ಶಿವಮೊಗ್ಗ: ಶಿವಮೊಗ್ಗದಲ್ಲಿ (Shivamogga News) ಎರಡು ಎದುರಾಳಿ ಗುಂಪುಗಳ ನಡುವೆ ಮಾರಾಮಾರಿ (Crime News) ನಡೆದಿದ್ದು, ಆರು ಮಂದಿಗೆ ಚೂರಿಯಿಂದ (Knife attack) ಇರಿಯಲಾಗಿದೆ. ಇವರಲ್ಲಿ ಒಬ್ಬನ ಸ್ಥಿತಿ ಗಂಭೀರವಾಗಿದೆ.
ಕಿರಣ್ (28), ಅರುಣ್ (24), ಕಿಶೋರ್ (26), ಅಭಿ (32), ಅಣ್ಣಪ್ಪ (24), ರಾಜು (24) ಚೂರಿ ಇರಿತಕ್ಕೊಳಗಾಗಿ ಗಾಯಗೊಂಡವರು. ಐವರಿಗೂ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಶಿವಮೊಗ್ಗದ ಅಲ್ಕೊಳದ ವಿಶಾಲ್ ಮಾರ್ಟ್ ಬಳಿ ಎಲ್ಐಸಿ ಆಫೀಸ್ ಹಿಂಭಾಗದಲ್ಲಿ ನಿನ್ನೆ ರಾತ್ರಿ ಘಟನೆ ನಡೆದಿದೆ. ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕರ ಗುಂಪುಗಳು ಬಡಿದಾಡಿಕೊಂಡಿವೆ. 2 ವರ್ಷಗಳಿಂದ ಪವನ್, ಕಿರಣ್ ಎಂಬಿಬ್ಬರ ನಡುವೆ ಸಣ್ಣಪುಟ್ಟ ವಿಚಾರಕ್ಕೆ ಇದ್ದ ಭಿನ್ನಾಭಿಪ್ರಾಯ ನಿನ್ನೆ ಸ್ಫೋಟಗೊಂಡಿದೆ.
ನೇತಾಜಿ ಸರ್ಕಲ್ನಲ್ಲಿ ಇದೇ ವಿಚಾರಕ್ಕೆ ಕಿರಿಕ್ ಉಂಟಾಗಿದ್ದು, ಇದರ ಬೆನ್ನಲ್ಲಿಯೇ ಪವನ್ ಮತ್ತು ಟೀಂ ವಿಶಾಲ್ ಮಾರ್ಟ್ ಸಮೀಪವಿದ್ದ ಕಿರಣ್ ಮತ್ತು ಗ್ಯಾಂಗ್ ಮೇಲೆ ಅಟ್ಯಾಕ್ ಮಾಡಿದೆ. ಕಿರಣ್ ಗ್ಯಾಂಗ್ನ ಐವರಿಗೆ ಚಾಕುವಿನಿಂದ ಇರಿಯಲಾಗಿದೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪವನ್ ಮತ್ತು ತಂಡಕ್ಕಾಗಿ ಪೊಲೀಸರು ಶೋಧ ನಡೆಸಿದ್ದಾರೆ.
ಗಣೇಶ ಮೂರ್ತಿ ವಿಸರ್ಜನೆ ವೇಳೆ ಗಲಾಟೆ
ಶಿವಮೊಗ್ಗ: ಗಣೇಶ ಮೂರ್ತಿ ವಿಸರ್ಜನೆ ವೇಳೆ ಬಿಗುವಿನ ವಾತಾವಾರಣ ಉಂಟಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ಟ್ಯಾಂಕ್ ಮೊಹಲ್ಲಾದ ಮಸೀದಿ ಬಳಿ ಘಟನೆ ನಡೆದಿದೆ. ಟ್ಯಾಂಕ್ ಮೊಹಲ್ಲಾದ ಕೇಸರಿ ಪಡೆ ಕೂರಿಸಿದ್ದ ಗಣೇಶ ಮೂರ್ತಿಯ ವಿಸರ್ಜನೆ ಮೆರವಣಿಗೆ ಸಂದರ್ಭದಲ್ಲಿ ಪಟಾಕಿ ಹೊಡೆಯುವ ವಿಚಾರವಾಗಿ ಮಾತಿನ ಚಕಮಕಿ ಉಂಟಾಗಿದೆ. ಎರಡು ಕೋಮಿನ ಗುಂಪುಗಳ ನಡುವೆ ಮಾತಿಗೆ ಮಾತು ಬೆಳೆದು ಚಕಮಕಿ ಉಂಟಾಗಿತ್ತು.
ಘಟನಾ ಸ್ಥಳಕ್ಕೆ ಎಸ್ಪಿ ಮಿಥುನ್ ಕುಮಾರ್ ದೌಡಾಯಿಸಿದ್ದು, ಮಾತುಕತೆ ಮೂಲಕ ಪರಿಸ್ಥಿತಿ ತಿಳಿಗೊಳಿಸಿದರು. ಘಟನೆ ಕುರಿತು ಹಾಗೂ ಕಿಡಿಗೇಡಿಗಳ ಕುರಿತು ಸ್ಥಳದಲ್ಲಿದ್ದ ಪೂಲೀಸ್ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕಿದರು. ಸ್ಥಳದಲ್ಲಿ ಬಿಗುವಿನ ವಾತಾವರಣದ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಯಿತು. ಪೊಲೀಸ್ ಭದ್ರತೆಯ ನಡುವೆ ಗಣೇಶ ಮೂರ್ತಿ ವಿಸರ್ಜನೆ ನಡೆಯಿತು.
ಇದನ್ನೂ ಓದಿ: Karwar News: ದಲಿತ ಮುಖಂಡನಿಂದ ಹಿಂದು ದೇವರ ಅವಹೇಳನ ಪ್ರಕರಣ; ವಿಡಿಯೊ ಮಾಡಿದ ಯುವಕನ ಮೇಲೆ ಹಲ್ಲೆ