ಶಿವಮೊಗ್ಗ: ಪ್ರೀತಿಸುವಂತೆ ನಿರಂತರವಾಗಿ (Love Torture) ಕಾಟ ಕೊಡುತ್ತಿದ್ದ ಯುವಕನ ಕಿರುಕುಳಕ್ಕೆ ಬೇಸತ್ತು ಬಾಲಕಿಯೊಬ್ಬಳು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾಳೆ. ಶಿವಮೊಗ್ಗ ತಾಲೂಕಿನ ಗೊಂದಿಚಟ್ನಹಳ್ಳಿಯಲ್ಲಿ ಘಟನೆ ನಡೆದಿದೆ.
ಮೃತ ದುರ್ದೈವಿ ಬಾಲಕಿಗೆ 14 ವರ್ಷ. ತ್ಯಾಗರಾಜ್ (23) ಎಂಬಾತ ಹಲವು ಸಮಯದಿಂದ ಪ್ರೀತಿಸುವಂತೆ ಕಾಟ ಕೊಡುತ್ತಿದ್ದ. ಆದರೆ ಬಾಲಕಿ ತ್ಯಾಗರಾಜ್ ಪ್ರೀತಿಯನ್ನು ನಿರಾಕರಿಸಿದ್ದಳು. ಆದರೂ ಪದೇ ಪದೇ ಪ್ರೀತಿಸು ಎಂದು ಬಾಲಕಿಗೆ ಪೀಡಿಸುತ್ತಿದ್ದ.
ಈತನ ಕಾಟಕ್ಕೆ ಬೇಸತ್ತ ಬಾಲಕಿ ಈ ವಿಚಾರವನ್ನು ಕುಟುಂಬಸ್ಥರಿಗೆ ತಿಳಿಸಿದ್ದಳು. ಕಳೆದ ಎರಡು ತಿಂಗಳ ಹಿಂದೆ ಬಾಲಕಿ ಕುಟುಂಬಸ್ಥರು ತ್ಯಾಗರಾಜ್‌ಗೆ ಬುದ್ಧಿವಾದ ಹೇಳಿ ವಾರ್ನಿಂಗ್ ನೀಡಿದ್ದರು. ಈ ವೇಳೆ ತ್ಯಾಗರಾಜ್ ಇನ್ನು ಮುಂದೆ ಹೀಗೆ ಮಾಡುವುದಿಲ್ಲ ಎಂದಿದ್ದ.
ಆದರೆ ಮತ್ತೇ ಬಾಲಕಿಗೆ ಲವ್ ಟಾರ್ಚರ್ ಕೊಡಲು ಶುರು ಮಾಡಿದ್ದ. ಯುವಕನ ಕಾಟ ತಾಳಲಾರದೆ ನಿನ್ನೆ ಶನಿವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಯುವಕನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮೃತಳ ಕುಟುಂಬಸ್ಥರು ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇದನ್ನೂ ಓದಿ: Self Harming : ಅಯ್ಯೋ ವಿಧಿಯೇ!; ಇಬ್ಬರು ಪುಟ್ಟ ಮಕ್ಕಳ ಕತ್ತು ಹಿಸುಕಿ ಕೊಂದು ತಾಯಿಯೂ ಆತ್ಮಹತ್ಯೆ
ನಿಶ್ಚಿತಾರ್ಥವಾದ ಯುವತಿಗೆ ಹಳೆಯ ಪ್ರಿಯಕರನ ಕಾಟ, ಆತ್ಮಹತ್ಯೆ
ಆನೇಕಲ್: ಪಕ್ಕದ ಮನೆಯಲ್ಲಿದ್ದು ನಿರಂತರ ಕಾಟ ಕೊಡುತ್ತಿದ್ದ ಪ್ರಿಯಕರನ ಕಾಟ (harassment) ತಾಳಲಾರದೆ, ನಿಶ್ಚಿತಾರ್ಥವಾಗಿದ್ದ (Engagement) ಯುವತಿಯೊಬ್ಬಳು ಆತ್ಮಹತ್ಯೆ (Self Harm) ಮಾಡಿಕೊಂಡ ಘಟನೆ ನಡೆದಿತ್ತು.
ಬೆಂಗಳೂರು ಹೊರವಲಯದ ಜಿಗಣಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿತ್ತು. ಚಂದ್ರಕಲಾ (19) ಆತ್ಮಹತ್ಯೆಗೆ ಶರಣಾದ ಯುವತಿ. ಜಿಗಣಿ ಸಮೀಪದ ನಂಜಾಪುರದಲ್ಲಿ ಮೊನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದು, ತಡವಾಗಿ ಬೆಳಕಿಗೆ ಬಂದಿತ್ತು.
ಈ ಹಿಂದೆ ಪಕ್ಕದ ಮನೆಯ ಅರುಣ್ ಕುಮಾರ್ ಎಂಬಾತನನ್ನು ಚಂದ್ರಕಲಾ ಪ್ರೀತಿಸುತ್ತಿದ್ದಳು. ಪ್ರೀತಿಯ ವಿಚಾರ ಗೊತ್ತಾಗಿ ಮನೆಯವರು ಹುಡುಗಿಗೆ ಬುದ್ಧಿವಾದ ಹೇಳಿದ್ದರು. ಅರುಣ್ ಜೈಲಿಗೆ ಹೋಗಿ ಬಂದವನಾಗಿದ್ದು, ಹುಡುಗನ ವ್ಯಕ್ತಿತ್ವ ಸರಿ ಇಲ್ಲ. ಆತನನ್ನು ಮದುವೆಯಾಗಬೇಡ ಎಂದು ಹುಡುಗಿಯ ಮನವೊಲಿಸಿದ್ದರು. ತಮ್ಮ ಪರಿಚಿತರ ಹುಡುಗನೊಬ್ಬನ ಜತೆ ಎಂಗೇಜ್‌ಮೆಂಟ್ ಮಾಡಿಸಿದ್ದರು.
ಬೇರೆಯವನನ್ನು ಮದುವೆಯಾದರೆ ನಿನ್ನನ್ನು ಕೊಲ್ಲುವುದಾಗಿ ಅರುಣ್ ಬೆದರಿಕೆ ಹಾಕಿದ್ದ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಮಗಳ ಸಾವಿಗೆ ಆತನೇ ಕಾರಣವೆಂದು ಕುಟುಂಬಸ್ಥರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಘಟನೆಯ ನಂತರ ಅರುಣ್ ಕುಮಾರ್ ತಲೆ ಮರೆಸಿಕೊಂಡಿದ್ದಾನೆ. ಜಿಗಣಿ ಪೊಲೀಸ್ ಠಾಣೆಯಲ್ಲಿ ಯುವತಿ ಪೋಷಕರಿಂದ ಪ್ರಕರಣ ದಾಖಲಾಗಿದೆ.
ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ