Site icon Vistara News

ಭದ್ರಾ ನಾಲೆಯಲ್ಲಿ ಈಜಲು ಹೋದ ಇಬ್ಬರು ಮಕ್ಕಳು ನಾಪತ್ತೆ

ಶಿವಮೊಗ್ಗ: ಜಿಲ್ಲೆಯ ಭದ್ರಾ ನಾಲೆಯಲ್ಲಿ ಈಜಲು ಹೋಗಿದ್ದ ಇಬ್ಬರು ಮಕ್ಕಳು ನಾಪತ್ತೆಯಾಗಿದ್ದಾರೆ. ಅವರನ್ನು ಪತ್ತೆ ಮಾಡಲು ಪೊಲೀಸರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಜಂಟಿಯಾಗಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಮಕ್ಕಳು ನೀರಿನಲ್ಲಿ ಕೊಚ್ಚಿ ಹೋಗಿರಬಹುದು ಎಂದು ಶಂಕಿಸಲಾಗಿದೆ.

ಚಂದನಾ (14) ಮತ್ತು ಹರ್ಷ (10) ನಾಪತ್ತೆಯಾದ ಮಕ್ಕಳಾಗಿದ್ದಾರೆ. ಈ ಮಕ್ಕಳು ಶಿವಮೊಗ್ಗ ತಾಲೂಕಿನ ಮುದುವಾಲ ಗ್ರಾಮದವರು. ಶಾಲೆಗೆ ರಜೆ ಇದ್ದ ಕಾರಣ ಇವರು ಅಗರದಹಳ್ಳಿಯಲ್ಲಿರುವ ನೆಂಟರ ಮನೆಗೆ ಬಂದಿದ್ದರು. ಹೊಳೆಹೊನ್ನೂರು ಸಮೀಪದ ಅಗರದಹಳ್ಳಿ ಬಳಿಯ ಭದ್ರಾ ಬಲದಂಡೆ ನಾಲೆಯಲ್ಲಿ ಮಕ್ಕಳು ತಮ್ಮ ದೊಡ್ಡಪ್ಪನೊಂದಿಗೆ ಈಜಲು ತೆರಳಿದ್ದರು. ಈ ಸಂದರ್ಭದಲ್ಲಿ ಇಬ್ಬರು ಮಕ್ಕಳು ನಾಪತ್ತೆಯಾಗಿದ್ದಾರೆ.

ಮಕ್ಕಳ ನಾಪತ್ತೆ ಪ್ರಕರಣ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ಧಾವಿಸಿ ಮಕ್ಕಳ ಶೋಧ ಕಾರ್ಯದಲ್ಲಿ ತೊಡಗಿದರು. ಬುಧವಾರವಿಡೀ ಪತ್ತೆ ಕಾರ್ಯ ನಡೆಸಿದರೂ ಮಕ್ಕಳು ಪತ್ತೆಯಾಗಿಲ್ಲ. ಗುರುವಾರ ಕೂಡ ಶೋಧ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಬಾಳೆಹೊನ್ನೂರು ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ಶಿವಮೊಗ್ಗದಲ್ಲಿ ಮಗುವಿನ ಪ್ರಾಣ ರಕ್ಷಿಸಿದ ಆಟೋ ಚಾಲಕ

Exit mobile version