Site icon Vistara News

Kannada stone inscription: ಕಾಶಿಯಲ್ಲಿ ಕನ್ನಡದ ಶಿಲಾ ಶಾಸನ ಪತ್ತೆ; ಘಾಟ್ ನಲ್ಲಿ ಕಾಲು ಸಂಕವಾಗಿ ಬಳಕೆ!

Kannada stone inscription found in Kashi Use as a foot bridge at the ghat

ಶಿವಮೊಗ್ಗ: ಇತಿಹಾಸ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕಾಶಿಯಲ್ಲಿ (Kashi Vishwanath Temple) ಕನ್ನಡದ ಶಿಲಾ ಶಾಸನ (Kannada stone inscription) ಪತ್ತೆಯಾಗಿದೆ. ಇದು ಶಿವಮೊಗ್ಗ ಜಿಲ್ಲೆಯ ಕೆಳದಿ ಅರಸರ ಕಾಲದ ಶಾಸನ ಎಂದು ಗೊತ್ತಾಗಿದೆ.

ವಿಜಯನಗರ ಸಾಮ್ರಾಜ್ಯದ ಪತನದ ನಂತರ ಅಸ್ತಿತ್ವಕ್ಕೆ ಬಂದಿದ್ದ ಕೆಳದಿ ಸಂಸ್ಥಾನವು ಬರೆದಿದ್ದ ಶಿಲಾ ಶಾಸನ ಇದಾಗಿದೆ. ವಿಜಯನಗರದ ಸಾಮ್ರಾಜ್ಯಕ್ಕೆ ಕೆಳದಿಯ ಅರಸರು ಸಾಮಂತರಾಗಿದ್ದರು.

ಕಪಿಲಾ ಘಾಟ್ ಬಳಿ ಶಾಸನ ಪತ್ತೆ

ಕಾಶಿಯ ಕಪಿಲಾ ಘಾಟ್ ಬಳಿ ಶಾಸನ ಪತ್ತೆಯಾಗಿದೆ. ಕಾಶಿ ವಿಶ್ವನಾಥ ದೇವಸ್ಥಾನದಿಂದ ಸುಮಾರು 20 ಕಿ.ಮೀ. ದೂರದಲ್ಲಿರುವ ಜಾಗದಲ್ಲಿ ಶಾಸನ ಕಂಡುಬಂದಿದೆ. ಘಾಟ್‌ನಲ್ಲಿ ಪತ್ತೆಯಾದ ಈ ಶಾಸನಗಳಲ್ಲಿ ಕೆಲವು ಕಾಲು ಸಂಕವಾಗಿ ಬಳಕೆಯಾಗುತ್ತಿದೆ. ಮತ್ತೆ ಕೆಲವು ಬಟ್ಟೆ ತೊಳೆಯಲು ಬಳಕೆಯಾಗುತ್ತಿದೆ. ಈ ಮೂಲಕ ಅಪರೂಪದ ಶಿಲಾಶಾಸನವೊಂದು ಭಾರಿ ನಿರ್ಲಕ್ಷ್ಯಕ್ಕೆ ಒಳಗಾಗಿದೆ ಎಂದು ಗೊತ್ತಾಗಿದೆ.

ಕನ್ನಡದಲ್ಲಿ ಕೆತ್ತಲಾಗಿರುವ ಶಾಸನ

ಶಾಸನದಲ್ಲಿ ಕೆಳದಿ ಅರಸ ಶಿವಪ್ಪ ನಾಯಕನ ಹೆಸರನ್ನು ಉಲ್ಲೇಖ ಮಾಡಲಾಗಿದೆ. ಇದು 16ನೇ ಶತಮಾನಕ್ಕೆ ಸೇರಿದ್ದೆಂದು ಹೇಳಲಾಗುತ್ತಿದೆ. ಶಾಸನ ಕಾಲುಸಂಕವಾಗಿ ಬಳಕೆಯಾಗುತ್ತಿರುವುದಕ್ಕೆ ಶಾಸನ ಪ್ರಿಯರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಸಾಗರದ ವಕೀಲ ಹಾಗೂ ಶಾಸನ ಪ್ರಿಯ ಪ್ರವೀಣ್ ಕುಮಾರ್ ಮಾಧ್ಯಮದವರೊಂದಿಗೆ ಮಾತನಾಡಿ, ಶಾಸನ ರಕ್ಷಣೆ ಆಗಬೇಕು. ರಾಜ್ಯ ಹಾಗೂ ಕೇಂದ್ರ ಸರ್ಕಾರವು ಈ ಶಾಸನ ರಕ್ಷಣೆಗೆ ಮುಂದಾಗಬೇಕು. ಉತ್ತರ ಪ್ರದೇಶ ಸರ್ಕಾರವನ್ನು ಸಂಪರ್ಕಿಸಿ ಶಾಸನವನ್ನು ರಕ್ಷಿಸಬೇಕು. ಕೇಂದ್ರ ಪುರಾತತ್ವ ಇಲಾಖೆಯು ತಕ್ಷಣವೇ ಶಾಸನ ರಕ್ಷಣಾ ಕಾರ್ಯಕ್ಕೆ ಮುಂದಾಗಬೇಕು ಎಂದು ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ: HD Deve Gowda: ದೇವೇಗೌಡರಿಗೆ ಜನ್ಮದಿನ ಶುಭ ಕೋರಿದ ಮೋದಿ; ಮಾಜಿ ಪ್ರಧಾನಿಗೆ ಹಲಸಿನ ಹಣ್ಣು ಗಿಫ್ಟ್‌

ಇನ್ನು ಈ ಶಾಸನವು ಕನ್ನಡ ಹಾಗೂ ಪರ್ಶಿಯನ್ ಭಾಷೆಯಲ್ಲಿದ್ದು, ಎರಡೂ ಶಾಸನವನ್ನು ರಕ್ಷಿಸಬೇಕು, ಇದು ಶಿವಮೊಗ್ಗದ ಹೆಮ್ಮೆಯ ಪ್ರತೀಕವಾಗಿದೆ. ಹೀಗಾಗಿ ಇದರ ರಕ್ಷಣೆಯ ಅವಶ್ಯಕತೆ ಇದೆ ಎಂದು ಪ್ರವೀಣ್ ಕುಮಾರ್ ಒತ್ತಾಯಿಸಿದ್ದಾರೆ.

Exit mobile version