಅವರನ್ನು ಪಕ್ಕದ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ಚಿಕಿತ್ಸೆ ನೀಡಲಾಯಿತು. ಜೂನ್ 2 ರಿಂದ ಜುಲೈ 6 ರ ನಡುವೆ ದುಬೆ ಅವರು ಆರು ಬಾರಿ ಹಾವು ಕಡಿತಕ್ಕೆ ಒಳಗಾಗಿದ್ದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಗೌರಿ-ಗಣೇಶ ಹಬ್ಬಕ್ಕೆ ಮಳೆ ಅಡ್ಡಿ!ನಿರಂತರ ಗಾಳಿ ಜತೆಗೆ ಭಾರಿ‌ ವರ್ಷಧಾರೆ ಎಚ್ಚರಿಕೆ

Karnataka weather Forecast : ರಾಜ್ಯಾದ್ಯಂತ ಮಳೆ ಅಬ್ಬರ ಕಡಿಮೆ ಆಗಿದ್ದರೂ, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆಯಾಟ (Rain News) ಮುಂದುವರಿದಿದೆ. ಇಂದಿನಿಂದ ಮುಂದಿನ ಮೂರು ದಿನ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ನೈರುತ್ಯ ಮುಂಗಾರು ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಸಾಮಾನ್ಯವಾಗಿದ್ದರೆ, ದಕ್ಷಿಣ ಒಳನಾಡಿನಲ್ಲಿ (Karnataka Weather forecast) ದುರ್ಬಲವಾಗಿದೆ. ಗುರುವಾರದಂದು ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ (Heavy Rain alert) ಸಾಧ್ಯತೆಯಿದೆ. ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯೊಂದಿಗೆ ನಿರಂತರ ಗಾಳಿಯ ವೇಗ (30-40 kmph) ತಲುಪುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಗೌರಿ-ಗಣೇಶ ಹಬ್ಬಕ್ಕೆ ಮಳೆಯಾಟ

ಸೆ.6-7ರಂದು ಗೌರಿ -ಗಣೇಶ ಹಬ್ಬದಂದು ಮಳೆಯು ಅಬ್ಬರಿಸಲಿದೆ. ಶುಕ್ರವಾರದಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Heavy rains likely for Gauri-Ganesh festival
Heavy rains likely for Gauri-Ganesh festival

ಶನಿವಾರದಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಹಗುರ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 28 ಡಿ.ಸೆ ಮತ್ತು 20 ಡಿ.ಸೆ ಇರಲಿದೆ.

ಹಳ್ಳದ ನೀರಿನ ರಭಸಕ್ಕೆ ಕೊಚ್ಚಿಹೋದ ಬ್ಯಾಂಕ್ ಉದ್ಯೋಗಿ

ರಾಯಚೂರು ಜಿಲ್ಲೆಯಾದ್ಯಂತ ಭಾರೀ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಹಳ್ಳದ ನೀರಿನ ರಭಸಕ್ಕೆ ಬ್ಯಾಂಕ್ ಉದ್ಯೋಗಿಯೊಬ್ಬರು ಕೊಚ್ಚಿಹೋಗಿದ್ದರು. ರಾಯಚೂರು ತಾಲೂಕಿನ ಫತ್ತೇಪೂರ ಬಳಿ ಗೋಕುಲಸಾಬ್ ಹಳ್ಳದಲ್ಲಿ ಕೊಚ್ಚಿ ಹೋದ ಘಟನೆಯೂ ನಡೆದಿದೆ. ಜಾಗೀರ ವೆಂಕಟಾಪುರ ಗ್ರಾಮದ ಬಸವರಾಜ್ (33) ನೀರುಪಾಲದವರು.

ಖಾಸಗಿ ಬ್ಯಾಂಕ್‌ನಲ್ಲಿ ಉದ್ಯೋಗಿಯಾಗಿದ್ದ ಬಸವರಾಜ್‌ ಕೆಲಸ ಮುಗಿಸಿ ರಾತ್ರಿ ಗ್ರಾಮಕ್ಕೆ ಮರಳುತ್ತಿದ್ದರು. ಈ ವೇಳೆ ಉಕ್ಕಿ ಹರಿಯುತ್ತಿದ್ದ ಹಳ್ಳದಾಟಿ ಊರಿಗೆ ಹೋಗಲು ಯತ್ನಿಸುತ್ತಿದ್ದಾಗ ಕೊಚ್ಚಿಹೋಗಿದ್ದಾರೆ. ಹಳ್ಳದ ದಂಡೆಯಲ್ಲೇ ಬೈಕ್ ಇಟ್ಟು ಹಳ್ಳದ ಸೇತುವೆ ದಾಟುತ್ತಿದ್ದ ಈ ಘಟನೆ ನಡೆದಿದೆ. ರಾಯಚೂರು ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮಳೆ

Karnataka Weather : ಗುಡುಗು ಸಹಿತ ಭಾರಿ ಮಳೆ; ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Karnataka Weather Forecast : ಗುಡುಗು ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ ಇದ್ದು, ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕೆಲವೊಮ್ಮೆ ಗಾಳಿ ವೇಗ 45 ಕಿ.ಮೀ ವೇಗದಲ್ಲಿ ಬೀಸಲಿದ್ದು, ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

VISTARANEWS.COM


on

By

karnataka weather Forecast
Koo

ಬೆಂಗಳೂರು: ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮಳೆ ಅಬ್ಬರ (Karnataka Weather Forecast) ಮುಂದುವರಿದಿದೆ. ಬುಧವಾರದಂದು ಕರ್ನಾಟಕದ ಕರಾವಳಿಯಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ (Rain News) ಸಾಧ್ಯತೆಯಿದೆ. ಮಲೆನಾಡಿನಲ್ಲಿ ಚದುರಿದಂತೆ ಸಾಧಾರಣ ಮಳೆಯಾದರೆ, ಉತ್ತರ ಒಳನಾಡಿನಲ್ಲಿ ಚದುರಿದಂತೆ ವ್ಯಾಪಕವಾಗಿ ಮಧ್ಯಮ ಮಳೆಯಾಗಲಿದೆ. ದಕ್ಷಿಣ ಒಳನಾಡಿನಲ್ಲಿ ಹಗುರದಿಂದ ಕೂಡಿರಲಿದೆ.

ದಕ್ಷಿಣ ಒಳನಾಡಿನಲ್ಲಿ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಹಗುರದಿಂದ ಕೂಡಿದ ಮಳೆಯಾಗಲಿದೆ.

ಉತ್ತರ ಒಳನಾಡಿನಲ್ಲಿ ಬಳ್ಳಾರಿ, ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಹಾವೇರಿ, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್‌, ಧಾರವಾಡ, ಗದಗ,‌ ಕೊಪ್ಪಳ, ವಿಜಯಪುರದಲ್ಲಿ ಮಧ್ಯಮ ಮಳೆಯಾಗಲಿದೆ.

ಇದನ್ನೂ ಓದಿ: Karnataka Weather : ಭಾರಿ ಮಳೆಗೆ ರಾಯಚೂರಲ್ಲಿ 100ಕ್ಕೂ ಹೆಚ್ಚು ಮನೆಗಳು ಕುಸಿತ; ಕೊಡಗಿನಲ್ಲಿ ಕೂದಲೆಳೆ ಅಂತರದಲ್ಲಿ ಕುಟುಂಬ ಪಾರು

ಚದುರಿದಂತೆ ಸಾಧಾರಣ ಮಳೆ

ಮಲೆನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ.

ಬೆಂಗಳೂರಿನಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಗುಡುಗು ಸಹಿತ ವ್ಯಾಪಕ ಮಳೆ ಸಾಧ್ಯತೆ

ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೀದರ್, ಕಲಬುರಗಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಸಮುದ್ರಕ್ಕೆ ಇಳಿಯದಂತೆ ಸೂಚನೆ

ಸೆಪ್ಟೆಂಬರ್ 6 ರವರೆಗೆ ಕರ್ನಾಟಕದ ಕರಾವಳಿಯಲ್ಲಿ ಗಂಟೆಗೆ 35 ರಿಂದ 45 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Haryana Naxal caught by police after coming to see girlfriend in Bengaluru
ಬೆಂಗಳೂರು25 mins ago

Naxal arrested‌ : ಬೆಂಗಳೂರಿನಲ್ಲಿ ಗರ್ಲ್‌ ಫ್ರೆಂಡ್‌ ನೋಡಲು ಬಂದು ಸಿಕ್ಕಿಬಿದ್ದ ಹರಿಯಾಣದ ನಕ್ಸಲ್‌

Actor Darshan says he is not married to Pavithra Gowda
ಸ್ಯಾಂಡಲ್ ವುಡ್53 mins ago

Actor Darshan : ನಾವಿಬ್ಬರು ಮದುವೆ ಆಗಿಲ್ಲ.. ಜಸ್ಟ್‌ ಲಿವಿಂಗ್‌ ಟುಗೆದರ್‌ನಲ್ಲಿ ಇದ್ದೀವಿ- ವಿಚಾರಣೆಯಲ್ಲಿ ನಟ ದರ್ಶನ್‌ ಹೇಳಿಕೆ

Lightman dies after falling from 30 feet height FIR against film director Yogaraj Bhat
ಸ್ಯಾಂಡಲ್ ವುಡ್2 hours ago

Yogaraj Bhat :30 ಅಡಿ ಎತ್ತರದಿಂದ ಬಿದ್ದು ಲೈಟ್‌ ಮ್ಯಾನ್‌ ಸಾವು; ಚಿತ್ರ ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ಐಆರ್

ಸಿನಿಮಾ4 hours ago

Dvija Film : ಅಕ್ಟೋಬರ್‌ಗೆ ‘ದ್ವಿಜ’ ಚಿತ್ರ ಬಿಡುಗಡೆಗೆ ಸಜ್ಜು; ಕ್ರೈಂ ಥ್ರಿಲ್ಲರ್‌ ಮೂವಿಯಲ್ಲಿ ಕ್ರಿಮಿನಲ್ ಜಗತ್ತು ಅನಾವರಣ

Theft case
ಬೆಂಗಳೂರು ಗ್ರಾಮಾಂತರ5 hours ago

Theft Case : ಪ್ರೇಯಸಿಯ ಜತೆಗೆ ಹೈಫೈ ಲೈಫ್‌ ಎಂಜಾಯ್‌ ಮಾಡಲು ಮನೆಗಳ್ಳತನಕ್ಕೆ ಇಳಿದ ಪ್ರೇಮಖೈದಿ!

karnataka weather Forecast
ಮಳೆ7 hours ago

Karnataka Weather : ಉತ್ತರ ಕನ್ನಡ ಜಿಲ್ಲೆಗೆ ಭಾರಿ ಮಳೆ ಎಚ್ಚರಿಕೆ; ಬೆಂಗಳೂರಿನಲ್ಲಿ ಹೇಗೆ?

Dina Bhavishya
ಭವಿಷ್ಯ7 hours ago

Dina Bhavishya : ಈ ದಿನ ನಿಮ್ಮನ್ನು ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ; ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಲಾಭ

TA Sharavana
ಕರ್ನಾಟಕ18 hours ago

TA Sharavana : ಸರ್ಕಾರಿ ಭರವಸೆಗಳ ಸಮಿತಿ ಅಧ್ಯಕ್ಷರಾದ ಬಳಿಕ ಕಚೇರಿ ಉದ್ಘಾಟನೆ ಮಾಡಿದ ಟಿ.ಎ ಶರವಣ

actor darshan
ಸಿನಿಮಾ19 hours ago

Actor Darshan : ನಟ ದರ್ಶನ್‌-ಪವಿತ್ರಾ ಐಫೋನ್‌ಗಳಲ್ಲಿ ಇದ್ಯಾ ಕೊಲೆ ರಹಸ್ಯ! ಹೈದರಾಬಾದ್‌ನಿಂದ ರಿಟರ್ನ್‌ ಆದ ಫೋನ್‌ಗಳು

Actor Darshans gang moves Google to destroy evidence after Renukaswamys murder
ಸಿನಿಮಾ20 hours ago

Actor darshan : ಪಟ್ಟಣಗೆರೆ ಶೆಡ್‌ನಲ್ಲಿ ಡೆವಿಲ್‌‌‌ ಗ್ಯಾಂಗ್‌‌‌ನ ಕ್ರೌರ್ಯ ಹೇಗಿತ್ತು? ; ಸಾಕ್ಷಿ ನಾಶಕ್ಕೆ ಗೂಗಲ್‌ ಮೊರೆ!

Kannada Serials
ಕಿರುತೆರೆ11 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ11 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Bigg Boss- Saregamapa 20 average TRP
ಕಿರುತೆರೆ11 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ11 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

galipata neetu
ಕಿರುತೆರೆ9 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Bigg Boss' dominates TRP; Sita Rama fell to the sixth position
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ9 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ12 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್6 days ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 week ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 weeks ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ4 weeks ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ4 weeks ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ4 weeks ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು1 month ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ1 month ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ1 month ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ1 month ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌