Site icon Vistara News

Shivamogga News: ರೈತರ ಬಗ್ಗೆ ಸಚಿವ ಶಿವಾನಂದ ಪಾಟೀಲ್ ಹೇಳಿಕೆಗೆ ಖಂಡಿಸಿ ಸೊರಬದಲ್ಲಿ ಪ್ರತಿಭಟನೆ

Protest in Soraba against minister Shivananda Patil statement about farmers

ಸೊರಬ: ರೈತರ (Farmers) ಬಗ್ಗೆ ಸಕ್ಕರೆ ಸಚಿವ ಶಿವಾನಂದ ಪಾಟೀಲ್ (Minister Shivananda Patil) ನೀಡಿರುವ ಹೇಳಿಕೆಯನ್ನು ಖಂಡಿಸಿ, ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ (Protest) ನಡೆಸಲಾಯಿತು.

ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಸಂಚಾಲಕ ಉಮೇಶ ಎನ್. ಪಾಟೀಲ್, ಬರಗಾಲಕ್ಕಾಗಿ ರೈತರು ಕಾಯುತ್ತಿದ್ದಾರೆ ಎಂಬ ಹೇಳಿಕೆ ನೀಡುವ ಮೂಲಕ ಸಕ್ಕರೆ ಮಂತ್ರಿ ಶಿವಾನಂದ ಪಾಟೀಲ್ ಇಡೀ ರೈತ ಸಮೂಹವನ್ನು ಹಗುರವಾಗಿ ಕಂಡಿದ್ದಾರೆ ಎಂದು ಆರೋಪಿಸಿದ ಅವರು, ದೇಶಕ್ಕೆ ಅನ್ನ ನೀಡುವ ರೈತ ಸಮೂಹ ಇಂದು ಮಳೆ ಇಲ್ಲದೇ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ರೈತರ ಬಗ್ಗೆ ಸಲ್ಲದ ಹೇಳಿದ ನೀಡಿರುವುದು ಖಂಡನೀಯ. ಆದ್ದರಿಂದ ಸಕ್ಕರೆ ಸಚಿವ ಶಿವಾನಂದ ಪಾಟೀಲ್ ತಕ್ಷಣ ರಾಜಿನಾಮೆ ನೀಡಬೇಕು ಇಲ್ಲವಾದಲ್ಲಿ ಮುಖ್ಯಮಂತ್ರಿಗಳು ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: Shivamogga News: ಚಿಕ್ಕಜೇನಿಯ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಎನ್.ಕೆ. ಮಂಜುನಾಥಗೌಡ ಮಾತನಾಡಿದರು.

ತಾಲೂಕು ಕಛೇರಿ ಎದುರು ಸಚಿವ ಶಿವಾನಂದ ಪಾಟೀಲ್ ಅವರ ವಿರುದ್ಧ ಘೋಷಣೆ ಕೂಗಿ, ಪ್ರತಿಕೃತಿ ದಹನ ಮಾಡಿದರು. ನಂತರ ತಹಸೀಲ್ದಾರ್ ಹುಸೇನ್ ಸರಕಾವಸ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಇದನ್ನೂ ಓದಿ: Uttara Kannada News: ಡಿ.30ರಿಂದ ಅಶೋಕೆಯಲ್ಲಿ ಅತಿರುದ್ರಾಭಿಷೇಕ

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಮಂಜುನಾಥ ಆರೇಕೊಪ್ಪ, ತಾಲೂಕು ಅಧ್ಯಕ್ಷ ಈಶ್ವರಪ್ಪ ಕೊಡಕಣಿ, ಮುಖಂಡರಾದ ಯೋಗೇಶ್ ಕುಂದಗಸವಿ, ನಾಗರಾಜ ಬೆಣ್ಣಿಗೇರೆ, ಹನುಮಂತಪ್ಪ ಬಾವಿಕಟ್ಟೆ ಆನವಟ್ಟಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

Exit mobile version