ಸೊರಬ: ಸರ್ಕಾರಿ ಶಾಲೆಗಳ (Govt Schools) ಅಭಿವೃದ್ಧಿಗೆ (Development) ಶಾಲಾಭಿವೃದ್ಧಿ ಸಮಿತಿ ಮತ್ತು ಪೋಷಕರ ಸಹಭಾಗಿತ್ವ ಮಹತ್ವದ್ದಾಗಿರುತ್ತದೆ ಎಂದು ಪುರಸಭೆ ನಿಕಟಪೂರ್ವ ಅಧ್ಯಕ್ಷ ಹಾಗೂ ಸದಸ್ಯ ಈರೇಶ್ ಮೇಸ್ತ್ರಿ ಹೇಳಿದರು.
ಪಟ್ಟಣದ ಕಾನುಕೇರಿ ಬಡಾವಣೆಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ನನ್ನ ಶಾಲೆ-ನನ್ನ ಕೊಡುಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇದನ್ನೂ ಓದಿ: ವಿಶ್ವಕಪ್‌ಗೆ ಸಂಭಾವ್ಯ ತಂಡ ಪ್ರಕಟಿಸಿದ ಹಾಲಿ ಚಾಂಪಿಯನ್ ಇಂಗ್ಲೆಂಡ್; ಜೋಫ್ರಾ ಆರ್ಚರ್‌ಗೆ ಕೊಕ್
ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಣದ ಪಾತ್ರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಪೋಷಕರು ಮತ್ತು ಶಿಕ್ಷಕರ ಮೇಲೆ ಹೆಚ್ಚಿನ ಜವಾಬ್ದಾರಿ ಇರುತ್ತದೆ. ಸರ್ಕಾರವು ಸಹ ಶಾಲೆಗಳ ಅಭಿವೃದ್ಧಿಗೆ ಅನುದಾನಗಳನ್ನು ನೀಡುತ್ತದೆ. ಆದರೆ, ಸಂಘ-ಸಂಸ್ಥೆಯವರು ಮತ್ತು ಪೋಷಕರು ಕೈ ಜೋಡಿಸಿದಾಗ ಶಾಲೆಗಳಿಗೆ ಅಗತ್ಯವಿರುವ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಅನುಕೂಲವಾಗುತ್ತದೆ. ಶಾಲೆಗೆ ಕ್ರೀಡಾ ಸಾಮಗ್ರಿಗಳು, ಬೆಂಚುಗಳು ಹಾಗೂ ವಿವಿಧ ವಸ್ತುಗಳನ್ನು ನೀಡುತ್ತಿರುವುದು ಉತ್ತಮ ಬೆಳವಣಿಗೆ ಎಂದರು.
ಕಾರ್ಯಕ್ರಮದಲ್ಲಿ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಅನ್ನಿಸ್ ಅಹಮ್ಮದ್ ಅಧ್ಯಕ್ಷತೆ ವಹಿಸಿದ್ದರು.
ಇದನ್ನೂ ಓದಿ: Shakti Scheme: ಉಚಿತ ಬಸ್ ಪ್ರಯಾಣ ಯೋಜನೆ ನಿಲ್ಲಲ್ಲ ಎಂದ ಸಚಿವ ಚಲುವರಾಯಸ್ವಾಮಿ
ಈ ಸಂದರ್ಭದಲ್ಲಿ ಬಿಆರ್‍ಸಿ ಸಮನ್ವಯಾಧಿಕಾರಿ ದಯಾನಂದ ಕಲ್ಲೇರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎನ್. ಗಣಪತಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಸೊರಬ ಶಾಖೆ ಅಧ್ಯಕ್ಷ ಜೆ.ಎಸ್. ನಾಗರಾಜ್ ಜೈನ್, ಗೌರವಾಧ್ಯಕ್ಷ ಯು.ಎನ್. ಲಕ್ಷ್ಮೀಕಾಂತ್, ಇಸಿಒ ಸಂಜೀವ ಕುಮಾರ್, ಬಿಆರ್‍ಪಿ ಸುರೇಶ್, ಸವಿತಾ, ಸಿಆರ್‍ಪಿ ಅಬು ಸೈಯದ್, ಶಾಲೆಯ ಮುಖ್ಯ ಶಿಕ್ಷಕ ಶಫೀ ಆಹ್ಮದ್, ಚಂದ್ರಗುತ್ತಿ ಉರ್ದು ಶಾಲೆಯ ಮುಖ್ಯಶಿಕ್ಷಕ ಗೌಸ್ ಅಲಿ, ಸರ್ಕಾರಿ ಕಿ.ಪ್ರಾ. ಶಾಲೆ ಮುಖ್ಯ ಶಿಕ್ಷಕ ಷಣ್ಮುಖಾಚಾರ್, ಸದಾನಂದಗೌಡ ಎಸ್‍ಡಿಎಂಸಿ ಮಾಜಿ ಅಧ್ಯಕ್ಷ ಹಿದಾಯತ್‍ವುಲ್ಲಾ, ಪ್ರಮುಖರಾದ ಪರಶುರಾಮ ಸಣ್ಣಬೈಲ್, ನಾಗಪ್ಪ ಮಾಸ್ತರ್, ಸೇರಿದಂತೆ ಇತರರು ಪಾಲ್ಗೊಂಡಿದ್ದರು.