Site icon Vistara News

Kagodu Timmappa | ಡಿಕೆಶಿ ಅವರನ್ನು ಹಿಮ್ಮೆಟಿಸಲು ಬಿಜೆಪಿಯಿಂದ ತನಿಖಾ ಸಂಸ್ಥೆಯ ದುರ್ಬಳಕೆ: ಕಾಗೋಡು ತಿಮ್ಮಪ್ಪ ಆಕ್ರೋಶ

Congress Protest Kagodu Thimmappa DK Shivakumar

ಸಾಗರ: ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುತ್ತಿರುವ ಡಿ.ಕೆ.ಶಿವಕುಮಾರ್ ಅವರನ್ನು ಹಿಮ್ಮೆಟ್ಟಿಸಲು ಬಿಜೆಪಿ ಸರ್ಕಾರ ತನಿಖಾ ಸಂಸ್ಥೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು (Misuse of investigating agency ) ಖಂಡನೀಯ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಹೇಳಿದರು.


ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ಸೇರಿದಂತೆ ತನಿಖಾ ಸಂಸ್ಥೆಗಳಿಂದ ದಾಳಿ ನಡೆಸುತ್ತಿರುವುದನ್ನು ಖಂಡಿಸಿ ಇಲ್ಲಿನ ಸಾಗರ ಹೋಟೆಲ್ ವೃತ್ತದಲ್ಲಿ ಗುರುವಾರ (ಡಿ.೨೨) ಬ್ಲಾಕ್ ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿ, ರಾಜ್ಯದ ಜನರು ಬಿಜೆಪಿ ಷಡ್ಯಂತ್ರವನ್ನು ಅರ್ಥ ಮಾಡಿಕೊಳ್ಳಬೇಕು. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಬಹುಮತ ನೀಡಿ ಅಭಿವೃದ್ದಿಪರ ಆಡಳಿತಕ್ಕೆ ಬೆಂಬಲ ನೀಡಬೇಕು ಎಂದರು.

ಕ್ಷೇತ್ರ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕೆಲಸಗಳು ಸಂಪೂರ್ಣ ಕುಂಠಿತಗೊಂಡಿವೆ. ಈಗ ಮತ್ತೆ ಚುನಾವಣೆಗೆ ಶಾಸಕರು ಸ್ಪರ್ಧೆ ಮಾಡಲು ಹೊರಟಿದ್ದಾರೆ. 2ನೇ ಬಾರಿ ಅವರನ್ನು ಗೆಲ್ಲಿಸಿದರೆ ಕ್ಷೇತ್ರದ ಅಭಿವೃದ್ಧಿ ಇನ್ನಷ್ಟು ಹಿನ್ನಡೆ ಅನುಭವಿಸುತ್ತದೆ. ಬಡ ಜನರಿಗೆ ನಿವೇಶನ ಅಥವಾ ಮನೆ ಕೊಟ್ಟಿಲ್ಲ. ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ಕೊಟ್ಟಿಲ್ಲ ಎಂದು ದೂರಿದರು.

ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಮಾತನಾಡಿ, ಬಿಜೆಪಿಯವರು ತಮ್ಮ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಕುಕ್ಕರ್ ಸ್ಫೋಟವನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆಯೇ ವಿನಃ ಭಯೋತ್ಪಾದಕರು, ದೇಶದ್ರೋಹಿಗಳನ್ನು ಬೆಂಬಲಿಸಿ ಅವರು ಮಾತನಾಡಿಲ್ಲ. ದೇಶ ದ್ರೋಹಿಗಳನ್ನು, ಭಯೋತ್ಪಾದಕರನ್ನು ಗಲ್ಲಿಗೇರಿಸಿ. ಇದನ್ನು ಕಾಂಗ್ರೆಸ್ ಪ್ರಶ್ನಿಸುವುದಿಲ್ಲ ಎಂದರು.

ಡಿ.ಕೆ.ಶಿವಕುಮಾರ್ ಅವರ ಪಕ್ಷ ಸಂಘಟನಾ ವೇಗವನ್ನು ಕುಂಠಿತಗೊಳಿಸಲು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಬಿಜೆಪಿ ನೀತಿ ಖಂಡನೀಯ. ಸಿಬಿಐ, ಇಡಿ, ಐಟಿ ಸಂಸ್ಥೆಯ ಕಚೇರಿಗಳನ್ನು ದೆಹಲಿಯಿಂದ ಡಿ.ಕೆ.ಶಿವಕುಮಾರ್ ಅವರ ಮನೆ ಮತ್ತು ಶಿಕ್ಷಣ ಸಂಸ್ಥೆಗಳಿಗೆ ಸ್ಥಳಾಂತರಿಸಿ ಎಂದು ಅವರು ಗೇಲಿ ಮಾಡಿದರು.

ಇದನ್ನೂ ಓದಿ | Mysore Zoo | ಡಿ.27ರ ಮಂಗಳವಾರ ಮೈಸೂರು ಝೂ ಬಂದ್‌ ಇರುವುದಿಲ್ಲ, ಕ್ರಿಸ್‌ಮಸ್‌ ರಜೆ ಹಿನ್ನೆಲೆಯಲ್ಲಿ ಓಪನ್‌

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ. ರಾಜನಂದಿನಿ ಕಾಗೋಡು ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಧಿಕಾರಕ್ಕೆ ಬಂದಾಗಿನಿಂದ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ. ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಟಾರ್ಗೆಟ್ ಮಾಡುವ ಮೂಲಕ ಬಿಜೆಪಿಯು ಕಾಂಗ್ರೆಸ್ ವೇಗ ಹಿಮ್ಮೆಟ್ಟಿಸುವ ಪ್ರಯತ್ನ ನಡೆಸುತ್ತಿದೆ. ರಾಜ್ಯದಲ್ಲಿ ದೊಡ್ಡಮಟ್ಟದ ಭ್ರಷ್ಟಾಚಾರ ನಡೆಯುತ್ತಿದ್ದರೂ ಬಿಜೆಪಿ ಅದರ ಬಗ್ಗೆ ಗಮನ ಹರಿಸುತ್ತಿಲ್ಲ. 40 ಪರ್ಸೆಂಟ್‌ ಕಮಿಷನ್ ಬಗ್ಗೆ ಧ್ವನಿ ಎತ್ತುತ್ತಿಲ್ಲ. ಯಾವುದೇ ತಪ್ಪು ಮಾಡದ ಡಿ.ಕೆ.ಶಿವಕುಮಾರ್ ಮತ್ತವರ ಮೇಲೆ ತನಿಖಾ ಸಂಸ್ಥೆಗಳನ್ನು ಬಿಟ್ಟು ದಾಳಿ ನಡೆಸುತ್ತಿರುವುದು ಖಂಡನೀಯ ಎಂದರು.

ಇದನ್ನೂ ಓದಿ | ಗೋ ಸಂಪತ್ತು | ಪ್ರಪಂಚಕ್ಕೆ ಭಾರತ ನೀಡಿದ ದಿವ್ಯ ಔಷಧ ಪಂಚಗವ್ಯ

ಪ್ರತಿಭಟನೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್, ನಗರ ಅಧ್ಯಕ್ಷ ಐ.ಎನ್.ಸುರೇಶ ಬಾಬು, ಯುವ ಕಾಂಗ್ರೆಸ್‌ ಅಧ್ಯಕ್ಷ ಅಶೋಕ ಬೇಳೂರು, ಪ್ರಮುಖರಾದ ಮಹಾಬಲ ಕೌತಿ, ಲಲಿತಮ್ಮ, ಸಫಿಯ, ಎಲ್.ಚಂದ್ರಪ್ಪ, ಕೆ.ಸಿದ್ದಪ್ಪ, ಅಜೀಂ, ಮಹ್ಮದ್ ಜಕ್ರಿಯ, ಮನೋಜ್ ಕುಗ್ವೆ, ಅನ್ವರ್ ಭಾಷಾ, ಗಣಾಧೀಶ್, ತಬ್ರೇಜ್, ಹಮೀದ್ ಇನ್ನಿತರರು ಹಾಜರಿದ್ದರು.

ಇದನ್ನೂ ಓದಿ | Coronavirus |‌ ಮೂಗಿನ ಮೂಲಕ ತೆಗೆದುಕೊಳ್ಳುವ ಕೋವಿಡ್‌ ಲಸಿಕೆ ವಿತರಣೆ ಇಂದಿನಿಂದ ಆರಂಭ

Exit mobile version