ಹೊಸನಗರ: ವಿಧಾನಪರಿಷತ್ ಚುನಾವಣೆಯಲ್ಲಿ (MLC Election) ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ವಿಶ್ವಾಸ ವ್ಯಕ್ತಪಡಿಸಿದರು.
ಇಲ್ಲಿನ ಗಾಂಧಿ ಮಂದಿರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್ ಹಾಗೂ ಶಿಕ್ಷಕರ ಕ್ಷೇತ್ರದಿಂದ ಮಂಜುನಾಥ್ ಕೆ.ಕೆ.ಅವರನ್ನು ಪಕ್ಷ ಕಣಕ್ಕೆ ಇಳಿಸಿದೆ. ಆಯನೂರು ಮಂಜುನಾಥ್ ಅವರು ರಾಜಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸಾಕಷ್ಟು ಅನುಭವ ಹೊಂದಿದ್ದಾರೆ. ಹಲವು ಹೋರಾಟಗಳಲ್ಲಿ ಭಾಗಿಯಾಗಿದ್ದು, ಚಿರಪರಿಚಿತರಾಗಿರುವುದು ಗೆಲುವಿಗೆ ಸಹಕಾರಿ ಆಗಲಿದೆ ಎಂದರು.
ಇದನ್ನೂ ಓದಿ: Money Guide: ಬ್ಯಾಂಕ್ ಖಾತೆ, ಮ್ಯೂಚುವಲ್ ಫಂಡ್ ಹೊಂದಿದ್ದೀರಾ? ಹಾಗಾದರೆ ಮೊದಲು ಈ ಕೆಲಸ ಮಾಡಿ
ಶಿಕ್ಷಕರು, ಪದವೀಧರರನ್ನು ಭೇಟಿ ಮಾಡಿ ಮತಯಾಚನೆ ಮಾಡುತ್ತಿದ್ದೇವೆ. ಎರಡೂ ವರ್ಗಗಳ ಸಮಸ್ಯೆಗಳು ಹಾಗೂ ಅವರ ಬೇಡಿಕೆಗಳ ಕುರಿತು ಸರ್ಕಾರಕ್ಕೆ ಅರಿವಿದೆ. ಮುಂದಿನ ದಿನಗಳಲ್ಲಿ ಅವುಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದ ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗಿದೆ. ತಪ್ಪಿತ್ತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಯಾವುದೇ ಮುಲಾಜಿಲ್ಲ. ಹಾಗಾಗಿ ಪ್ರಕರಣವನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹತಾಶೆಯ ಭಾವಕ್ಕೆ ಒಳಗಾಗಿ ಕಾಂಗ್ರೆಸ್ ವಿರುದ್ಧ ವೃಥಾ ಆರೋಪ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಇದನ್ನೂ ಓದಿ: Job Alert: ಗುಡ್‌ನ್ಯೂಸ್; ರೈಲ್ವೆ ಇಲಾಖೆಯಲ್ಲಿದೆ 1,202 ಹುದ್ದೆ: ಐಟಿಐ ಪಾಸಾದವರೂ ಅಪ್ಲೈ ಮಾಡಿ
ಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಜಿ.ಚಂದ್ರಮೌಳಿ, ಕಾರ್ಯದರ್ಶಿ ಸದಾಶಿವ ಶ್ರೇಷ್ಠಿ, ಸುಮಾ ಸುಬ್ರಮಣ್ಯ, ಶ್ರೀನಿವಾಸ ಕಾಮತ್, ಜಯಶೀಲಪ್ಪಗೌಡ, ಟೌನ್ ಘಟಕದ ಅಧ್ಯಕ್ಷ ಗುರುರಾಜ್, ಚಿದಂಬರ, ಪ್ರವೀಣ್ ಬೃಂದಾವನ, ಜಯನಗರ ಗುರು, ಸಣ್ಣಕ್ಕಿ ಮಂಜು, ಅಶ್ವಿನಿಕುಮಾರ್, ನೇತ್ರಾ ಸುಬ್ರಾಯಭಟ್, ಮತ್ತಿತರರು ಇದ್ದರು.