Site icon Vistara News

Karnataka Election : ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮೇ 2ರಂದು ತೀರ್ಥಹಳ್ಳಿಗೆ

#image_title

ತೀರ್ಥಹಳ್ಳಿ: ವಿಧಾನಸಭಾ ಚುನಾವಣೆ (Karnataka Election) ಹತ್ತಿರವಾಗುತ್ತಿದ್ದಂತೆಯೇ ಎಲ್ಲ ಪಕ್ಷಗಳು ರಾಷ್ಟ್ರೀಯ ನಾಯಕರನ್ನು ಕರೆಸಿ ಪ್ರಚಾರ ನಡೆಸಲಾರಂಭಿಸಿವೆ. ಅದರಂತೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಮೇ2ರಂದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಗೆ ಬಂದು ಪ್ರಚಾರ ಮಾಡಲಿದ್ದಾರೆ. ಅದಕ್ಕೆಂದು ಸಕಲ ಸಿದ್ಧತೆ ಮಾಡಿಕೊಳ್ಳುತ್ತಿರುವುದಾಗಿ ಕಾಂಗ್ರೆಸ್‌ ಮುಖಂಡ ಆರ್‌.ಎಂ.ಮಂಜುನಾಥ ಗೌಡ ಅವರು ತಿಳಿಸಿದ್ದಾರೆ.

ಬುಧವಾರ ತೀರ್ಥಹಳ್ಳಿಯ ಕಾಂಗ್ರೆಸ್‌ ಪಕ್ಷದ ಕಚೇರಿಯಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಂಜುನಾಥ ಅವರು ಈ ಬಗ್ಗೆ ಮಾಹಿತಿ ಕೊಟ್ಟಿದ್ದಾರೆ. “ರಾಹುಲ್‌ ಗಾಂಧಿ ಅವರು ಸ್ವಂತ ನಿರ್ಧಾರದಿಂದ ತೀರ್ಥಹಳ್ಳಿಗೆ ಬರುತ್ತಿದ್ದಾರೆ. ಇದು ನಮಗೆ ಅಪಾರ ಸಂತೋಷ ತಂದಿದೆ. ಅಲ್ಲದೆ ತೀರ್ಥಹಳ್ಳಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ದೊಡ್ಡ ಅಂತರದ ಗೆಲುವು ಸಾಧಿಸಲಿದ್ದಾರೆ” ಎಂದು ಅವರು ಹೇಳಿದರು.

ಇದನ್ನೂ ಓದಿ: Karnataka Election : ಮೋದಿ ಅಂದ್ರೆ ವಿಷದ ಹಾವಿದ್ದಂತೆ; ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ
“ರಾಜ್ಯದ ಎಲ್ಲ ಕಡೆ ಜನ ಬಿಜೆಪಿ ವಿರುದ್ಧ ರೋಸಿ ಹೋಗಿದ್ದಾರೆ. ಬೆಲೆ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ. ಬಿಜೆಪಿ ಭರವಸೆ ಎಲ್ಲಿ ಹೋಯಿತು? ಈಗ ಅವರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಕುರಿತು ಅಪಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ಯಾವಾಗಲೂ ಈಡೇರಿಸಲು ಅಸಾಧ್ಯವಾದ ಯಾವ ಭರವಸೆಯನ್ನೂ ನೀಡಿಲ್ಲ. ಈಗ ಗ್ಯಾರಂಟಿ ಕಾರ್ಡ್‌ನಲ್ಲಿರುವ ಎಲ್ಲ ಭರವಸೆಯನ್ನು ಕಾಂಗ್ರೆಸ್ ಅಧಿಕಾರಕ್ಕೆ ಬಂದ ಒಂದು ತಿಂಗಳ ಒಳಗಡೆ ಈಡೇರಿಸಲಿದೆ. ಈ ಹಿಂದೆ ಕೂಡ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ನೀಡಿದ್ದ ಬಹುತೇಕ ಭರವಸೆ ಈಡೇರಿಸಿದ್ದಾರೆ. ಬಿಜೆಪಿ ತನ್ನ ಪ್ರಣಾಳಿಕೆಯ ಯಾವ ಭರವಸೆ ಈಡೇರಿಸಿದೆ ಎಂಬುದನ್ನು ಜನತೆಗೆ ತಿಳಿಸಲಿ. ಗೃಹ ಸಚಿವ ಆರಗ ಜ್ಞಾನೇಂದ್ರ ತೀರ್ಥಹಳ್ಳಿಯಲ್ಲಿ ಅಭಿವೃದ್ಧಿ ಕುರಿತು ಮಾತಾಡುತ್ತಿದ್ದಾರೆ. ಆದರೆ ಎಲ್ಲ ಕಾಮಗಾರಿಗಳಲ್ಲೂ ಭ್ರಷ್ಟಚಾರದ ಆರೋಪ ಕೇಳಿ ಬರುತ್ತಿದೆ” ಎಂದು ಅವರು ಹೇಳಿದರು.

ಸುದ್ದಿ ಗೋಷ್ಠಿಯಲ್ಲಿ ಮುಖಂಡರಾದ ಜಿ.ಎಸ್.ನಾರಾಯಣರಾವ್, ಕೆಸ್ತೂರು ಮಂಜುನಾಥ್, ವಿಲಿಯಮ್, ಆದರ್ಶ್ ಹುಂಚದಕಟ್ಟೆ ಉಪಸ್ಥಿತರಿದ್ದರು.

Exit mobile version