Road accident : ಏನಿದು ದುರಂತ ಸರಣಿ?; ನಿನ್ನೆ ತಾಯಿ-ಮಗ ಮೃತ್ಯು; ಇಂದು ತಂದೆ-ಮಗಳು ಅಪಘಾತಕ್ಕೆ ಬಲಿ - Vistara News

ಕರ್ನಾಟಕ

Road accident : ಏನಿದು ದುರಂತ ಸರಣಿ?; ನಿನ್ನೆ ತಾಯಿ-ಮಗ ಮೃತ್ಯು; ಇಂದು ತಂದೆ-ಮಗಳು ಅಪಘಾತಕ್ಕೆ ಬಲಿ

Road accident: ರಾಜ್ಯದಲ್ಲಿ ರಸ್ತೆ ಸಂಚಾರವೇ ಅಪಾಯಕಾರಿ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿದೆ. ಯದ್ವಾತದ್ವಾ ಓಡಾಡುವ ವಾಹನಗಳ ಧಾವಂತದಲ್ಲಿ ಸಾವು ಬೆನ್ನಟ್ಟಿ ಬರುತ್ತಿದೆ.

VISTARANEWS.COM


on

Accident near Bhadravati
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶಿವಮೊಗ್ಗ: ರಾಜ್ಯದಲ್ಲಿ ಭೀಕರ ಅಪಘಾತಗಳ ಸರಣಿ (Accident series) ಮುಂದುವರಿದೆ. ಗುರುವಾರ ಬೆಳಗ್ಗೆ ತರೀಕೆರೆ ಬಳಿ ಖಾಸಗಿ ಬಸ್‌ (Tarikere Private bus accident) ಒಂದರ ಅಟ್ಟಹಾಸಕ್ಕೆ ಶಾಲೆಗೆ ಹೊರಟಿದ್ದ 15 ವರ್ಷದ ಬಾಲಕಿ ಪ್ರಾಣವನ್ನೇ ಕಳೆದುಕೊಂಡರೆ ಮಧ್ಯಾಹ್ನದ ಹೊತ್ತಿಗೆ ಶಿವಮೊಗ್ಗದ ಭದ್ರಾವತಿ ತಾಲೂಕಿನ ಜಾವಳ್ಳಿಯಲ್ಲಿ ಅಪಘಾತದಲ್ಲಿ ತಂದೆ ಮತ್ತು ಮಗಳು (Father and daughter dead in accident) ಪ್ರಾಣ ಕಳೆದುಕೊಂಡಿದ್ದಾರೆ. ಬುಧವಾರವಷ್ಟೇ ಚಿಕ್ಕಮಗಳೂರಿನ ಕಣಿವೆ ಕ್ರಾಸ್‌ನಲ್ಲಿ ಕಾರಿನಲ್ಲಿ ಸಾಗುತ್ತಿದ್ದ ತಾಯಿ ಮತ್ತು ಮಗ ಇಬ್ಬರೂ ಮೃತಪಟ್ಟಿದ್ದರು (Mother and son dead). ತಾಯಿ-ಮಗನ ಸಾವಿನ ಬೆನ್ನಿಗೇ ಈಗ ತಂದೆ- ಮಗಳ ಸಾವು ಭಾರಿ ನೋವನ್ನು ಉಂಟು ಮಾಡಿದೆ.

ಭದ್ರಾವತಿಯಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿ

ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಜಾವಳ್ಳಿ ಬಳಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಅದರಲ್ಲಿ ಪ್ರಯಾಣಿಸುತ್ತಿದ್ದ ತಂದೆ ಮತ್ತು ಮಗಳು ಪ್ರಾಣ ಕಳೆದುಕೊಂಡಿದ್ದಾರೆ. ಎರಡು ಕಾರುಗಳಲ್ಲಿದ್ದ ಒಟ್ಟು 8 ಮಂದಿಗೆ ಗಾಯಗಳಾಗಿವೆ.

bhadravati accident
ನಜ್ಜುಗುಜ್ಜಾಗಿರುವ ಕಾರು

ಶಿವಮೊಗ್ಗದ ಟಿಪ್ಪು ನಗರದ ನಿವಾಸಿಗಳಾದ ತಂದೆ ಅಫ್ತಾಬ್‌ (35) ಮತ್ತು ಮಗಳು ಮದೀಯಾ ಮೃತ ದುರ್ದೈವಿಗಳು. ಜಾವಳ್ಳಿ ಬಳಿ ಎರಡು ಕಾರುಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡ ರಭಸಕ್ಕೆ ಅಫ್ತಾಬ್‌ ಮತ್ತು ಮದೀಯಾ ಅವರು ಪ್ರಯಾಣಿಸುತ್ತಿದ್ದ ಕಾರು ಹೊಂಡಕ್ಕೆ ಉರುಳಿದೆ. ಈ ಹಂತದಲ್ಲಿ ಕಾರು ಉರುಳಿದ ಹೊಡೆತಕ್ಕೆ ಅಫ್ತಾಬ್‌ ಅವರು ಡ್ರೈವಿಂಗ್‌ ಸೀಟಿನಲ್ಲಿ ಕುಳಿತಲ್ಲೇ ಗಂಭೀರ ಗಾಯಕ್ಕೊಳಗಾದರು.

ಎರಡೂ ಕಾರಿನಲ್ಲಿದ್ದ ಗಾಯಾಳುಗಳನ್ನು ಕೂಡಲೇ ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಪ್ರಾಣ ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.

ನಿನ್ನೆಯಷ್ಟೇ ತಾಯಿ-ಮಗ ಪ್ರಾಣ ಕಳೆದುಕೊಂಡಿದ್ದರು

ಚಿಕ್ಕಮಗಳೂರು (Chikkamagaluru news) ತಾಲೂಕಿನ ಕಣಿವೆ ಕ್ರಾಸ್ ಬಳಿ ಕಾರೊಂದು ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ತಾಯಿ ಚೆನ್ನಮ್ಮ (67) ಮತ್ತು ಅವರ ಮಗ ನಿರಂಜನ್‌ (42) ಮೃತಪಟ್ಟ ಘಟನೆ ಬುಧವಾರವಷ್ಟೇ ಸಂಭವಿಸಿತ್ತು.

Road accident near Chikkamagaluru

ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆ ನಿವಾಸಿಯಾಗಿರುವ ನಿರಂಜನ್‌ ಅವರು ತಮ್ಮ ತಾಯಿಯನ್ನು ಕರೆದುಕೊಂಡು ಚಿಕ್ಕಮಗಳೂರಿನಿಂದ ಕಡೂರಿಗೆ ತೆರಳುತ್ತಿದ್ದಾಗ ಅವಘಡ ಸಂಭವಿಸಿದೆ.

ನಿರಂಜನ್‌ ಅವರು ಖಾಸಗಿ ಆಸ್ಪತ್ರೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು. ಅಮ್ಮನ ಜತೆಗೆ ಹೋಗುವಾಗಲೇ ದುರಂತ ಸಂಭವಿಸಿದ್ದನ್ನು ನೋಡಿ ಮನೆಯವರು ಕಣ್ಣೀರು ಹಾಕಿದ್ದರು.

ಜಾಲಿ ರೈಡ್‌ಗೆ ಬಂದಿದ್ದ ಯುವಕರು ದುರ್ಮರಣ

ಇಷ್ಟೇ ಅಲ್ಲ ದಾವಣಗೆರೆ (Davanagere News) ಬಳಿಯ ರಾಷ್ಟ್ರೀಯ ಹೆದ್ದಾರಿ 54ರಲ್ಲಿ (NH 54) ತಡೆಗೋಡೆಗೆ ಬೈಕ್‌ ಡಿಕ್ಕಿ (Bike Accident)ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಾಲಿ ರೈಡ್‌ಗೆಂದು ಕೇರಳದಿಂದ ಬಂದಿದ್ದ ಅತುಲ್(25), ಋಷಿಕೇಶ್ ( 24) ಅಪಘಾತದಲ್ಲಿ (Road Accident) ಪ್ರಾಣ ಕಳೆದುಕೊಂಡಿದ್ದಾರೆ.

Bike Accident at NH 54

ದಾವಣಗೆರೆಯ ಎಸ್‌ಎಸ್ ಆಸ್ಪತ್ರೆ ಪಕ್ಕದಲ್ಲಿರುವ ರೈಲ್ವೆ ಬ್ರಿಡ್ಜ್ ಬಳಿ ಅಪಘಾತ ನಡೆದಿದೆ. ಕೇರಳದಿಂದ ಜಾಲಿ ರೈಡ್‌ಗೆ ಬೈಕ್‌ನಲ್ಲಿ ಬಂದಿದ್ದರು ಎಂದು ಪೊಲೀಸರು ಪ್ರಾಥಮಿಕ ಮಾಹಿತಿ‌ ನೀಡಿದ್ದಾರೆ. ಬೈಕ್ ಸವಾರನ ನಿಯಂತ್ರಣ ತಪ್ಪಿ ತಡೆಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ ಬ್ರಿಡ್ಜ್ ಮೇಲಿಂದ ಹಾರಿ ರೈಲ್ವೆ ಹಳಿ ಪಕ್ಕದಲ್ಲಿ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ಇಬ್ಬರ ಪ್ರಾಣಪಕ್ಷಿ ಹಾರಿಹೋಗಿದೆ.

ಶಿರಸಿಯಲ್ಲಿ ಟ್ಯಾಂಕರ್-ಮಿನಿ ಲಾರಿ ನಡುವೆ ಮುಖಾಮುಖಿ

ಶಿರಸಿ: ಶಿರಸಿ ತಾಲೂಕಿನ ಬನವಾಸಿ ಭಾಗದ ಗುಡ್ನಾಪುರದಲ್ಲಿ ಘಟನೆ ಗುರುವಾರ ಟ್ಯಾಂಕರ್‌ ಮತ್ತು ಮಿನಿ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಚಾಲಕ ಹಾಗೂ ಕ್ಲೀನರ್ ಗೆ ಗಾಯಗಳಾಗಿವೆ.

Accident neat Sirsi

ಎದುರಿನಿಂದ ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ನಡೆದ ಅವಘಡ ಇದಾಗಿದೆ. ಶಿವಮೊಗ್ಗ ಜಿಲ್ಲೆ ಜಡೆ ಗ್ರಾಮದ ಆನಂದ ಹಾಗೂ ಹರೀಶ್ ನಾಗಪ್ಪಗೆ ಗಾಯಗಳಾಗಿದ್ದು, ಶಿರಸಿ ಪಂಡಿತ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಮೈಸೂರು

Mysuru Tragedy : ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಗೆ ಎಳೆನೀರು ತರಲು ಮರವೇರಿ ದಾರುಣ ಅಂತ್ಯ ಕಂಡ ಮಗ

Tragedy Case : ತೆಂಗಿರ ಮರದಿಂದ ಬಿದ್ದು ಯುವಕನೊರ್ವ ದಾರುಣ ಅಂತ್ಯ ಕಂಡಿದ್ದಾನೆ. ಮರವೇರಿ ಎಳೆನೀರು ಕೀಳುವಾಗ ಕಾಲು ಜಾರಿದೆ. ನಿಯಂತ್ರಣ ಸಿಗದೇ ಕೆಳಗೆ ಬಿದ್ದ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

VISTARANEWS.COM


on

By

Mysuru Tragedy
Koo

ಮೈಸೂರು: ತೆಂಗಿನ ಮರದಿಂದ ಬಿದ್ದು ಯುವಕನೊರ್ವ ಮೃತಪಟ್ಟಿದ್ದಾನೆ. ಎಳನೀರು ಕೀಳುವಾಗ ಅವಘಡ (Mysuru tragedy) ಸಂಭವಿಸಿದೆ. ಮೈಸೂರಿನ ಕೆಆರ್ ನಗರದ ಮುಂಜನಹಳ್ಳಿಯಲ್ಲಿ ಘಟನೆ (Tragedy Case) ನಡೆದಿದೆ. ಚೇತನ್ (27) ಮೃತ ದುರ್ದೈವಿ.

ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಗೆ ಎಳೆನೀರು ತರಲು ಚೇತನ್ ಜಮೀನಿಗೆ ಹೋಗಿದ್ದ. ಮರವೇರಿ ಎಳನೀರು ಕೀಳುವಾಗ ಕಾಲು ಜಾರಿದೆ. ಈ ವೇಳೆ ಮರದ ಮೇಲಿಂದ ಬಿದ್ದ ರಭಸಕ್ಕೆ ಚೇತನ್ ತಲೆಗೆ ಗಂಭೀರ ಗಾಯವಾಗಿದೆ. ತೀವ್ರ ರಕ್ತಸ್ರಾವವಾಗಿ ಅಸ್ವಸ್ಥಗೊಂಡಿದ್ದ ಚೇತನ್‌ನನ್ನು ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.

ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಕೆಆರ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಆರ್‌ನಗರ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ : Road Accident : ನಿದ್ರೆಯಲ್ಲಿದ್ದ ಪ್ರಯಾಣಿಕನ ಎದೆ ಸೀಳಿದ ಲಾರಿ; ಛಿದ್ರ ಛಿದ್ರಗೊಂಡ ಖಾಸಗಿ ಬಸ್‌

ಕುರಿ ಮೇಯಿಸಲು ಹೋದ ಬಾಲಕ ಸಾವು

ಗದಗ ಜಿಲ್ಲೆಯ ನರಗುಂದ ತಾಲೂಕಿನಲ್ಲಿ ಬಂಡೆಮ್ಮ ನಗರ ಗ್ರಾಮದ ಬಳಿ ಸಿಡಿಲು ಬಡಿದು ಬಾಲಕ ಮೃತಪಟ್ಟಿದ್ದು, ಇನ್ನೊಬ್ಬ ಬಾಲಕನಿಗೆ ಗಂಭೀರ ಗಾಯಗಳಾಗಿವೆ. ಕುರಿ ಮೇಯಿಸಲು ಹೋಗಿದ್ದ ವೇಳೆ ಗುಡುಗು, ಸಿಡಿಲು ಸಹಿತ ಮಳೆ ಸುರಿದಿದ್ದು, ಈ ವೇಳೆ ಮರದ ಬಳಿ ನಿಂತಾಗ ಅವಘಡ ನಡೆದಿದೆ. ಗುಡ್ಡದಕೇರಿ ಬಡಾವಣೆಯ ನಿವಾಸಿ ಯಲ್ಲಪ್ಪ ಕಿಲೀಕೈ (17) ಮೃತ ಬಾಲಕ. ಪರಸಪ್ಪ ಕಿಲೀಕೈ (15) ಗಾಯಾಳುವಾಗಿದ್ದು, ಆತನಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಸಿಡಿಲಿಗೆ ರೈತ ಮಹಿಳೆ ಬಲಿ

ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಜೆ ರಾಂಪುರದಲ್ಲಿ ಸಿಡಿಲು ಬಡಿದು ರೈತ ಮಹಿಳೆ ರತ್ನಮ್ಮ ಓತಗೇರಿ(43) ಎಂಬುವವರು ಮೃತಪಟ್ಟಿದ್ದಾರೆ. ಹೊಲಕ್ಕೆ ರತ್ನಮ್ಮನೊಂದಿಗೆ ಆಕೆಯ ಅಕ್ಕ ದೇವಮ್ಮ ಸಹ ಹೋಗಿದ್ದರು. ಮಳೆ ಆರಂಭವಾಗುತ್ತಿದ್ದಂತೆ ದೇವಮ್ಮ ಮನೆ ಸೇರಿದ್ದರು. ಆದರೆ ಹೊಲದಲ್ಲಿದ್ದ ರತ್ನಮ್ಮಗೆ ಸಿಡಿಲು ಬಡಿದಿದ್ದರಿಂದ ಮೃತಪಟ್ಟಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಪ್ರಮುಖ ಸುದ್ದಿ

Rahul Gandhi: ಮಾನನಷ್ಟ ಪ್ರಕರಣದಲ್ಲಿ ರಾಹುಲ್‌ ಗಾಂಧಿಗೆ ಜಾಮೀನು; ‌75 ಲಕ್ಷದ ಶ್ಯೂರಿಟಿ ನೀಡಿದ ಡಿಕೆ ಸುರೇಶ್

Rahul Gandhi: 42ನೇ ಎಂಸಿಸಿಎ ಕೋರ್ಟ್‌ ಕಟಕಟೆಯಲ್ಲಿ ನಿಂತ ರಾಹುಲ್‌ ಗಾಂಧಿ ಅವರ ಪರ ವಕೀಲರು ಜಾಮೀನಿಗಾಗಿ ಕೋರಿದರು. ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿ ಮುಂದಿನ ವಿಚಾರಣೆಯನ್ನು ಜೂ.30ಕ್ಕೆ ನಿಗದಿಪಡಿಸಿದರು.

VISTARANEWS.COM


on

defamation case rahul gandhi
Koo

ಬೆಂಗಳೂರು: ಬಿಜೆಪಿ (BJP) ಹೂಡಿರುವ ಮಾನನಷ್ಟ ಮೊಕದ್ದಮೆ (Defamation case) ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿಗೆ (Rahul Gandhi) ಷರತ್ತುಬದ್ಧ ಜಾಮೀನು (Bail) ದೊರೆತಿದೆ. ಪ್ರಕರಣದ ವಿಚಾರಣೆಯನ್ನು ಜೂನ್‌ 30ಕ್ಕೆ ಮುಂದೂಡಲಾಗಿದೆ.

42ನೇ ಎಂಸಿಸಿಎ ಕೋರ್ಟ್‌ ಕಟಕಟೆಯಲ್ಲಿ ನಿಂತ ರಾಹುಲ್‌ ಗಾಂಧಿ ಅವರ ಪರ ವಕೀಲ ನಿಶಾನ್ ಕುಮಾರ್ ಶೆಟ್ಟಿ ಜಾಮೀನಿಗಾಗಿ ಕೋರಿದರು. ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿ ಮುಂದಿನ ವಿಚಾರಣೆಯನ್ನು ಜೂ.30ಕ್ಕೆ ನಿಗದಿಪಡಿಸಿದರು. ಕಾಂಗ್ರೆಸ್‌ ಮುಖಂಡ ಡಿ.ಕೆ ಸುರೇಶ್‌ (DK Suresh) ಅವರು ರಾಹುಲ್‌ ಗಾಂಧಿಗೆ 75 ಲಕ್ಷ ರೂಪಾಯಿ ಮೌಲ್ಯದ ಶ್ಯೂರಿಟಿ ಒದಗಿಸಿದರು. ಬಾಂಡ್‌ ಕಾಗದಗಳಿಗೆ ಸಹಿ ಹಾಕಿದ ಬಳಿಕ ರಾಹುಲ್‌ ಕೋರ್ಟ್‌ನಿಂದ ತೆರಳಿದರು. ಈ ಸಂದರ್ಭದಲ್ಲಿ ಕೋರ್ಟ್‌ನಲ್ಲಿ ಪ್ರಕರಣದ ಇನ್ನಿಬ್ಬರು ಆರೋಪಿಗಳಾದ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ (DCM DK Shivakumar) ಸಹ ಉಪಸ್ಥಿತರಿದ್ದರು.

ರಾಹುಲ್‌ ಮೇಲೆ ಕೋರ್ಟ್‌ ಗರಂ

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ಮಾನನಷ್ಟ ಪ್ರಕರಣದ ವಿಚಾರಣೆ ನಡೆಸುತ್ತಿದೆ. ಕಳೆದ ಬಾರಿ ಇದರ ವಿಚಾರಣೆಯ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ (DCM DK Shivakumar) ನ್ಯಾಯಾಧೀಶರ ಮುಂದೆ ಹಾಜರಾಗಿದ್ದರು. ಇವರಿಬ್ಬರಿಗೂ ಷರತ್ತುಬದ್ಧ ಜಾಮೀನು ನೀಡಲಾಗಿತ್ತು. ಆದರೆ ರಾಹುಲ್‌ ಗಾಂಧಿ ಆಗಮಿಸಿರಲಿಲ್ಲ. ಇದರಿಂದ ಗರಂ ಆಗಿದ್ದ ನ್ಯಾಯಾಧೀಶರು, ಮುಂದಿನ ಬಾರಿ ರಾಹುಲ್‌ ಖುದ್ದು ಹಾಜರಿರುವಂತೆ ನಿರ್ದೇಶನ ನೀಡಿತ್ತು.

ಈ ಪ್ರಕರಣದ ದಾಖಲಿಸಿರುವ ಬಿಜೆಪಿ ಕಾರ್ಯದರ್ಶಿ, ಎಂಎಲ್‌ಸಿ ಕೇಶವಪ್ರಸಾದ್, “ಸಾಮಾನ್ಯರಂತೆ ರಾಹುಲ್‌ ಅವರಿಗೂ ಕಾನೂನು ಒಂದೇ” ಎಂದು ಹೇಳಿದ್ದಾರೆ. “ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಸುಳ್ಳು ಜಾಹೀರಾತು ನೀಡಿದ್ದರು. ರಾಹುಲ್‌ ಗಾಂಧಿ ಅದನ್ನು ರಿಟ್ವೀಟ್ ಮಾಡಿಕೊಂಡರು. ಹಾಗಾಗಿ ಮೂವರ ವಿರುದ್ಧ ದೂರು ನೀಡಲಾಗಿತ್ತು. ಬಿಜೆಪಿ ಸಾಮಾನ್ಯ ಕಾರ್ಯಕರ್ತನಿಗೂ ಎಲ್ಲಾ ಹೋರಾಟ ಮಾಡುವ ಕ್ಷಮತೆ ಇದೆ. ನಮ್ಮ ವಿರುದ್ಧ ಹಾಕಿರುವ ಜಾಹೀರಾತು ಸುಳ್ಳು. ಅವರು ಅದಕ್ಕೆ ದಾಖಲೆ ಕೊಡಬೇಕು. ಜನರ ದಾರಿ ತಪ್ಪಿಸಬಹುದು, ಆದರೆ ಕೋರ್ಟ್ ದಾರಿ ತಪ್ಪಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಏನಿದು ಪ್ರಕರಣ?

08-05-2023ರಂದು 42ನೇ ವಿಶೇಷ ನ್ಯಾಯಾಲಯದಲ್ಲಿ ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್.‌ ಕೇಶವ ಪ್ರಸಾದ್ ಖಾಸಗಿ ದೂರ ದಾಖಲು ಮಾಡಿದ್ದರು. ಪ್ರಕರಣದಲ್ಲಿ A1 ಕೆಪಿಸಿಸಿ, A2 ಡಿಕೆ ಶಿವಕುಮಾರ್, A3 ಆರೋಪಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ A4 ಆರೋಪಿಯಾಗಿ ರಾಹುಲ್ ಗಾಂಧಿ ಅವರನ್ನು ಹೆಸರಿಸಲಾಗಿದೆ.

“ಬಿಜೆಪಿ ಸರ್ಕಾರ 2019ರಿಂದ 2023ರವರೆಗೆ ಭ್ರಷ್ಟ ಆಡಳಿತ ನಡೆಸಿತ್ತು. ಆಗಿನ ಸಿಎಂ ಹುದ್ದೆ ರೂ. 2500 ಕೋಟಿಗೆ ಮಾರಾಟವಾಗಿತ್ತು. ಮಂತ್ರಿಗಳ ಹುದ್ದೆ ರೂ. 500 ಕೋಟಿ ಬಿಜೆಪಿ ಹೈಕಮಾಂಡ್‌ಗೆ ನೀಡಿ ಪಡೆದಿದ್ದಾರೆ. ಈ ಮೂಲಕ ಭ್ರಷ್ಟಾಚಾರ ಮಾಡಿದ್ದಾರೆ. ಇದಲ್ಲದೆ ಕೋವಿಡ್ ಕಿಟ್ ಪೂರೈಕೆ ಟೆಂಡರ್‌ನಲ್ಲಿ 75% ಡೀಲ್ ನಡೆದಿದೆ. ಪಿಡಬ್ಲ್ಯೂಡಿ ಗುತ್ತಿಗೆ ಟೆಂಡರ್‌ಗಳಲ್ಲಿ 40% ಡೀಲ್, ಮಠಕ್ಕೆ ನೀಡುವ ಅನುದಾನದಲ್ಲಿ 30% ಡೀಲ್, ಉಪಕರಣಗಳ ಪೂರೈಕೆಯಲ್ಲಿ 40% ಡೀಲ್, ಮಕ್ಕಳಿಗೆ ನೀಡುವ ಮೊಟ್ಟೆ ಪೂರೈಕೆಯ ಟೆಂಡರ್‌ನಲ್ಲಿ 30% ಡೀಲ್, ರಸ್ತೆ ಕಾಮಗಾರಿಗಳ ಟೆಂಡರ್‌ನಲ್ಲಿ 40% ಡೀಲ್ ನಡೆದಿದೆ” ಎಂದು ಆರೋಪಿಸಿದ್ದರು.

ಪರ್ಸೆಂಟೇಜ್ ಲೆಕ್ಕದಲ್ಲಿ ಕಮಿಷನ್ ಪಡೆದ ಆರೋಪ ಮಾಡಿ ಈ ಬಗ್ಗೆ ಅನೇಕ ಜಾಹೀರಾತುಗಳನ್ನೂ ಕಾಂಗ್ರೆಸ್‌ ನೀಡಿತ್ತು. ಇದರಿಂದ ಬಿಜೆಪಿ ಪಕ್ಷಕ್ಕೆ ಅಪಮಾನವಾಗಿದೆ ಎಂದು ಕಾಂಗ್ರೆಸ್ ಪಕ್ಷದ ಮುಖಂಡರ ವಿರುದ್ಧ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ಕೇಶವ ಪ್ರಸಾದ್ ಐಪಿಸಿ 499, 500 ಅಡಿ ಖಾಸಗಿ ದೂರು ದಾಖಲು ಮಾಡಿದ್ದರು. ಈ ಬಗ್ಗೆ ವಾದ ಆಲಿಸಿ ಆರೋಪಿಗಳನ್ನು ಹಾಜರು ಪಡಿಸಲು ಕೋರ್ಟ್‌ ಸೂಚಿಸಿತ್ತು.

ಇದನ್ನೂ ಓದಿ: Rahul Gandhi: ಮಾನನಷ್ಟ ಮೊಕದ್ದಮೆ ವಿಚಾರಣೆಗೆ ಹಾಜರಾಗಲು ಬೆಂಗಳೂರಿಗೆ ಆಗಮಿಸಿದ ರಾಹುಲ್‌ ಗಾಂಧಿ

Continue Reading

ವಿಜಯನಗರ

Road Accident : ನಿದ್ರೆಯಲ್ಲಿದ್ದ ಪ್ರಯಾಣಿಕನ ಎದೆ ಸೀಳಿದ ಲಾರಿ; ಛಿದ್ರ ಛಿದ್ರಗೊಂಡ ಖಾಸಗಿ ಬಸ್‌

Road Accident : ಲಾರಿ ಹಾಗೂ ಖಾಸಗಿ ಬಸ್‌ ನಡುವೆ ಭೀಕರ ಅಪಘಾತ ಸಂಭವಿಸಿದೆ. ಅಪಘಾತದ ಪರಿ ಹೇಗಿತ್ತು ಎಂದರೆ ನಿದ್ರೆಯಲ್ಲಿದ್ದ ಪ್ರಯಾಣಿಕನ ಎದೆಯೇ ಸೀಳಿ ಪ್ರಾಣಹರಣ ಮಾಡಿತ್ತು. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

VISTARANEWS.COM


on

By

road Accident in vijayanagar
Koo

ವಿಜಯನಗರ: ಖಾಸಗಿ ಸ್ಲೀಪರ್‌ ಬಸ್ ಮತ್ತು ಲಾರಿ ನಡುವೆ ಡಿಕ್ಕಿಯಾಗಿದ್ದು, ಗುದ್ದಿರುವ ರಭಸಕ್ಕೆ ಪ್ರಯಾಣಿಕನೊಬ್ಬ ಮಲಗಿದ್ದಲೇ ಉಸಿರು ಚೆಲ್ಲಿದ್ದಾನೆ. ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಜಂಬಯ್ಯನ ಕೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಅಪಘಾತ (Road Accident) ನಡೆದಿದೆ.

ರಾಯಚೂರು ಮೂಲದ ವ್ಯಕ್ತಿ ಮೃತಪಟ್ಟಿದ್ದು, ಅಪಘಾತದ ರಭಸಕ್ಕೆ ಮುಖದ ಭಾಗ ಪೂರ್ತಿ ನಜ್ಜುಗುಜ್ಜಆಗಿದೆ. ಸದ್ಯ ಮೃತನ ಹೆಸರು ಗುರುತು ಪತ್ತೆ ಆಗಿಲ್ಲ. ಖಾಸಗಿ ಬಸ್ ಬೆಂಗಳೂರಿನಿಂದ ಹೊಸಪೇಟೆ ಕಡೆಗೆ ಬರುತ್ತಿದ್ದರೆ, ಲಾರಿಯು ಹೊಸಪೇಟೆ ಕಡೆಯಿಂದ ಕೂಡ್ಲಿಗಿ ಕಡೆ ಹೊರಟಿತ್ತು.

ನಿದ್ರೆ ಮಂಪರಿನಲ್ಲಿ ಎರಡು ವಾಹನಗಳು ಮುಖಾಮುಖಿ ಡಿಕ್ಕಿಯಾಗಿರಬಹುದು ಶಂಕಿಸಲಾಗಿದೆ. ಸದ್ಯ ಲಾರಿಯಲ್ಲಿದ್ದವರಿಗೆ ಹಾಗೂ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಹಲವರಿಗೆ ಗಾಯವಾಗಿದ್ದು, ಎಲ್ಲರನ್ನೂ ಹೊಸಪೇಟೆ ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಚೆಲ್ಲಾಪಿಲ್ಲಿಯಾಗಿದ್ದ ವಾಹನಗಳನ್ನು ಪೊಲೀಸರು ತೆರವು ಮಾಡಿದ್ದಾರೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತನ ಗುರುತು ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.

ಧಗ ಧಗನೆ ಹೊತ್ತಿ ಉರಿದ ಕಾರು

ರಾಯಚೂರಿನ ಹಟ್ಟಿ ಚಿನ್ನದ ಗಣಿಯ ಮುಖ್ಯ ದ್ವಾರದಲ್ಲಿ ಕಾರೊಂದು ಧಗಧಗನೆ ಹೊತ್ತಿ ಉರಿದಿದೆ. ಏಕಾಏಕಿ ಬೆಂಕಿ ತಗುಲಿದ್ದು ಕ್ಷಣಾರ್ಧದಲ್ಲೇ ಕಾರು ಸುಟ್ಟು ಕರಕಲಾಗಿದೆ. ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸಲು ಸಿಬ್ಬಂದಿ ಕಾರನ್ನು ಪಾರ್ಕಿಂಗ್‌ನಲ್ಲಿ ನಿಲ್ಲಿಸಿದ್ದರು. ಅನಿಲ್ ಫೋರಮೆನ್ ಎಂಬುವರಿಗೆ ಸೇರಿದ ಕಾರಿಗೆ ದಿಢೀರ್‌ ಬೆಂಕಿ ಕಾಣಿಸಿಕೊಂಡಿದ್ದು, ಸುಟ್ಟು ಕರಕಲಾಗಿದೆ. ತಕ್ಷಣ ನೀರು ಎರಚಿ ಬೆಂಕಿ ನಂದಿಸಿಲು ಸ್ಥಳೀಯರು ಪ್ರಯತ್ನಿಸಿದರು. ಆದರೆ ಬೆಂಕಿಯ ಕೆನ್ನಾಲಿಗೆಗೆ ಕಾರು ಸುಟ್ಟು ಭಸ್ಮವಾಗಿತ್ತು. ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Ira Khan: ಬಿಕಿನಿ ಧರಿಸಿ ಕುಣಿದು ಕುಪ್ಪಳಿಸಿದ ಆಮೀರ್ ಪುತ್ರಿ; ಟ್ರೋಲ್‌ ಆದ ಇರಾ ಖಾನ್!

ಭೀಕರ ಕಾರು ಅಪಘಾತಕ್ಕೆ ಮೂವರು ಸಾವು; ಮರದಲ್ಲಿ ನೇತಾಡಿದ ಪ್ರಯಾಣಿಕನ ಶವ

ಚಿಕ್ಕಬಳ್ಳಾಪುರ: ಭೀಕರ ಕಾರು ಅಪಘಾತವೊಂದರಲ್ಲಿ (Road Accident) ಕಾರು ಕಾಲುವೆಗೆ ಬಿದ್ದು (car Accident) ಮೂವರು ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಪ್ರಯಾಣಿಕರೊಬ್ಬರ ಶವ ಮರದಲ್ಲಿ ನೇತಾಡುತ್ತಿದ್ದುದು ಕಂಡುಬಂದಿದ್ದು, ಇದನ್ನು ನೋಡಿದವರೇ ಬೆಚ್ಚಿಬಿದ್ದಿದ್ದಾರೆ.

ಗೌರಿಬಿದನೂರು (Gauribidanur) ತಾಲ್ಲೂಕಿನ ವಾಟದಹೊಸಹಳ್ಳಿ ಬಳಿ ದುರ್ಘಟನೆ ನಡೆದಿದೆ. ರಾತ್ರಿಯೇ ಅಪಘಾತ ನಡೆದಿದೆ ಎಂದು ಶಂಕಿಸಲಾಗಿದ್ದು, ಮುಂಜಾನೆವರೆಗೆ ಯಾರ ಗಮನಕ್ಕೂ ಬಂದಿರಲಿಲ್ಲ. ಬ್ರೆಝಾ ಕಾರು ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಉರುಳಿಕೊಂಡಿದೆ. ಕಾರಿನಲ್ಲಿ ನಾಲ್ವರಿದ್ದು, ಮೂವರು ಮೃತಪಟ್ಟಿದ್ದಾರೆ. ಒಬ್ಬ ಪ್ರಯಾಣಿಕ ಪ್ರಾಣಾಪಾಯದಿಂದ‌ ಪಾರಾಗಿದ್ದಾರೆ.

ಮೃತಪಟ್ಟವರು ಬೆಸ್ಕಾಂ ಸಿಬ್ಬಂದಿ ಎಂದು ತಿಳಿದುಬಂದಿದೆ. ಇವರನ್ನು ಕೆಪಿಟಿಸಿಎಲ್ ವೇಣಗೋಪಾಲ್ (34), ಶ್ರೀಧರ್ (35) ಹಾಗೂ ಬೆಸ್ಕಾಂ ಲೈನ್‌ಮ್ಯಾನ್ ಮಂಜಪ್ಪ (35) ಎಂದು ಗುರುತಿಸಲಾಗಿದೆ. ಕಾರು ಕಾಲುವೆಗೆ ಉರುಳುವಾಗ ಬಾಗಿಲು ತೆರೆದ ಕಾರಿನಿಂದ ಚಿಮ್ಮಿದ ಒಬ್ಬ ಪ್ರಯಾಣಿಕನ ದೇಹ ಮರದಲ್ಲಿ ಸಿಕ್ಕಿಹಾಕಿಕೊಂಡಿದೆ. ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Uttarakhand Trekking Tragedy: ಚಾರಣಿಗರ ಮೃತದೇಹಗಳು ಬೆಂಗಳೂರಿಗೆ, ಸಾವಿನ ಕಣಿವೆಯಿಂದ ಹಿಂದಿರುಗಿದವರ ನಿಟ್ಟುಸಿರು

VISTARANEWS.COM


on

uttarakhand trekking tragedy 2
Koo

ಬೆಂಗಳೂರು: ಉತ್ತರಾಖಂಡದ (Uttarakhand) ಸಹಸ್ತ್ರತಾಲ್‌ ಶಿಖರದ (Sahstra Tal Summit) ಬಳಿ ಹಿಮಬಿರುಗಾಳಿಗೆ (Blizzard) ಸಿಕ್ಕಿ ಮೃತಪಟ್ಟ (Trekking Tragedy) 9 ಮಂದಿ ಕರ್ನಾಟಕದ ಚಾರಣಿಗರ (Trekkers) ಮೃತದೇಹಗಳು ಇಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Kemepegowda internationa Airport) ಮೂಲಕ ಬೆಂಗಳೂರನ್ನು ತಲುಪಲಿವೆ. ಬದುಕುಳಿದ 13 ಇಂದು ಮುಂಜಾನೆ ಹಿಂದಿರುಗಿದರು.

ಉತ್ತರಾಖಂಡದ ಡೆಹ್ರಾಡೂನ್‌ನಿಂದ ದೇವನಹಳ್ಳಿಯ ಏರ್ಪೋರ್ಟ್‌ಗೆ ರಾತ್ರಿ 8:45ಕ್ಕೆ ಆಗಮಿಸಿದ 6E6136 ಇಂಡಿಗೋ ವಿಮಾನದಲ್ಲಿ 13 ಮಂದಿ ಚಾರಣಿಗರು ಬಂದಿಳಿದರು. ಕಾತರ ಹಾಗೂ ಆತಂಕಗಳಿಂದ ಅವರನ್ನು ಕಾಯುತ್ತಿದ್ದ ಸಂಬಂಧಿಕರು, ಸ್ನೇಹಿತರನ್ನು ಕೂಡಿಕೊಂಡರು. ತಮ್ಮ ಸಹಚಾರಣಿಗರನ್ನು ಕಣ್ಣ ಮುಂದೆಯೇ ಕಳೆದುಕೊಂಡ ದುರ್ಘಟನೆ ಹಾಗೂ ದುರ್ಭರ ಪರಿಸ್ಥಿತಿಯಲ್ಲಿ ಬದುಕುಳಿದ ಶಾಕ್‌ಗೆ ಒಳಗಾಗಿದ್ದ ಚಾರಣಿಗರು ಮೌನವಾಗಿ ಮನೆಗೆ ತೆರಳಿದ್ದು, ಯಾವುದೇ ಹೇಳಿಕೆ ನೀಡಲಿಲ್ಲ.

ಬೆಳಗ್ಗೆ 8:30ರ ಹೊತ್ತಿಗೆ ದೆಹಲಿಯಿಂದ ಬಂದು ಟರ್ಮಿನಲ್ 1ಕ್ಕೆ ತಲುಪಿದ ಇಂಡಿಗೋ 6E 6612 ವಿಮಾನದಲ್ಲಿ ಮೂವರ ಮೃತದೇಹಗಳು ಬಂದಿಳಿದಿವೆ. ಪದ್ಮಿನಿ ಹೆಗ್ಡೆ, ವೆಂಕಟೇಶ್ ಪ್ರಸಾದ್, ಆಶಾ ಸುಧಾಕರ್ ಮೃತದೇಹಗಳು ಮೊದಲ ವಿಮಾನದಲ್ಲಿ ಬಂದಿವೆ.

ಏರ್‌ಪೋರ್ಟ್ ಕಾರ್ಗೋ ಬಳಿ ಈ ಕಾರ್ಯಾಚರಣೆಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಸಚಿವ ಕೃಷ್ಣ ಬೈರೇಗೌಡ ಹೇಳಿಕೆ ನೀಡಿದ್ದು, “ಈಗಾಗಲೇ ಮೂರು ಮೃತ ದೇಹಗಳು ಬಂದಿವೆ. ಅವುಗಳಿಗೆ ಗೌರವ ನೀಡಿ ಕುಟುಂಬಸ್ತರಿಗೆ ಹಸ್ತಾಂತರಿಸಲಾಗಿದೆ. ಮೃತ ದೇಹಗಳು ಬೆಂಗಳೂರಿಗೆ ತಲುಪಲು ಆಂಬ್ಯುಲೆನ್ಸ್ ವ್ಯವಸ್ಥೆ ಕೂಡ ಮಾಡಲಾಗಿದೆ. 1 ಗಂಟೆಯ ಒಳಗೆ ಎಲ್ಲಾ ಮೃತ ದೇಹಗಳು ಬರಲಿವೆ. ಮೃತದೇಹಗಳನ್ನು ಗೌರವಯುತವಾಗಿ ಕುಟುಂಬಸ್ತರಿಗೆ ಹಸ್ತಾಂತರಿಸಲಾಗುವುದು” ಎಂದು ತಿಳಿಸಿದ್ದಾರೆ.

ಮರಳಿ ಬೆಂಗಳೂರಿಗೆ ಬಂದವರು:

ಸೌಮ್ಯಾ ಕನಲೆ- 36 ವರ್ಷ
ವಿನಯ್ ಎಂಕೆ, 49 ವರ್ಷ
ಶಿವಜ್ಯೋತಿ- 46 ವರ್ಷ
ಸುಧಾಕರ್‌, 64 ವರ್ಷ
ಸ್ಮೃತಿ, 41 ವರ್ಷ
ಶೀನಾ ಲಕ್ಷ್ಮಿ, 48 ವರ್ಷ
ಮಧುಕಿರಣ್ ರೆಡ್ಡಿ- 52 ವರ್ಷ
ಜಯಪ್ರಕಾಶ್- 61 ವರ್ಷ
ಭರತ್- 53 ವರ್ಷ
ಅನಿಲ್ ಭಟ್ಟ್- 52 ವರ್ಷ
ವಿವೇಕ್ ಶ್ರೀಧರ್- 42 ವರ್ಷ
ರಿತಿಕ್ ಜಿಂದಾಲ್
ನವೀನ್ ಎ.

ಮೃತ ಚಾರಣಿಗರ ವಿವರಗಳು:

1) ಪದ್ಮಿನಿ ಹೆಗಡೆ
2) ವೆಂಕಟೇಶ್ ಪ್ರಸಾದ್
3) ಆಶಾ ಸುಧಾಕರ್
4) ಪದ್ಮನಾಭ್ ಕುಂದಾಪುರ ಕೃಷ್ಣಮೂರ್ತಿ
5) ಸಿಂಧು ವಾಕೆಕಲಂ
6) ಸುಜಾತ ಮುಂಗುರವಾಡಿ
7) ವಿನಾಯಕ್ ಮುಂಗುರವಾಡಿ
8) ಚಿತ್ರ ಪಾರ್ಟನಿಟ್
9) ಅನಿತಾ ರಂಗಪ್ಪ

ಇದನ್ನೂ ಓದಿ: Trekking Tragedy: ಉತ್ತರಾಖಂಡ ಚಾರಣ ದುರಂತದಲ್ಲಿ ಪಾರಾದ 13 ಚಾರಣಿಗರು ಬೆಂಗಳೂರಿಗೆ ವಾಪಸ್

Continue Reading
Advertisement
Mysuru Tragedy
ಮೈಸೂರು4 mins ago

Mysuru Tragedy : ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿಗೆ ಎಳೆನೀರು ತರಲು ಮರವೇರಿ ದಾರುಣ ಅಂತ್ಯ ಕಂಡ ಮಗ

Drown In Rive
ವಿದೇಶ7 mins ago

Drown In River: ರಷ್ಯಾದಲ್ಲಿ ಘೋರ ದುರಂತ; ನದಿಯಲ್ಲಿ ಮುಳುಗಿ ನಾಲ್ವರು ಭಾರತೀಯ ವಿದ್ಯಾರ್ಥಿಗಳ ಸಾವು

defamation case rahul gandhi
ಪ್ರಮುಖ ಸುದ್ದಿ7 mins ago

Rahul Gandhi: ಮಾನನಷ್ಟ ಪ್ರಕರಣದಲ್ಲಿ ರಾಹುಲ್‌ ಗಾಂಧಿಗೆ ಜಾಮೀನು; ‌75 ಲಕ್ಷದ ಶ್ಯೂರಿಟಿ ನೀಡಿದ ಡಿಕೆ ಸುರೇಶ್

Write a story for a new movie one lakh rupees Win a prize kishore megalamane movie
ಸ್ಯಾಂಡಲ್ ವುಡ್8 mins ago

Kannada New Movie: ಹೊಸ ಸಿನಿಮಾಗೆ ಕಥೆ ಬರೆಯಿರಿ: 1 ಲಕ್ಷ ರೂ. ಬಹುಮಾನ ಗೆಲ್ಲಿರಿ!

Bajrangi Bhaijaan 2 Kabir Khan Says Sequel Of Salman Khan
ಬಾಲಿವುಡ್26 mins ago

Bajrangi Bhaijaan 2: `ಬಜರಂಗಿ ಭಾಯಿಜಾನ್ 2ʼ ಬಗ್ಗೆ ಹೊರಬಿತ್ತು ಬಿಗ್‌ ಅಪ್‌ಡೇಟ್‌!

road Accident in vijayanagar
ವಿಜಯನಗರ49 mins ago

Road Accident : ನಿದ್ರೆಯಲ್ಲಿದ್ದ ಪ್ರಯಾಣಿಕನ ಎದೆ ಸೀಳಿದ ಲಾರಿ; ಛಿದ್ರ ಛಿದ್ರಗೊಂಡ ಖಾಸಗಿ ಬಸ್‌

uttarakhand trekking tragedy 2
ಕರ್ನಾಟಕ49 mins ago

Uttarakhand Trekking Tragedy: ಚಾರಣಿಗರ ಮೃತದೇಹಗಳು ಬೆಂಗಳೂರಿಗೆ, ಸಾವಿನ ಕಣಿವೆಯಿಂದ ಹಿಂದಿರುಗಿದವರ ನಿಟ್ಟುಸಿರು

RBI Monetary Policy
ವಾಣಿಜ್ಯ59 mins ago

RBI Monetary Policy: ಸತತ 8ನೇ ಬಾರಿ ಯಥಾಸ್ಥಿತಿ ಕಾಯ್ದುಕೊಂಡ ರೆಪೋ ದರ

PM Narendra Modi
ದೇಶ1 hour ago

PM Narendra Modi: WHO ಅಧ್ಯಕ್ಷರಿಂದ ಶುಭಾಶಯ; ಥ್ಯಾಂಕ್ಸ್‌ ʼತುಳಸಿ ಭಾಯ್‌ʼ ಎಂದ ಮೋದಿ-ಭಾರೀ ಕುತೂಹಲಕ್ಕೆ ಕಾರಣವಾಯ್ತು ಟ್ವೀಟ್‌

Varalaxmi Sarathkumar invites Rajinikanth for her wedding
ಟಾಲಿವುಡ್1 hour ago

Varalaxmi Sarathkumar: ರಜನಿಕಾಂತ್‌ಗೆ ಮದುವೆ ಆಮಂತ್ರಣ ನೀಡಿದ ನಟಿ ವರಲಕ್ಷ್ಮಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ23 hours ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 weeks ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌