Site icon Vistara News

Karnataka Election: ವಿಜಯೇಂದ್ರಗೆ ಶುಭ ಕೋರಿದ ಶಾಸಕ ಅಶೋಕ ನಾಯ್ಕ; ಬಿಎಸ್‌ವೈ ಜತೆ ಸಮಾಲೋಚನೆ

#image_title

ಶಿವಮೊಗ್ಗ: ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮೊದಲು ಅವರ ನಿವಾಸಕ್ಕೆ ಭೇಟಿ ನೀಡಿದ ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ ನಾಯ್ಕ (Karnataka Election) ಅವರು ವಿಜಯೇಂದ್ರ ಅವರಿಗೆ ಶುಭ ಹಾರೈಸಿದರು.

ಬಿ.ವೈ.ವಿಜಯೇಂದ್ರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಮುನ್ನ ನಡೆದ ಪ್ರಚಾರದಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ ನಾಯ್ಕ ಪಾಲ್ಗೊಂಡಿದ್ದರು. ಕಾರ್ಯಕರ್ತರ ಜತೆಯಲ್ಲಿ ಪ್ರಚಾರ ನಡೆಸಿದ ಅವರು ವಿಜಯೇಂದ್ರ ಅವರ ಗೆಲುವಿಗೆ ಶುಭ ಕೋರಿದರು.

ಇದನ್ನೂ ಓದಿ: Karnataka Election 2023: ಬಿಎಸ್‌ವೈ, ಡಿಕೆಶಿಗೆ ನೀತಿ ಸಂಹಿತೆ ಬಿಸಿ; ಇಬ್ಬರೂ ಸಂಚರಿಸಿದ ಹೆಲಿಕಾಪ್ಟರ್‌ಗಳ ತಪಾಸಣೆ

ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚುನಾವಣೆ ಮತ್ತು ಪ್ರಚಾರ ಕಾರ್ಯದ ಬಗ್ಗೆ ಸಮಾಲೋಚನೆ ನಡೆಸಿ ಆಶೀರ್ವಾದ ಪಡೆದರು. ಲೋಕಸಭೆ ಸದಸ್ಯ ಬಿ.ವೈ. ರಾಘವೇಂದ್ರ ಅವರೊಂದಿಗೆ ಗ್ರಾಮಾಂತರ ಕ್ಷೇತ್ರದ ಪ್ರವಾಸದ ಕುರಿತು ಚರ್ಚಿಸಿದರು.

ಹಾಗೆಯೇ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರ ಪ್ರಭಾರಿ ಎಸ್. ದತ್ತಾತ್ರಿ ಅವರು ಶಿಕಾರಿಪುರ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಅವರ ಗೆಲುವಿಗೆ ಶುಭಕೋರಿದರು. ಇದೇ ಸಂದರ್ಭದಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಆಶೀರ್ವಾದ ಪಡೆದರು. ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ ಉಪಸ್ಥಿತರಿದ್ದರು.

Exit mobile version