KS Eshwarappa : ಪ್ರಿಯಾಂಕ್‌ ಖರ್ಗೆ ಒಂದು ಕೆಟ್ಟ ಹುಳ ಎಂದ ಈಶ್ವರಪ್ಪ! - Vistara News

ಶಿವಮೊಗ್ಗ

KS Eshwarappa : ಪ್ರಿಯಾಂಕ್‌ ಖರ್ಗೆ ಒಂದು ಕೆಟ್ಟ ಹುಳ ಎಂದ ಈಶ್ವರಪ್ಪ!

KS Eshwarappa : ಬಿಜೆಪಿ ನಾಯಕ ಕೆ.ಎಸ್‌. ಈಶ್ವರಪ್ಪ ಅವರು ಸಚಿವ ಪ್ರಿಯಾಂಕ್‌ ಖರ್ಗೆ ಅವರ ವಿರುದ್ಧ ಮುಗಿಬಿದ್ದಿದ್ದಾರೆ. ಅವರು ಮಲ್ಲಿಕಾರ್ಜುನ ಖರ್ಗೆ ಹೊಟ್ಟೆಯಲ್ಲಿ ಹುಟ್ಟಿದ ಕೆಟ್ಟ ಹುಳ ಎಂದಿದ್ದಾರೆ.

VISTARANEWS.COM


on

KS Eshwarappa Priyank Kharge
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ಪ್ರಿಯಾಂಕ್‌ ಖರ್ಗೆ (Priyanka Kharge) ಒಂದು ಕೆಟ್ಟ ಹುಳ-ಹೀಗೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ (KS Eshwarappa). ದೇಶ ವಿಭಜನೆಯ (Division of Nation) ಮಾತನಾಡಿದ್ದಾರೆ ಎಂದು ಸಂಸದ ಡಿ.ಕೆ. ಸುರೇಶ್‌ (DK Suresh) ಅವರ ವಿರುದ್ಧ ಆಪಾದನೆ ಮಾಡಿದ್ದಕ್ಕೆ ಸಚಿವ ಪ್ರಿಯಾಂಕ್‌ ಖರ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಇದಕ್ಕೆ ಪ್ರತಿಯಾಗಿ ಈಶ್ವರಪ್ಪ ಕಿಡಿಕಾರಿದ್ದಾರೆ.

ʻʻಮಲ್ಲಿಕಾರ್ಜುನ ಖರ್ಗೆ ಹೊಟ್ಟೆಯೊಳಗೆ ಇಂತಹ ಕೆಟ್ಟ ಹುಳ ಹುಟ್ಟಿದೆ. ಅವನಿಗೆ ತಳ ಬುಡ ಗೊತ್ತಿಲ್ಲ. ಏನೇನೋ ಮಾತನಾಡುತ್ತಾನೆ. ಪ್ರಿಯಾಂಕಾ ಖರ್ಗೆ ಯನ್ನು ನಾನು ಕಾಂಗ್ರೆಸ್ ನಾಯಕ ಅಂತಾ ಕರೆಯಲು ಇಷ್ಟಪಡುವುದಿಲ್ಲʼʼ ಎಂದು ಹೇಳಿದರು ಈಶ್ವರಪ್ಪ.

ಇವರೆಲ್ಲಾ ನನ್ನನ್ನು ತಪ್ಪು ಅನ್ನುತ್ತಾರಲ್ಲಾ.. ಸ್ವಾತಂತ್ರ್ಯ ಹೋರಾಟಗಾರ ಕಾಂಗ್ರೆಸ್ ನಾಯಕರು ನನ್ನ‌ ಹೇಳಿಕೆ ತಪ್ಪು ಅಂತಾ ಹೇಳಲಿ, ಒಪ್ಪಿಕೊಳ್ಳುತ್ತೇನೆ ಎಂದರು.

ದಾವಣಗೆರೆಯಲ್ಲಿ ನಡೆದಿದ್ದ ಬಿಜೆಪಿ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ್ದ ಕೆ.ಎಸ್‌. ಈಶ್ವರಪ್ಪ ಅವರು, ಡಿ.ಕೆ. ಸುರೇಶ್‌ ಅವರನ್ನು ಉಲ್ಲೇಖಿಸಿ ರಾಷ್ಟ್ರ ದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕು ಎಂದು ಅಭಿಪ್ರಾಯಪಟ್ಟಿದ್ದರು.

ಈಶ್ವರಪ್ಪ ಹೇಳಿಕೆಗೆ ಪ್ರತಿಯಾಗಿ ದಾವಣಗೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ದಾವಣಗೆರೆ ಪೊಲೀರು ಶಿವಮೊಗ್ಗದ ಈಶ್ವರಪ್ಪ ಅವರ ನಿವಾಸಕ್ಕೆ ಬಂದು ನೋಟಿಸ್‌ ಜಾರಿ ಮಾಡಿದ್ದರು.

ನೋಟಿಸ್‌ ಬಂದಿರುವುದನ್ನು ಒಪ್ಪಿಕೊಂಡ ಕೆ.ಎಸ್‌. ಈಶ್ವರಪ್ಪ ಅವರು, ದೇಶದ್ರೋಹಿಗಳಿಗೆ ಯಾವ ನೋಟೀಸ್ ಕೂಡಾ ಇಲ್ಲ, ಯಾವ ಎಫ್ ಐಆರ್ ಕೂಡಾ ಇಲ್ಲ. ದೇಶದ್ರೋಹಿ ಹೇಳಿಕೆ ಕೊಟ್ಟ ವ್ಯಕ್ತಿಗಳಿಗೆ ಗುಂಡಿಕ್ಕಿ ಕೊಲ್ಲುವಂಥ ಕಾನೂನು ತರಬೇಕು ಎಂದು ಹೇಳಿದ್ದೆ. ಹಾಗಾಗಿ ನಮ್ಮ ಮೇಲೆ ಎಫ್ ಐ ಆರ್ ಹಾಕಿದ್ದಾರೆ, ನನಗೆ ನೋಟೀಸ್ ನೀಡಿದ್ದಾರೆ ಎಂದರು.

ʻʻದಾವಣಗೆರೆ ಪೊಲೀಸರು ನೋಟೀಸ್ ಕೊಟ್ಟಿರುವುದು ಹೌದು. ಎಫ್ ಐ ಆರ್ ಹಾಕಿರುವುದು ಸತ್ಯ. ಆದರೆ, ನನ್ನ ಮೇಲೆ ನೂರು ಎಫ್ ಐ ಆರ್ ಹಾಕಿದರೂ ಹೆದರುವುದಿಲ್ಲ. ಇದುವರೆಗೆ ನನ್ನ ಮೇಲೆ 100 ಎಫ್ಐಆರ್ ಹಾಕಿರಬಹುದು. ನಾನು ಈವರೆಗೂ ಒಂದು ರೂಪಾಯಿ ಫೈನ್ ಕಟ್ಟಿಲ್ಲ ಎಂದು ಹೇಳಿದರು.

ಇದನ್ನೂ ಓದಿ : KS Eshwarappa : ಗುಂಡಿಕ್ಕಿ ಕೊಲ್ಲಿ ಎಂದಿಲ್ಲ, ಕಾನೂನು ಬೇಕು ಅಂದೆ ಅಷ್ಟೆ; ಮೆತ್ತಗಾದ ಈಶ್ವರಪ್ಪ

ನನ್ನ ಹೇಳಿಕೆಯ ಬಗ್ಗೆ ಜನರೇ ತೀರ್ಮಾನ ಮಾಡಬೇಕು

ʻʻದೇಶ ವಿಭಜನೆ ಮಾಡಬೇಕು ಅಂತಾ ಹೇಳಿದ ವ್ಯಕ್ತಿಯ ವಿರುದ್ಧ ಎಫ್ ಐ ಆರ್ ಹಾಕಿಲ್ಲ. ನೋಟೀಸ್ ಕೊಟ್ಟಿಲ್ಲ. ಗುಂಡಿಕ್ಕಿ ಕೊಲೆ ಅಂತಾ ಹೇಳಿದ್ದು ಕಾಂಗ್ರೆಸ್ ಸರ್ಕಾರಕ್ಕೆ ತಪ್ಪು ಅಂತಾ ಕಾಣಿಸಿದೆ. ಇದರ ವಿಷಯದಲ್ಲಿ ಜನರೇ ತೀರ್ಮಾನ ಮಾಡಬೇಕು ಎಂದು ಹೇಳಿದ ಅವರು, ರಾಜ್ಯದಲ್ಲಿ ಈಗ ಎಲ್ಲರೂ ಮಾತನಾಡುತ್ತಿದ್ದಾರೆ. ಸದ್ಯ ನನ್ನನ್ನು ಪುಣ್ಯ ನಾನು ದೇಶದ್ರೋಹಿ ಎಂದು ಯಾರು ಹೇಳಿಲ್ಲʼʼ ಎಂದು ಹೇಳಿದರು.

ಪ್ರಧಾನಿ, ಗೃಹ ಸಚಿವರಿಗೆ ಪತ್ರ ಬರೆಯುತ್ತೇನೆ ಎಂದ ಕೆ.ಎಸ್‌. ಈಶ್ವರಪ್ಪ

ದೇಶ ವಿಭಜನೆಯ ಮಾತು ಆಡಿದ ಡಿ.ಕೆ.ಸುರೇಶ್ ವಿರುದ್ಧ ಕೇಸು ದಾಖಲು ಮಾಡಿ ಎಂದು ಈಗಲೂ ಆಗ್ರಹಿಸುತ್ತೇನೆ. ಗೃಹಸಚಿವರು ಈ ಬಗ್ಗೆ ಗಮನಹರಿಸಿ ಕೇಸು ದಾಖಲಿಸಬೇಕು. ಈ ಬಗ್ಗೆ ನಾನು ಪ್ರಧಾನಿಗಳಿಗೂ, ಕೇಂದ್ರ ಗೃಹ ಸಚಿವರಿಗೂ ಪತ್ರ ಬರೆಯುತ್ತೇನೆ. ಗುಂಡಿಕ್ಕಿ ಕೊಲ್ಲುವ ಅಂತಾ ಕಾನೂನು ತನ್ನಿ ಅಂತಲೇ ನಾನು ಪತ್ರ ಬರೆಯುತ್ತೇನೆ ಎಂದು ಹೇಳಿದರು.

ನನ್ನ ಮೈನಲ್ಲಿ ಹರಿಯುತ್ತಿರುವುದು ಅಂಬೇಡ್ಕರ್‌ ರಕ್ತ ಎಂದ ಪ್ರಿಯಾಂಕ್‌

ಪ್ರಿಯಾಂಕ್‌ ಖರ್ಗೆ ಒಂದು ಹುಳ ಎಂಬ ಕೆ.ಎಸ್‌. ಈಶ್ವರಪ್ಪ್‌ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಸಚಿವರು, ʻʻಈಶ್ವರಪ್ಪ ಏನಾದ್ರು ಬಾಯಿ ಬಡೆದುಕೊಳ್ಳಲಿ, ಬಟ್ಟೆ ಹರಿದುಕೊಳ್ಳಲಿʼʼ ಎಂದರು.

ʻʻಬಿಜೆಪಿಯಲ್ಲೇ ಕೆ.ಎಸ್.ಈಶ್ವರಪ್ಪ ಅವರ ಮಾತಿಗೆ ಬೆಲೆಯಿಲ್ಲ, ನಾವ್ಯಾಕೆ ತಲೆ ಕಡೆಸಿಕೊಳ್ಳ ಬೇಕು.? ಜನ ನಮಗೆ ಆಶಿರ್ವಾದ ಮಾಡಿದ್ದಾರೆ ನಾವು ಕೆಲಸ ಮಾಡಬೇಕಿದೆ.. ಈಗ ಏನು ಅಬ್ಬರಿಸುತ್ತಿದ್ದಾರಲ್ಲ.. ಇಷ್ಟೇ ರಾಜಾರೋಷವಾಗಿ ಕೇಂದ್ರಕ್ಕೆ ಹೋಗಿ ರಾಜ್ಯದ ಅನುದಾನ ತರಲಿ.. ಕೇಂದ್ರಕ್ಕೆ ಹೋಗಿ ಕನ್ನಡಿಗರ ಪರವಾಗಿ ಗುಡುಗಲಿʼʼ ಎಂದು ಸವಾಲು ಹಾಕಿದರು.

ʻʻನಾನು ಕೆಟ್ಟ ಹುಳಾನಾ ಇಲ್ಲಾ ಒಳ್ಳೆ ಹುಳಾನಾ? ಅದು ತೆಗೆದುಕೊಂಡು ನಿಮಗೆ ಏನು ಮಾಡೋದಿದೆ.. ನಮ್ಮ ತಂದೆ ತಾಯಿ ಸಂಭಾಳಿಸುತ್ತಿದ್ದಾರೆ, ಚಿತ್ತಾಪುರ ಜನತೆ ನಮಗೆ ಆಶೀರ್ವಾದ ಮಾಡಿದ್ದಾರೆ.. ನಿಮ್ಮ ಹಿರಿತನಕ್ಕೆ ಗೌರವ ಕೊಟ್ಟು ಒಳ್ಳೆ ಭಾಷೆ ಮಾತಾಡುತ್ತಿದ್ದೇನೆ, ಅಕಸ್ಮಾತ್ ನಿಮಗೆ ಬೇರೆ ಭಾಷೆ ಅರ್ಧ ಆಗೋದಿದ್ದರೆ ಹೇಳಿ.. ಮರೆಯ ಬೇಡಿ ನನ್ನ ಮೈನಲ್ಲೂ ಅಂಬೇಡ್ಕರ್ ರಕ್ತ ಹರಿಯುತ್ತಿದೆʼʼ ಎಂದು ಎಚ್ಚರಿಕೆ ನೀಡಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮಳೆ

Karnataka Weather : ಭಯಂಕರ ಬಿಸಿಲಿನಲ್ಲೂ ಮಳೆ ಸೂಚನೆ ಕೊಟ್ಟ ಹವಾಮಾನ ತಜ್ಞರು

karnataka Weather Forecast: ಸುಡುವ ಬಿಸಿಲಿನಲ್ಲೂ ಮಳೆಯಾಗುವ (Rain News) ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ, ಉತ್ತರ ಒಳನಾಡಲ್ಲಿ ಶುಷ್ಕ ವಾತಾವರಣ ಇದ್ದರೆ, ಮಲೆನಾಡು ಹಾಗೂ ದಕ್ಷಿಣ ಒಳನಾಡಲ್ಲಿ ಮಳೆಯಾಗಲಿದೆ.

VISTARANEWS.COM


on

By

Karnataka Weather Forecast
Koo

ಬೆಂಗಳೂರು: ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ (Rain News) ಸಾಧ್ಯತೆಯಿದೆ. ಹಲವೆಡೆ ಗುಡುಗು ಸಹಿತ ಮಳೆ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸಚೂನೆಯನ್ನು (Karnataka Weather Forecast) ನೀಡಿದೆ. ರಾಜ್ಯದ ಉಳಿದೆಡೆ ಒಣ ಹವೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನ ಚಾಮರಾಜನಗರ ಮತ್ತು ರಾಮನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಭಾಗಗಳಲ್ಲಿ ಹಗುರವಾದ ಮಳೆಯಾಗಬಹುದು. ಮಲೆನಾಡಿನ ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದ್ದು, ಶಿವಮೊಗ್ಗದಲ್ಲಿ ಒಣಹವೆ ಮುಂದುವರಿಯಲಿದೆ. ಉತ್ತರ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಶುಷ್ಕ ಹವಾಮಾನವು ಮೇಲುಗೈ ಸಾಧಿಸಲಿದೆ.

ರಾಜಧಾನಿ ಬೆಂಗಳೂರಿನಲ್ಲಿ ಬಿಸಿಲ ಧಗೆಯು ಹೆಚ್ಚಿರಲಿದೆ. ಗರಿಷ್ಠ ಉಷ್ಣಾಂಶವು 39ರ ಗಡಿದಾಟಲಿದೆ. ಇದರಿಂದಾಗಿ ಉರಿ ಬಿಸಿಲು ಜನರನ್ನು ಹೈರಾಣಾಗಿಸಲಿದೆ.

ಇದನ್ನೂ ಓದಿ: Deepika Padukone: ಸಖತ್‌ ಗ್ಲೋ ಆದ ಪ್ರೆಗ್ನೆಂಟ್‌ ದೀಪಿಕಾ: ಜ್ಯೂನಿಯರ್‌ ಆರ್ಟಿಸ್ಟ್‌ ಕೊಟ್ಟ ಸ್ಪೆಷಲ್‌ ಗಿಫ್ಟ್‌ ಏನು?

ಹೀಟ್‌ ವೇವ್‌

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ತೀವ್ರ ಬಿಸಿಗಾಳಿ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿರುತ್ತದೆ. ಉತ್ತರ ಒಳನಾಡು ಭಾಗದಲ್ಲಿ ರಾತ್ರಿ ಹೊತ್ತು ಬೆಚ್ಚಗೆ ಇದ್ದರೆ, ಕರಾವಳಿಯ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ.

ತಾಪಮಾನ ಹೆಚ್ಚಳ ಇರಲಿ ಎಚ್ಚರ

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಹೀಗಾಗಿ ಈ ಸಮಯದಲ್ಲಿ ಎಲ್ಲ ವಯೋಮಾನದವರಲ್ಲೂ ಅನಾರೋಗ್ಯ ಸಮಸ್ಯೆ ಕಾಡಬಹುದು. ಶಾಖದ ಹೊಡೆತವನ್ನು ತಪ್ಪಿಸಲು ಜನರು ಕಾಳಜಿ ವಹಿಸುವುದು ಅಗತ್ಯವಿದೆ.

ಕಲಬುರಗಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಹೀಗಾಗಿ ಈ ಪ್ರದೇಶದ ಜನರು ದೀರ್ಘಾವಧಿಯವರೆಗೆ ಸೂರ್ಯನಿಗೆ ಒಡ್ಡಿಕೊಳ್ಳುವ ಅಥವಾ ಭಾರವಾದ ಕೆಲಸವನ್ನು ಮಾಡಬಾರದು.

ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಮಧ್ಯಮ ತಾಪಮಾನ ಮತ್ತು ಶಾಖವನ್ನು ಸಾಮಾನ್ಯ ಜನರು ಸಹಿಸಿಕೊಳ್ಳಬಹುದು. ಆದರೆ ಶಿಶುಗಳು, ವೃದ್ಧರು, ದೀರ್ಘಕಾಲದ ಕಾಯಿಲೆ ಇರುವವರು ಆರೋಗ್ಯ ಕಾಳಜಿ ವಹಿಸುವುದು ಸೂಕ್ತ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಶಿವಮೊಗ್ಗ

Shivamogga News: ವಿಜೃಂಭಣೆಯ ರಿಪ್ಪನ್‌ಪೇಟೆ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ರಥೋತ್ಸವ

Shivamogga News: ರಿಪ್ಪನ್‌ಪೇಟೆಯ ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವವು ಗುರುವಾರ ಅಪಾರ ಭಕ್ತರ ಮಧ್ಯೆ ವಿಜೃಂಭಣೆಯಿಂದ ಜರುಗಿತು.

VISTARANEWS.COM


on

Sri Siddhivinayaka Swami SrimanMaharathotsava in Ripponpet
Koo

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ಧ ಶ್ರೀ ಸಿದ್ಧಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವವು ಗುರುವಾರ ಅಪಾರ ಭಕ್ತರ ಮಧ್ಯೆ ವಿಜೃಂಭಣೆಯಿಂದ ಜರುಗಿತು. ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಶ್ರೀ ಆಭಿನವ ಚನ್ನಬಸವ ಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿ, ಈ ವರ್ಷ ನಾಡಿಗೆ ಸಮೃದ್ಧ ಮಳೆ-ಬೆಳೆಯಾಗಿ ರೈತರ ಬದುಕು ಹಸನಾಗಲೆಂದು ಮತ್ತು ಜಗತ್ತಿನಲ್ಲೆಡೆ ಶಾಂತಿ, ನೆಮ್ಮದಿಯನ್ನು ಕರುಣಿಸುವಂತಾಗಲಿ ಎಂದು ಸಿದ್ಧಿವಿನಾಯಕ ದೇವರಲ್ಲಿ ಶ್ರೀಗಳು ಪ್ರಾರ್ಥಿಸಿದರು.

ಇದನ್ನೂ ಓದಿ: IPL 2024 : ಐಪಿಎಲ್​ ಮಧ್ಯದಲ್ಲಿಯೇ ಕೆಕೆಆರ್​ ತಂಡ ತೊರೆದ ಆರಂಭಿಕ ಆಟಗಾರ

ಮನ್ಮಹಾರಥೋತ್ಸವದ ಅಂಗವಾಗಿ ದೇವಸ್ಥಾನದಲ್ಲಿ ಶಿವಮೊಗ್ಗದ ವಸಂತ ಭಟ್ ಮತ್ತು ಚಂದ್ರಶೇಖರ ಭಟ್ ಹಾಗೂ ಗುರುರಾಜ ಭಟ್ ಅವರ ನೇತೃತ್ವದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು. ಭಕ್ತಾಧಿಗಳು ಶ್ರದ್ಧಾ ಭಕ್ತಿಯಿಂದ ರಥವನ್ನು ಎಳೆದು ಇಷ್ಠಾರ್ಥ ಸಿದ್ಧಿಗಾಗಿ ಪ್ರಾರ್ಥಿಸಿದರು. ಭಕ್ತರಿಗೆ ಉಚಿತವಾಗಿ ಕಬ್ಬಿನ ಹಾಲು ಮತ್ತು ಐಸ್‌ಕ್ರೀಮ್, ಕುಡಿಯುವ ನೀರಿನ ವ್ಯವಸ್ಥೆಯನ್ನು ವಿವಿಧ ಸಂಘಟನೆಗಳಿಂದ ಆಯೋಜಿಸಲಾಗಿತ್ತು.

ಇದನ್ನೂ ಓದಿ: Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಶಾಖದ ಹೊಡೆತ; ಕೋಲಾರದಲ್ಲಿ ಮೊದಲ ಮಳೆಯ ಸಿಂಚನ

ಈ ಸಂದರ್ಭದಲ್ಲಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಈಶ್ವರಶಟ್ಟಿ, ಎನ್. ಸತೀಶ್, ಗಣೇಶ್ ಎನ್. ಕಾಮತ್, ಎಂ.ಡಿ. ಇಂದ್ರಮ್ಮ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸುಧೀಂದ್ರ ಪೂಜಾರಿ, ತುಳೋಜಿರಾವ್, ಸ್ವಾಮಿ ದೊಡ್ಡಿನಕೊಪ್ಪ, ವೈ.ಜೆ. ಕೃಷ್ಣ, ಉಮೇಶ್ ಆರ್., ಮಂಜನಾಯ್ಕ್, ಎಂ.ಬಿ. ಮಂಜುನಾಥ, ಎಂ. ಸುರೇಶ್‌ ಸಿಂಗ್, ಸುಧೀರ್ ಪಿ., ರವೀಂದ್ರ ಕೆರೆಹಳ್ಳಿ, ನಾಗರತ್ನ ದೇವರಾಜ್, ಎಸ್.ಎನ್. ಬಾಲಚಂದ್ರ, ಕುಸುಮಾ ಬಾಲಚಂದ್ರ, ಪದ್ಮಾ ಸುರೇಶ್, ನಿವೃತ್ತ ಶಿಕ್ಷಕ ರಾಧಾಕೃಷ್ಣ, ಜಯಲಕ್ಷ್ಮಿ ಮೋಹನ್ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.

Continue Reading

ಮಳೆ

Karnataka Weather : ರಾಜ್ಯದಲ್ಲಿ ಮುಂದುವರಿಯಲಿದೆ ಶಾಖದ ಹೊಡೆತ; ಕೋಲಾರದಲ್ಲಿ ಮೊದಲ ಮಳೆಯ ಸಿಂಚನ

Karnataka Weather Forecast : ರಾಜ್ಯಾದ್ಯಂತ ತಾಪಮಾನ ಹಾಗೂ ಹೀಟ್‌ ವೇವ್‌ (Heat wave) ಪರಿಸ್ಥಿತಿಗಳು ಮೇಲುಗೈ ಸಾಧಿಸಿವೆ. ಈ ವಾರವೆಲ್ಲ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ

VISTARANEWS.COM


on

By

Karnataka Weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದಲ್ಲಿ ಒಣ ಹವೆ (Dry Weather) ಮುಂದುವರಿಯಲಿದ್ದು, ತಾಪಮಾನ ಏರಿಕೆ ಆಗಲಿದೆ. ಶಾಖದ ಹೊಡೆತಕ್ಕೆ ಈಗಾಗಲೇ ಜನರು ತತ್ತರಿಸಿ ಹೋಗಿದ್ದಾರೆ. ಹವಾಮಾನ ಇಲಾಖೆಯು ವಿವಿಧ ಜಿಲ್ಲೆಗಳಿಗೆ ರೆಡ್‌, ಆರೆಂಜ್‌, ಯೆಲ್ಲೊ ಅಲರ್ಟ್‌ ನೀಡಿದೆ. ಇದರೊಟ್ಟಿಗೆ ಆರೋಗ್ಯ ಕಾಳಜಿ ವಹಿಸುವಂತೆ ಜನರಿಗೆ ಸಲಹೆ ಸೂಚನೆಗಳನ್ನು ನೀಡಲಾಗಿದೆ.

ಬಿಸಿಗಾಳಿ ಎಚ್ಚರಿಕೆ

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ತೀವ್ರ ಬಿಸಿಗಾಳಿ ಪರಿಸ್ಥಿತಿಗಳು ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಬಳ್ಳಾರಿ, ಕಲಬುರಗಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಶಾಖದ ಅಲೆಯ ವಾತಾವರಣವು ಹೆಚ್ಚಾಗಿರುತ್ತದೆ. ಉತ್ತರ ಒಳನಾಡು ಭಾಗದಲ್ಲಿ ರಾತ್ರಿ ಹೊತ್ತು ಬೆಚ್ಚಗೆ ಇದ್ದರೆ, ಕರಾವಳಿಯ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಗಾಳಿ ಬೀಸಲಿದೆ.

ಇದನ್ನೂ ಓದಿ: Summer Tips: ಬಿಸಿಲಿನ ಆಘಾತದಿಂದ ತಪ್ಪಿಸಿಕೊಳ್ಳಲು ಹೀಗೆ ಮಾಡಿ…

ರೆಡ್ ಮತ್ತು ಆರೆಂಜ್‌, ಯೆಲ್ಲೋ ಅಲರ್ಟ್ ಇರುವ ಪ್ರದೇಶಗಳಿವು

ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಹೀಗಾಗಿ ಈ ಸಮಯದಲ್ಲಿ ಎಲ್ಲ ವಯೋಮಾನದವರಲ್ಲೂ ಅನಾರೋಗ್ಯ ಸಮಸ್ಯೆ ಕಾಡಬಹುದು. ಶಾಖದ ಹೊಡೆತವನ್ನು ತಪ್ಪಿಸಲು ಜನರು ಕಾಳಜಿ ವಹಿಸುವುದು ಅಗತ್ಯವಿದೆ.

ಕಲಬುರಗಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಹೀಗಾಗಿ ಈ ಪ್ರದೇಶದ ಜನರು ದೀರ್ಘಾವಧಿಯವರೆಗೆ ಸೂರ್ಯನಿಗೆ ಒಡ್ಡಿಕೊಳ್ಳುವ ಅಥವಾ ಭಾರವಾದ ಕೆಲಸವನ್ನು ಮಾಡಬಾರದು.

ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಮಧ್ಯಮ ತಾಪಮಾನ ಮತ್ತು ಶಾಖವನ್ನು ಸಾಮಾನ್ಯ ಜನರು ಸಹಿಸಿಕೊಳ್ಳಬಹುದು. ಆದರೆ ಶಿಶುಗಳು, ವೃದ್ಧರು, ದೀರ್ಘಕಾಲದ ಕಾಯಿಲೆ ಇರುವವರು ಆರೋಗ್ಯ ಕಾಳಜಿ ವಹಿಸುವುದು ಸೂಕ್ತ.

ಬೆಂಗಳೂರಲ್ಲಿ ತಾಪಮಾನ ಹೆಚ್ಚಳ

ಬೆಂಗಳೂರು ನಗರದಲ್ಲಿ ಮುಖ್ಯವಾಗಿ ನಿರ್ಮಲ ಆಕಾಶವಿರುತ್ತದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 39 ಮತ್ತು 24 ಡಿ.ಸೆ ಇರಲಿದೆ. ತಾಪಮಾನ ಏರಿಕೆಯು ಜನರನ್ನು ಕಂಗಾಲು ಮಾಡಿದೆ. ಇದೇ ವಾತಾವರಣವು ಈ ಪೂರ್ತಿ ಮುಂದುವರಿಯಲಿದೆ.

ಕೋಲಾರದಲ್ಲಿ ಮಳೆಯ ಸಿಂಚನ

ಕೋಲಾರ ಜಿಲ್ಲೆಯಲ್ಲಿ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಗುರುವಾರ ಸತತ ಒಂದು ಗಂಟೆಯಿಂದ ಮಳೆ ಸುರಿಯುತ್ತಿದೆ. ಮೂರ್ನಾಲ್ಕು ತಿಂಗಳಿಂದ ಬೇಸಿಗೆ ಬಿಸಿಯಿಂದ ಬಸವಳಿದ ಜನರಿಗೆ ಮಳೆಯು ತಂಪೆರೆದಿದೆ. ಭರಣಿ ನಕ್ಷತ್ರದ ಮೊದಲ ಮಳೆ ಕೋಲಾರ ಜಿಲ್ಲೆಯ ಕೆಜಿಎಫ್‌ನಲ್ಲಿ ಸುರಿಯುತ್ತಿದೆ. ಬಿಸಿಲಿನ ತಾಪ, ಬಿಸಿ ಗಾಳಿಗೆ, ಪರದಾಡುತ್ತಿದ್ದ ಜನರಿಗೆ ಮಳೆಯ ಸಿಂಚನದಿಂದ ಬಿಸಿಯಿಂದ ಮುಕ್ತರಾಗಿದ್ದಾರೆ

ಇದನ್ನೂ ಓದಿ: Viral News: ದೂರದ ಇಂಗ್ಲೆಂಡ್‌ನಲ್ಲಿಯೂ ಕೇರಳ ಕಲರವ; ನೆಟ್ಟಿಗರ ಗಮನ ಸೆಳೆದ ವಿಡಿಯೊ ಇಲ್ಲಿದೆ

ಬೆಂಕಿ ಇಲ್ಲದೆ ರಣ ಬಿಸಿಲಲ್ಲೇ ಮೊಟ್ಟೆ ಬೇಯಿಸಿ ಆಮ್ಲೇಟ್ ತಿಂದ ರಾಯಚೂರು ಮಂದಿ

ರಾಯಚೂರು: ಬಿಸಿಲಿನ ತಾಪ ಸಿಕ್ಕಾಪಟ್ಟೆ ಹೆಚ್ಚಾಗುತ್ತಿದೆ. ಬಿಸಿಲು ಈಗಲೇ ಸಹಿಸುವುದಕ್ಕೆ ಅಸಾಧ್ಯವಾಗಿದೆ. ಇದು ಜಸ್ಟ್‌ ಸ್ಯಾಂಪಲ್‌ ಇನ್ನೂ ತಾಪಮಾನ (Temperature Warning ) ಹೆಚ್ಚಾಗಲಿದೆ ಎಂಬ ಮುನ್ಸೂಚನೆ ಹವಾಮಾನ ತಜ್ಞರಿಂದ ದೊರೆತಿದೆ. ಮನೆಯಲ್ಲಿ, ಆಫೀಸ್‌ನಲ್ಲಿ ಎಸಿ ಹಾಕಿಕೊಂಡು ಕುಳಿತುಕೊಳ್ಳುವವರೂ ಕೂಡ ಈ ಬಿಸಿಲಿನ ಝಳಕ್ಕೆ ತತ್ತರಿಸಿದ್ದಾರೆ. ಉರಿಯುತ್ತಿರುವ ಸೂರ್ಯನ ಶಾಖಕ್ಕೆ (Heat wave) ಸ್ವಲ್ಪ ಹೊತ್ತು ಮೈಒಡ್ಡಿದ್ರೆ ಸಾಕು ಸುಟ್ಟು ಹೋಗುವಷ್ಟು ತೀವ್ರತೆ ಇದೆ. ಸದ್ಯ ಈ ಉರಿ ಬಿಸಿಲಿನಲ್ಲೇ ರಾಯಚೂರು ಮಂದಿ ಪ್ರಯೋಗವನ್ನು ಮಾಡಿದ್ದಾರೆ. ಬೆಂಕಿ ಇಲ್ಲದೆ ಬಿಸಿಲಲ್ಲೇ ಮೊಟ್ಟೆ ಬೇಯಿಸಿ ತಿಂದಿದ್ದಾರೆ.

ಜನರು ಈಗಾಗಲೇ ಬಿಸಿಲಿನ ಶಾಖದಿಂದ ತತ್ತರಿಸಿ ಹೋಗಿದ್ದು, ಮನೆಯಿಂದ ಹೊರಗೆ ಬರಲು ಆಗದಷ್ಟು ತಾಪಮಾನ ಹೆಚ್ಚಿದೆ. ಆದರೆ ರಾಯಚೂರು ಜಿಲ್ಲೆಯ ಲಿಂಗಸಗೂರು ಪಟ್ಟಣದಲ್ಲಿ ಯುವಕರು ಪ್ರಯೋಗ ಮಾಡಿದ್ದಾರೆ. ಬಿಸಿಲಿನಿಂದಲೇ ಮೊಟ್ಟೆಯ ಆಮ್ಲೆಟ್ ಮಾಡಿದ್ದಾರೆ.

ಬಿಸಿಲು ಅದ್ಯಾವ ಪರಿ ಇದೆ ಎಂಬ ಕುತೂಹಲಕ್ಕಾಗಿ ಬೆಂಕಿ ಇಲ್ಲದೆ ಬಿಸಿಲಿನಲ್ಲಿ ಒಂದೂವರೆ ಗಂಟೆವರೆಗೆ ಕಬ್ಬಿಣದ ತವಾ ಇಟ್ಟಿದ್ದಾರೆ. ಅದು ಕಾದ ನಂತರ ಮೊಟ್ಟೆ ಒಡೆದು ಆಮ್ಲೆಟ್ ತಯಾರಿಸಿ ತಿಂದಿದ್ದಾರೆ. ರಾಯಚೂರು ಜಿಲ್ಲೆಯಾದ್ಯಂತ ಒಂದು ವಾರದಿಂದ ಪ್ರತಿ ದಿನ 44 ರಿಂದ 45 ಡಿಗ್ರಿ ಸೆಲ್ಸಿಯಸ್‍ ಗರಿಷ್ಠ ಉಷ್ಠಾಂಶ ದಾಖಲಾಗುತ್ತಿದೆ.

ಇದನ್ನೂ ಓದಿ: Yakshagana Artist: ವೇಷ ಕಳಚುತ್ತಿರುವಾಗಲೇ ಹೃದಯ ಸ್ತಬ್ಧ ; ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು ಇನ್ನಿಲ್ಲ

ವಿದ್ಯುತ್‌ ಕಂಬದ ಲೈನ್‌ಗಳಲ್ಲಿ ಶಾರ್ಟ್‌ ಸರ್ಕ್ಯೂಟ್‌

ಇತ್ತ ರಾಯಚೂರಿನಲ್ಲಿ ದಿನೇದಿನೆ ಬಿಸಿಲು ಹೆಚ್ಚಳವಾಗುತ್ತಿದ್ದು, ಏರ್ ಕೂಲರ್ ಮತ್ತು ಎಸಿ ಬಳಕೆ ಅಧಿಕವಾಗಿದೆ. ರಾಯಚೂರು ನಗರದ ಗಾಂಧಿ ಚೌಕ್ ಬಳಿಯ ಖಾಸಗಿ ಆಸ್ಪತ್ರೆ ಪಕ್ಕದಲ್ಲಿ ವಿದ್ಯುತ್ ಲೋಡ್ ಹೆಚ್ಚಾಗಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಕೂದಲೆಳೆ ಅಂತರದಲ್ಲಿ ಅನಾಹುತ ತಪ್ಪಿದೆ.

ವಿದ್ಯುತ್ ಕಂಬದಲ್ಲಿದ್ದ ಲೈನ್‌ಗಳಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿ ಸಿನಿಮಾ ಸ್ಟೈಲ್‌ನಲ್ಲಿ ಸ್ಪಾರ್ಕ್ ಉಂಟಾಗಿತ್ತು. ಕೆಲ ಹೊತ್ತು ಸ್ಪಾರ್ಕ್ ನೋಡಿದ ಜನರು ಗಾಬರಿ ಆದರು. ಸದರ್ ಬಜಾರ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

Lok Sabha Election 2024

Prajwal Revanna Case: ಮಹಾನ್‌ ರೇಪಿಸ್ಟ್‌ಗೆ ಮೋದಿಯಿಂದ ರಕ್ಷಣೆ; ಪ್ರಜ್ವಲ್‌ ಪೆನ್‌ಡ್ರೈವ್‌ ಕೇಸ್‌ ಬಗ್ಗೆ ರಾಹುಲ್‌ ಗಾಂಧಿ ಗುಡುಗು

Prajwal Revanna Case: ರೇಪಿಸ್ಟ್‌ಗೆ ಬೆಂಬಲ ಕೊಟ್ಟಿರುವುದು ಪ್ರಧಾನಿ ನರೇಂದ್ರ ಮೋದಿ ಅವರ ಗ್ಯಾರಂಟಿ. ಪ್ರಜ್ವಲ್ ರೇವಣ್ಣ ಜತೆ ಬಿಜೆಪಿ ನಾಯಕರು ಪ್ರಚಾರಕ್ಕೆ ಹೋಗಿದ್ದಾರೆ. ಇದು ಬಿಜೆಪಿಯವರ ಅಜೆಂಡಾವಾಗಿದೆ. ಇದು ಬಿಜೆಪಿಯವರ ನಡೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂತಹ ಅತ್ಯಾಚಾರಿಯೊಬ್ಬನ ಪರ ಮತಯಾಚನೆ ನಡೆಸಲು ಬಂದಿದ್ದಾರೆ. ಮೋದಿಯವರ ಗ್ಯಾರಂಟಿ ಏನು? ಅತ್ಯಾಚಾರಿಗೆ ಸಪೋರ್ಟ್ ಮಾಡಿರೋದು. 400 ಅತ್ಯಾಚಾರ ಮಾಡಿರುವ ರೇಪಿಸ್ಟ್‌ನನ್ನು ಮೋದಿ ಬೆಂಬಲಿಸಿದ್ದಾರೆ ಎಂದು ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.

VISTARANEWS.COM


on

Prajwal Revanna Case PM Modi defends MP accused of rape says Rahul Gandhi
Koo

ಶಿವಮೊಗ್ಗ: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹರಿಹಾಯ್ದಿದ್ದಾರೆ. ದೇಶದ ಮಹಾನ್‌ ರೇಪಿಸ್ಟ್‌ ಒಬ್ಬನನ್ನು ಮೋದಿ ರಕ್ಷಣೆ ಮಾಡಿದ್ದಾರೆ. ಇದು ಮಹಾ ಅಪರಾಧ ಎಂದು ಗುಡುಗಿದ್ದಾರೆ.

ಶಿವಮೊಗ್ಗದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೀತಾ ಶಿವರಾಜ್‌ ಕುಮಾರ್‌ ಪರ ಪ್ರಚಾರ ಭಾಷಣ ಮಾಡಿದ ರಾಹುಲ್‌ ಗಾಂಧಿ, ರೇಪಿಸ್ಟ್‌ಗೆ ಬೆಂಬಲ ಕೊಟ್ಟಿರುವುದು ಪ್ರಧಾನಿ ನರೇಂದ್ರ ಮೋದಿ ಅವರ ಗ್ಯಾರಂಟಿ. ಪ್ರಜ್ವಲ್ ರೇವಣ್ಣ ಜತೆ ಬಿಜೆಪಿ ನಾಯಕರು ಪ್ರಚಾರಕ್ಕೆ ಹೋಗಿದ್ದಾರೆ. ಇದು ಬಿಜೆಪಿಯವರ ಅಜೆಂಡಾವಾಗಿದೆ. ಇದು ಬಿಜೆಪಿಯವರ ನಡೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂತಹ ಅತ್ಯಾಚಾರಿಯೊಬ್ಬನ ಪರ ಮತಯಾಚನೆ ನಡೆಸಲು ಬಂದಿದ್ದಾರೆ. ಮೋದಿಯವರ ಗ್ಯಾರಂಟಿ ಏನು? ಅತ್ಯಾಚಾರಿಗೆ ಸಪೋರ್ಟ್ ಮಾಡಿರೋದು. 400 ಅತ್ಯಾಚಾರ ಮಾಡಿರುವ ರೇಪಿಸ್ಟ್‌ನನ್ನು ಮೋದಿ ಬೆಂಬಲಿಸಿದ್ದಾರೆ ಎಂದು ಹೇಳಿದರು.

ಪ್ರಜ್ವಲ್ ರೇವಣ್ಣ 400 ಮಹಿಳೆಯರಿಗೆ ಅತ್ಯಾಚಾರ ಮಾಡಿದ್ದಾರೆ. ಇದು ಕೇವಲ ಸೆಕ್ಸ್ ಕ್ಯಾಂಡಲ್ ಅಲ್ಲ, ಅತ್ಯಾಚಾರವಾಗಿದೆ. ಇದನ್ನು ಬಿಜೆಪಿಯವರು ಸಮರ್ಥಿಸಿಕೊಳ್ಳುತ್ತಿದ್ದಾರೆ. ಪ್ರಜ್ವಲ್ ರೇವಣ್ಣ ಜತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನಿಂತಿದ್ದಾರೆ. ಪ್ರಜ್ವಲ್ ರೇವಣ್ಣ ಅತ್ಯಾಚಾರಿ ಅಂತ ಬಿಜೆಪಿ ನಾಯಕರಿಗೆ ಗೊತ್ತಿತ್ತು. ಆದರೆ, ಹಾಸನದಲ್ಲಿ ಟಿಕೆಟ್ ಕೊಟ್ಟರು. ಬಿಜೆಪಿಯವರಿಗೆ ಹಾಗೂ‌ ಮಹಿಳೆಯರಿಗೆ ಇದು ತಿಳಿಯಬೇಕು. ಮೋದಿ ಅವರು ಹಾಸನ ಹಾಗೂ ದೇಶದ ಮಹಿಳೆಯರಿಗೆ ಅವಮಾನ ಮಾಡಿದ್ದಾರೆ. ಮೋದಿ ಹಾಗೂ ಅಮಿತ್ ಶಾ ಅವರು ದೇಶಕ್ಕೆ ತಲೆಬಾಗಿ ಕ್ಷಮೆ ಕೇಳಬೇಕು. ಇಡೀ ಪ್ರಪಂಚದಲ್ಲಿ ಇಂತಹ ಘಟನೆ ನೋಡಿಲ್ಲ, ನೋಡುವುದೂ ಇಲ್ಲ ಎಂದು ರಾಹುಲ್‌ ಗಾಂಧಿ ವಾಗ್ದಾಳಿ ನಡೆಸಿದರು. ‌

ಕಾಂಗ್ರೆಸ್‌ನಿಂದ ಸೂಕ್ತ ತನಿಖೆ

ಪ್ರಜ್ವಲ್‌ ರೇವಣ್ಣ ಅವರನ್ನು ವಿದೇಶದಿಂದ ಕರೆಸಿ ಸೂಕ್ತ ತನಿಖೆಯನ್ನು ನಮ್ಮ ಕಾಂಗ್ರೆಸ್‌ ಸರ್ಕಾರ ನಡೆಸುತ್ತದೆ. ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ ಎಂದು ರಾಹುಲ್‌ ಗಾಂಧಿ ಭರವಸೆ ನೀಡಿದರು.

ಮೋದಿಗೆ ಭಯ ಶುರುವಾಗಿದೆ

ಕರ್ನಾಟಕದಲ್ಲಿ 5 ಗ್ಯಾರಂಟಿ ಕೊಟ್ಟಿದ್ದೇವೆ. ಪ್ರತಿ ಮನೆ ಯಜಮಾನಿಗೆ ಮಾಸಿಕವಾಗಿ ತಲಾ 2000 ರೂಪಾಯಿಯಂತೆ ಒಂದು ವರ್ಷಕ್ಕೆ 24 ಸಾವಿರ ರೂಪಾಯಿಯನ್ನು ಫಲಾನುಭವಿಗಳ ಖಾತೆಗೆ ಜಮೆ ಮಾಡಲಾಗುತ್ತಿದೆ. ಇನ್ನು ಕಾಂಗ್ರೆಸ್‌ನಿಂದ ಈಗ ಗ್ಯಾರಂಟಿಯ ಭಾಗವಾಗಿ ಮಹಾಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲು ಹೊರಟಿದ್ದೇವೆ. ಇಡೀ ದೇಶದಲ್ಲಿ ಅಧಿಕಾರ ಬಂದರೆ ಮೊದಲು ಮಹಾಲಕ್ಷ್ಮಿ ಯೋಜನೆಯನ್ನು ತರುತ್ತೇವೆ. ಮೋದಿಯವರು ಜನರನ್ನು ಬಡವರನ್ನಾಗಿ ಮಾಡಿದ್ದಾರೆ. ಪ್ರತಿಯೊಂದು ಕುಟುಂಬದಿಂದ ಮಹಿಳೆಯರ ಹೆಸರನ್ನು ಸಂಗ್ರಹ ಮಾಡುತ್ತಾ ಇದ್ದಾರೆ. 1 ಲಕ್ಷ ರೂಪಾಯಿಯನ್ನು ಖಾತೆಗೆ ಹಾಕಲಾಗುವುದು. ಇದರಿಂದ ಮೋದಿಗೆ ಭಯ ಶುರುವಾಗಿದೆ ಎಂದು ಹೇಳಿದರು.

ಅಧಿಕಾರಕ್ಕೆ ಬಂದರೆ ಉದ್ಯೋಗ ಭರ್ತಿ, ಸಾಲ ಮನ್ನಾ

ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಯುವಕರಿಗೆ ಉದ್ಯೋಗ ಕೊಡುವ ಕೆಲಸ ಮಾಡುತ್ತೇವೆ. ಕೇಂದ್ರದಲ್ಲಿ 30 ಲಕ್ಷ ಉದ್ಯೋಗಗಳು ಖಾಲಿ ಇವೆ. ಅವುಗಳನ್ನು ಭರ್ತಿ ಮಾಡುತ್ತೇವೆ. ಆಶಾ ಕಾರ್ಯಕರ್ತರಿಗೆ ನಾವು ಸಹಾಯ ಮಾಡುತ್ತೇವೆ. ನರೇಂದ್ರ ಮೋದಿ ಅವರು ಉದ್ಯಮಿಗಳ ಸಾಲ ಮನ್ನಾ ಮಾಡಿದ್ದಾರೆ. ನಾವು ರೈತರ ಸಾಲ ಮನ್ನಾ ಮಾಡುತ್ತೇವೆ. ನಾವು ರೈತರ ಬೆಳೆದ ಬೆಳೆಗೆ ಬೆಂಬಲ ಬೆಲೆ ಕೊಡುತ್ತೇವೆ ಎಂದು ರಾಹುಲ್‌ ಗಾಂಧಿ ಆಶ್ವಾಸನೆ ನೀಡಿದರು.

ಇದನ್ನೂ ಓದಿ: Prajwal Revanna Case: SIT ಮುಂದೆ ಹಾಜರಾಗಲು ವಿನಾಯಿತಿ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕಾರ? ತನಿಖೆಗೆ ಆತುರ ಏಕೆ?

ಶಿವಮೊಗ್ಗದಲ್ಲಿ ನಡೆದ ಕಾಂಗ್ರೆಸ್‌ ಸಮಾವೇಶದ ವಿಡಿಯೊ

ಬಿಜೆಪಿ, ಆರ್‌ಎಸ್ಎಸ್‌ನವರಿಂದ ಸಂವಿಧಾನ ಬದಲಾವಣೆಗೆ ಮುಂದು

ವಿದ್ಯಾ ಸಂಸ್ಥೆಗಳನ್ನು ಖಾಸಗೀಕರಣ ಮಾಡಲು ಬಿಜೆಪಿಯವರು ಹೊರಟಿದ್ದಾರೆ. ನಾವು ಸಂವಿಧಾನದಲ್ಲಿ ರಕ್ಷಣೆ ಮಾಡಬೇಕಿದೆ. ಬಿಜೆಪಿಯವರು, ಆರ್‌ಎಸ್ಎಸ್‌ನವರು ಸಂವಿಧಾನ ಬದಲಾಯಿಸಲು ಮುಂದಾಗಿದ್ದಾರೆ. ಸಂವಿಧಾನದಿಂದ ದಲಿತರು ಆದಿವಾಸಿಗಳಿಗೆ ರಕ್ಷಣೆ ಸಿಗುತ್ತಿದೆ. ಇದನ್ನು ತಿರುಚಲು ಬಿಜೆಪಿಯವರು ಮುಂದಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರದಲ್ಲಿರುವ ಸಂಪತ್ತನ್ನು 22 ಮಂದಿಯ ಪ್ಯಾಕೆಟ್‌ಗೆ ಹಾಕಿದ್ದಾರೆ. ಅದಾನಿ, ಅಂಬಾನಿ ಕೈಯಲ್ಲಿ ದೇಶದ ಸಂಪತ್ತು ಇದೆ. ಕರ್ನಾಟಕಕ್ಕೆ ಮೋಸ ಮಾಡಿರುವ ಮೋದಿ 22 ಜನರಿಗೆ ಹಣ ಕೊಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ನಾವು ಸಮಾನತೆಗಾಗಿ ಹೋರಾಟ ಮಾಡುತ್ತಿದ್ದೇವೆ. ಒಬಿಸಿ ದಲಿತರು, ಆದಿವಾಸಿಗಳ ಬಗ್ಗೆ ಮಾತನಾಡಿದರೆ ನಾವು ನಕ್ಸಲರು ಅಂತಿದ್ದಾರೆ. ಆದರೆ, ಸಂವಿಧಾನ ರಕ್ಷಣೆಗೆ ಕಾಂಗ್ರೆಸ್ ಮುಂದಾಗಿದೆ. ನಾವು ಸಂವಿಧಾನದ ಅಡಿಯಲ್ಲಿ ಬದುಕುತ್ತಿದ್ದೇವೆ ಎಂದು ರಾಹುಲ್‌ ಗಾಂಧಿ ಹೇಳಿದರು.

Continue Reading
Advertisement
Thomas Cup 2024
ಕ್ರೀಡೆ20 mins ago

Thomas Cup 2024: ಉಬೆರ್‌ ಕಪ್‌ ಬಳಿಕ ಥಾಮಸ್‌ ಕಪ್​ನಲ್ಲಿಯೂ ಮುಗ್ಗರಿಸಿದ ಭಾರತ

ACTOR DHANUSH Nagarjuna mysterious first look from Kubera
ಕಾಲಿವುಡ್22 mins ago

Actor Dhanush: ಧನುಷ್‌ ನಟನೆಯ ʻಕುಬೇರʼ ಸಿನಿಮಾದ ನಾಗಾರ್ಜುನ ಫಸ್ಟ್‌ ಲುಕ್‌ ಪೋಸ್ಟರ್‌ ಔಟ್‌!

Viral News
ವೈರಲ್ ನ್ಯೂಸ್25 mins ago

Viral News: ಶಾಕಿಂಗ್‌ ವಿಡಿಯೊ; ಹಾವು ಕಚ್ಚಿದ್ದ ಯುವಕ ಗುಣಮುಖನಾಗಲೆಂದು ಗಂಗಾ ನದಿಯಲ್ಲಿ ನೇತಾಡಿಸಿದರು!

T20 World Cup 2024
ಕ್ರಿಕೆಟ್47 mins ago

T20 World Cup 2024: ಟಿ20 ವಿಶ್ವಕಪ್​ನ ಅಧಿಕೃತ ಹಾಡು ಬಿಡುಗಡೆ; ಕುಣಿದು ಕುಪ್ಪಳಿಸಿದ ಕ್ರಿಸ್​ ಗೇಲ್​, ಉಸೇನ್‌ ಬೋಲ್ಟ್

woman assault case haveri
ಕ್ರೈಂ58 mins ago

Assault Case: ಇನ್ನೊಂದು ವಂಟಮೂರಿ ಮಾದರಿ ಕೇಸ್‌, ಮಹಿಳೆಯನ್ನು ಕಂಬಕ್ಕೆ ಕಟ್ಟಿ ಥಳಿತ

West Bengal Governor
ದೇಶ1 hour ago

West Bengal Governor: ರಾಜ್ಯಪಾಲರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ; TMC ಆಕ್ರೋಶ

T20 World Cup 2024
ಕ್ರೀಡೆ1 hour ago

T20 World Cup 2024: ಟಿ20 ವಿಶ್ವಕಪ್​ಗೆ ಪಾಕಿಸ್ತಾನ ತಂಡ ಪ್ರಕಟಿಸಲು ಹೆದರುತ್ತಿರುವುದಕ್ಕೆ ಇದುವೇ ಅಸಲಿ ಕಾರಣ

Actor Darshan React about Kaatera 2
ಸ್ಯಾಂಡಲ್ ವುಡ್1 hour ago

Actor Darshan: ಗೆದ್ದ ಎತ್ತಿನ ಬಾಲ ಹಿಡಿಯಬಾರದು ಎಂದ ದರ್ಶನ್‌! ಕಾಟೇರ 2 ಬರತ್ತಾ?

KSET Exam 2023 provisional score list
ಪ್ರಮುಖ ಸುದ್ದಿ2 hours ago

KSET Exam 2023: ಉಪನ್ಯಾಸಕರ ಅರ್ಹತಾ ಪರೀಕ್ಷೆ ಕೆಸೆಟ್‌- 2023ರ ತಾತ್ಕಾಲಿಕ ಅಂಕಪಟ್ಟಿ ಪ್ರಕಟ

Amith Shah
Lok Sabha Election 20242 hours ago

Amit Shah: ಅಮಿತ್‌ ಶಾ ವಿಡಿಯೊ ತಿರುಚಿದ ಪ್ರಕರಣ; ಕಾಂಗ್ರೆಸ್ ಐಟಿ ಸೆಲ್‌ನ ಐವರು ಸದಸ್ಯರ ಬಂಧನ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ5 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ15 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ1 day ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ3 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20245 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

ಟ್ರೆಂಡಿಂಗ್‌