ಶಿವಮೊಗ್ಗ: ಡಿಗ್ರಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ (Self Harming) ಶರಣಾಗಿದ್ದಾಳೆ. ತೀರ್ಥಹಳ್ಳಿ ಬಾಳೆಬೈಲು ಡಿಗ್ರಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಅಧೀಕ್ಷಾ (20) ಎಂಬಾಕೆ (Love Case) ಮೃತ ದುರ್ದೈವಿ.
ತೀರ್ಥಹಳ್ಳಿ ತಾಲೂಕಿನ ಬಿಳುಕೊಪ್ಪದ ಗ್ರಾಮದ ನಿವಾಸಿಯಾದ ಅಧೀಕ್ಷಾ ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಅಧೀಕ್ಷಾ ಪ್ರೀತಿಸುತ್ತಿದ್ದ (Love Case) ಯುವಕ ಕೈ ಕೊಟ್ಟು ಮೋಸ ಮಾಡಿದ್ದಕ್ಕೆ ಮನನೊಂದಿದ್ದಳು ಎನ್ನಲಾಗಿದೆ. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.
ಮರಣೋತ್ತರ ಪರೀಕ್ಷೆಗಾಗಿ ತೀರ್ಥಹಳ್ಳಿ ಪಟ್ಟಣದ ಜಯಚಾಮರಾಜೇಂದ್ರ ಆಸ್ಪತ್ರೆಗೆ ಮೃತದೇಹವನ್ನು ರವಾನೆ ಮಾಡಲಾಗಿದೆ. ಸ್ಥಳಕ್ಕೆ ತೀರ್ಥಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪ್ರಕರಣವನ್ನು ದಾಖಲಿಸಿಕೊಂಡಿದ್ದು ತನಿಖೆಯನ್ನು ಮುಂದುವರಿಸಿದ್ದಾರೆ.
ಕಾಣೆಯಾದವನು ಕೆರೆಯಲ್ಲಿ ಶವವಾಗಿ ಪತ್ತೆ
ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿದ್ದಾನೆ. ಧಾರವಾಡದ ಕೆಲಗೇರಿ ಕೆರೆಯಲ್ಲಿ ಶವ ಪತ್ತೆಯಾಗಿದೆ. ಧಾರವಾಡ ತಾಲೂಕಿನ ಮಂಗಳಗಟ್ಟಿ ಗ್ರಾಮದ ಪ್ರಜ್ವಲ ಹನಮಂತಗೌಡ ಪಾಟೀಲ ಎಂಬಾತ ಕಳೆದ ಜ.9ರಿಂದ ಕಾಣೆಯಾಗಿದ್ದ.
ಓಸವಾಲ್ ಟಾವರ್‌ನಲ್ಲಿನ ಆಸ್ಪತ್ರೆಯಿಂದ ಹೊರಗೆ ಹೋದವನು, ಇದೀಗ ಕೆಲಗೇರಿ ಕೆರೆಯಲ್ಲಿ ಶವ ಪತ್ತೆಯಾಗಿದ್ದಾನೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಇದು ಆಕಸ್ಮಿಕ ಸಾವೋ ಅಥವಾ ಕೊಲೆ ಎಂಬುದನ್ನು ಪತ್ತೆ ಹಚ್ಚಲು ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.
ಇದನ್ನೂ ಓದಿ: Road Accident : ಕಾರು-ಟ್ಯಾಂಕರ್ ನಡುವೆ ಅಪಘಾತ; ಮೂವರು ಸಾವು, ಮತ್ತಿಬ್ಬರು ಗಂಭೀರ
ಮೂವರು ಅಯ್ಯಪ್ಪ ಭಕ್ತರು ನೀರುಪಾಲು; ಕಪಿಲೆಯಲ್ಲಿ ಘೋರ ದುರಂತ
ಮೈಸೂರು: ಶಬರಿಮಲೆಯ ಅಯ್ಯಪ್ಪ ಸ್ವಾಮಿ (Shabarimale Ayyappa swami) ದರ್ಶನಕ್ಕಾಗಿ ವ್ರತ ಹಿಡಿದು ಮಾಲಾಧಾರಿಗಳಾಗಿದ್ದ ಮೂವರು ಅಯ್ಯಪ್ಪ ಭಕ್ತರು (Ayyappa Devotees) ನದಿಯಲ್ಲಿ ನೀರುಪಾಲಾಗಿದ್ದಾರೆ (Three Ayyappa devotees dead).
ನಂಜನಗೂಡಿಗೆ ಹೆಜ್ಜಿಗೆ ಸೇತುವೆ ಬಳಿ ಕಪಿಲಾ ನದಿಯಲ್ಲಿ ಸ್ನಾನಕ್ಕೆ ಇಳಿದ ಮೂವರು ಅಯ್ಯಪ್ಪ ಮಾಲಧಾರಿಗಳು ಮೃತಪಟ್ಟಿದ್ದಾರೆ. ಒಟ್ಟು ಐವರು ಭಕ್ತರು ಐವರು ನದಿಗೆ ಇಳಿದು ಸ್ನಾನ ಮಾಡುತ್ತಿದ್ದರು. ಈ ವೇಳೆ ಮೂವರು ನೀರು ಪಾಲಾಗಿದ್ದಾರೆ. ಇಬ್ಬರನ್ನು ರಕ್ಷಿಸಲಾಗಿದೆ.
ಎಲ್ಲ ಅಯ್ಯಪ್ಪ ಭಕ್ತರು ತುಮಕೂರು ಜಿಲ್ಲೆಯ ಕೊರಟಗೆರೆ ಮೂಲದವರಾಗಿದ್ದು, ಒಂದೇ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ನಂಜನಗೂಡಿನಲ್ಲಿ ಕಪಿಲೆಯಲ್ಲಿ ಸ್ನಾನ ಮಾಡುವ ದುರಂತ ಸಂಭವಿಸಿದೆ. ನೀರುಪಾಲಾದ ಮೂವರಿಗಾಗಿ ಹುಡುಕಾಟ ನಡೆಯುತ್ತಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಧಾವಿಸಿದ್ದಾರೆ.
ತುಮಕೂರಿನ ಕೊರಟಗೆರೆಯ ಎಂಟು ಮಂದಿ ಜತೆಯಾಗಿ ಶಬರಿಮಲೆಗೆ ಹೋಗಿದ್ದರು. ಅಪ್ಪು (16), ರಾಕೇಶ್, ಗವಿರಂಗ, ರಾಮಕೃಷ್ಣ, ನಿಖಿತ್‌ಗೌಡ, ಮಾದೇಶ್, ಭುವನ್‌ಗೌಡ ಸೇರಿ ಎಲ್ಲರೂ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನದ ಬಳಿ ಕಪಿಲಾ ನದಿಗೆ ನೀರಿಗೆ ಇಳಿದಿದ್ದರು. ಆದರೆ, ಅಪ್ಪು, ರಾಕೇಶ್ ಎಂಬವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಗವಿ ರಂಗ ಎಂಬಾತನನ್ನು ರಕ್ಷಿಸಲಾಗಿದೆ. ಇನ್ನೊಬ್ಬ ನಾಪತ್ತೆಯಾಗಿದ್ದು ಹುಡುಕಾಟ ನಡೆದಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ