Site icon Vistara News

Murder Case : ಸ್ಮಶಾನಕ್ಕೆ ಕರೆದೊಯ್ದು ಸ್ನೇಹಿತನನ್ನೇ ಕೊಂದು ಹಾಕಿದ ಮಿತ್ರದ್ರೋಹಿ

murder Case

ಶಿವಮೊಗ್ಗ: ಕುಡಿದ ಮತ್ತಿನಲ್ಲಿ ಯುವಕನೊಬ್ಬ ತನ್ನ ಸ್ನೇಹಿತನನ್ನೇ ಬರ್ಬರವಾಗಿ ಕೊಂದು (Murder Case) ಹಾಕಿದ್ದಾನೆ. ಶಿವಮೊಗ್ಗ ನಗರದ ಆಯನೂರು ಗೇಟ್ ಬಳಿ ಸೋಮವಾರ ತಡರಾತ್ರಿ ಘಟನೆ ನಡೆದಿದೆ. ಶಿವಮೊಗ್ಗದ ಜೆಪಿ ನಗರದ ನಿವಾಸಿ ರಾಜುನಾಯ್ಕ(30) ಕೊಲೆಯಾದವನು. ವಿಕ್ರಮ್ ಕೊಲೆ ಆರೋಪಿ ಆಗಿದ್ದಾನೆ.

ಕಳೆದ ಎರಡ್ಮೂರು ದಿನದಿಂದ ರಾಜುನಾಯ್ಕ ಹಾಗೂ ವಿಕ್ರಮ್‌ ನಡುವೆ ಕಲಹ ಇತ್ತು. ನಿನ್ನೆ ಸೋಮವಾರ ರಾತ್ರಿ ಎಣ್ಣೆ ಕುಡಿಯೋಣ ಬಾ ಎಂದು ವಿಕ್ರಮ್‌ ರಾಜುನಾಯ್ಕ್‌ನನ್ನು ಕರೆದುಕೊಂಡು ಹೋಗಿದ್ದ. ಎಣ್ಣೆ ಕುಡಿಸುವ ನೆಪದಲ್ಲಿ ಸ್ಮಶಾನಕ್ಕೆ ಕರೆದುಕೊಂಡು ಹೋಗಿ ತಲೆ ಮೇಲೆ ಕಲ್ಲು ಎತ್ತಿ ಕೊಲೆ ಮಾಡಲಾಗಿದೆ.

ಸದ್ಯ ಘಟನೆ ಸಂಬಂಧ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತುಂಗಾ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿ: Reels Tragedy : ರೀಲ್ಸ್‌ ಶೋಕಿ; ಪ್ರಪಾತಕ್ಕೆ ಬಿದ್ದು ಯುವತಿ ಸಾವು- ಛಿದ್ರಗೊಂಡ ಕಾರು

ಹಾಸನದಲ್ಲಿ ಪತ್ನಿಯನ್ನು ಕೊಂದು ನೇಣಿಗೆ ಶರಣಾದ ಪತಿ

ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾನೆ. ಹರೀಶ್ (50) ಎಂಬಾತ ಪತ್ನಿ ಜಾಜಿ (45) ಕೊಂದು ಆತ್ಮಹತ್ಯೆ ಮಾಡಿಕೊಂಡವನು.

ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ದೊಡ್ಡಸಾಲಾವರ ಗ್ರಾಮದಲ್ಲಿ ಘಟನೆ ನಡೆದಿದೆ. ಹರೀಶ್‌ ಹಾಗೂ ಜಾಜಿ ನಡುವೆ ಪ್ರತಿನಿತ್ಯ ಒಂದಲ್ಲ ಒಂದು ಕಾರಣಕ್ಕೆ ಜಗಳ ನಡೆಯುತ್ತಲೇ ಇತ್ತು. ಸೋಮವಾರ ರಾತ್ರಿಯೂ ಇಬ್ಬರ ನಡುವೆ ಜಗಳ ನಡೆದಿದ್ದು, ವಿಕೋಪಕ್ಕೆ ತಿರುಗಿದೆ.

ಈ ವೇಳೆ ಸಿಟ್ಟಾದ ಹರೀಶ್‌ ಮನೆಯಲ್ಲಿದ್ದ ನಾಡ ಬಂದೂಕಿನಿಂದ ಗುಂಡು ಹಾರಿಸಿ ಪತ್ನಿ ಜಾಜಿಯನ್ನು ಹತ್ಯೆ ಮಾಡಿದ್ದಾನೆ. ನಂತರ ಮನೆಯಲ್ಲಿಯೇ ನೇಣಿಗೆ ಶರಣಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅರೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ. ಇಬ್ಬರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಇನ್ನೂ ಈ ದಂಪತಿಗೆ ಮೂವರು ಮಕ್ಕಳಿದ್ದು, ಬೇರೆಡೆ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ತಂದೆ-ತಾಯಿಯನ್ನು ಕಳೆದುಕೊಂಡು ಅನಾಥರಾಗಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version