Site icon Vistara News

Murder case : ಸ್ನೇಹಿತನಿಂದಲೇ ಕೊಲೆಯಾದಳು ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿ

murder case

ಶಿವಮೊಗ್ಗ : ಕಾಣೆಯಾಗಿದ್ದ (Missing Case) ಯುವತಿಯೊಬ್ಬಳು ಶವವಾಗಿ (Dead Body Found) ಪತ್ತೆಯಾಗಿದ್ದಾಳೆ. ಶಿವಮೊಗ್ಗದ (Shivamogga News) ತೀರ್ಥಹಳ್ಳಿ ತಾಲೂಕಿನ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ (Murder case) ಘಟನೆ ನಡೆದಿದೆ. ಧರ್ಮಸ್ಥಳ ಸಂಘದ ಸೇವಾ ಪ್ರತಿನಿಧಿಯಾಗಿದ್ದ ಪೂಜಾ.ಎ.ಕೆ (24) ಕೊಲೆಯಾದ ಮೃತ ದುರ್ದೈವಿ.

ಕಳೆದ ಜೂ.30ರಂದು ಮನೆಯಿಂದ ಕೆಲಸಕ್ಕೆ ಹೋಗಿದ್ದ ಪೂಜಾ ಏಕಾಏಕಿ ಕಾಣೆಯಾಗಿದ್ದಳು. ಮನೆಗೆ ವಾಪಸ್ ಬರದ ಹಿನ್ನೆಲೆಯಲ್ಲಿ ಪೂಜಾ ಪೋಷಕರು ಆತಂಕಗೊಂಡು ಎಲ್ಲೆಡೆ ಹುಡುಕಾಟ ನಡೆಸಿದ್ದರು. ಬಳಿಕ ಆಗುಂಬೆ ಪೊಲೀಸ್ ಠಾಣೆಯಲ್ಲಿ ತಂದೆ ಕುಶಾಲ್ ಮಿಸ್ಸಿಂಗ್‌ ಕಂಪ್ಲೇಟ್‌ ಕೊಟ್ಟಿದ್ದರು.

ದೂರಿನನ್ವಯ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ತನಿಖೆಗಿಳಿದಾಗ ಪೂಜಾಳ ಶವವು ಪತ್ತೆಯಾಗಿತ್ತು. ಬಳಿಕ ಆಕೆಯ ಫೋನ್‌ ಕಾಲ್‌ ಲಿಸ್ಟ್‌ ತೆಗೆದು ಮಿಸ್ಸಿಂಗ್‌ ಆದ ಕೊನೆ ದಿನ ಯಾರೆಲ್ಲ ಕರೆ ಮಾಡಿದ್ದರು ಅವರನ್ನೆಲ್ಲ ಪೊಲೀಸರು ವಿಚಾರಣೆ ನಡೆಸಿದ್ದರು.

ಈ ವೇಳೆ ಹಲವು ವರ್ಷಗಳಿಂದ ಸ್ನೇಹಿತನಾಗಿದ್ದ ಮಣಿಕಂಠ ಎಂಬಾತನಿಂದಲೇ ಪೂಜಾ ಕೂಲೆಯಾಗಿದ್ದಳು. ಪೊಲೀಸರು ತಮ್ಮದೇ ಸ್ಟೈಲ್‌ನಲ್ಲಿ ವಿಚಾರನೆ ನಡೆಸಿದಾಗ ಪೂಜಾಳನ್ನು ಕೊಂದಿದ್ದಾಗಿ ಮಣಿಕಂಠ ಒಪ್ಪಿಕೊಂಡಿದ್ದಾನೆ. ಹಣಕಾಸಿ‌ ವಿಚಾರಕ್ಕೆ ಜಗಳ ನಡೆದು ಕೊಲೆಯಲ್ಲಿ ಅಂತ್ಯವಾಗಿದೆ.

ಸದ್ಯ ಆಗುಂಬೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಯಿಂದ ಮತ್ತಷ್ಟು ಮಾಹಿತಿಯನ್ನು ಪೊಲೀಸರು ಕಲೆಹಾಕುತ್ತಿದ್ದಾರೆ.

ಇದನ್ನೂ ಓದಿ: Crime News: ಗಾಂಜಾ ಮತ್ತಿನಲ್ಲಿ ಕಾರು ಓಡಿಸಿ ಬೈಕ್‌ಗಳಿಗೆ ಗುದ್ದಿದ ಚಾಲಕ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಕಳ್ಳರು

ರಾಜಕಾಲುವೆಗೆ ಬಿದ್ದ ಬೈಕ್‌ ಸವಾರನ ಮೃತದೇಹ ಪತ್ತೆ

ಬೆಂಗಳೂರು: ರಾಜಕಾಲುವೆ (Rajakaluve)ಗೆ ಬಿದ್ದ ಬೈಕ್‌ ಸವಾರನ ಮೃತದೇಹ ಮೂರು ದಿನಗಳ ಬಳಿಕ ಪತ್ತೆಯಾಗಿದೆ. ಶುಕ್ರವಾರ ರಾತ್ರಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಹೇಮಂತ ಕುಮಾರ್ (27) ಜ್ಞಾನ ಭಾರತಿ ಮೆಟ್ರೋ ಸ್ಟೆಷನ್ ಬಳಿ ರಾಜಕಾಲುವೆಗೆ ಬಿದ್ದಿದ್ದರು. ಡಿವೈಡರ್‌ಗೆ ಗುದ್ದಿದ ಪರಿಣಾಮ ಹೇಮಂತ ಕುಮಾರ್ ಚಿಮ್ಮಿ ವೃಷಭಾವತಿ ನದಿ‌ ರಾಜಕಾಲುವೆ ಒಳಗೆ ಬಿದ್ದಿದ್ದರು. ವೇಗವಾಗಿ ಬೈಕ್‌ ಚಲಾಯಿಸಿದ್ದರಿಂದ, ಬೈಕ್‌ ಡಿವೈಡರ್‌ಗೆ ಗುದ್ದಿದ ಪರಿಣಾಮ ಅವರು ಚಿಮ್ಮಿ ರಾಜಕಾಲುವೆ ಒಳಗೆ ಬಿದ್ದಿದ್ದಾರೆ ಎಂದು ಊಹಿಸಲಾಗಿದೆ. ಸಣ್ಣದಾಗಿ ಮಳೆ ಬರುತ್ತಿದ್ದುದರಿಂದ ಡಿವೈಡರ್‌ ಗುರುತಿಸಲು ಸಾಧ್ಯವಾಗದೆ ಈ ಅವಘಡ ಸಂಭವಿಸಿದೆ. ಆದರೆ ಮೂರು ದಿನಗಳಿಂದ ಅವರು ಪತ್ತೆಯಾಗಿರಲಿಲ್ಲ. ಇದೀಗ ಮೃತದೇಹ ಕಂಡು ಬಂದಿದೆ (Road Accident).

ಸತತ ಶೋಧ ಕಾರ್ಯ

ಶುಕ್ರವಾರದಿಂದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಹೇಮಂತ ಕುಮಾರ್‌ಗಾಗಿ ಸತತವಾಗಿ ಹುಡುಕಾಟ ನಡೆಸುತ್ತಿದ್ದರು. ಇದೀಗ ಬಿದ್ದ ಸ್ಥಳದಲ್ಲಿಯೇ ಯುವಕನ ಮೃತದೇಹ ಪತ್ತೆಯಾಗಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಮೃತದೇಹವನ್ನು ಪತ್ತೆ ಹಚ್ಚಿದ್ದಾರೆ. ಸದ್ಯ ಮೃತದೇಹವನ್ನು ಮೇಲಕ್ಕೆ ಎತ್ತಿ ಅಂಬ್ಯುಲೆನ್ಸ್ ಮೂಲಕ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಹಸುಗೂಸನ್ನು ಬಾವಿಗೆ ಎಸೆದು ಕೊಂದರು ಹಂತಕರು

ಯಾದಗಿರಿ: ಬಾವಿಗೆ ಎಸೆದು ಹಸುಗೂಸನ್ನು ಕೊಲೆ (Murder case) ಮಾಡಲಾಗಿದೆ. ಯಾದಗಿರಿ ನಗರದ ಅಂಬೇಡ್ಕರ್ ಬಡಾವಣೆಯಲ್ಲಿ ಅಮಾನವೀಯ ಘಟನೆ ನಡೆದಿದೆ. ಮೀನಾಕ್ಷಿ (2 ತಿಂಗಳು) ಮೃತ ದುರ್ದೈವಿ. ನಾಗೇಶ್ ಹಾಗೂ ಚಿಟ್ಟೆಮ್ಮ ದಂಪತಿಯ ಮಗು ಮೀನಾಕ್ಷಿಯನ್ನು ಕೊಲೆ ಯಾರು ಮಾಡಿದ್ದಾರೆ? ಯಾಕೆ‌‌ ಮಾಡಿದ್ದಾರೆ ಎಂಬುದು ಗೊತ್ತಿಲ್ಲ. ಬಡಾವಣೆಯ ಹೊರ ಭಾಗದ ನಿರ್ಜನ ಪ್ರದೇಶದಲ್ಲಿರುವ ಬಾವಿಗೆ ಬಿಸಾಡಿ ಹೋಗಿದ್ದಾರೆ.

ಹೆಣ್ಣು ಮಗು ಎಂಬ ಕಾರಣಕ್ಕೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ಮಗುವಿನ ಪೋಷಕರು ಕಣ್ಣೀರು ಹಾಕುತ್ತಿದ್ದು, ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಯಾದಗಿರಿ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾವಿಯಲ್ಲಿದ್ದ ಮೃತದೇಹವನ್ನು ಮೇಲೆ ಎತ್ತಿದ್ದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಯಾದಗಿರಿ ನಗರ ಠಾಣೆಯಲ್ಲಿ ಈ ಸಂಬಂಧ ಕೇಸ್ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Exit mobile version